Breaking News

ತಮ್ಮ ಕಚೇರಿಯ ಗುಮಾಸ್ತನನ್ನು ಸರ್ಕಾರಿ ವಾಹನದಲ್ಲಿ ಮನೆಗೆ ಡ್ರಾಪ್​ ಮಾಡುವ ಮೂಲಕ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ.

ಶಿವಮೊಗ್ಗ: ತಮ್ಮ ಕಚೇರಿಯ ಗುಮಾಸ್ತರೊಬ್ಬರು ವಯೋ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಅವರನ್ನು ಬೀಳ್ಕೊಟ್ಟು, ಎಲ್ಲರಿಗೂ ಮಾದರಿಯಾಗಿದ್ದಾರೆ. ಸಾಗರದ ಉಪ ವಿಭಾಗಧಿಕಾರಿಯಾದ ಪಲ್ಲವಿ ಸಾತೇನಹಳ್ಳಿ ಅವರು ತಮ್ಮ ಕಚೇರಿಯಲ್ಲಿ ಡಿ ಗ್ರೂಪ್​ ನೌಕರರಾಗಿ ನಿವೃತ್ತಿಯಾದ ಕೃಷ್ಣಪ್ಪ ಅವರನ್ನು ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರ ವಯೋನಿವೃತ್ತಿ …

Read More »

ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ

ಕಲಬುರಗಿ: ಬಿಜೆಪಿಯವರು ತಮ್ಮ ಮನೆಯ ಹುಳಕನ್ನು ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ಬಿಜೆಪಿಯವರು ಸಂಪೂರ್ಣ ಹತಾಶರಾಗಿದ್ದಾರೆ. ನಮ್ಮ ಸರ್ಕಾರ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ತಮ್ಮ ಮನೆಯಲ್ಲಿನ ಹುಳುಕನ್ನು ಸರಿಪಡಿಸಿಕೊಳ್ಳಲಾಗದೇ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೀಕೆಗೆ …

Read More »

ಸಮೃದ್ಧಿ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಯದ ವೇಳೆ ಗರ್ಡರ್ ಬಿದ್ದು ಸಾವು ನೋವು

ಮಹಾರಾಷ್ಟ್ರ: ಸಮೃದ್ಧಿ ಹೆದ್ದಾರಿಯಲ್ಲಿ ಗರ್ಡರ್‌ಗಳನ್ನು ಅಳವಡಿಸುವಾಗ ದುರಂತ ಸಂಭವಿಸಿದೆ. ಫ್ಲೈಓವರ್ ಗರ್ಡರ್ ಲಾಂಚಿಂಗ್ ಮಷಿನ್ ಕುಸಿದು 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಥಾಣೆ ಜಿಲ್ಲೆಯ ಶಹಪುರದ ಸರ್ಲಾಂಬೆ ಗ್ರಾಮದಲ್ಲಿ6 ಪಥಗಳ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದ ವೇಳೆ ಈ ದುರಂತ ಘಟನೆ ನಡೆದಿದೆ. ಶಹಾಪುರ ತಾಲೂಕಿನಲ್ಲಿ ಮುಂಬೈ ನಾಗಪುರ ಸಮೃದ್ಧಿ ಹೆದ್ದಾರಿಯ ಅಂತಿಮ ಹಂತದ ಕಾಮಗಾರಿ ನಡೆಯುತ್ತಿರುವಾಗಲೇ ಗರ್ಡರ್ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗರ್ಡರ್ ಲಾಂಚರ್ …

Read More »

ಎಸ್‌ಸಿಎಸ್‌ಪಿ/ಟಿಎಸ್‌ಪಿ ಅಡಿ 4030 ಕೋಟಿ ರೂ. ಅನುದಾನ ಹೆಚ್ಚಳ: H.C. ಮಹದೇವಪ್ಪ

ಬೆಂಗಳೂರು : ಎಸ್​ಸಿಎಸ್​ಪಿ/ಟಿಎಸ್​ಪಿ ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳ ಒಳಿತಿಗಾಗೇ ಬಳಕೆಯಾಗಬೇಕೆಂಬುದು ಬಹಳ ವರ್ಷಗಳ ಬೇಡಿಕೆ. ಕಾಯ್ದೆಯಲ್ಲಿನ ಸಣ್ಣ ಲೋಪವನ್ನು ಬಳಸಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಇದೀಗ ಕಾಯ್ದೆ ಸೆಕ್ಷನ್ 7(ಡಿ) ಕೈಬಿಡುವ ಮೂಲಕ ಅನುದಾನವನ್ನು ಆ ಸಮುದಾಯಗಳಿಗೆ ಖರ್ಚು ಮಾಡಬೇಕೆಂಬ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ನಡೆದಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ …

Read More »

ರಾಜ್ಯದಲ್ಲಿ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟ ಮತ್ತು ಹಲವು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಕಾನೂನು ವಿದ್ಯಾರ್ಥಿಗಳಿಂದ ಪಿಐಎಲ್​

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಆವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಸಾರಿಗೆ ಇಲಾಖೆ, ಕೆಎಸ್‌ಆರ್‌ಟಿ, ಬಿಎಂಟಿಸಿ, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿ, ಕೆಕೆಆರ್‌ಟಿಸಿ ಈ ನಾಲ್ಕು …

Read More »

ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ಗ್ರಾಮ ಒನ್ ಕೇಂದ್ರ ಆಪರೇಟರ್​ಗಳ ಎಚ್ಚರಿಕೆ

ಬೆಳಗಾವಿ: ಗ್ರಾಮ ಒನ್ ಕೇಂದ್ರಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಗ್ರಾಮ ಒನ್ ಕೇಂದ್ರದ ಆಪರೇಟರ್​ಗಳು ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆ ಈಡೇರುವವರೆಗೆ ಕೇಂದ್ರ ತೆರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ರವಾನಿಸಿದ್ದಾರೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಲ್ಲಿಕೆಯಲ್ಲಿ‌ ಹಣ ವಸೂಲಿ ಆರೋಪದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸೀಜ್ ಮಾಡಿ ಕೇಸ್ ದಾಖಲಿಸಲಾಗುತ್ತಿದೆ. ಹಾಗಾಗಿ ಜಿಲ್ಲೆಯ ಗ್ರಾಮ ಒನ್ …

Read More »

ಅರ್ಥಪೂರ್ಣ, ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ,:CM

ಬೆಂಗಳೂರು : 2023ನೇ ಸಾಲಿನ ಮೈಸೂರು ದಸರಾ ಹಬ್ಬವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಣೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.   ವಿಧಾನಸೌಧದಲ್ಲಿ ನಾಡಹಬ್ಬ ಮೈಸೂರು ದಸರಾ 2023 ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ದಸರಾ ಮಹೋತ್ಸವ ಚಾಮುಂಡೇಶ್ವರಿ ಬೆಟ್ಟದಲ್ಲಿ 15.10.2023ರಂದು ಬೆಳಗ್ಗೆ 10.15-10.36 ಶುಭ ಲಗ್ನದಲ್ಲಿ ಉದ್ಘಾಟನೆ ಆಗಲಿದೆ. ದಸರಾ ಪಾರಂಪರಿಕ‌ ಉತ್ಸವವಾಗಿದೆ. ದಸರಾ ಮಹೋತ್ಸವ ಹೆಚ್ಚು …

Read More »

ನಾಳೆಯಿಂದ ನಂದಿನಿ ಹಾಲು ಹಾಗೂ ಮೊಸರಿನ ದರದಲ್ಲಿ ಏರಿಕೆ: K.M.F.

ಬೆಂಗಳೂರು: ನಂದಿನಿ ಹಾಲು ಪ್ರತಿ ಲೀಟರ್​ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್​ ಪ್ರಕಟಣೆಯಲ್ಲಿ ತಿಳಿಸಿದೆ. ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಭೀಮಾನಾಯ್ಕ ಕೆಎಂಎಫ್ ಹಾಲಿನ ದರವನ್ನು ಕನಿಷ್ಠ 5 ರೂ. ಏರಿಕೆ ಮಾಡುವುದಾಗಿ ಸುಳಿವು ನೀಡಿದ್ದರು. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 …

Read More »

ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಬೀದರ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ …

Read More »

ಬೆಳಗಾವಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ಕೆನಡಾದಲ್ಲಿ ನಡೆದ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕ್ರೀಡಾ ಸ್ಪರ್ಧೆಯಲ್ಲಿ

ಬೆಳಗಾವಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ಕೆನಡಾದಲ್ಲಿ ನಡೆದ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕ್ರೀಡಾ ಸ್ಪರ್ಧೆಯಲ್ಲಿ 45 ವರ್ಷ ಮೇಲ್ಪಟ್ಟವರ 21 ಕಿ.ಮೀ ಹಾಫ್ ಮ್ಯಾರಥಾನ್ ನಲ್ಲಿ ಭಾಗವಹಿಸಿ ವಿಜೇತರಾದರು. : ವರ್ಲ್ಡ್ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡೆಗಳ ಮೂಲಕ ಆಧುನಿಕ ಜಾಗತಿಕ ಪೊಲೀಸ್ ವ್ಯವಸ್ಥೆಗಳನ್ನು ಒಟ್ಟುಗೂಡಿಸುವ ಕಾರ್ಯವಿಧಾನವಾಗಿದೆ. ಈ ವರ್ಷ ಜುಲೈ 28 ರಿಂದ ಆಗಸ್ಟ್ 6 ರವರೆಗೆ ಕೆನಡಾದ ವಿನ್ನಿಪೆಗ್ನಲ್ಲಿ ಈ …

Read More »