Breaking News

ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬ ಆರೋಪ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ, ವೈದ್ಯರು ಮೊಬೈಲ್ ಟಾರ್ಚ್ ಹಾಗೂ ಚಾರ್ಜರ್ ಬ್ಯಾಟರಿ ಹಿಡಿದು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಶವಗಾರದಲ್ಲಿ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಕಂಡು ಇಲ್ಲಿನ ಅವ್ಯವಸ್ಥೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಗದಗ ಮತ ಕ್ಷೇತ್ರದಲ್ಲಿ ವಿಧಾನಸಭೆ ಅಧಿವೇಶನದ ಮಾದರಿಯಲ್ಲೇ ಜನರಿಂದ ‘ಜನತಾ ಸದನ’

ಗದಗ: ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದಂತೆಯೇ ಗದಗ ಮತ ಕ್ಷೇತ್ರದಲ್ಲಿ ಜನತಾ ಸದನ ನಡೆಸಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಅನಿಲ್​ ಮೆಣಸಿನಕಾಯಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜನತಾ ಸದನವು ಪ್ರತಿ ತಿಂಗಳು ನಾಲ್ಕನೇ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಒಂದು ದಿನ ಹಳ್ಳಿ ಮತ್ತೊಂದು ದಿನ ನಗರ ಪ್ರದೇಶದಲ್ಲಿ ಜರುಗಲಿದೆ. ಜನತಾ ಸದನ ಉದ್ಘಾಟನಾ ಕಾರ್ಯಕ್ರಮ ಜೂನ್ 10 ರಂದು ನಡೆಯಲಿದ್ದು, …

Read More »

ಸಚಿವ ಎಂ ಬಿ ಪಾಟೀಲ್​ – ಶಾಸಕ ಯತ್ನಾಳ್​ ಮಧ್ಯೆ ಟ್ವೀಟ್ ವಾರ್

ವಿಜಯಪುರ: ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಸಚಿವ ಎಂ. ಬಿ ಪಾಟೀಲ​ ನೀಡಿದ ಎಚ್ಚರಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ನಗರ ಶಾಸಕ ಬಸನಗೌಡ ಪಾಟೀಲ​ ಯತ್ನಾಳ್​, ಇದು ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎಂದು ತಿರುಗೇಟು ನೀಡಿದ್ದಾರೆ.   ನೂತನ ಸಚಿವರಾಗಿ ಮೊನ್ನೆ ಎಂ. ಬಿ. ಪಾಟೀಲ ಅವರು ವಿಜಯಪುರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗೋಷ್ಟಿಯಲ್ಲಿ ಚಿಂತಕ, ಯುವ ಬ್ರಿಗೇಡ್ ಸಂಸ್ಥಾಪಕ​ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಮಾತನಾಡಿ, ಅವರು ಇದೇ …

Read More »

ಐಫೋನ್ ಹಾಗೂ ದುಬಾರಿ ಬೆಲೆಯ ಫೋನ್​ಗಳನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿವೇಕನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬೆಂಗಳೂರು : ಐಫೋನ್ ಹಾಗೂ ದುಬಾರಿ ಬೆಲೆಯ ಫೋನ್​ಗಳನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿವೇಕನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳು ಗೋರಿಪಾಳ್ಯದ ನಿವಾಸಿಗಳಾಗಿದ್ದು, ಶಾಕೀಬ್, ಸುಹೈಲ್ ಹಾಗೂ ಮೊಹಮ್ಮದ್ ಸಕ್ಲೇನ್ ಎಂದು ಗುರುತಿಸಲಾಗಿದೆ. ಐಷಾರಾಮಿ ಜೀವನಕ್ಕಾಗಿ ಕಳ್ಳತನದ ಅಡ್ಡದಾರಿ ಹಿಡಿದಿದ್ದ ಮೂವರು ಆರೋಪಿಗಳು ನಗರದಲ್ಲಿ ರಾತ್ರಿ ವೇಳೆ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿಕೊಳ್ಳತ್ತಿದ್ದರು. ನಂತರ ಬೈಕಿನಲ್ಲಿ‌ ತೆರಳಿ ಐಫೋನ್​ಗಳನ್ನು‌ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಕದ್ದ ಬಳಿಕ ಹೈದರಾಬಾದ್​ಗೆ ಐಫೋನ್ …

Read More »

ಮಧ್ಯಾಹ್ನ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡ 35 ಸೈನಿಕರು: ಆಸ್ಪತ್ರೆಗೆ ದಾಖಲು

ಹಾಸನ : ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಅಸ್ವಸ್ಥಗೊಂಡ 35 ಮಂದಿ ಯೋಧರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಡುಗರ ಕ್ಯಾಂಪ್​​ನಲ್ಲಿರುವ ವಾಹನ ಚಾಲನಾ ತರಬೇತಿಯ ಸೈನಿಕರು ಇಂದು ಮಧ್ಯಾಹ್ನ ಎಂದಿನಂತೆ ಊಟ ಸೇವಿಸಿದ್ದರು. ಕೆಲ ಹೊತ್ತಿನ ಬಳಿಕ ಸುಮಾರು 35 ಮಂದಿ ಯೋಧರ ಆರೋಗ್ಯದಲ್ಲಿ ದಿಢೀರ್​ ಏರುಪೇರಾಗಿದೆ. ತಕ್ಷಣ ಇವರನ್ನು ಸಕಲೇಶಪುರದ …

Read More »

ಪ್ರಾಚಾರ್ಯರಿಂದಲೇ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ದೂರು ದಾಖಲು

ಬಳ್ಳಾರಿ: ಬಳ್ಳಾರಿಯ ಪ್ರತಿಷ್ಠಿತ ಅಲ್ಲಂ ಸುಮಂಗಲಮ್ಮ ಮಹಿಳಾ ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲ ಶರಣಪ್ಪ ತನಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಅತಿಥಿ ಉಪನ್ಯಾಸಕಿ ಆರೋಪ ಮಾಡಿದ್ದಾರೆ. ಉಪನ್ಯಾಸಕಿಗೆ ಅಶ್ಲೀಲ, ಲೈಂಗಿಕ ಕ್ರಿಯೆಗೆ ಒತ್ತಾಯ, ಪ್ರಾಣ ಬೆದರಿಕೆ ಹಾಕಿದ ಆರೋಪದಡಿ ಪ್ರಾಂಶುಪಾಲರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಎಎಸ್‌ಎಂ ಕಾಲೇಜಿನ ಪ್ರಾಚಾರ್ಯ ಶರಣಪ್ಪ (59) …

Read More »

ಕಳ್ಳತನ ಮಾಡೋದನ್ನ ನೋಡಿದ ಬಾಲಕಿ ; ಕೊಲೆ ಮಾಡಿದ ದುಷ್ಕರ್ಮಿ .!

ಕಳ್ಳತನ ಮಾಡುತ್ತಿರುವುದನ್ನು ನೋಡಿದ 9 ವರ್ಷದ ಪುಟ್ಟ ಬಾಲಕಿಯನ್ನು ದುಷ್ಕರ್ಮಿಯೋರ್ವ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ಘಟನೆ ನಡೆದಿದೆ. ಬಾಲಕಿ ನಾಪತ್ತೆಯಾದ ಬಳಿಕ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಮನೆಯೊಳಗಿನ ಸ್ಟೋರ್‌ ರೂಮ್‌ನಲ್ಲಿ ಬಟ್ಟೆಯಿಂದ ಸುತ್ತಿಟ್ಟ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣ ಬೆನ್ನಟ್ಟಿದ ಪೊಲೀಸರು 19 ವರ್ಷದ ತರುಣನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಇನ್ನು ಆಕೆಯ ಮನೆಯಲ್ಲಿ ಹಣ ಕದಿಯುವುದನ್ನು …

Read More »

‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿ, ಸರ್ಕಾರ ಮಾರ್ಗಸೂಚಿ ಹೊರಡಿಸಿ ಆದೇಶಿಸಿದೆ.   ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದೆ. ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 …

Read More »

ಬೈಕ್​​ಗೆ ಲಾರಿ ಡಿಕ್ಕಿ.. ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಸಾವು

  ರಾಯಚೂರು: ಬೈಕ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು-ಲಿಂಗಸೂಗೂರು ರಾಜ್ಯ ಹೆದ್ದಾರಿಯಲ್ಲಿ ಬರುವ ಸಾಥ್ ಮೈಲ್ ಬಳಿ ನಡೆದಿದೆ. ಮೃತರನ್ನು ಹುಣಶ್ಯಾಳ ಹುಡಾ ಗ್ರಾಮದ ನಿವಾಸಿಗಳಾದ ಹನುಮೇಶ್ (30) ಹಾಗೂ ಆಂಜನೇಯ (35) ಎಂದು ಗುರುತಿಸಲಾಗಿದೆ. ಇವರು ರಾಯಚೂರು ಕಡೆಯಿಂದ ಹುಣಿಶ್ಯಾಳ ಹುಡಾಕ್ಕೆ ಹೊರಟಿದ್ದರು. ಆದರೆ, ಮಾರ್ಗ ಮಧ್ಯೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಸವಾರರು …

Read More »

ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಚಿತ್ರಕಲಾ ಪ್ರದರ್ಶನ.. ಕಣ್ಮನ ಸೆಳೆದ ಕುಲಕರ್ಣಿ ಕಲಾ ಚಿತ್ರಗಳು

ಹಾವೇರಿ: ಇಲ್ಲಿನ ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಏಕವ್ಯಕ್ತಿ ಚಿತ್ರ ಕಲಾ ಪ್ರದರ್ಶನ ಏರ್ಪಡಿಸಲಾಗಿದೆ. ಹಿರಿಯ ಚಿತ್ರಕಲಾವಿದ ಕೆ.ಬಿ.ಕುಲಕರ್ಣಿ ಅವರ ಕಲಾ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ. ಸುಮಾರು 65ಕ್ಕೂ ಅಧಿಕ ಚಿತ್ರಗಳನ್ನ ಪ್ರದರ್ಶನಕ್ಕೆ ಇಡಲಾಗಿದೆ. ಅಧ್ಯಾತ್ಮಿಕ, ಪ್ರಾಕೃತಿಕ ಹಾಗೂ ಭಾವಚಿತ್ರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸುಮಾರು 65 ಚಿತ್ರಗಳನ್ನ ಪ್ರದರ್ಶಿಸಲಾಗುತ್ತದೆ. ಜೂ.4ರಂದು ಚಿತ್ರ ಪ್ರದರ್ಶನ ಆರಂಭವಾಗಿದ್ದು, ಜೂ.10ರವರೆಗೆ ನಡೆಯಲಿದೆ. ಕಲಾವಿದ ಕುಲಕರ್ಣಿ ಬಗ್ಗೆ ಒಂದಿಷ್ಟು..ಕೆ.ಬಿ.ಕುಲಕರ್ಣಿ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ವಾಡಿ ಗ್ರಾಮದವರು. …

Read More »