Breaking News

ಈ ವರ್ಷ 2 ಲಕ್ಷ ಸಸಿಗಳನ್ನು ನೆಡುವ ‘ಬಿಬಿಎಂಪಿ’ ಗುರಿ

ಬೆಂಗಳೂರು: ಈ ವರ್ಷ ನಗರದಲ್ಲಿ 2 ಲಕ್ಷ ಸಸಿಗಳನ್ನು ನೆಡಲು ಬಿಬಿಎಂಪಿ ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕಬ್ಬನ್ ಪಾರ್ಕ್ ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುರಿ ಸಾಧನೆಗೆ ಶಾಲಾ ವಿದ್ಯಾರ್ಥಿಗಳ ಸಹಕಾರ ಪಡೆಯಲಾಗುವುದು ಎಂದರು. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್, ಬಿಬಿಎಂಪಿ ಹಲವಾರು ಪರಿಸರ ಸ್ನೇಹಿ ಯೋಜನೆಗಳಿಗಾಗಿ 410 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. …

Read More »

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್‌ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ. ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್‌ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ರೇಣುಕಾ ಸ್ವಾಮಿ …

Read More »

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಬೆಂಗಳೂರು: ದೇವೇಗೌಡರ ಕುಟುಂಬವನ್ನು ಮುಗಿಸಿ ಆಯಿತು. ಇನ್ನು 82ರ ಹರೆಯದ, ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ಕುಟುಂಬವನ್ನು ಮುಗಿಸಲು ಕುತಂತ್ರ ಮಾಡಲಾಗುತ್ತಿದೆ. ಆದರೆ ಈ ಯತ್ನ ಫ‌ಲಿಸದೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದು ಕೇಂದ್ರದ ಬೃಹತ್‌ ಉದ್ದಿಮೆ ಮತ್ತು ಉಕ್ಕು ಖಾತೆಯ ಸಚಿವ ಎಚ್‌.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಅವರು ಜೆಡಿಎಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನ …

Read More »

ರಾಯಚೂರು | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ರಾಯಚೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ಪೊಸ್ಕೊ ನ್ಯಾಯಾಲಯ ಶುಕ್ರವಾರ 20ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. 2021ರ ಜನವರಿಯಲ್ಲಿ ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ಆರೋಪಿ ಹುಲ್ಲಪ್ಪ ರಾಮಣ್ಣಗೆ (25) ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿ ನ್ಯಾಯಾಧೀಶ ಬಿ.ಬಿ. ಜಕಾತಿ ತೀರ್ಪು ನೀಡಿದ್ದಾರೆ. ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹ 9 ಲಕ್ಷ …

Read More »

ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ: BSY ಪರ ಶಾಮನೂರು ಬ್ಯಾಟಿಂಗ್

ದಾವಣಗೆರೆ: ‘ಆರೋಪ ಸಾಬೀತಾದ ಮೇಲೆ ಬಂಧನ ಅಂದರೆ ಸರಿ. ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಅದಕ್ಕೆ ಅರ್ಥ ಇದೆಯೇ’ ಎಂದು ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದರು. ಯಡಿಯೂರಪ್ಪ ವಿರುದ್ಧದ ಪ್ರಕರಣ ಸಂಬಂಧ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಅರೆಸ್ಟ್ ಎಂದರೆ ಏನ್ ಅರ್ಥ. ಆಕೆ 55 ಜನರ ವಿರುದ್ಧವೂ ದೂರು ನೀಡಿದ್ದಾ‌ಳೆ. ಇಂತಹದಕ್ಕೆ ಬೆಲೆ ಇದೇಯೇ’ …

Read More »

ಹೃದಯಾಘಾತದಿಂದ ‘ದರ್ಶನ್ ಗ್ಯಾಂಗ್’ ಕೊಲೆ ಕೇಸ್ ಆರೋಪಿ ತಂದೆ ನಿಧನ

ಚಿತ್ರದುರ್ಗ: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಬೆನ್ನಲ್ಲೇ ಆಘಾತಕ್ಕೊಳಗಾಗಿದ್ದ ಚಂದ್ರಣ್ಣ ಸಾವನ್ನಪ್ಪಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನುಕುಮಾರ್ 7ನೇ ಆರೋಪಿಯಾಗಿದ್ದು, ಇವತ್ತು ಪೊಲೀಸರು ಅನುಕುಮಾರ್ ನನ್ನು ಬಂಧಿಸಿದ್ದರು. ಪುತ್ರನ ಬಂಧನದ ಸುದ್ದಿ ತಿಳಿದ ಚಿತ್ರದುರ್ಗದ ಸಿಹಿನೀರು ಹೊಂಡ ಸಮೀಪ ಇರುವ ಮನೆಯಲ್ಲಿ ಚಂದ್ರಣ್ಣ …

Read More »

ಮೂಡಲಗಿ: ಸಮಗ್ರ ಕೃಷಿಯಲ್ಲಿ ಬಸವಣ್ಣಿ ಖುಷಿ

ಮೂಡಲಗಿ: ತಾಲ್ಲೂಕಿನ ಗುರ್ಲಾಪುರ ಗ್ರಾಮದ ರೈತ ಬಸವಣ್ಣಿ ಚಿಣ್ಣಪ್ಪ ಮುಗಳಖೋಡ ಒಂದೇ ಬೆಳೆ ನೆಚ್ಚಿಕೊಳ್ಳದೆ, ವಿವಿಧ ಬೆಳೆಗಳನ್ನು ಬೆಳೆಯುತ್ತ ಸಮಗ್ರ ಕೃಷಿಯಲ್ಲಿ ಯಶ ಕಂಡಿದ್ದಾರೆ. ಜತೆಗೆ, ಹೈನುಗಾರಿಕೆಯಲ್ಲಿ ಉತ್ತಮ ಆದಾಯ ಗಳಿಸುತ್ತಿದ್ದಾರೆ. ಬಿ.ಎಸ್ಸಿ ಪದವೀಧರರಾದ ಬಸವಣ್ಣಿ 40 ಎಕರೆ ಜಮೀನು ಹೊಂದಿದ್ದಾರೆ. ನೌಕರಿಗಾಗಿ ಬೆನ್ನು ಹತ್ತದೆ, ಒಕ್ಕಲುತನದಲ್ಲೇ ಖುಷಿ ಕಾಣುತ್ತಿದ್ದಾರೆ. ‘ನಾನು ಒಂದು ಸಾಲಿನಿಂದ ಇನ್ನೊಂದು ಸಾಲಿಗೆ 4 ಅಡಿ ಬಿಟ್ಟು, ಕಬ್ಬಿನ ಬೆಳೆ ನಾಟಿ ಮಾಡಿದ್ದೇನೆ. ಮಿಶ್ರ ಬೆಳೆಗಳಾಗಿ …

Read More »

ಬೆಳಗಾವಿ: ರಕ್ತದ ಸಂಗ್ರಹಕ್ಕೆ ಬೇಕಿದೆ ಇನ್ನಷ್ಟು ಜಾಗೃತಿ.

ಬೆಳಗಾವಿ: ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಬಿಮ್ಸ್‌) ರಕ್ತನಿಧಿ ಕೇಂದ್ರವು ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರ ನಡೆಸಿ, ವಾರ್ಷಿಕ 7 ಸಾವಿರಕ್ಕೂ ಅಧಿಕ ಯೂನಿಟ್‌ ರಕ್ತ ಸಂಗ್ರಹಿಸುತ್ತಿದೆ. ಆದರೆ, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಬೇಡಿಕೆಯಂತೆ ರಕ್ತ ಪೂರೈಸಲು ಕೆಲವೊಮ್ಮೆ ಖಾಸಗಿ ರಕ್ತನಿಧಿ ಕೇಂದ್ರಗಳ ನೆರವು ಪಡೆಯುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮಾತ್ರವಲ್ಲದೆ, ಅಕ್ಕಪಕ್ಕದ ಜಿಲ್ಲೆಗಳ ರೋಗಿಗಳು ದಾಖಲಾಗುತ್ತಾರೆ. ಇಲ್ಲಿ ಚಿಕಿತ್ಸೆ ಪಡೆಯುವವರಿಗೆ ಬಿಮ್ಸ್‌ ರಕ್ತನಿಧಿ ಕೇಂದ್ರದಿಂದ ರಕ್ತ ಪೂರೈಕೆಯಾಗುತ್ತದೆ. ಬಿಪಿಎಲ್‌ …

Read More »

ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಆರಂಭವಾಗದ ಸಿದ್ಧತೆ

ಬೆಳಗಾವಿ: ನಗರದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ನೆನಪಿಗೆ ವರ್ಷವಿಡೀ ವಿಶೇಷ ಕಾರ್ಯಕ್ರಮ ಆಯೋಜಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಅದಕ್ಕೆ ಬಜೆಟ್‌ನಲ್ಲಿ ₹2 ಕೋಟಿ ಅನುದಾನ ಮೀಸಲಿಟ್ಟಿದೆ. ಆದರೆ, ಕಾರ್ಯಕ್ರಮದ ಸಿದ್ಧತೆ ಇನ್ನೂ ಆರಂಭಗೊಂಡಿಲ್ಲ. 1924ರ ಡಿಸೆಂಬರ್ 25 ಮತ್ತು 26ರಂದು ಬೆಳಗಾವಿಯಲ್ಲಿ (ಈಗಿನ ವೀರಸೌಧದ ಸ್ಥಳದಲ್ಲಿ) 39ನೇ ಕಾಂಗ್ರೆಸ್‌ ಅಧಿವೇಶನ ನಡೆದಿತ್ತು. ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್‌ ಅಧಿವೇಶನವಿದು. ಇದೇ ಡಿಸೆಂಬರ್‌ 25ಕ್ಕೆ …

Read More »

ಕಾರ್ಮಿಕರ ಮೇಲೆ ಹಲ್ಲೆ: ಓರ್ವ ವಶಕ್ಕೆ

ಬೆಳಗಾವಿ: ಇಲ್ಲಿನ ವಡಗಾವಿಯ ಬನಶಂಕರಿ ಗಲ್ಲಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಮೇಲೆ ಗುರುವಾರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಹಾಪುರ ಠಾಣೆ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ‘ದಶರಥ ಧಾಮಣೇಕರ ಅವರ ವಿದ್ಯುತ್ ಮಗ್ಗದಲ್ಲಿ ಬಿಹಾರ ಮೂಲದ ನಾಲ್ವರು ಕಾರ್ಮಿಕರು ದುಡಿಯುತ್ತಿದ್ದಾರೆ‌.ಹೊರರಾಜ್ಯದವರು ಇಲ್ಲಿ ಬಂದು ಕೆಲಸ ಮಾಡುತ್ತಿರುವ ಕಾರಣ, ನಮಗೆ ಉದ್ಯೋಗ ಸಿಗುತ್ತಿಲ್ಲ ಎಂದು ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ. ಈ ಪೈಕಿ ಒಬ್ಬನನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದೇವೆ. ತಪ್ಪೆಸಗಿದ …

Read More »