Breaking News

ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಕೂದಲೆಳೆಯ ಅಂತರದಲ್ಲಿ ತಪ್ಪಿದ ಅಪಘಾತ

ಹುಬ್ಬಳ್ಳಿ: ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಅತ್ಯಂತ ಜನದಟ್ಟಣೆಯ ಪ್ರದೇಶ ಹಾಗೂ ಹುಬ್ಬಳ್ಳಿ-ಗದಗ ಎನ್‌ಎಚ್-63 ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದ ( Hubballi Railway Station) ಬಳಿ ಬೃಹತ್ ಗಾತ್ರದ ಕಬ್ಬಿಣದ ಕಂಬ (Iron Pillar) ನೆಲಕ್ಕೆ ಅಪ್ಪಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಧ್ಯಾಹ್ನ 12:30ರ ವೇಳೆಗೆ ಕಂಬ ಉರುಳಿ ಬೀಳುತ್ತಿರುವ ದೃಶ್ಯ …

Read More »

ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

ಕೋಲಾರ: ಅಂತರ್ಜಾತಿ (Inter Caste) ಪ್ರೀತಿ ವಿಚಾರದಲ್ಲಿ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಘಟನೆಯಿಂದ ಮನನೊಂದ ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ …

Read More »

ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿ ಮತ್ತು ತುಮಕೂರು ನಗರಗಳಲ್ಲಿ ಅಕ್ರಮ ನಡೆದಿರುವ ಕುರಿತು ದೂರು

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ಬಿ ಖಾತಾ ನೀಡಿದರೆ ಸರ್ಕಾರದ ಬೊಕ್ಕಸಕ್ಕೆ 1100 ಕೋಟಿ ರೂ. ಆದಾಯ ಬರಲಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಿದರೆ ಆಸ್ತಿದಾರರು ಸಾಲ …

Read More »

ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ

ಬೆಂಗಳೂರು: ಕಳೆದ ಆರು ವರ್ಷದ ಹಿಂದೆ ಗೋವಿನ ಹತ್ಯೆ ಮಾಡುವವರ ಕೈ ಕಡಿಯುವಂತೆ ಕರೆ ನೀಡಿದ್ದ ಆರೋಪದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.   ಈ ಸಂಬಂಧ ವಿಜಯಪುರ ಜಿಲ್ಲೆ ಬಬಲೇಶ್ವರ ಪೊಲೀಸ್ ಠಾಣೆಯ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಪ್ರಮೋದ್ ಮುತಾಲಿಕ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ …

Read More »

ದಮ್ಮು, ತಾಕತ್ತು ಧೈರ್ಯದ ಬಗ್ಗೆ ಮಾತಾಡ್ತರೆ. ಅಷ್ಟೊಂದು ಮಾತಾಡೋರು ಯಾಕ್ರಿ ಸೋತ್ರಿ :ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ದಮ್ಮು‌ ತಾಕತ್ ಬಗ್ಗೆ ಮಾತನಾಡುವ ಬಿಜೆಪಿ ನಾಯಕರಿಗೆ ತಡವಾಗಿ ಆದರೂ ಬುದ್ಧಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ನಗರದ ತಮ್ಮ ಗೃಹ ಕಚೇರಿಯಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ತಮ್ಮೇಗೌಡರನ್ನ ಪಕ್ಷಕ್ಕೆ ಸೇರ್ಪಡೆ ಹಾಗು ಕಾರ್ಯಕರ್ತರ ಸಭೆ ಹಮ್ಮಿಕೊಂಡಿದ್ದರು. ಇದೇ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, ಕಾಂಗ್ರೆಸ್​ ಮುಖಂಡರಿಂದ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎನ್ನುವುದು ಈಗಲಾದರೂ ಬಿಜೆಪಿಗೆ ಅರಿವಾಗಿದೆಯಾ?. ದಮ್ಮು ತಾಕತ್ತು ದೈರ್ಯದ ಬಗ್ಗೆ …

Read More »

ಯಾದಗಿರಿ: ವಾಂತಿ, ಭೇದಿ ಪ್ರಕರಣ40ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಹಿಮ್ಲಪುರ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣಗಳು ಉಲ್ಬಣಗೊಂಡಿದ್ದು, ಕಳೆದ ಮೂರು ದಿನಗಳಿಂದ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಶನಿವಾರ 4, ಭಾನುವಾರ 2, ಸೋಮವಾರ 8 ಹಾಗೂ ಮಂಗಳವಾರ 14ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಆದ್ರೆ ಗ್ರಾಮದಲ್ಲಿ ವಾಂತಿ, ಭೇದಿ ಪ್ರಕರಣಗಳು ಕಂಡುಬರುವುದಕ್ಕೆ ಮೂಲ ಕಾರಣ ತಿಳಿದುಬಂದಿಲ್ಲ. ಹಿಮ್ಲಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಚಿಕಿತ್ಸೆ ಕೇಂದ್ರ ತೆರೆಯಲಾಗಿದ್ದು, 15 ಜನರಿಗೆ …

Read More »

ವಾಯವ್ಯ ಸಾರಿಗೆಯಲ್ಲಿ2 ಕೋಟಿ ಗಡಿ ತಲುಪಿದ ಮಹಿಳಾ ‘ಶಕ್ತಿ’ ಸಂಚಾರ:

ಹುಬ್ಬಳ್ಳಿ: ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎರಡು ಕೋಟಿಯ ಗಡಿ ತಲುಪಿದೆ. ಪ್ರಯಾಣದ ಟಿಕೆಟ್ ಮೌಲ್ಯ 50 ಕೋಟಿ ರೂಪಾಯಿ ದಾಟಿದೆ. ಯೋಜನೆ ಜಾರಿಯಾಗಿ 16 ದಿನ ಕಳೆದಿದ್ದು ಮಹಿಳಾ ಪ್ರಯಾಣಿಕರು ಭರ್ಜರಿ ಸಂಚಾರ ನಡೆಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ 26 ರಂದು 14,85,663 …

Read More »

ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬ ಜಲಾಶಯದಲ್ಲಿ ಕುಸಿಯುತ್ತಿದೆ ನೀರಿನ ಮಟ್ಟ

ವಿಜಯಪುರ: ಈ ಬಾರಿ ರಾಜ್ಯಕ್ಕೆ ಮುಂಗಾರು ಪ್ರವೇಶ ವಿಳಂಬವಾಗಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ನದಿಗೆ ಒಳಹರಿವು ಕಡಿಮೆಯಾಗಿದೆ. ಕೃಷ್ಣಾ ನದಿ ಉಗಮ ಸ್ಥಾನದ ಮಹಾರಾಷ್ಟ್ರದ ಮಹಾಬಲೇಶ್ವರ ಹಾಗೂ …

Read More »

ದಾವಣೆಗೆರೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ದಾವಣಗೆರೆ : ಕಾಲೇಜು ಕಾಂಪೌಂಡ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಅನುಮಾನಾಸ್ಪದ ಸಾವು ಎಂದು ಹರಿಹರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ಜೂನ್​​ 18ರ ಭಾನುವಾರ ರಾತ್ರಿ ಜಿಲ್ಲೆಯ ಹರಿಹರ ತಾಲೂಕಿನ ಕುರುಬರಹಳ್ಳಿ ಬಳಿಯ ಮಾನ್ಯತಾ ಪಬ್ಲಿಕ್​ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಕಾಂಪೌಂಡ್​ ಹತ್ತುವಾಗ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ …

Read More »

ಹಿಂದಿನ ಸರ್ಕಾರದ ಎಲ್ಲಾ ಅವ್ಯವಹಾರ ತನಿಖೆ ಮಾಡಿಸುತ್ತೇವೆ.: ಸಿದ್ದರಾಮಯ್ಯ

ಹಾಸನ: ”ಚುನಾವಣೆಗೂ ಮುನ್ನ ನಾವು ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ 60 ಸಾವಿರ ಕೋಟಿ ಆರ್ಥಿಕ ಹೊರೆಯ ಭಾರವಾದ್ರೂ ಜಾರಿ ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿಯ ಸರ್ಕಾರದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಅವರು ಮಾತನಾಡಿದರು. ಅನ್ನಭಾಗ್ಯ ಯೋಜನೆ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ಅನುಷ್ಠಾನ ಆಗದೇ ಇದ್ದರೆ ಸದನದ ಒಳಗೆ ಹಾಗೂ …

Read More »