ಬಿಹಾರದ ಸಮಸ್ತಿಪುರ ಜಿಲ್ಲೆಯಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಕುಡಿದ ಅಮಲಿನಲ್ಲಿ ತಂದೆಯೊಬ್ಬ ತನ್ನ ಅಮಾಯಕ ಮಗನನ್ನೇ ಕತ್ತು ಸೀಳಿ ಕೊಂದಿದ್ದಾನೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮೊಹಿಯುದ್ದೀನ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾದಯ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗನನ್ನು ಕೊಂದ ತಂದೆ : ಘಟನೆಗೆ ಸಂಬಂಧಿಸಿದಂತೆ ಭದಯ್ಯ ಗ್ರಾಮದಲ್ಲಿ ತಂದೆ ತನ್ನ ಮೂರು ವರ್ಷದ ಅಮಾಯಕ ಮಗನ ಕುತ್ತಿಗೆಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಮಗು ಗಂಭೀರವಾಗಿ …
Read More »ಬಿಎಸ್ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಇಂದು ಏರಿಕೆಯಲ್ಲಿ ಕೊನೆಗೊಂಡಿವೆ.
ಮುಂಬೈ : ಮೂರು ದಿನಗಳಿಂದ ನಡೆದಿದ್ದ ದೇಶೀಯ ಷೇರುಪೇಟೆಯಲ್ಲಿನ ಕುಸಿತದ ಪ್ರಕ್ರಿಯೆ ಬುಧವಾರ ಅಂತ್ಯಗೊಂಡಿದೆ. ಸೆನ್ಸೆಕ್ಸ್, ನಿಫ್ಟಿ ಇಂದು ಏರಿಕೆಯೊಂದಿಗೆ ಮುಕ್ತಾಯಗೊಂಡವು. ಬಿಎಸ್‌ಇಯ 30-ಷೇರುಗಳ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 351.49 ಪಾಯಿಂಟ್‌ಗಳು ಅಥವಾ ಶೇಕಡಾ 0.53 ರಷ್ಟು ಏರಿಕೆಯೊಂದಿಗೆ 66,707.20 ಪಾಯಿಂಟ್‌ಗಳಿಗೆ ಕೊನೆಗೊಂಡಿತು. ಎನ್‌ಎಸ್‌ಇ ನಿಫ್ಟಿ 97.70 ಪಾಯಿಂಟ್‌ಗಳು ಅಥವಾ ಶೇಕಡಾ 0.5 ರಷ್ಟು ಏರಿಕೆಯೊಂದಿಗೆ 19,778.30 ಪಾಯಿಂಟ್‌ಗಳ ಮಟ್ಟದಲ್ಲಿ ಕೊನೆಗೊಂಡಿತು. ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾ ಶೇರುಗಳು ಗರಿಷ್ಠ ಶೇ …
Read More »ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜ ಎಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ. ಆರ್. ಪಾಟೀಲರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ನವರಿಗೆ ಕೇವಲ …
Read More »ಕೊಳಚೆ ನೀರಿನೊಂದಿಗೆ ಮನೆಗೆ ಬಂದ ಹಾವು
ಹೈದರಾಬಾದ್: ಕಳೆದೊಂದು ವಾರದಿಂದ ಹೈದರಾಬಾದ್ ನಗರದಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ರಸ್ತೆಗಳು, ಕಾಲೋನಿಗಳು ಮುಳುಗಡೆಯಾಗುತ್ತಿವೆ. ಕೆಲವೆಡೆ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ. ಕೊಳಚೆ ನೀರಿನ ಜತೆಗೆ ಕ್ರಿಮಿ, ಹಾವುಗಳೂ ಮನೆಗಳಿಗೆ ಬರುತ್ತಿವೆ. ಇತ್ತೀಚೆಗಷ್ಟೇ ಸಿಕಂದರಾಬಾದ್‌ನ ಅಲ್ವಾಲ್ ಪ್ರದೇಶದಲ್ಲಿ ಸಂಪತ್ ಎಂಬ ವ್ಯಕ್ತಿಯ ಮನೆಗೆ ಕೊಳಚೆ ನೀರಿನೊಂದಿಗೆ ಹಾವು ಬಂದಿದ್ದರಿಂದ ಕುಟುಂಬದ ಸದಸ್ಯರು ಭಯಭೀತರಾಗಿದ್ದರು. ಅಧಿಕಾರಿಯೊಬ್ಬರ ಮೇಜಿನ ಮೇಲೆ ಹಾವನ್ನು ಬಿಟ್ಟ ನಿವಾಸಿ: ಹಾವು ಮನೆಗೆ ಬಂದದ್ದನ್ನು …
Read More »ರಸ್ತೆ ಬದಿಯಲ್ಲಿ ಸಿಕ್ಕ 2 ಸಾವಿರ ಮುಖ ಬೆಲೆಯ ಗರಿ ಗರಿ ನೋಟುಗಳು?
ಬೆಂಗಳೂರು: ನಗರದ ಹೊರವಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ 2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್ಗಳಲ್ಲಿ ಎರಡು ಸಾವಿರ ಮುಖಬೆಲೆಯ ನಕಲಿ ನೋಟುಗಳು ಸಿಕ್ಕಿವೆ. ಕನಕಪುರ ರಸ್ತೆಯೊಂದರ ಪಕ್ಕದಲ್ಲಿ ಖಾಲಿ ಜಾಗದಲ್ಲಿ ಪ್ಯಾಕಿಂಗ್ ಮಾಡಿದ ಸ್ಥಿತಿಯಲ್ಲಿ ಎರಡು ಬಾಕ್ಸ್ ಗಳನ್ನ ಕಂಡ ಸ್ಥಳೀಯರು ಅನುಮಾನಗೊಂಡ ಸಮೀಪದಲ್ಲೇ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೂಡಲೇ ತಲಘಟ್ಟಪುರ ಕಾನೂನು ಸುವ್ಯವಸ್ಥೆ ವಿಭಾಗದ …
Read More »ಗೋಡೆ ಕುಸಿದು ಬಿದ್ದು ಹೆಣ್ಣು ಮಗು ಸಾವು 5 ಲಕ್ಷ ಪರಿಹಾರ ನೀಡಿದ D.C.
ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮೃತಪಟ್ಟ ಮಗುವಿನ ಮನೆಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿದ್ದಾರೆ. ಅಲ್ಲದೇ ಈ ಮೂಲಕ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡಿದ್ದಾರೆ. ಅವಘಡ ಸಂಭವಿಸಿದ ಮನೆಗೆ ಆಗಮಿಸಿದ ಡಿಸಿ ಶಿವಾನಂದ ಕಾಪಶಿಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿರುವ ಬೆನ್ನಲ್ಲೇ ಇಂದು ಬೆಳಗಿನ ಜಾವ ಈ ಘಟನೆ ನಡೆದಿತ್ತು. ಘಟನೆಯಲ್ಲಿ ಸ್ಪೂರ್ತಿ (01) ಸಾವನಪ್ಪಿ ತಂದೆ ಕೆಂಚಪ್ಪ (32) ಗಾಯಗೊಂಡಿದ್ದರು. …
Read More »ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ನಾಳೆ ( ಜು. 26 ) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ. …
Read More »ಭೋರ್ಗರೆಯುತ್ತಿರುವ ನೇತ್ರಾವತಿ: 1974ರ ಬಳಿಕ ಮತ್ತೆ ಮುಳುಗುವ ಭೀತಿಯಲ್ಲಿ ಬಂಟ್ವಾಳ?
ಬಂಟ್ವಾಳ (ದಕ್ಷಿಣ ಕನ್ನಡ): 1923, ಆಗಸ್ಟ್ 7 ಮತ್ತು 8.. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಮಹಾ ಪ್ರವಾಹವೊಂದು ಬಂದಿತ್ತು. ನೋಡಿದವರು ಯಾರಿದ್ದಾರೆ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಆದರೆ, ಹಿರಿಯರಿಂದ ಕಿರಿಯರಿಗೆ ಮಾಹಿತಿ ವರ್ಗಾವಣೆ ಆಗುವುದೇನು ದೊಡ್ಡ ವಿಚಾರವಲ್ಲ. 1923ರ ಪ್ರವಾಹದಲ್ಲಿ ಬದುಕಿದ ಮಕ್ಕಳು ಈಗ ವೃದ್ಧಾಪ್ಯದಲ್ಲಿದ್ದಾರೆ. ತಮ್ಮ ಹಿರಿಯರು ಹೇಳಿದ್ದು ಅವರಿಗೆ ನೆನಪಿದೆ. ಅಲ್ಲದೇ 1974ರ ಆಗಸ್ಟ್ ತಿಂಗಳಿನಲ್ಲೂ ದೊಡ್ಡದೊಂದು ಪ್ರವಾಹ ಬಂದಿತ್ತು. ಸದ್ಯ ಈ ಎಲ್ಲ …
Read More »ಮಳೆ ತಗ್ಗಿದರೂ ಮುಂದುವರಿದ ಪ್ರವಾಹ: ಹೆದ್ದಾರಿಗಳಲ್ಲಿ ಗುಡ್ಡ ಕುಸಿತ,
ಕಾರವಾರ (ಉತ್ತರ ಕನ್ನಡ): ಉತ್ತರ ಕನ್ನಡದಲ್ಲಿ ಅಬ್ಬರಿಸುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದ್ದು, ನದಿ ತೀರದ ಪ್ರದೇಶದಲ್ಲಿ ಸೃಷ್ಟಿಯಾಗಿದ್ದ ಪ್ರವಾಹ ಕೊಂಚ ಇಳಿಕೆಯಾಗಿದೆ. ಆದರೆ, ಪ್ರವಾಹ ಹಾಗೂ ಗಾಳಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಗುಡ್ಡ ಕುಸಿತದಿಂದಾಗಿ ಹಲವು ಹೆದ್ದಾರಿಗಳು ಬಂದ್ ಆಗಿವೆ. ಜನ ಸಂಚಾರಕ್ಕೆ ಪರದಾಡಬೇಕಾದ ಸ್ಥಿತಿ ಮುಂದುವರಿದಿದೆ. ಉತ್ತರ ಕನ್ನಡದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಆರ್ಭಟಿಸುತ್ತಿದ್ದ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಪರಿಣಾಮ ಗಂಗಾವಳಿ, ಅಘನಾಶಿನಿ, ವರದಾ ಹಾಗೂ …
Read More »B.S.F. ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ
ಪಲಾಮು (ಜಾರ್ಖಂಡ್): ಬಿಎಸ್‌ಎಫ್ ಯೋಧನೊಬ್ಬ ಪಿಡಿಎಸ್ ಡೀಲರ್, ಆತನ ಪತ್ನಿ ಹಾಗೂ ಇಬ್ಬರು ಗ್ರಾಮಸ್ಥರು ಸೇರಿದಂತೆ ಒಟ್ಟು ನಾಲ್ವರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಪಿಡಿಎಸ್ ಡೀಲರ್ (ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಯವ) ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮೇದಿನಿ ರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ವಿವಾದದ ಹಿನ್ನೆಲೆ ಕತ್ತಿಯಿಂದ ಹಲ್ಲೆ: ಇಡೀ ಘಟನೆಯು ಪಲಮುವಿನ ಪಾಡ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲ್ಹಾನಾದಲ್ಲಿ ನಡೆದಿದೆ. …
Read More »
Laxmi News 24×7