ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು – ಮೈಸೂರು ಹೆದ್ದಾರಿ ಬಂದ್ ಮಾಡಿ ಆ. 21ರಂದು ಪ್ರತಿಭಟಿಸಲು ಬಿಜೆಪಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮುಖಂಡರ ಭಾಗಿಯಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ …
Read More »ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ರಷ್ಟು ಪ್ರಮಾಣದಲ್ಲಿ ಮಳೆಯಾಗದೇ ಇರುವದರಿಂದ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ಇನ್ನೊಂದು ವಾರದೊಳಗೆ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. …
Read More »ಸಿದ್ದರಾಮಯ್ಯ & ಡಿಕೆ ಶಿವಕುಮಾರ್ ಸಮುದ್ರದ ಮೇಲೆ ಕಲ್ಲೆಸೆಯುವ ಕೆಲಸ ಮಾಡ್ತಿದಾರೆ:ಸದಾನಂದಗೌಡ
ಬೆಂಗಳೂರು : ಆಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಸಂಸದ ಡಿವಿ ಸದಾನಂದಗೌಡ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮುದ್ರದ ಮೇಲೆ ಕಲ್ಲೆಸೆಯುವ ಕೆಲಸ ಮಾಡ್ತಿದಾರೆ ಎಂದು ವಾಗ್ದಾಳಿ ನಡೆಸಿದರು. ಮಲ್ಲೇಶ್ವರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಮ್ಮಲ್ಲಿರುವ ಗೊಂದಲ ಮುಚ್ಚಿಕೊಳ್ಳಲು ಹಾರಿಕೆ ಸುದ್ದಿ ಹರಡ್ತಿದಾರೆ. ಮೂರೇ ತಿಂಗಳಲ್ಲಿ ಕಾಂಗ್ರೆಸ್ನವರ ಕಪಟ ನಾಟಕ ಜನರಿಗೆ ಗೊತ್ತಾಗಿದೆ. ಅವರು ಭರವಸೆ ಈಡೇರಿಸಿಲ್ಲ. ಅವರ ಶಾಸಕರನ್ನು ಸಮಾಧಾನ …
Read More »ದಸರಾ 2023: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸುತ್ತಿರುವ ಕಲಾವಿದರು
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, …
Read More »ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿದೆ ಮತ್ತು ಯೋಜನೆ ಚಾಲನೆ ದಿನಾಂಕ ಆ.30ಕ್ಕೆ ಮುಂದೂಡಿಕೆಯಾಗಿದೆ. ಈ ಹಿಂದೆ ಮೂರು ಬಾರಿ ಚಾಲನೆಯ ದಿನಾಂಕ ಮುಂದೂಡಲಾಗಿತ್ತು. ಇದೀಗ ನಾಲ್ಕನೇ ಬಾರಿ ದಿನಾಂಕ ಮುಂದೂಡಿಕೆಯಾಗಿದೆ. ಮೊದಲು ಆಗಸ್ಟ್ ಮೊದಲ ವಾರ, ಬಳಿಕ ಆ. 17 ಅಥವಾ ಆ.18ರಂದು ಯೋಜನೆ ಚಾಲನೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಮತ್ತೆ ದಿನಾಂಕ ಬದಲು ಮಾಡಿ …
Read More »ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರದ ವಿರುದ್ಧ ಆಗಸ್ಟ್ 23ಕ್ಕೆ ಬಿಜೆಪಿ ಪ್ರತಿಭಟನೆ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: “ಈ ಸರ್ಕಾರ ಪಾಪರ್ ಆಗಿದೆ, ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ, ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಅಭಿವೃದ್ಧಿ ಕಾರ್ಯ ಸ್ಥಗಿತಗೊಳಿಸಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರ ನಮ್ಮ ಪ್ರತಿಭಟನೆಗೆ ಮಣಿಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ” ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿಂದು ಶಾಸಕರ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
Read More »ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ
ಬೆಂಗಳೂರು: 3ಡಿ ಪ್ರಿಂಟಿಂಗ್ ಟೆಕ್ನಾಲಜಿ ಬಳಸಿ ನಿರ್ಮಿಸಲಾಗಿರುವ ಅಂಚೆ ಕಚೇರಿ ಕಟ್ಟಡವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನಲ್ಲಿ ಇಂದು ಉಧ್ಘಾಟನೆ ಮಾಡಿದರು. ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಇದಾಗಿದ್ದು ನೂತನ ತಂತ್ರಜ್ಞಾನಕ್ಕೆ ನಾಂದಿಹಾಡಲಾಯಿತು. ಎಲ್&ಟಿ ಮೂಲಕ ಈ ಅಂಚೆ ಕಚೇರಿಯನ್ನು ನಿರ್ಮಾಣ ಮಾಡಲಾಗಿದ್ದು ಐಐಟಿ ಚೆನ್ನೈ ಪ್ರಸ್ತುತ ಯೋಜನೆಯಲ್ಲಿ ತಾಂತ್ರಿಕ ಮಾರ್ಗದರ್ಶನ ಒದಗಿಸಿದೆ. ಒಟ್ಟು 1021 ಚದರ ಅಡಿಗಳ ವಿಸ್ತೀರ್ಣ ಹೊಂದಿರುವ ಈ ಕಟ್ಟವನ್ನು 3ಡಿ ಕಾಂಕ್ರೀಟ್ …
Read More »ಭಾರತ-ಐರ್ಲೆಂಡ್ ಮೊದಲ ಟಿ-20 ಪಂದ್ಯಕ್ಕೆ ಮಳೆ ಅಡ್ಡಿ: ಭಾರತಕ್ಕೆ 139 ರನ್ ಗುರಿ
ಡಬ್ಲಿನ್ (ಐರ್ಲೆಂಡ್): ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದ್ದು, ಮೊದಲ ಪಂದ್ಯ ಡಬ್ಲಿನ್‌ನ ವಿಲೇಜ್ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಎರಡೂ ತಂಡಗಳು ತವಕಿಸುತ್ತಿವೆ. ಟಾಸ್ ಗೆದ್ದ ಬುಮ್ರಾ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದೆ. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ ಅರ್ಧಶತಕ …
Read More »ರಾಜ್ಯ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುತ್ತಿದೆ: ಬೊಮ್ಮಾಯಿ ವಾಗ್ದಾಳಿ
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಸರ್ಕಾರದ ವಿರುದ್ಧ ಸುದ್ದಿ ಮಾಡಿದ್ದಕ್ಕಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
Read More »ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ
ಬೆಂಗಳೂರು : ನಗರದ ಮೆಜೆಸ್ಟಿಕ್ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ರೈಲ್ವೆ ಇಂಜಿನ್ನಿಂದ ಹೊರ ಬಂದ ದಟ್ಟ ಹೊಗೆಯನ್ನು ಕಂಡ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ 6ಕ್ಕೆ ಬೆಂಗಳೂರು ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ಲಾಟ್ ಫಾರ್ಮ್ 3ರಲ್ಲಿ ನಿಂತಿತ್ತು. 7:10ರ …
Read More »
Laxmi News 24×7