ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ತಾಯಿಯನ್ನೇ ಮಗ ಹತ್ಯೆ ಮಾಡಿರುವ ಘಟನೆಜಿಲ್ಲೆಯ ಕಡೂರು ತಾಲೂಕಿನ ಕೆ ಬಿದರೆ ಗ್ರಾಮದಲ್ಲಿ ನಡೆದಿದೆ. ಕಮಲಮ್ಮ (50) ಕೊಲೆಗೀಡಾದ ತಾಯಿ, ಸಂತೋಷ್ (30) ಕೊಲೆ ಆರೋಪಿ. ಹತ್ಯೆ ಮಾಡಿದ ಬಳಿಕ ಗ್ರಾಮದ ತೆಂಗಿನ ನಾರಿನ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದ ತಂದೆ ಕಲ್ಲೇಶಪ್ಪ ಬಳಿಗೆ ಬಂದು ಆತನೇ ವಿಷಯ ತಿಳಿಸಿದ್ದಾನೆ. ಕುಡಿತದ ಚಟಕ್ಕೆ ದಾಸನಾಗಿದ್ದ ಸಂತೋಷ್ ಹಲವು ದಿನಗಳಿಂದ ಮದ್ಯ ಸೇವಿಸಿ ತಾಯಿಯೊಂದಿಗೆ ಜಗಳವಾಡುತ್ತಿದ್ದ. ಇಂದು ಸಹ …
Read More »ಡೋಲಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮಗುವಿಗೆ ಜನ್ಮ ನೀಡಿದ ಮಹಿಳೆ; ಮುಖ್ಯಮಂತ್ರಿ ದತ್ತು ಪಡೆದ ಗ್ರಾಮದಲ್ಲಿ ಘಟನೆ!
ಥಾಣೆ (ಮಹಾರಾಷ್ಟ್ರ) : ಬುಡಕಟ್ಟು ಮಹಿಳೆಯೊಬ್ಬರನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಹೆರಿಗೆ ಆಗಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಶಾಹಾಪುರ್ ತಾಲೂಕಿನ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ, ಮಹಿಳೆ ಮಾರ್ಗಮಧ್ಯೆ ಮಗುವಿಗೆ ಜನ್ಮ ನೀಡಿದ್ದಾರೆ. ಗ್ರಾಮಕ್ಕೆ ರಸ್ತೆ ಸೌಲಭ್ಯವಿಲ್ಲ: ಕಳೆದ ಬಾನುವಾರ ಪಾಟಿಕಚಾ ಪಾಡ ಗ್ರಾಮದ ಪ್ರಣಾಲಿ ಗುರುನಾಥ್ ವಾಜೆ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಗ್ರಾಮದಲ್ಲಿ ಸರಿಯಾದ …
Read More »3,000 ಮೀ ಸ್ಟೀಪಲ್‌ಚೇಸ್‌ನಲ್ಲಿ ಭಾರತಕ್ಕೆ ಬೆಳ್ಳಿ, ಕಂಚು; ಆರ್ಚರಿ, ಸ್ಕ್ವಾಷ್ನಲ್ಲಿ ಕ್ವಾರ್ಟರ್ ಫೈನಲ್ಗೆ ಲಗ್ಗೆ
ಹ್ಯಾಂಗ್‌ಝೌ (ಚೀನಾ): ಶೂಟಿಂಗ್ ವಿಭಾಗದ ನಂತರ ಭಾರತ ಅಥ್ಲೆಟಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಏಷ್ಯಾಡ್ನ 9ನೇ ದಿನವಾದ ಇಂದು (ಸೋಮವಾರ) 3,000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಬೆಳ್ಳಿ ಹಾಗು ಕಂಚಿನ ಪದಕ ಗೌರವ ಸಿಕ್ಕಿದೆ. ಪಾರುಲ್ ಚೌಧರಿ 9:27.63 ಸೆಕೆಂಡ್ಗಳ ಸಮಯದಲ್ಲಿ ಗುರಿ ಮುಟ್ಟಿ ಎರಡನೇ ಸ್ಥಾನ ಪಡೆದರು. ಚೊಚ್ಚಲ ಏಷ್ಯನ್ ಗೇಮ್ಸ್ ಆಡುತ್ತಿರುವ ಪ್ರೀತಿ 9:43.32 ಸೆಕೆಂಡ್‌ನಿಂದ ಮೂರನೇ ಸ್ಥಾನ ಅಲಂಕರಿಸಿದರು. ಇದು ಅವರ ವೈಯಕ್ತಿಕ ಅತ್ಯುತ್ತಮ ಸಮಯವಾಗಿದೆ. ಹಾಲಿ ವಿಶ್ವ …
Read More »12th ಫೇಲ್’ ಆದವರನ್ನು ಕರ್ನಾಟಕದಲ್ಲಿ ಪಾಸ್ ಮಾಡಿಸುವ ಜವಾಬ್ದಾರಿ ಹೊತ್ತುಕೊಂಡ ಕೆ.ಆರ್.ಜಿ ಸ್ಟುಡಿಯೋಸ್
ವಿಧು ವಿನೋದ್ ಚೋಪ್ರಾ ಅವರ ’12th ಫೇಲ್’ ಚಿತ್ರವನ್ನು ಕನ್ನಡ ಮತ್ತು ಹಿಂದಿಯಲ್ಲಿ ಅಕ್ಟೋಬರ್ 27ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿಯನ್ನು ಕೆ.ಆರ್.ಜಿ ಸ್ಟುಡಿಯೋಸ್ ಹೊತ್ತುಕೊಂಡಿದೆ. ಕರ್ನಾಟಕದ ಜನತೆಗೆ ಗುಣಮಟ್ಟದ ಚಿತ್ರಗಳನ್ನು ತಲುಪಿಸುವ ನಿಟ್ಟಿನಲ್ಲಿ ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ಸದಾ ಮುಂಚೂಣಿಯಲ್ಲಿರುತ್ತದೆ. ವಿನೂತನ ಕಥೆಗಳನ್ನು ಪ್ರೇಕ್ಷಕರಿಗೆ ಉಣಬಡಿಸುವಲ್ಲಿಯೂ ಮುಂದಡಿ ಇಡುತ್ತಿದೆ. ‘ಪರಿಂದಾ’, ‘1942 ಎ ಲವ್ ಸ್ಟೋರಿ’ ಮುಂತಾದ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸುವುದರ …
Read More »ಗೋಕಾಕ್ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಬೆಳಗಾವಿ ಎಸ್ಪಿ ಹೇಳಿದ್ದೇನು?
ಬೆಳಗಾವಿ : ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಗಾವಿಯ ಗೋಕಾಕ್ನ ಮನೆಯೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬಂಧಿತರನ್ನು ರಮೇಶ ಉದ್ದಪ್ಪ ಖಿಲಾರಿ, ದುರ್ಗಪ್ಪ ಸೋಮಲಿಂಗಪ್ಪ ವಡ್ಡರ, ಯಲ್ಲಪ್ಪ ಸಿದ್ದಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪ್ರಕಾಶ ಪೂಜೇರಿ, ರಾಮಸಿದ್ದ ಗುರಶಿದ್ದಪ್ಪ ತಪ್ಸಿ ಎಂದು ಗುರುತಿಸಲಾಗಿದೆ. …
Read More »ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ:ಬೊಮ್ಮಾಯಿ
ಬೆಂಗಳೂರು: ”ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಿವಮೊಗ್ಗದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಘಟನೆಗೆ ಕಾರಣವಾಗಿದೆ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಆರ್.ಟಿ. ನಗರ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆಗಳು ನಡೆದಿವೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ” ಎಂದು ಆರೋಪಿಸಿದರು. …
Read More »ಟಿಳಕವಾಡಿಯ ವೀರಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು
ಬೆಳಗಾವಿ : ಜಗತ್ತಿಗೆ ಸತ್ಯ, ಶಾಂತಿ ಮತ್ತು ಅಹಿಂಸೆಯ ಸಂದೇಶಗಳನ್ನು ಬೋಧಿಸಿದ ಮಹಾತ್ಮ ಗಾಂಧೀಜಿಯವರ ಮಾರ್ಗವೇ ಸರಿಯಾದ ಮಾರ್ಗ. ಭಾರತೀಯರಾದ ನಾವು ಪರಸ್ಪರ ಗೌರವಿಸುವ ಮೂಲಕ ಸದಾ ಭಾರತೀಯರಾಗುವ ಜತೆಗೆ ಗಾಂಧೀಜಿ ಹಾಕಿಕೊಟ್ಟ ಮಾರ್ಗದಲ್ಲಿಯೇ ನಡೆಯಬೇಕು ಎಂದು ಶಾಸಕ ಆಸೀಫ್ ಸೇಠ್ ಕರೆ ಕೊಟ್ಟರು. ಇಂದಿನ ಯುವಪೀಳಿಗೆ ಗಾಂಧೀಜಿ ತತ್ವಗಳನ್ನು ಸ್ವೀಕರಿಸಬೇಕು. ಅವರ ಪುಸ್ತಕಗಳನ್ನು ಓದಿ ವಿಚಾರ, ಚಿಂತನೆಗಳನ್ನು ತಿಳಿದುಕೊಳ್ಳಬೇಕು. ಭವಿಷ್ಯದಲ್ಲಿ ಮಾದರಿ ವ್ಯಕ್ತಿಗಳಾಗಲು ಕಠಿಣ ಶ್ರಮವಹಿಸಿ, ನಿರಂತರ ಅಭ್ಯಾಸ ಮಾಡಿದರೆ …
Read More »ಬೆಳಗಾವಿಯಲ್ಲಿ ಮದ್ಯ ನಿಷೇಧಿಸಲು ಮಹಿಳೆಯರ ಆಗ್ರಹ
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಸತ್ಯ, ಅಹಿಂಸಾ ತತ್ವ, ಶಾಂತಿಮಂತ್ರದಿಂದ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗುವಂತೆ ಮಾಡಿರುವ ಗಾಂಧಿ ಹೋರಾಟವನ್ನು ಎಲ್ಲೆಡೆ ಗುಣಗಾನ ಮಾಡಿ ಸ್ಮರಿಸಲಾಗುತ್ತಿದೆ. ಆದರೆ, ಬಾಪೂಜಿ ಕಂಡಿದ್ದ ಸಾರಾಯಿ/ಮದ್ಯ ಮುಕ್ತ ಗ್ರಾಮಗಳ ಕನಸು ಮಾತ್ರ ಇಂದಿಗೂ ನನಸಾಗಿಲ್ಲ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿಂದು ಮಹಿಳೆಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಿನ್ನೆ (ಭಾನುವಾರ) ಮಧ್ಯಾಹ್ನದಿಂದ …
Read More »ಮಲಪ್ರಭಾ ನದಿಯಿಂದ ಹೊರಬಂದ ಮೊಸಳೆ ರೈಲಿಗೆ ಸಿಲುಕಿ ಸಾವು
ಗದಗ, (ಅಕ್ಟೋಬರ್ 02): ಮಲಪ್ರಭಾ ನದಿಯಿಂದ ಹೊರಬಂದ ಮೊಸಳೆ(crocodile) ರೈಲಿಗೆ (Train) ಸಿಲುಕಿ ಮೃತಪಟ್ಟಿದೆ. ಗದಗ(Gadag) ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಹಳಿದಾಟುವ ವೇಳೆ ರೈಲಿಗೆ ಸಿಲುಕಿ 8 ಅಡಿ ಉದ್ದದ ಮೊಸಳೆ ಸಾವನ್ನಪ್ಪಿದೆ. ಮಲಪ್ರಭಾ ನದಿಯಿಂದ ಆಚೆ ಬಂದಿದ್ದ ಮಸೂಳೆ, ಹಳಿದಾಟುವ ವೇಳೆ ಅದೇ ಸಂದರ್ಭದಲ್ಲಿ ಬಂದ ರೈಲು ಮೇಲೆ ಹರಿದಿದೆ. ಪರಿಣಾಮ ಮಸೂಳೆಯ ದೇಹ ಎರಡು ಭಾಗವಾಗಿದೆ. ಇನ್ನು ಸ್ಥಳೀಯರು ನೋಡಿ ಮೃತಪಟ್ಟ ಮಸೂಳೆಯನ್ನು ರೈಲ್ವೇ …
Read More »ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ಮೂಡಲಗಿ ತಾಲೂಕಿನಿಂದ ಎರಡು ಸಂಘಗಳು ಜಿಲ್ಲೆಯಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಹೆಮ್ಮೆಯ ಸಾಧನೆ ಮಾಡಿವೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈನುಗಾರರು ಮತ್ತು ಗ್ರಾಹಕರಿಂದ ನಮ್ಮ …
Read More »
Laxmi News 24×7