ಶಿವಮೊಗ್ಗ: ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದ ಬಳಿಕ ಕಾಂಗ್ರೆಸ್ ಪಕ್ಷದವರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಯಂತೆ ಎಲ್ಲರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ ಅಕ್ಕಿ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ನವರು ಭರವಸೆ ನೀಡಿದ್ದು …
Read More »ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ RSS ಮನವಿ:
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಖಂಡಿಸಿದೆ. ತಕ್ಷಣವೇ ಶಾಂತಿಯನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತ, ಪೊಲೀಸ್, ಭದ್ರತಾ ಪಡೆಗಳು ಮತ್ತು ಕೇಂದ್ರದ ಏಜೆನ್ಸಿಗಳು ಸೇರಿದಂತೆ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದೂ ಸಂಘ ಒತ್ತಾಯಿಸಿದೆ. ಈ ಬಗ್ಗೆ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈಶಾನ್ಯ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಅಗತ್ಯ ಕ್ರಮಗಳ ಜೊತೆಗೆ ಹಿಂಸಾಚಾರದಿಂದಾಗಿ ನಿರಾಶ್ರಿತರಾದವರಿಗೆ ಪರಿಹಾರ …
Read More »ಜೂನ್ 26ರಂದು ಬೆಂಗಳೂರು- ಧಾರವಾಡ ವಂದೇ ಭಾರತ್ ರೈಲಿಗೆ ಪ್ರಧಾನಿ ಚಾಲನೆ
ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಬಹುನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರದ ಬಗ್ಗೆ ನೈಋತ್ಯ ರೈಲ್ವೆ ವಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಪ್ರತಿಷ್ಠಿತ ವಂದೇ ಭಾರತ್ ರೈಲು ಗುರುವಾರ ಬೆಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಬೆಂಗಳೂರು- ಧಾರವಾಡ ಮಾರ್ಗದಲ್ಲಿ ಸಂಚರಿಸಲು ಜೂನ್ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಚಾಲನೆ ನೀಡುವ ಮುನ್ನ ಸೋಮವಾರದಿಂದ ಪ್ರಾಯೋಗಿಕ ಚಾಲನೆ …
Read More »ಗೃಹ ಜ್ಯೋತಿ ಯೋಜನೆಗೆ ಮೊದಲ ದಿನ 55 ಸಾವಿರ ಗ್ರಾಹಕರ ನೋಂದಣಿ
ಬೆಂಗಳೂರು : ಗೃಹ ಜ್ಯೋತಿ ಯೋಜನೆಗಾಗಿ ಮೊದಲ ದಿನ 55,000 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಭಾನುವಾರ ಸೇವಾ ಸಿಂಧು ಪೋರ್ಟಲ್ನಲ್ಲಿ ಗೃಹ ಜ್ಯೋತಿ ಯೋಜನೆಯ ನೋಂದಣಿ ಆರಂಭಗೊಂಡಿದೆ. 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಮೊದಲ ದಿನವಾದ ಭಾನುವಾರ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಇಲಾಖೆ ತಿಳಿಸಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಅರ್ಜಿ ಸಲ್ಲಿಕೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55,000 …
Read More »ಕಲಬುರಗಿಯಲ್ಲಿ ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ
ಕಲಬುರಗಿ: ತಂದೆಯೊಬ್ಬ ತನ್ನ ಮಗ ಹಾಗೂ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮನಕಲುಕುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದ ಬಳಿ ಪೋಚಾವರಂದಲ್ಲಿ ನಡೆದಿದೆ. ಚಿಂಚೋಳಿ ತಾಲೂಕು ಕುಂಚಾವರಂ ಗ್ರಾಮದ ಹಾಗೂ ಸದ್ಯ ತೆಲಂಗಾಣದಲ್ಲಿ ವಾಸವಾಗಿದ್ದ ಹಣಮಂತ ವಡ್ಡರ್ (40) ಹಾಗೂ ಆತನ ಪುತ್ರ ಓಂಕಾರ (9), ಪುತ್ರಿ ಅಕ್ಷರಾ (6) ಮೃತರು. ಮೃತ ಹಣಮಂತ ಕೆಲ ವರ್ಷಗಳಿಂದ ತೆಲಂಗಾಣ ರಾಜ್ಯದ ತಾಂಡೂರಿನಲ್ಲಿ ವಾಸವಿದ್ದರು. ಇತ್ತೀಚೆಗೆ ಹಣಮಂತ ತನ್ನ ಮಕ್ಕಳೊಂದಿಗೆ ಕುಂಚಾವರಂ …
Read More »ಗೋಳಗುಮ್ಮಟ ವೀಕ್ಷಣೆಗೆ ಬಂದ ನಾರಿ ‘ಶಕ್ತಿ’: ಒಂದೇ ದಿನಕ್ಕೆ 5 ಸಾವಿರ ಟಿಕೆಟ್ ಸೇಲ್
ವಿಜಯಪುರ: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ಹಿನ್ನಲೆಯಲ್ಲಿ ಮಹಿಳೆಯರು ಕುಟುಂಬ ಸಮೇತ ಪ್ರವಾಸಿ ತಾಣಗಳತ್ತ ದೌಡಾಯಿಸುತ್ತಿದ್ದಾರೆ. ವಿಜಯಪುರದ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಭಾನುವಾರ ಮಹಿಳೆಯರ ದಂಡೇ ಹರಿದು ಬಂದಿದೆ. ಇದರಿಂದ ಗೋಳಗುಮ್ಮಟ ಹಾಗೂ ಇಬ್ರಾಹಿಂ ರೋಜಾ ವೀಕ್ಷಣೆಗೆ ಟಿಕೆಟ್ಗಾಗಿ ನೂಕುನುಗ್ಗಲು ಉಂಟಾಗಿತ್ತು. ಬೆಳಗ್ಗೆ 8 ಗಂಟೆಯಿಂದ ಮಹಿಳೆಯರು ತಮ್ಮ ಮಕ್ಕಳ ಜತೆ ಆಗಮಿಸಿ ಗೋಳಗುಮ್ಮಟ ವೀಕ್ಷಣೆ ಮಾಡಲು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಿಂದ ಸಂಜೆ …
Read More »ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿದರು. ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಆಹಾರ ನಿಗಮ (ಎಫ್‌ಸಿಐ)ನವರು ಮೊದಲು ಕೊಡುತ್ತೇವೆಂದು ಹೇಳಿ ಈಗ ವಿತ್‌ಡ್ರಾ ಮಾಡಿಕೊಂಡಿದ್ದಾರೆ. ರಾಜ್ಯದ ಜನರು ಯೋಚನೆ ಮಾಡಬೇಕಾಗಿಲ್ಲ. ನಾವು ಏನು ಭರವಸೆ ಕೊಟ್ಟಿದ್ದೇವೋ ಅದನ್ನು ಈಡೇರಿಸುತ್ತೇವೆ. ಜಾರ್ಖಂಡ್, ತೆಲಂಗಾಣ, ಪಂಜಾಬ್ ರಾಜ್ಯಗಳ ಜತೆ ಚರ್ಚೆ ಆಗುತ್ತಿದೆ. …
Read More »ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯ
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯವಿದೆ. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಅಲರ್ಟ್ ಆಗಿರುವ ಮಹಾರಾಷ್ಟ್ರ ಹಾಗೂ ಗೋವಾದಲ್ಲಿನ ಬಿಜೆಪಿ ಸರ್ಕಾರಗಳು ಒಗ್ಗಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಒಂದೆಡೆ ನಿರಂತರವಾಗಿ ಗಡಿ ಕ್ಯಾತೆ ತೆಗೆಯುತ್ತಲೇ ಕಾಲು ಕೆರೆದುಕೊಂಡು ಕರ್ನಾಟಕದ ಜೊತೆಗೆ ಜಗಳಕ್ಕೆ ನಿಲ್ಲುವ ಮಹಾರಾಷ್ಟ್ರ ಸರ್ಕಾರ ಈಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಲು ಮುಂದಾಗಿದೆ. …
Read More »ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದ ಸತೀಶ್ ಜಾರಕಿಹೊಳಿಯವರು
ದಿನಾಂಕ 17-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು ಈ ಸಂದರ್ಭದಲ್ಲಿ ಅವರ ಬೆಂಬಲಿಗರಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ. ಯಮಕನಮರಡಿ ಎಸ್ ಟಿ …
Read More »ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!
ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ! ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು …
Read More »