ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ನೇಮಕಾತಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚಿಸಿವ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಆ ಮೂಲಕ ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳನ್ನು ತನಿಖೆಗೆ ಒಳಪಡಿಸಿ ಬಿಜೆಪಿಯನ್ನು ಮತ್ತಷ್ಟು ಕಟ್ಟಿ ಹಾಕಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಎಸ್‌ಐಟಿ ರಚಿಸುವ ಬಗ್ಗೆ ಸಮಾಲೋಚನೆ ನಡೆದಿದೆ. ಪಿಎಸ್‌ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ …
Read More »ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ
ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ನಗರಸಭೆ ಸದಸ್ಯೆ ನಾಗರತ್ನ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಹರ ನಗರಸಭೆ ಕಾಂಗ್ರೆಸ್ ಸದಸ್ಯೆ ನಾಗರತ್ನ ಜತೆಗೆ ಅವರ ಪತಿ ಮಂಜುನಾಥ, ಪುತ್ರ ರೇವಂತ ಸೇರಿ ಗುತ್ತಿಗೆದಾರ ಮಜೀದ್ ಎಂಬುವರಿಂದ ಲಂಚ ಸ್ವೀಕರಿಸುವ ವೇಳೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ …
Read More »NEET Result 2023: ರಾಯಚೂರಿನ ಖಾಸಗಿ ಕಾಲೇಜಿನ ಒಡಿಶಾ ವಿದ್ಯಾರ್ಥಿ ರಾಜ್ಯಕ್ಕೆ 127ನೇ ರ‍್ಯಾಂಕ್, ಸಿಇಟಿಯಲ್ಲೂ ಉತ್ತಮ ಸಾಧನೆ
ರಾಯಚೂರು : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯ ಫಲಿತಾಂಶ ಜೂನ್ 13 ರಂದು ಮಂಗಳವಾರ ರಾತ್ರಿ ಪ್ರಕಟವಾಗಿತ್ತು. ಈ ಪರೀಕ್ಷೆಯಲ್ಲಿ ರಾಯಚೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಒಡಿಶಾ ಮೂಲದ ವಿದ್ಯಾರ್ಥಿಯೊಬ್ಬ 127ನೇ ರ‍್ಯಾಂಕ್ ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ. ಅನುರಾಗ ರಂಜನ್ ನೀಟ್ ಪರೀಕ್ಷೆಯಲ್ಲಿ 127ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿರುವ ವಿದ್ಯಾರ್ಥಿ. ರಾಯಚೂರಿನ …
Read More »ಮಂಡ್ಯದಲ್ಲಿ ಅಂಬಿ ಪುತ್ರನ ಭರ್ಜರಿ ಬೀಗರೂಟ: 50 ಸಾವಿರ ಮಂದಿಗೆ ಸಿದ್ಧತೆ, 7 ಟನ್ ಮಟನ್, 7 ಟನ್ ಚಿಕನ್!
ಮಂಡ್ಯ: ಜೂನ್ 5 ರಂದು ದಾಂಪತ್ಯಕ್ಕೆ ಕಾಲಿರಿಸಿದ ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಬೀಗರ ಔತಣಕೂಟ ನಾಳೆ ಸಕ್ಕರೆನಾಡು ಮಂಡ್ಯದ ಗೆಜ್ಜಲಗೆರೆ ಕಾಲೋನಿ ಬಳಿ ನಡೆಯಲಿದೆ. ಎಷ್ಟೇ ಸಾವಿರ ಜನ ಬಂದ್ರೂ ಊಟದ ವ್ಯವಸ್ಥೆ ಮಾಡಲು ಸಕಲ ಸಿದ್ಧತೆ ಮಾಡಲಾಗುತ್ತಿದೆ. ಅಂಬರೀಶ್ಗೆ ಪ್ರಿಯವಾದ ಮಂಡ್ಯ ಶೈಲಿಯ ಬಾಡೂಟವನ್ನು ನಾಳೆ ತಯಾರಿಸಲಾಗುತ್ತದೆ. ಸಿದ್ದತೆ ಪರಿಶೀಲನೆ ಬಳಿಕ ಮಾಹಿತಿ ನೀಡಿದ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, “ಬೆಳಗ್ಗೆ …
Read More »ಪಠ್ಯ ಪರಿಷ್ಕರಣೆ ಬಗ್ಗೆ ಬೊಮ್ಮಾಯಿ, ಸುನೀಲ್ ಕುಮಾರ್, ತೇಜಸ್ವಿ ಸೂರ್ಯ ಕಿಡಿ
ಬೆಂಗಳೂರು: ”ರಾಜ್ಯದಲ್ಲಿ ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ್ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ”ರಾಜ್ಯದಲ್ಲಿ ಕಾಂಗ್ರೆಸ್ …
Read More »ಪ್ರಯಾಣಿಕನ ₹5 ಲಕ್ಷ ಹಣ ಕದ್ದು ಕಾಲ್ಕಿತ್ತ ಕಳ್ಳನ ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ KSRTC ಸಿಬ್ಬಂದಿ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲನಾ ಸಿಬ್ಬಂದಿಯ ಸಮಯೋಚಿತ ಸಾಹಸ ಕಾರ್ಯ ಮತ್ತು ಧೈರ್ಯದಿಂದಾಗಿ ಪ್ರಯಾಣಿಕನ 5 ಲಕ್ಷ ರೂಪಾಯಿ ಹಣ ಮರಳಿ ಸಿಕ್ಕಿದೆ. ಹಣ ಕದ್ದು ಓಡುತ್ತಿದ್ದ ಕಳ್ಳನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಬೆನ್ನಟ್ಟಿ ಹಿಡಿದಿದ್ದು, ಮೆಚ್ಚುಗೆಗೆ ಕಾರಣವಾಗಿದೆ. ಜುಲೈ 14ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ರ ಕೆಎ-57 ಎಫ್ 3975 ಸಂಖ್ಯೆಯ ಬೆಂಗಳೂರು- ತಿರುನಲ್ಲಾರ್ ಮಾರ್ಗದ ಬಸ್ಸಿನ ಆಸನ ಸಂಖ್ಯೆ 17- 18 …
Read More »ಬೆಳಗಾವಿಯ ಅನಗೋಳ ಕೆರೆ ಬಳಿ ವ್ಯಕ್ತಿಯ ಬರ್ಬರ ಹತ್ಯೆ
ಬೆಳಗಾವಿ: ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಕೆರೆ ಹತ್ತಿರ ಶವ ಬಿಸಾಕಿ ಹೋಗಿರುವ ಘಟನೆ ನಗರದ ಅನಗೋಳದಲ್ಲಿ ನಡೆದಿದೆ. ಅನಗೋಳದ ಹೊರ ವಲಯದ ಕೆರೆ ಹತ್ತಿರ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೃಷಿ ಕೆಲಸಕ್ಕೆ ಹೊರಟಿದ್ದ ರೈತರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಸಂಜಯ್ ತುಕಾರಾಮ್ ಪಾಟೀಲ (34) ಕೊಲೆಯಾದ ವ್ಯಕ್ತಿ. ಟಿಳಕವಾಡಿ ಪೊಲೀಸರಿಂದ ತನಿಖೆ: ಕೆಲಸಕ್ಕೆ ಹೋಗಿ ಬರುವುದಾಗಿ ಮೊನ್ನೆ ಮನೆಯಿಂದ ಹೊರಬಂದಿದ್ದ ಸಂಜಯ್ ಪಾಟೀಲ …
Read More »ಹೆಡ್ಗೇವಾರ್ ಮತ್ತು ಸಾವರ್ಕರ್ ಪಠ್ಯಕ್ಕೆ ಕೊಕ್ : ಜನರ ಬಳಿ ಹೋಗಲು ಬಿಜೆಪಿ ನಿರ್ಧಾರ
ಬೆಂಗಳೂರು : ಹೆಡ್ಗೇವಾರ್, ಸಾವರ್ಕರ್ ಪಠ್ಯ ಕೈಬಿಟ್ಟು ಟಿಪ್ಪು ಮತ್ತು ನೆಹರೂ ಪತ್ರವನ್ನು ಪಠ್ಯದಲ್ಲಿ ಸೇರಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ. ಈ ಸಂಬಂಧ ಬಿಜೆಪಿ ಸಾವರ್ಕರ್ ಪಾಠ ತೆರವು ವಿಷಯವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಲೋಕಸಭೆ ಚುನಾವಣೆಗೆ ತೆಗೆದುಕೊಂಡು ಹೋಗುತ್ತೇವೆ. ಪೋಷಕರ ಬಳಿ ತೆಗೆದುಕೊಂಡು ಹೋಗುತ್ತೇವೆ, ವಿದ್ಯಾರ್ಥಿಗಳ ಮುಂದೆಯೂ ಇಡುತ್ತೇವೆ ಎಂದು ಬಿಜೆಪಿ ಹೇಳಿದೆ. ಸಚಿವ ಸಂಪುಟ ನಿರ್ಣಯದ …
Read More »‘ಪುಕ್ಸಟ್ಟೆ ಅಕ್ಕಿ ಕೊಡುವಂತೆ ನಾವು ಕೇಳಿಲ್ಲ’- ಕೇಂದ್ರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಮೈಸೂರು : “ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ತಾರತಮ್ಯವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ಹೋರಾಟ ಮಾಡಲು ಕಾರ್ಯಕ್ರಮ ರೂಪಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, “ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟ್ಟೆ ಕೇಳಿಲ್ಲ. ನೀವು ಯಾವ ರೀತಿ ಅಕ್ಕಿ ಕೊಡುತ್ತಿದ್ದಿರೋ ಅದೇ …
Read More »ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ
ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಹೊರರಾಜ್ಯಗಳಿಂದ ತರಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಯೋಜನೆಗೆ ಅಗತ್ಯವಾದ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ತಮ್ಮ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜುಲೈ ಒಂದರಂದೇ ಜಾರಿಗೆ ತರಲು ಎಲ್ಲ ಕಸರತ್ತು ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಯಾವ ಯಾವ …
Read More »