ನವದೆಹಲಿ, ಜೂನ್. 15: ಇತ್ತೀಚೆಗಷ್ಟೆ ರಚನೆಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಜನರು ಪ್ರಧಾನಿ ನರೇಂದ್ರ ಮೋದಿಯವರ ಅಲ್ಪಸಂಖ್ಯಾತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಅದು ಯಾವಾಗ ಬೇಕಾದರೂ ಬಹುಮತವಿಲ್ಲದೆ ಬೀಳಬಹುದು. ತಪ್ಪಾಗಿ ಎನ್‌ಡಿಎ ಸರ್ಕಾರ ರಚನೆಯಾಗಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಎಂದು ಪಿಟಿಐ ವರದಿ …
Read More »ರೇಣುಕಾಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ‘ಫಿಲ್ಮ್ ಚೇಂಬರ್
ಬೆಂಗಳೂರು : ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದೆ ಹಾಗೂ 5 ಲಕ್ಷ ಪರಿಹಾರದ ಚೆಕ್ ನೀಡಿದೆ. ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ, ಸದಸ್ಯರು ಕುಟುಂಬದವರಿಗೆ ಧೈರ್ಯ ಹೇಳಿ ಶಾಶ್ವತ ಪರಿಹಾರ ಕೊಡಿಸುವ ಭರವಸೆಯನ್ನೂ ನೀಡಿದರು. ಈ ಬಗ್ಗೆ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ಯಾರೇ ಮಾಡಿದರೂ ತಪ್ಪು ತಪ್ಪೇ. ಇಂತಹ ತಪ್ಪನ್ನು …
Read More »ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ
ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ …
Read More »ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ
ಬೆಂಗಳೂರು: ನಟ ಯುವ ಯುವರಾಜ್ ಕುಮಾರ್ ವಿಚ್ಚೇದನ ನೋಟಿಸ್ ನೀಡಿದ ಬಳಿಕ ಪತ್ನಿ ಶ್ರೀದೇವಿ ಭೈರಪ್ಪ ಅವರು, ‘ನನ್ನ ಪತಿಗೆ ಸಪ್ತಮಿ ಗೌಡ ಅವರೊಂದಿಗೆ ಅನೈತಿಕ ಸಂಬಂಧ ಇದೆ’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಕುರಿತು ನಟಿ ಸಪ್ತಮಿ ಅವರು ಕೋರ್ಟ್ ಮೆಟ್ಟಿಲೇರಿ ನಿರ್ಬಂಧಕಾಜ್ಞೆ ತರಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಸಪ್ತಮಿ ಗೌಡ ದಾವೆ ಹೂಡಿ, ‘ಅವರ ವಿಚ್ಚೇದನ ಪ್ರಕರಣದಲ್ಲಿ ನನ್ನ ಹೆಸರು ತಳುಕು …
Read More »5 ದಿನಗಳ ಕಾಲ ನಟ ದರ್ಶನ್ ಹಾಗೂ ಗ್ಯಾಂಗ್ ಮತ್ತೆ ಪೊಲೀಸ್ ಕಸ್ಟಡಿಗೆ!
ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಇದೀಗ ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳಿಸಲಾಗಿದ್ದು, ಜೂನ್ 20ರವರೆಗೂ ಕಸ್ಟಡಿಯಲು ಇರಿಸುವಂತೆ ಆದೇಶಿಸಲಾಗಿದೆ. ಕಳೆದ ಕೆಲವು ದಿನಗಳಿಂದಲೂ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಿರಂತರ ವಿಚಾರಣೆಯಲ್ಲಿ ತೊಡಗಿರುವ ದರ್ಶನ್ ಮತ್ತು ಗ್ಯಾಂಗ್ ಅನ್ನು ಪೊಲೀಸರು ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಮುಂದಿನ ಐದು ದಿನಗಳವರೆಗೂ …
Read More »ವಿಶ್ವಕಪ್‌ನಿಂದ ಹೊರಬಿದ್ದ ಪಾಕ್
ಕರಾಚಿ: ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಿಂದ ಪಾಕಿಸ್ತಾನ ತಂಡ ಹೊರಬಿದ್ದ ಬೆನ್ನಲ್ಲೇ, ಪಾಕ್ ಕ್ರಿಕೆಟ್ ಮಂಡಳಿಯು (ಪಿಸಿಬಿ) ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಪರಿಚಯಿಸಿದೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡವು ಗುಂಪು ಹಂತದಲ್ಲೇ ಹೊರಬಿದ್ದಿದೆ. ಬದ್ಧ ಎದುರಾಳಿ ಭಾರತದ ವಿರುದ್ಧ ಮಾತ್ರವಲ್ಲದೆ, ‘ಕ್ರಿಕೆಟ್ ಶಿಶು’ ಅಮೆರಿಕ ಎದುರೂ ಸೋಲು ಅನುಭವಿಸಿದೆ. ಇದರಿಂದ ತೀವ್ರ ಮುಜುಗರಕ್ಕೀಡಾಗಿರುವ ಪಿಸಿಬಿ ಹೊಸ ನಿಯಮ …
Read More »ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ ನಿಧನ
ಹುಬ್ಬಳ್ಳಿ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ ಮೋಹನ (83) ಅವರು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಪತ್ರಕರ್ತರ ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಿ ಹಿಂದು ಪತ್ರಿಕೆಯಲ್ಲಿ ಸುಮಾರು 47 ವರ್ಷ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ವಿವಿಧ ಪತ್ರಿಕೆಗಳಿಗೆ ಲೇಖನ ಬರೆಯುತ್ತಿದ್ದರು.
Read More »ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಬ್ರೇಕ್? : ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು, ಜೂನ್ 15: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಿಂದೆಗೆದುಕೊಳ್ಳಬೇಕು ಅಥವಾ ಪರಿಶೀಲಿಸಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ನೀಡಿದ ಹೇಳಿಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ …
Read More »D ಗ್ಯಾಂಗ ಗೆ ಜೈ ಲಾ ಬೆಲಾ.. ?
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. …
Read More »ರೈತರಿಗೆ ಗುಡ್ ನ್ಯೂಸ್: ಜೂ.18ರಂದು ‘ಪಿಎಂ ಕಿಸಾನ್ ಯೋಜನೆ’ಯ 17ನೇ ಕಂತಿನ ಹಣ ಪ್ರಧಾನಿ ಮೋದಿ ಬಿಡುಗಡೆ
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆಯ ನಂತರ ಪಿಎಂ ಮೋದಿ ಕೃಷಿ ಸಖಿಗಳು ಎಂದು ಗೊತ್ತುಪಡಿಸಿದ 30,000 ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ …
Read More »
Laxmi News 24×7