Breaking News

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು, 4 ಮಂದಿಗೆ ಗಾಯ.

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಸ್ ಚಾಲಕ 50 ವರ್ಷದ ಸದಾನಂದ ಬೆಳಗಾವಿ ಮತ್ತು ಪ್ರಯಾಣಿಕ ರಾಹುಲ್​ (22) ಮೃತರಾಗಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಮೀರಜ್​ಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ …

Read More »

ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾರಾಮಾರಿ, 7 ಜನರ ಬಂಧನ

ಬೆಂಗಳೂರು : ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಈಗ ಈ ಪ್ರಕರಣ ಅನ್ನಪೂರ್ಣೇಶ್ವರಿ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ.   ಜೂನಿಯರ್ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರ ಬೀಸಿದ್ದ 7 ಜನ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಾಹಸ್ ಗೌಡ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ್, ಗೌತಮ್ ಹಾಗೂ ಸೂರ್ಯ ಎಂದು ಗುರುತಿಸಲಾಗಿದೆ. ಇದೇ ತಿಂಗಳ 5ರಂದು ನಾಗರಭಾವಿಯ ಖಾಸಗಿ‌ …

Read More »

65 ಲೀಟರ್ ಸಾರಾಯಿ ಜಪ್ತಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಕಳ್ಳರನ್ನು ಬಂಧಿಸಿ 925 ಗ್ರಾಂ ಬಂಗಾರ ವಶಪಡಿಸಿಕೊಂಡ ಹುಕ್ಕೇರಿ ಪೋಲೀಸರು.

ಕಳೆದ ನಾಲ್ಕು ತಿಂಗಳ ಹಿಂದೆ ಕಳುವಾದ ಭಾರಿ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಹುಕ್ಕೇರಿ ಪೋಲೀಸರು. ಪೆಬ್ರವರಿ ನಾಲ್ಕರಂದು ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ಚಿನ್ನದ ಆಭರಣ ವ್ಯಾಪಾರಸ್ಥ ಸಂಕೇಶ್ವರ ಹತ್ತಿರ ಬಸ್ಸ್ ನಿಂತಾಗ ಉಪಹಾರಕ್ಕೆ ತೇರಳಿದಾಗ ಬಸ್ಸಿನಲ್ಲಿ ಇಟ್ಟ ಚಿನ್ನಾಭರಣ ವಿದ್ದಬ್ಯಾಗ ಕಳ್ಳತನವಾಗಿತ್ತು ಇದನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್ ಪಿ ಡಾ, ಸಂಜಿವ ಪಾಟೀಲ ಪ್ರಕರಣವನ್ನು ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ರಫೀಕ ತಹಸಿಲ್ದಾರ ನೇತೃತ್ವದಲ್ಲಿ …

Read More »

ಹುಲ್ಲು ತಿನ್ನಲು ಹೋಗಿ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದ ಎಮ್ಮೆ

ಹುಲ್ಲು ತಿನ್ನಲು ಹೋಗಿದ್ದ ಎಮ್ಮೆಯೊಂದು ಗೃಹ ಬಳಕೆ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದು ಕೆಲಕಾಲ ಒದ್ದಾಡಿದ ಘಟನೆ ಧಾರವಾಡದ ಯರಿಕೊಪ್ಪ ಗ್ರಾಮದಲ್ಲಿಂದು ನಡೆದಿದ್ದು, ಕೊನೆಗೆ ಅಗ್ನಿ ಶಾಮಕದಳದ ಸಿಬ್ಬಂದಿ ಎಮ್ಮೆಯನ್ನು ರಕ್ಷಣೆ ಮಾಡಿದ್ದಾರೆ. ಧಾರವಾಡ ತಾಲ್ಲೂಕಿನ ಯರಿಕೊಪ್ಪ ಗ್ರಾಮದ ಈ ದುರ್ಘಟನೆ ನಡೆದಿದೆ. ಗ್ರಾಮದ ನಿವಾಸಿ ಶಿವಪುತ್ರಪ್ಪಾ ಅಂಗಡಿಯವರು ಪ್ರತಿದಿನದಂತೆ ಇವತ್ತು ಕೂಡಾ ಹುಲ್ಲು ತಿನ್ನಲು ಎಮ್ಮೆಯನ್ನು ಮನೆಯಿಂದ ಬಿಚ್ಚಿ ಹೊರಗಡೆ ಹೊಡೆದಿದ್ದಾರೆ. ಈ ಸಮಯದಲ್ಲಿ ಹುಲ್ಲು ತಿನ್ನುತ್ತಲೇ ಹೋದ ಎಮ್ಮೆ …

Read More »

ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ: ಬೊಮ್ಮಾಯಿ

ಬೆಂಗಳೂರು: ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ …

Read More »

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಮಂಗಳೂರು: ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ಅತ್ಯಾಚಾರ ಮಾಡಿ, ಹತ್ಯೆ ನಡೆಸಿರುವ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮಂಜೇಶ್ವರ ನಿವಾಸಿ ಮೊಹಮ್ಮದ್‌ ಅಶ್ರಫ್‌ (33) ಶಿಕ್ಷೆಗೊಳಗಾದ ಅಪರಾಧಿ. ಮೊಹಮ್ಮದ್‌ ಅಶ್ರಫ್‌ ಕೂಲಿ ಕೆಲಸ ಮಾಡಿಕೊಂಡಿದ್ದು, ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಸಂತ್ರಸ್ತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದ. …

Read More »

ಆಧಾರ್​ ಪ್ಯಾನ್​ ಲಿಂಕ್​ಗೆ ನಾಳೆಯೇ ಕೊನೆಯ ದಿನ..

ನವದೆಹಲಿ: ಜೂನ್ ತಿಂಗಳು ಮುಗಿಯುತ್ತಿದೆ. ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ ಆದಷ್ಟು ಬೇಗ ಈ ಕಾರ್ಯ ಮಾಡಿ ಮುಗಿಸಿ. ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿದೆ. ಈ ಮೊದಲು ಪ್ಯಾನ್​ ಮತ್ತು ಆಧಾರ ಜೋಡಣೆ ಮಾಡುವುದಕ್ಕೆ ಮಾರ್ಚ್ 31 ರವರೆಗೆ ಸಮಯವನ್ನು ನಿಗದಿಪಡಿಸಲಾಗಿತ್ತು. ಆಗ ಅದನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿತ್ತು. ಈಗ ಈ ಗಡುವಿನೊಳಗೆ ನೀವು ಪ್ಯಾನ್-ಆಧಾರ್ ಲಿಂಕ್ ಮಾಡದಿದ್ರೆ ನಿಮ್ಮ …

Read More »

ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮತ್ತೆ ಅಪಘಾತ: ಬಸ್​ ಕಂಡಕ್ಟರ್​ ಸಾವು

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್‌ಆರ್​ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಇಂದು ಘಟನೆ ನಡೆದಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್‌ಆರ್​ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನ ಓವರ್ ಟೇಕ್ ಮಾಡಲು ಹೋಗಿ …

Read More »

ಅಕ್ಕಿ ಬದಲು ಹಣ ಪಾವತಿಸಲು ತೀರ್ಮಾನಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸಮರ

ಬೆಂಗಳೂರು : ರಾಜ್ಯ ಸರ್ಕಾರವು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ತಿಂಗಳಿಗೆ 170 ರೂ. ನೀಡಲು ತೀರ್ಮಾನಿಸಿದೆ. ಕಾಂಗ್ರೆಸ್​ ಸರ್ಕಾರದ ನಿರ್ಣಯವನ್ನು ಬಿಜೆಪಿ ಖಂಡಿಸಿದೆ.‌ ‘ಹೋರಾಟ ಮಾಡುತ್ತೇವೆ’: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣೆ ಪೂರ್ವದಲ್ಲಿ ಹತ್ತು ಕೆಜಿ ಅಕ್ಕಿ …

Read More »