Breaking News

ಕಾನೂನು ಸುವ್ಯವಸ್ಥೆ ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೂ ಬಾಡಿವೋರ್ನ್ ಕ್ಯಾಮರಾ

ಬೆಂಗಳೂರು: ಪೊಲೀಸ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಹಾಗೂ ನಗರದಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ಬಲಪಡಿಸಲು ಟ್ರಾಫಿಕ್ ಹಾಗೂ ಹೊಯ್ಸಳ‌ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಬಾಡಿವೋರ್ನ್ ಕ್ಯಾಮರಾವನ್ನು ಇನ್ನು ಮುಂದೆ ಕಾನೂನು‌ ಸುವ್ಯವಸ್ಥೆ ವಿಭಾಗದ ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೂ ನೀಡಲು ನಗರ ಪೊಲೀಸ್ ಇಲಾಖೆ ನಿರ್ಧರಿಸಿದೆ. ನಗರದಲ್ಲಿರುವ 111 ಕಾನೂನು‌ ಸುವ್ಯವಸ್ಥೆ ವಿಭಾಗದ ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೆ ತಲಾ ಒಂದು ಬಾಡಿವೋರ್ನ್ ಕ್ಯಾಮರಾವನ್ನು ಸೂಕ್ತ ತರಬೇತಿ ನೀಡಿ ಇನ್ನೊಂದು ವಾರದಲ್ಲಿ ವಿತರಿಸಲು ನಗರ ಪೊಲೀಸ್ ಆಯುಕ್ತ …

Read More »

SSLC ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು : ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಲಾಖೆಯ ಅಧಿಕೃತ ವೆಬ್​ಸೈಟ್ ಮೂಲಕ ತಾತ್ಕಾಲಿಕ ಅಂಕಪಟ್ಟಿ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ …

Read More »

ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿಕೆಶಿ

ನವದೆಹಲಿ/ಬೆಂಗಳೂರು: ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿಗಳನ್ನು ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಸಚಿವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಪೆನ್ನಾರ್ ಜಲಾನಯನ ನೀರು ಶುದ್ಧೀಕರಣ ಯೋಜನೆ ಮತ್ತು ಕರ್ನಾಟಕದ ವಿರುದ್ಧ ತಮಿಳುನಾಡು ರಾಜ್ಯ ಎತ್ತಿರುವ ಜಲ ವಿವಾದಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದರು. ತಮಿಳುನಾಡು ಮಾಡಿರುವ ಆರೋಪಗಳ ಬಗ್ಗೆ ಚರ್ಚಿಸಿ ನ್ಯಾಯಾಧಿಕರಣ …

Read More »

12 ವರ್ಷಗಳ ನಂತರ ಗೋಚರಿಸಿದ ಪುರಾತನ ದೇವಾಲಯ

ಚಿಕ್ಕೋಡಿ (ಬೆಳಗಾವಿ): ಜೂನ್ ತಿಂಗಳು ಮುಗಿದರೂ ಮಳೆ ಮಾತ್ರ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಬರದ ಛಾಯೆ ಆವರಿಸಿ ಹಲವು ಜಿಲ್ಲೆಯಲ್ಲಿ ಬಹುತೇಕ ನದಿಗಳು ಬತ್ತಿ ಹೋಗಿವೆ. ಮಳೆಯಾಗದೇ ಇರುವುದರಿಂದ ಉತ್ತರ ಕರ್ನಾಟಕದ ಬಹುತೇಕ ಡ್ಯಾಂಗಳು ಖಾಲಿಖಾಲಿಯಾಗಿ ಗೋಚರಿಸುತ್ತಿವೆ. ಹಾಗೇ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ನೀರು ಖಾಲಿಯಾಗಿದ್ದು, ಬರೋಬ್ಬರಿ 12 ವರ್ಷಗಳ ನಂತರ ಪುರಾತನ ದೇವಸ್ಥಾನವೊಂದು ದರ್ಶನಕ್ಕೆ ಮುಕ್ತವಾಗಿದೆ. ವಿಠ್ಠಲ ದೇವಾಲಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ …

Read More »

ಮೊಬೈಲ್‌ ಕಳ್ಳರ ಕರಾಮತ್ತಿಗೆ ಕೇಂದ್ರದ CEIR ಕಡಿವಾಣ:

ಬೆಂಗಳೂರು: ದೇಶದಲ್ಲಿ ದಿನೇ ದಿನೆ ಹೆಚ್ಚಾಗುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಹಾಗೂ ಕದ್ದ ಮೊಬೈಲ್‌ಗಳ ದುರ್ಬಳಕೆ ತಪ್ಪಿಸಲು ಕೇಂದ್ರ ಗೃಹ ಇಲಾಖೆ ಹಾಗೂ ದೂರ ಸಂಪರ್ಕ ಇಲಾಖೆಗಳ ಸಹಭಾಗಿತ್ವದಲ್ಲಿ ಜಾರಿಗೆ ತಂದಿದ್ದ ಸೆಂಟ್ರಲ್ ಎಕ್ವಿಟ್‌ಮೆಂಟ್ ಐಡೆಂಟಿಟಿ ರಿಜಿಸ್ಟ್ರರ್ (ಸಿಇಐಆರ್) ಯೋಜನೆ ಫಲಪ್ರದವಾಗುತ್ತಿದೆ.   ಇಂದಿನ ಹೈಟೆಕ್ ಜಮಾನದಲ್ಲಿ ಸ್ಮಾರ್ಟ್‌ಪೋನ್ ಬಳಸುವುದು ಸಾಮಾನ್ಯ. ಇದನ್ನೇ ತಮ್ಮ ದುಷ್ಕೃತ್ಯಕ್ಕೆ ಗುರಿಯಾಗಿಸಿಕೊಳ್ಳುತ್ತಿರುವ ಖದೀಮರು ಮೊಬೈಲ್ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳುವಾದ ಮೊಬೈಲ್ ದೊರೆತರೂ ದುರ್ಬಳಕೆ …

Read More »

ಹೊಸಪೇಟೆ ಸಮೀಪ ಭೀಕರ ರಸ್ತೆ ಅಪಘಾತ: 7 ಜನ ಸ್ಥಳದಲ್ಲೇ ಸಾವು

ವಿಜಯನಗರ: ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಇಂದು ನಡೆದಿದೆ. ಮೃತರಲ್ಲಿ ಖಾಸಿಂ, ಯಾಸ್ಮಿನ್, ಉಮೇಶ್, ಜಹೀರಾ, ಮತ್ತು ಶ್ಯಾಮ, ಸೇರಿದಂತೆ ಒಟ್ಟು ಐವರ ಹೆಸರು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ಪತ್ತೆಯಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಸೇರಿದಂತೆ ಸ್ಥಳೀಯರು ಕಂದಕದಲ್ಲಿ ಬಿದ್ದ ಎರಡು ಆಟೋಗಳನ್ನು ಮೇಲೆತ್ತಿ ಗಾಯಾಳುಗಳನ್ನು ಹೊಸಪೇಟೆ …

Read More »

ಬೆಂಗಳೂರು- ಮೈಸೂರು ಹೆದ್ದಾರಿ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಮಂಡ್ಯ: ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಂಡ್ಯ ಜಿಲ್ಲೆಯಲ್ಲಿ ಶುಕ್ರವಾರ ಎಡಿಜಿಪಿ ಅಲೋಕ್‌ ಕುಮಾರ್‌ ಪರಿಶೀಲನೆ ನಡೆಸಿದರು. ದಶಪಥ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಿವೆ. ಕಳೆದ ವಾರ ರಾಮನಗರ ವ್ಯಾಪ್ತಿಯಲ್ಲಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದ್ದರು. ಇದೀಗ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ಮೈಸೂರು ಗಡಿಯವರೆಗೆ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಎಸ್ಪಿ ಎನ್.ಯತೀಶ್ ಜೊತೆಗಿದ್ದರು. ಹೆದ್ದಾರಿಯಲ್ಲಿ ಕಂಡುಬರುತ್ತಿರುವ ಸಮಸ್ಯೆಗಳು …

Read More »

ನನ್ನ ಝಂಡಾ ಬದಲಾವಣೆ ಆಗಬಹುದು, ಅಜೆಂಡಾ ಬದಲಾಗಲ್ಲ: ಹೆಚ್.ವಿಶ್ವನಾಥ್​

ಬೆಳಗಾವಿ: ನನ್ನ ಝಂಡಾ ಬದಲಾವಣೆ ಆಗಬಹುದು ಆದರೆ, ಅಜೆಂಡಾ ಬದಲಾಗದು ಎಂದು ಬಿಜೆಪಿ ಎಂಎಲ್​ಸಿ ಹೆಚ್. ವಿಶ್ವನಾಥ್​ ಹೇಳಿದ್ದಾರೆ. ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್​ ಇದ್ದು, ಬಿಜೆಪಿ ತೊರೆಯುವ ಕಾಲ ಸನ್ನಿಹಿತವಾಗಿದೆ ಎಂಬ ಅವರ ಹೇಳಿಕೆ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಂದರ್ಭಗಳು ಹಾಗು ಹಲವಾರು ಕಾರಣಗಳಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಬೇಕಾಯಿತು ಎಂದರು.   ವಲಸಿಗರಿಂದ ಬಿಜೆಪಿ ಹಾಳಾಯ್ತು ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ ಎಂದು ಮಾಧ್ಯಮಗಳು ಕೇಳಿದ …

Read More »

ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಉಪವಾಸ ಸತ್ಯಾಗ್ರಹ: ಸ್ವಾಮೀಜಿಗಳ ಧರ್ಮಸಭೆಯಲ್ಲಿ ನಿರ್ಧಾರ

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಡೆ ಕೈಬಿಡದಿದ್ದರೆ ಸಂತರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ಮಂಗಳೂರಿನಲ್ಲಿ ನಡೆದ ಸ್ವಾಮೀಜಿಗಳ ಧರ್ಮಸಭೆಯಲ್ಲಿ ‌ನಿರ್ಧರಿಸಲಾಗಿದೆ. ಬಾಳಂಭಟ್ ಸಭಾಂಗಣದಲ್ಲಿ ನಡೆದ ಧರ್ಮಸಭೆಯಲ್ಲಿ ಕರಾವಳಿಯ ಸಂತ ಸಮೂಹದಿಂದ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ಕಾಯ್ದೆ ವಾಪಸ್​ ನಿರ್ಧಾರ ಕೈಬಿಡುವಂತೆ ಸ್ವಾಮೀಜಿಗಳು ಆಗ್ರಹಿಸಿದ್ದಾರೆ. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಮಾಣಿಲ ಮಠದ ಮೋಹನದಾಸ ಸ್ವಾಮೀಜಿ, …

Read More »

ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳು ಪುನರಾರಂಭ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗದ ಭೇಟಿ ವೇಳೆ ಮಾತನಾಡಿದ ಅವರು, ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಸಿಎಂ ತಿಳಿಸಿದರು. ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ …

Read More »