Breaking News

ಲಾರಿ ತಡೆದು ಹಣ ವಸೂಲಿ ಆರೋಪ ; ಎಎಸ್‌ಐ ಸೇರಿದಂತೆ ಇಬ್ಬರು ಪೊಲೀಸರು ಸಸ್ಪೆಂಡ್.!

ತುಮಕೂರು : ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ಎಎಸ್‌ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ. ಕಳ್ಳಂಬೆಳ್ಳ ಠಾಣೆಯ ಎಎಸ್‌ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಇವರು ಹೆದ್ದಾರಿಯಲ್ಲಿ ಲಾರಿಗಳನ್ನು …

Read More »

ಊಟಿಯಲ್ಲಿ ಕಾರು ಪಲ್ಟಿ.. ನರಸಿಂಹರಾಜ ವಿಧಾನಸಭಾ ಕ್ಷೇತ್ರ ಬಿಜೆಪಿ ಮುಖಂಡ ಇನ್ನಿಲ್ಲ

ಮೈಸೂರು/ಊಟಿ: ತಮಿಳುನಾಡಿನ ಊಟಿಯಲ್ಲಿ ಗುರುವಾರ ಕಾರು ಅಪಘಾತಕ್ಕೀಡಾಗಿ ಮೈಸೂರಿನ ಬಿಜೆಪಿ ಮುಖಂಡರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಮೃತ ವ್ಯಕ್ತಿ ಮೈಸೂರು ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ಬುಧವಾರದಂದು ಸ್ವಾಮಿಗೌಡ ಅವರು ತಮ್ಮ ಸ್ನೇಹಿತ ಜಗದೀಶ ಗೌಡ ಅವರ ಕುಟುಂಬ ಜೊತೆ ತಮಿಳುನಾಡಿನ ಊಟಿ ಪ್ರವಾಸಕ್ಕೆ ತೆರಳಿದ್ದರು. ಕಾರಿನಲ್ಲಿ ಸ್ವಾಮಿಗೌಡ, ಜಗದೀಶ್​ ಗೌಡ, ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. …

Read More »

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಆರಂಭ.. ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ : ಕುಮಾರಸ್ವಾಮಿ ಆರೋಪ

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ. ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಇಂದು ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ …

Read More »

ಮುಂಗಾರು ಮಳೆ ವಿಳಂಬ; ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕಡಿಮೆಯಾಗಿದೆ. ಬಿಸಿಲ ತಾಪಕ್ಕೆ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ತುಂಗಭದ್ರಾ ಜಲಾಶಯವು ಬಹುತೇಕ ಖಾಲಿಯಾಗಿದೆ. ಇಲ್ಲಿನ ನೀರಿನ ಮಟ್ಟ ಡೆಡ್ ಸ್ಟೋರೇಜ್ ಹಂತ ತಲುಪಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಕೆಲವು ಜಿಲ್ಲೆಗಳಿಗೆ ಈ ಜಲಾಶಯದ ನೀರು ಅಗತ್ಯ. ರಾಜ್ಯದ ಹಲವು ಕಡೆ ಮಳೆಯಗುತ್ತಿದ್ದರೂ, ಈ ಭಾಗದಲ್ಲಿ ನಿರೀಕ್ಷಿತ …

Read More »

ರಾಮದುರ್ಗ ತಾಲೂಕಿನ ರಾಮಾಪುರ ತಾಂಡಾದ ಸಚೀನ್ ರಜಪೂತ (16) ಎಂಬ ಯುವಕ ಕಾಣಿ

ರಾಮದುರ್ಗ ತಾಲೂಕಿನ ರಾಮಾಪುರ ತಾಂಡಾದ ಸಚೀನ್ ರಜಪೂತ (16) ಎಂಬ ಯುವಕ ಕಾಣಿಯಾಗಿದ್ದಾನೆ. ಸಾಧಾರಣ ಮೈಕಟ್ಟು ಗೋದಿಬಣ್ಣ ಹೊಂದಿದ್ದು 5 ಪೂಟು ಎತ್ತರ ಇದ್ದು ಬಲಗೈ ಮೊಣಕೈ ಕೆಳಗೆ ಆಪರೇಷನ್ ಮಾಡಿದ ಗಾಯದ ಗುರುತಿದೆ, ಇತ ದಿನಾಂಕ 5/6/2023 ರಂದು ಬಟ್ಟೆ ತರುವುದಾಗಿ ಹೇಳಿ ಮನೆಯಿಂದ ಹೊರಟುಹೊಗಿದ್ದು ಇನ್ನು ಕೂಡ ಮರಳಿಬಂದಿಲ್ಲ.ಈತ ಎಲ್ಲಿಯಾದರು ಕಂಡು ಬಂದಲ್ಲಿ ಖಡೇಬಜಾರ ಪೋಲಿಸ್ ಠಾಣಿ ಸಂಪರ್ಕಿಸಲು ಕೋರಲಾಗಿದೆ

Read More »

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಸ್ಟೇಟಸ್ ಹಾಕುವ ಮೂಲಕ ಶಾಂತಿ ಕದಡುವವರನ್ನು ಬಿಡುವುದಿಲ್ಲ: S.P. ಸಂಜೀವ್ ಪಾಟೀಲ್

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಸ್ಟೇಟಸ್ ಹಾಕುವ ಮೂಲಕ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಸ್ಪಿ ಸಂಜೀವ್ ಪಾಟೀಲ್ ಎಚ್ಚರಿಸಿದ್ದಾರೆ. ಇಂದು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಮಿತಿ ಸಭೆ ನಡೆಸುವಂತೆ ಎಸ್ಪಿ ಸಂಜೀವ್ ಪಾಟೀಲ್ ಸೂಚನೆ ನೀಡಿದರು.ಈ ನಿಟ್ಟಿನಲ್ಲಿ ಅವರು ಎಲ್ಲ ಮುಖಂಡರಿಗೂ ಈ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು …

Read More »

ಕಾಂಗ್ರೆಸ್​ ಸೇರಿ ವಿಪಕ್ಷ ನಾಯಕನ ಸ್ಥಾನ ಕಳೆದುಕೊಂಡರಾ ಲಕ್ಷ್ಮಣ ಸವದಿ?

ಚಿಕ್ಕೋಡಿ: ರಾಜ್ಯ ರಾಜಕೀಯ ವಲಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಅಥಣಿ ಶಾಸಕ ಲಕ್ಷ್ಮಣ ಸವದಿಯವರು ಕಮಲ ಬಿಟ್ಟು ಕೈ ಹಿಡಿದು ಕಡೆಗಣನೆಯಾದರಾ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿದೆ. ಕಟ್ಟಾ ಬಿಜೆಪಿ ನಾಯಕರ ಸಾಲಿನಲ್ಲಿ ಗುರುತಿಸಿಕೊಳ್ಳುತ್ತಿದ್ದ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಿಜೆಪಿಯಲ್ಲಿನ ತಮ್ಮ ಅವಕಾಶಗಳಿಗೆ ತಾವೇ ಫುಲ್​ಸ್ಟಾಪ್ ಹಾಕಿಸಿಕೊಂಡ್ರಾ? ಎಂಬ ಮಾತುಗಳು ಕೇಳಿ ಬರುತ್ತಿವೆ. ಹೌದು, ಪ್ರಮುಖವಾಗಿ ಕಮಲ …

Read More »

ಬೆಂಗಳೂರಿನಲ್ಲಿ 1200 ಕ್ಕೂ ಹೆಚ್ಚು ರೌಡಿ ಶೀಟರ್ಸ್​ ಮನೆಗಳ ಮೇಲೆ ಪೊಲೀಸ್​​ ದಾಳಿ

ಬೆಂಗಳೂರು : ಹಲವು ಬಾರಿ ಎಚ್ಚರಿಕೆ ನೀಡಿದರೂ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ನಗರದ ರೌಡಿ ಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಕ್ರಿಯಶೀಲರಾಗಿ ನಗರದ ಎಂಟು ವಲಯಗಳಲ್ಲಿ ವಾಸವಾಗಿದ್ದ 1200ಕ್ಕೂ ಹೆಚ್ಚು ರೌಡಿ ಶೀಟರ್​ ಮನೆಗಳ ಮೇಲೆ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ದಾಳಿ ನಡೆಸಿ ಪರಿಶೀಲನೆ ನಡೆದಿದೆ. ಚುನಾವಣೆ ವೇಳೆ ರೌಡಿ ಶೀಟರ್​ಗಳನ್ನು ಕರೆಸಿ ವಾರ್ನಿಂಗ್ ಕೊಟ್ಟು ಜೈಲಿಗೆ …

Read More »

Miss World 2023: 27 ವರ್ಷಗಳ ನಂತರ ಸಿಕ್ತು ಚಾನ್ಸ್‌; ಭಾರತದಲ್ಲಿ ನಡೆಯಲಿದೆ ‘ವಿಶ್ವ ಸುಂದರಿ 2023’ ಸ್ಪರ್ಧೆ!

Miss World 2023: ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು ಈ ಬಾರಿ ಭಾರತ ಆಯೋಜಿಸಲಿದೆ. ಭಾರತವನ್ನು ಆಯ್ಕೆ ಮಾಡಲು ಕಾರಣವೇನು? ಈ ಹಿಂದೆ ದೇಶದಲ್ಲಿ ಈ ಪ್ರತಿಷ್ಟಿತ ಸ್ಪರ್ಧೆ ನಡೆದಿದ್ದು ಯಾವಾಗ? ಕಂಪ್ಲೀಟ್‌ ಡಿಟೇಲ್ಸ್‌. ಬಹುನಿರೀಕ್ಷಿತ ‘ವಿಶ್ವ ಸುಂದರಿ 2023’ರ ಸೌಂದರ್ಯ ಸ್ಪರ್ಧೆಯನ್ನು (Miss World 2023) ಈ ಬಾರಿ ಭಾರತ ಆಯೋಜಿಸಲಿದೆ. 27 ವರ್ಷಗಳ ಬಳಿಕ ಭಾರತವು 71 ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯ ಆತಿಥ್ಯ …

Read More »

ಹೆಡ್ಗೆವಾರ್ ತರಹದ ಹೇಡಿಗಳನ್ನು ನಮ್ಮ‌ ಮಕ್ಕಳ ಪಠ್ಯದಲ್ಲಿರಲು ಬಿಡಲ್ಲ-ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ”ಸಂಘ ಪರಿವಾರದ ಸಿದ್ಧಾಂತಗಳು ಯಾವುದೇ ಇಲಾಖೆಯಲ್ಲಿ ತೂರಲು ಬಿಡೋದಿಲ್ಲ. ಹೆಡ್ಗೆವಾರ್ ತರಹದ ರಣಹೇಡಿಗಳ ಪಠ್ಯ ಇರೋದಿಲ್ಲ” ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಶಿವಮೊಗ್ಗದಲ್ಲಿ ಇಂದು ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ”ಭಾರತೀಯ ಜನತಾ ಪಾರ್ಟಿಯ ಅನೈತಿಕ ಸರ್ಕಾರ ಮಾಡಿದ ಮೇಲೆ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ನಾಲ್ಕು ವರ್ಷ ಇವರ ಆಡಳಿತ ನೋಡಿದ್ದೇನೆ. ಕೃಷಿ, ಕಾರ್ಮಿಕ, ಶಿಕ್ಷಣ ಇಲಾಖೆಯಲ್ಲಿ ಸಂಪೂರ್ಣ ಕೇಸರೀಕರಣ ಮಾಡಲು ಬಿಜೆಪಿ ಹೊರಟಿತ್ತು. ಭಾರತ ಸಾವಿರಾರು …

Read More »