ಬೆಂಗಳೂರು: ಆರು ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಇಂದು ಸರಣಿ ಸಭೆ ನಡೆಸಿದರು. ಸಭೆಯಲ್ಲಿ ಬಹುತೇಕ ಶಾಸಕರು ಅನುದಾನ ಬಿಡುಗಡೆ ಬಗ್ಗೆ ಅಳಲು ತೋಡಿಕೊಂಡರು. ಬೆಳಗ್ಗೆ ರಾಯಚೂರು, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರ ಜೊತೆ ಸಿಎಂ ಮಾತನಾಡಿದರು. ಸಂಜೆ ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಅಸಮಾಧಾನಕ್ಕೆ …
Read More »ಯುವ ರೈತ ಕೇವಲ 30 ಗುಂಟೆಯಲ್ಲಿ ಟೊಮೆಟೊ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾನೆ.
ದಾವಣಗೆರೆ : ಟೊಮೆಟೊಗೆ ಚಿನ್ನದ ಬೆಲೆ ಸಿಕ್ಕಿದ್ದರಿಂದ ರೈತರು ಹೆಚ್ಚಿನ ಲಾಭ ಪಡೆಯುತ್ತಿದ್ದು, ಕೆಂಪು ಸುಂದರಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಕೋಟಿಗಟ್ಟಲೇ ಲಾಭ ಪಡೆದರೆ ಇನ್ನೂ ಕೆಲವರು ಲಕ್ಷಗಟ್ಟಲೇ ಆದಾಯ ಗಳಿಸಿದ್ದಾರೆ. ಈ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ರೈತರೊಬ್ಬರು ಸೇರಿದ್ದಾರೆ. ಕೇವಲ ಮೂವತ್ತು ಗುಂಟೆ ಜಮೀನಿನಲ್ಲಿ 7 ಲಕ್ಷ ರೂ. ಲಾಭ ಪಡೆದಿದ್ದು, ಇನ್ನೂ ಮೂರು ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದಾರೆ. ಹೌದು, ದಾವಣಗೆರೆ ಜಿಲ್ಲೆಯ …
Read More »ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ.
ಬೆಂಗಳೂರು: ಬ್ಯಾಂಕಾಕ್ ಪ್ರವಾಸದ ವೇಳೆ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನ ನಡೆಯುತ್ತಿದೆ. ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ. ಮಂಗಳವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಥಾಯ್ ಏರ್ ವೇಸ್ ವಿಮಾನದಲ್ಲಿ ಕರೆತರಲಾಗಿದ್ದು, ಕಾರ್ಗೋ ಟರ್ಮಿನಲ್ನಲ್ಲಿ ಕುಟುಂಬಸ್ಥರಿಗೆ ಪಾರ್ಥಿವ ಶರೀರ ಹಸ್ತಾಂತರ ಮಾಡಲಾಗಿದೆ. ಇದೇ ವಿಮಾನದಲ್ಲಿ ಪತಿ ವಿಜಯ ರಾಘವೇಂದ್ರ …
Read More »ಬಾಬಾ ಸಾಹೇಬರ ಲೇಖನಿಯಿಂದ ಭಾರತ ಬದಲಾಯಿತು: ಜ್ಞಾನಪ್ರಕಾಶ ಸ್ವಾಮೀಜಿ
ಬೆಳಗಾವಿ: “ಜೀವ ಜಗತ್ತಿನಲ್ಲಿ ಮಹಿಳೆಯೇ ಶ್ರೇಷ್ಠ ಎಂದಿದ್ದರೂ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಶೋಷಿತ ಸಮುದಾಯಗಳೂ ಹೊರತಾಗಿಲ್ಲ. ಇದೆಲ್ಲದಕ್ಕೂ ಕಡಿವಾಣ ಹಾಕಬೇಕಿದ್ದರೆ ಶೋಷಿತ ಸಮುದಾಯಗಳು ಸುಶಿಕ್ಷಿತರಾಗಬೇಕು. ಆಗ ಮಾತ್ರ ಶಾಹುಮಹಾರಾಜರು ಮತ್ತು ಮಹಾತ್ಮಾ ಫುಲೆ ದಂಪತಿಯ ಕನಸು ನನಸಾಗಿಸಲು ಸಾಧ್ಯ” ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ಕುಮಾರ ಗಂಧರ್ವ ಕಲಾಭವನದಲ್ಲಿ ಛತ್ರಪತಿ ಶಾಹುಮಹಾರಾಜರ 144ನೇ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ …
Read More »DON 3: ಮುಂದಿನ ಡಾನ್ ಶಾರುಖ್ ಅಲ್ಲ ರಣ್ವೀರ್
DON 3. ಬಿಟೌನ್ಲ್ಲಿ ಡಾನ್ ಸದ್ದಾಗುತ್ತಿದೆ. ಆಗಸ್ಟ್ 8ರಂದು ಬಾಲಿವುಡ್ನ ಸೆನ್ಸೇಶನಲ್ ಸುದ್ದಿ ಅಂದ್ರೆ ಅದು ‘ಡಾನ್ 3’. ನಟ, ನಿರ್ದೇಶಕ, ನಿರ್ಮಾಪಕ ಮತ್ತು ಬಹುಮುಖ ಪ್ರತಿಭೆ ಫರ್ಹಾನ್ ಅಖ್ತರ್ ಇಂದು ‘ಡಾನ್ 3’ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅಭಿಮಾನಿಗಳು ಬಹಳ ಸಮಯದಿಂದ ಕಾದು ಕುಳಿತಿದ್ದರು. ಅಂತಿಮವಾಗಿ ‘ಡಾನ್ 3’ ಘೋಷಣೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹೌದು, ಡಾನ್ 3 ಸಿನಿಪ್ರಿಯರ …
Read More »ಇನ್ಮುಂದೆ ಬೆಂಗಳೂರಲ್ಲಿ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕಿದ್ರೆ 50 ಸಾವಿರ ರೂಪಾಯಿ ದಂಡ: ಡಿ .ಕೆ. ಶಿ.
ಬೆಂಗಳೂರು: ಇನ್ನು ಮುಂದೆ ಬೆಂಗಳೂರು ನಗರದಲ್ಲಿ ಯಾರೂ ಕೂಡ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಕುವ ಹಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕುಮಾರ ಕೃಪಾ ಅತಿಥಿ ಗೃಹದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಇನ್ನು ಬೆಂಗಳೂರಾದ್ಯಂತ ಫ್ಲೆಕ್ಸ್ ಸಂಪೂರ್ಣವಾಗಿ ನಿಷೇಧ ಮಾಡುತ್ತೇವೆ. ಅನಧಿಕೃತ ಫ್ಲೆಕ್ಸ್ಗಳಿಂದ ನನಗೆ ಅಸಹ್ಯ ಆಗುತ್ತಿದೆ. ಕೋರ್ಟ್ನಿಂದ ಕೂಡ ನಿರ್ದೇಶನ ಇದೆ. ಎಲ್ಲಾ ಫ್ಲೆಕ್ಸ್, ಹೋರ್ಡಿಂಗ್ ತೆಗೆಯಲು ಸೂಚನೆ ನೀಡಲಾಗಿದೆ. ಬೆಂಗಳೂರಿನಾದ್ಯಂತ ಆ.15ರೊಳಗೆ ಎಲ್ಲಾ …
Read More »ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಸಿದ್ಧತೆ; ಭಾರತದ ಸಂಭಾವ್ಯ ತಂಡ:
ನವದೆಹಲಿ: ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ. ಅಕ್ಟೋಬರ್ 5ರಿಂದ ಪ್ರಾರಂಭವಾಗುವ ಪಂದ್ಯಾವಳಿಗೆ ಸಪ್ಟೆಂಬರ್ 5ರೊಳಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ಗೆ (ಐಸಿಸಿ) ಎಲ್ಲ ಕ್ರಿಕೆಟ್ ಮಂಡಳಿಗಳು ತಾತ್ಕಾಲಿಕ 15 ಆಟಗಾರರ ಪಟ್ಟಿ ಸಲ್ಲಿಸಬೇಕಿದೆ. ಸೆಪ್ಟಂಬರ್ 27ರೊಳಗೆ ಅಂತಿಮ ತಂಡ ಪ್ರಕಟಿಸಬೇಕು. ಆಸ್ಟ್ರೇಲಿಯಾ ಈಗಾಗಲೇ 18 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತ ತಂಡದ ಆಯ್ಕೆಯಲ್ಲಿ ಹಲವು ಗೊಂದಲಗಳಿದ್ದು ಗಾಯದಿಂದ ಚೇತರಿಸಿಕೊಂಡು ಯಾರೆಲ್ಲಾ ಸ್ಥಾನ ಪಡೆಯುತ್ತಾರೆ, …
Read More »ಇನ್ಮುಂದೆ ಕನ್ನಡ ಸೇರಿದಂತೆ ಈ ಪ್ರಾದೇಶಿಕ ಭಾಷೆಯಲ್ಲೂ ಪಡೆಯಬಹುದು ಫೋನ್ ಪೇ ಪೇಮೆಂಟ್ ನೋಟಿಫಿಕೇಶನ್
ಬೆಂಗಳೂರು: ಡಿಜಿಟಲ್ ಪೇಮೆಂಟ್ ಪ್ಲಾಟ್ಫಾರ್ಮ್ನಲ್ಲಿ ಜನಸಾಮಾನ್ಯರ ಜನಪ್ರಿಯ ತಾಣವಾಗಿರುವ ಫೋನ್ಪೇ ಇದೀಗ ಮತ್ತಷ್ಟು ವ್ಯಾಪಾರಿ ಸ್ನೇಹಿಯಾಗುವತ್ತ ಹೆಜ್ಜೆ ಇಟ್ಟಿದೆ. ಈ ಹಿಂದೆ ವ್ಯಾಪಾರಿಗಳಿಗೆ ಗ್ರಾಹಕರ ಪೇಮೆಂಟ್ ಇತಿಹಾಸವನ್ನು ಸುಲಭವಾಗಿ ತಿಳಿಯುವ ಉದ್ದೇಶದಿಂದ ಪಾವತಿ ಕುರಿತು ಸ್ಮಾರ್ಟ್ ಸ್ಪೀಕರ್ ನೋಟಿಫಿಕೇಶನ್ ಅನ್ನು ಪರಿಚಯಿಸಿತು. ಇಷ್ಟು ದಿನ ಇಂಗ್ಲಿಷ್ನಲ್ಲಿ ಈ ನೋಟಿಫಿಕೇಶನ್ ಧ್ವನಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪ್ರಾದೇಶಿಕ ಭಾಷೆಗಳಲ್ಲೂ ಪರಿಚಯಿಸಿದೆ. ಈ ಸ್ಮಾರ್ಟ್ ಸ್ಪೀಕರ್ ಇನ್ಮುಂದೆ ಹಣದ ವಾಹಿವಾಟಿನ ಮಾಹಿತಿಯನ್ನು ಕನ್ನಡ, …
Read More »SC-ST ಕಾಯಿದೆಯಡಿಯ ಸುಳ್ಳು ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ: ಹೈಕೋರ್ಟ್
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. …
Read More »ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾಕಿ ಬಿಲ್ ಬಿಡುಗಡೆಗೆ ಮನವಿ ಮಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇರುತ್ತದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು. …
Read More »
Laxmi News 24×7