Breaking News

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಳಗಾವಿ : ಇಡೀ ಜಗತ್ತು ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹಂಕಾರದಿಂದ ಹಗುರವಾಗಿ ಮಾತನಾಡಬಾರದು. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಸಿಎಂ‌ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ‌ ಆಡಳಿತ ವಿರುದ್ಧ ಶನಿವಾರ ಬೆಳಗಾವಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬೇರೆ ದೇಶಕ್ಕೆ ಹೋದಾಗ …

Read More »

ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಳ 16 ಸೇತುವೆಗಳು ಜಲಾವೃತ

ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಕಾರದಗಾ ಗ್ರಾಮದ ಆರಾಧ್ಯ ದೈವ ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದ್ದು, ಸದ್ಯ ಬಾಬಾನ ದರ್ಶನಕ್ಕೆ ದೂದಗಂಗಾ ನದಿ ನೀರು ತಡೆಯನ್ನು ಒಡ್ಡಿದೆ. ದೂಧಗಂಗಾ ನದಿಯ ಒಳಹರಿವು ಹೆಚ್ಚಳಗೊಂಡ ಹಿನ್ನೆಲೆ ದರ್ಗಾದ ಮುಂದೆ ಎರಡು ಅಡಿಯಷ್ಟು …

Read More »

ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಮನೆ ಕುಸಿದು ಬಿದ್ದು 13 ಮಂದಿ ಗಾಯ

ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು ಕೇಳಿ …

Read More »

ಬೆಂಗಳೂರು ನಗರದಲ್ಲಿ ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಇವರಿಂದ ವಶಕ್ಕೆ ಪಡೆದಿರುವ ಗ್ರೆನೇಡ್​ ಕುರಿತು ತನಿಖೆ ನಡೆಸಲಿದ್ದಾರೆ.

ಬೆಂಗಳೂರು : ರಾಜಧಾನಿಯಲ್ಲಿ‌ ಶಂಕಿತ ಉಗ್ರರ ಬಂಧನದ ಬಳಿಕ ಅವರಿಂದ ವಶಕ್ಕೆ ಪಡೆಯಲಾದ ಗ್ರೆನೇಡ್ ಹಿಂದಿನ ರಹಸ್ಯ ತಿಳಿಯಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ. ಆರೋಪಿಗಳಿಗೆ ಗ್ರೆನೇಡ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಿದ್ದಾರೆ. ಸಿಸಿಬಿ ಪೊಲೀಸರು ಸದ್ಯ ನಾಲ್ಕು ಗ್ರೆನೇಡ್​​ಗಳನ್ನು ಶಂಕಿತರಿಂದ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದ ಬಳಿಕ ವಿಧಿ ವಿಜ್ಞಾನ ಪ್ರಯೋಗಾಲಯ (FSL) ಹಾಗೂ ರಾಷ್ಟ್ರೀಯ ಬಾಂಬ್ ಡಾಟಾ ಸೆಂಟರ್ (NBDC)ಗಳು ಈ ಪರಿಶೀಲನೆ ಆರಂಭಿಸಲಿವೆ. ಮೊದಲಿಗೆ …

Read More »

ಟೊಮೆಟೋ ತುಂಬಿದ್ದ ಗೂಡ್ಸ್ ವಾಹನ‌ ಕದ್ದೊಯ್ದಿದ್ದ ದಂಪತಿ ಬಂಧನ

ಬೆಂಗಳೂರು : ಮಾರುಕಟ್ಟೆಯಲ್ಲಿ ದರ ಗಗನಕ್ಕೇರಿರುವ ಸಂದರ್ಭದಲ್ಲಿ ಟೊಮೆಟೋ ತುಂಬಿದ್ದ ಗೂಡ್ಸ್ ವಾಹನವನ್ನೇ ಕಳ್ಳತನ ಮಾಡಿದ್ದ ದಂಪತಿಯನ್ನು ಆರ್​ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಾಸ್ಕರ್ ಹಾಗೂ ಆತನ ಪತ್ನಿ ಸಿಂಧುಜಾ ಎಂದು ಗುರುತಿಸಲಾಗಿದೆ. ರಾಕಿ, ಕುಮಾರ್, ಮಹೇಶ್ ಎಂಬ ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಘಟನೆ ಹಿನ್ನೆಲೆ : ಜುಲೈ 8ರಂದು ಹಿರಿಯೂರಿನ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದಿದ್ದ 250ಕ್ಕೂ ಹೆಚ್ಚು ಕೆಜಿಯಷ್ಟು ಟೊಮೆಟೋವನ್ನು ಕೋಲಾರಕ್ಕೆ ಕೊಂಡೊಯ್ಯುತ್ತಿದ್ದರು. …

Read More »

ನಾಗರಹೊಳೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಜಿಂಕೆ ಬೇಟೆ: ಮಾಂಸ ಜೋಳದ ಹೊಲದಲ್ಲಿ ಪತ್ತೆ.. ಇಬ್ಬರ ಬಂಧನ

ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.   ಘಟನೆ ವಿವರ: ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಆಗಸ್ಟ್ 1ರಿಂದ ಪ್ರತಿ ಲೀಟರ್ ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು. ಪ್ರತಿ ಲೀಟರ್ ಹಾಲಿಗೆ ಕನಿಷ್ಠ ಮೂರು ರೂ. ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಆಗಸ್ಟ್ ಒಂದರಿಂದ ಜಾರಿಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಜೊತೆ ಸಿಎಂ ಸಭೆಕಳೆದ ತಿಂಗಳು ಕೆಎಂಎಫ್ ಅಧ್ಯಕ್ಷರಾಗಿ ಶಾಸಕ ಭೀಮಾ ನಾಯಕ್ ಆಯ್ಕೆಯಾಗಿದ್ದು, ಅಂದೇ …

Read More »

ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿ – ಗದಗ ನಡುವೆ ವೋಲ್ವೊ ಬಸ್

ಹುಬ್ಬಳ್ಳಿ: ಹುಬ್ಬಳ್ಳಿ ಹಾಗೂ ಗದಗ ನಡುವೆ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ಸೌಲಭ್ಯ ಕಲ್ಪಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ. ಹುಬ್ಬಳ್ಳಿ ಮತ್ತು ಗದಗ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಕಲ್ಪಿಸುವ ನಿಟ್ಟಿನಲ್ಲಿ ವೋಲ್ವೊ ಎಸಿ ಬಸ್​ಗಳನ್ನು ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ಹಾಗೂ ಗದಗ ಭಾಗದ ಸಾರ್ವಜನಿಕರ ಬೇಡಿಕೆಯ ಮೇರೆಗೆ ಹುಬ್ಬಳ್ಳಿ- ಗದಗ ನಡುವೆ ತಡೆ …

Read More »

ದೇಶದ ಚುನಾವಣೆಯ ಮಹತ್ವ, ನಾಯಕತ್ವ ಗುಣವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಬಾಗಲಕೋಟೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಚುನಾವಣೆ ನಡೆಸಲಾಯಿತು.

ಬಾಗಲಕೋಟೆ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯ, ಮತದಾನದ ಮಹತ್ವ ಹಾಗು ನಾಯಕತ್ವದ ಗುಣಗಳನ್ನು ಅಭಿವೃದ್ಧಿಪಡಿಸಲು ವಿದ್ಯಾರ್ಥಿಗಳಿಂದಲೇ ಮತದಾನ ಮಾಡಿಸುವ ಮೂಲಕ ಬಾದಾಮಿ ತಾಲೂಕಿನ ಗೋವನಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವತ್ರಿಕ ಚುನಾವಣೆಯಂತೆ ಮಕ್ಕಳ ಸಂಸತ್ ಚುನಾವಣೆ ನಡೆಸಲಾಯಿತು. ಮಂತ್ರಿಮಂಡಲ ರಚನೆಗೆ ಪ್ರೌಢ ಶಾಲೆಯಲ್ಲಿ ನಡೆದ ಚುನಾವಣೆಯಲ್ಲಿ 18 ವಿದ್ಯಾರ್ಥಿಗಳು ಅಂತಿಮ ಸ್ಪರ್ಧಾಳುಗಳಾಗಿ ಕಣದಲ್ಲುಳಿದು ಪ್ರಚಾರ ನಡೆಸಿದರು. 8, 9 ಹಾಗು 10ನೇ ತರಗತಿಯ 235 ವಿದ್ಯಾರ್ಥಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಹೀಗಿತ್ತು ಚುನಾವಣೆ: ತಮ್ಮ ಗುರುತಿನ …

Read More »