Breaking News

ಬೆಳಗಾವಿಯಲ್ಲಿ ನೀರಿಗಾಗಿ‌ ಹಾಹಾಕಾರ: ಟ್ಯಾಂಕರ್ ಮೊರೆ ಹೋದ ಕುಂದಾನಗರಿಯ ಜನ..

ಬೆಳಗಾವಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಜೀವ ಜಲಕ್ಕಾಗಿ ಕುಂದಾನಗರಿ ಜನ ಪರದಾಡುತ್ತಿದ್ದು, ನೀರಿಗಾಗಿ ಟ್ಯಾಂಕರ್​ಗಳ ಮೊರೆ ಹೋಗುತ್ತಿರುವುದು ಸಾಮಾನ್ಯವಾಗಿದೆ. ಇದೇ ಸ್ಥಿತಿ ಮುಂದುವರಿದರೆ ಮತ್ತಷ್ಟು ನೀರಿನ‌ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ. ಇಷ್ಟೊತ್ತಿಗಾಗಲೇ ಮಳೆಗಾಲ ಆರಂಭವಾಗಿ ಜನರ ಮೊಗದಲ್ಲಿ ಮಂದಹಾಸ ಮೂಡಬೇಕಿತ್ತು. ಆದರೆ ಜೂನ್ 10 ದಾಟಿದ್ರೂ ಇನ್ನು ಮಳೆಯ ಸುಳಿವೇ ಸಿಗುತ್ತಿಲ್ಲ. ಇದರಿಂದ ಬೆಳಗಾವಿಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಎಂಟು ದಿನ ದಿನಗಳಿಗೊಮ್ಮೆ ನೀರು ಸರಬರಾಜು …

Read More »

13ನೇ ಫೋನ್‌ ಇನ್‌ ಕಾರ್ಯಕ್ರಮ: ಜನರ ಸಮಸ್ಯೆ ಆಲಿಸಿದ ಬೆಳಗಾವಿ ಡಿಸಿ, ಎಸ್​​ಪಿ

ಬೆಳಗಾವಿ: ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ ಪಾಟೀಲ್ ನೇತೃತ್ವದಲ್ಲಿ 2022ರ ನವೆಂಬರ್‌ನಿಂದ ಈವರೆಗೆ 12 ಬಾರಿ ಫೋನ್‌ ಇನ್‌ ಕಾರ್ಯಕ್ರಮ ನಡೆದಿದ್ದು, ಇಂದು 13ನೇ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಡಿಸಿಪಿ ಶೇಖರ್ ಎಚ್.ಟಿ. ಕೂಡ ಭಾಗವಹಿಸಿದ್ದರು. ಜಿಲ್ಲೆಯ ವಿವಿಧೆಡೆಯಿಂದ 62 ಜನರು ಕರೆ ಮಾಡಿ, ತಮ್ಮ ಸಮಸ್ಯೆ ಹೇಳಿಕೊಂಡರು. ಕೆಲ ಜನರಿಗೆ ಸ್ಥಳದಲ್ಲೇ ಪರಿಹಾರವನ್ನು ಕೂಡ ಅಧಿಕಾರಿಗಳು ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಕಚೇರಿಯಲ್ಲಿ …

Read More »

ಲೋಕಸಭೆ ಚುನಾವಣೆಯವರೆಗೆ ಮಾತ್ರ ಕಾಂಗ್ರೆಸ್ ಗ್ಯಾರಂಟಿ, ಆಮೇಲೆ ಕೈ ಕೊಡ್ತಾರೆ : ರಮೇಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಅಥಣಿ ಶಾಸಕ ಲಕ್ಷ್ಮಣ್ ಸವದಿ ಅಭಿವೃದ್ಧಿಗೋಸ್ಕರ ಕಾಂಗ್ರೆಸ್ ಪಕ್ಷ ಸೇರಿದ್ದು, ಕ್ಷೇತ್ರದ ಅಭಿವೃದ್ಧಿ ಮಾಡಲಿ. ನಾವು ಅವರಿಗೆ ಸಹಕಾರ ಕೊಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಸೋಲಿನ ಬಗ್ಗೆ ಕಾರ್ಯಕರ್ತರೊಂದಿಗೆ ಪರಾಮರ್ಶೆಯ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಅಥಣಿ ಕಾಗವಾಡ ವಿಧಾನಸಭೆ ಸೋಲು ಜನರ ಕೊಟ್ಟ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಬರುವ …

Read More »

ಮದುವೆ ನಿಶ್ಚಯಕ್ಕೆ ಗ್ರಾಮಕ್ಕೆ ಬರುತ್ತಿದ್ದ ಯೋಧ ರೈಲಿನಿಂದ ಬಿದ್ದು ಸಾವು: ಕುಟುಂಬಸ್ಥರ ಆಕ್ರಂದನ

ಬೆಳಗಾವಿ: ವಿವಾಹ ಎಂಬುದು ಎಲ್ಲರಿಗೂ ಸಂತಸದ ಕ್ಷಣ. ವ್ಯಕ್ತಿಯ ಜೀವನದಲ್ಲಿ ಪ್ರಮುಖ ಘಟ್ಟ ಎಂದೇ ಪರಿಗಣಿಸಬಹುದು. ಏಕೆಂದರೆ ಜೀವನ ಸಂಗಾತಿಯನ್ನು ಪಡೆದು ಆಕೆಯೊಂದಿಗೆ ಮುಂದಿನ ಜೀವನ ಕಳೆಯುವುದು ಎಲ್ಲರಿಗೂ ಅವಿಸ್ಮರಣೀಯವೇ. ಆದರೆ ಇಂತಹ ಶುಭ ಕಾರ್ಯಕ್ಕೆಂದು ತೆರಳುವಾಗ ಮದುವೆ ಆಗಬೇಕಾದ ಹುಡುಗನೇ ನಿಧನನಾಧರೆ ಕುಟುಂಬಕ್ಕೆ ಅಂತಹ ದುಃಖವನ್ನು ಭರಿಸುವುದು ಕಷ್ಟ ಆಗುತ್ತದೆ. ಈ ರೀತಿಯ ಹೃದಯವಿದ್ರಾವಕ ಘಟನೆ ಒಂದು ಬೆಳಗಾವಿಯಲ್ಲಿ ನಡೆದಿದೆ. ಮದುವೆ ದಿನಾಂಕ ನಿಗದಿ ಮಾಡಲು ಸ್ವಗ್ರಾಮಕ್ಕೆ ಆಗಮಿಸುತ್ತಿದ್ದ ಯೋಧ …

Read More »

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್‌ ವಿಸ್ತರಣೆಗೆ ₹ 273 ಕೋಟಿ ಬಿಡುಗಡೆ, ಶೀಘ್ರದಲ್ಲಿ ಅಭಿವೃದ್ಧಿ ಕಾರ್ಯ ಆರಂಭ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್‌ ವಿಸ್ತರಣೆಗೆ ರೂ. 273 ಕೋಟಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಅತಿ ದೊಡ್ಡ ನಗರವಾಗಿದೆ. ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (IIIT) …

Read More »

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಾಪುರ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಶಾಸಕರ ಆಸ್ತಿ ವಿವರ ಸಲ್ಲಿಕೆಗೆ ಜೂನ್ 30 ಗಡುವು: ಸಲ್ಲಿಸದಿದ್ದರೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಲೋಕಾಯುಕ್ತರು

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಇದೀಗ ಹೊಸ ಸರ್ಕಾರವೂ ರಚನೆಯಾಗಿದೆ. ಈ ಮಧ್ಯೆ ಚುನಾವಣೆಯಲ್ಲಿ ಗೆದ್ದ ರಾಜ್ಯದ ಎಲ್ಲ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶಿಸಿದ್ದರು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳಲ್ಲಿ ಮೊದಲ ಬಾರಿ ಆಯ್ಕೆಯಾದ ಹಾಗೂ ಪುನರ್ ಆಯ್ಕೆಯಾದ ಶಾಸಕರಿಗೆ ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸುವಂತೆ ಡೆಡ್ ಲೈನ್ ನೀಡಲಾಗಿತ್ತು. ರಾಜ್ಯದ 224 ಶಾಸಕರಿಗೂ …

Read More »

81ನೇ ವಯಸ್ಸಿನಲ್ಲಿ ಇಂಗ್ಲೀಷ್​ ಎಂಎ ಪರೀಕ್ಷೆ ಬರೆದ ವಿಜಯಪುರದ ವ್ಯಕ್ತಿ! ಸಾಧನೆಗೆ ಪತ್ನಿಯೇ ಪ್ರೇರಣೆಯಂತೆ

ವಿಜಯಪುರ: ಕಲಿಕೆಗೆ ವಯಸ್ಸಿನ ಮಿತಿ ಇರದು. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕೆಯ ಆಸಕ್ತಿಗೆ ಅಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂ.ಎ. ಇಂಗ್ಲೀಷ್ ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಗಮನ ಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಅವರಲ್ಲಿ ಓದಿನ …

Read More »

ಹಾವೇರಿಯ ಕರ್ಜಿಗಿಯಲ್ಲಿ ಕಳೆಗಟ್ಟಿದ ಕಾರಹುಣ್ಣಿಮೆ ಸಂಭ್ರಮ

ಹಾವೇರಿ : ಕಾರಹುಣ್ಣಿಮೆ ರೈತರ ಪಾಲಿನ ಸಂಭ್ರಮದ ಹಬ್ಬಗಳಲ್ಲೊಂದು. ಪ್ರತಿ ವರ್ಷ ಉತ್ತರ ಕನಾ೯ಟಕ ಭಾಗದ ರೈತರು ಕಾರಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಹಾವೇರಿಯ ಕರ್ಜಗಿ ಗ್ರಾಮದಲ್ಲೂ ಸಹ ಈ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಹಬ್ಬದ ಆಚರಣೆ ಹೇಗಿರುತ್ತದೆ? : ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸಕ್ಕೆ ಬ್ರಹ್ಮಲಿಂಗೇಶ್ವರ ಜಾತ್ರೆ ಎಂದೇ ಕರೆಯಲಾಗುತ್ತದೆ. ಮೊದಲ ದಿನ ಹೂನ್ನುಗ್ಗಿ ಆಚರಿಸಿದರೆ, ಕೊನೆಯ ಎರಡು ದಿನ ದೊಡ್ಡಕ್ಕಿ ಮತ್ತು ಸಣ್ಣಕ್ಕಿ ಬಂಡಿ ಓಡಿಸಲಾಗುತ್ತದೆ. …

Read More »

ಸಂವಿಧಾನ ಬದಲಿಸಲು ಬಂದವರನ್ನೇ ಬದಲಾಯಿಸಿದ್ದೇವೆ, 2024ರ ಲೋಕಸಭೆ ಚುನಾವಣೆಯಲ್ಲೂ ಇದು ಮರುಕಳಿಸಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ, ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆ ಇಟ್ಟುಕೊಂಡು ಡ್ರಾಮಾ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ರಾಜ್ಯದ ದಲಿತ ಸಂಘಟನೆಗಳು ಟೌನ್ ಹಾಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ಭೀಮ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್‌ ಎಚ್ಚರಿಸಿದರು. ಜಾತಿ ಸಮಾಜಕ್ಕೆ …

Read More »