2026 ರ ಮಹಿಳಾ ಪ್ರೀಮಿಯರ್ ಲೀಗ್‌ನ15 ನೇ ಪಂದ್ಯವು ವಡೋದರಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ, ಡೆಲ್ಲಿ ತಂಡವನ್ನು ಏಕಪಕ್ಷೀಯವಾಗಿ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಡೆಲ್ಲಿ ತಂಡ ಯಶಸ್ವಿಯಾಯಿತು. ಆರ್ಸಿಬಿ ನೀಡಿದ 109 …
Read More »ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಜಾಮೀನು ಅರ್ಜಿಯನ್ನು ಚಿಕ್ಕಬಳ್ಳಾಪುರ ಅಪರ ಎರಡನೇ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಜ.14 ರಂದು ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಹತ್ತು ದಿನಗಳಿಂದಲೂ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದರು. ಈ ಬೆನ್ನಲ್ಲೇ ಕೆಪಿಸಿಸಿ ವತಿಯಿಂದ ರಾಜೀವ್ ಗೌಡ ಅಮಾನತು ಸಹ ಮಾಡಲಾಗಿತ್ತು. ಪೊಲೀಸರಿಗೆ ಸವಾಲಾದ ರಾಜೀವ್ ಗೌಡ …
Read More »ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI
ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ ನೇತೃತ್ವದ ವಿಶೇಷ ತನಿಖಾ ತಂಡ ತನ್ನ ಅಂತಿಮ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಪವಿತ್ರ ಪ್ರಸಾದವನ್ನು ಕಳಂಕಗೊಳಿಸುವ ಭ್ರಷ್ಟಾಚಾರದ ಜಾಲವನ್ನು ಬಹಿರಂಗಪಡಿಸಿದೆ. ನೆಲ್ಲೂರು ಎಸಿಬಿ ನ್ಯಾಯಾಲಯಕ್ಕೆ ಸಲ್ಲಿಸಲಾದ ಈ ಚಾರ್ಜ್‌ಶೀಟ್‌ನಲ್ಲಿ ಒಟ್ಟು 36 ಮಂದಿ ಪ್ರಮುಖ ಆರೋಪಿಗಳನ್ನು ಹೆಸರು ನಮೂದಿಸಲಾಗಿದೆ. ಇವರಲ್ಲಿ ಡೈರಿ ಮಾಲೀಕರು, ಮಾಜಿ ಟಿಟಿಡಿ ಅಧಿಕಾರಿಗಳು ಸೇರಿದ್ದಾರೆ. 15 ತಿಂಗಳುಗಳ ಕಾಲ 12 …
Read More »18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ
ನವದೆಹಲಿ: 18ನೇ ರೋಜಗಾರ್ ಮೇಳ ಹಿನ್ನೆಲೆ ಇಂದು ದೇಶಾದ್ಯಂತದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿತರಿಸಿದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿತ್ತು. ದೇಶದ 45 ವಿವಿಧ ಸ್ಥಳಗಳಲ್ಲಿ ಯುವಕರು ಭಾಗವಹಿಸಿದ್ದರು. ಈ ರೋಜಗಾರ್ ಮೇಳದ ಮೂಲಕ ಆರಂಭದಿಂದ ಇಲ್ಲಿಯವರೆಗೆ ಒಟ್ಟು 11 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ …
Read More »ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ
ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಖಾಸಗಿ ಗಾರ್ಡ್ ನಲ್ಲಿ ಆಯೋಜಿಸಲಾದ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗುತ್ತಿಗೆದಾರರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವುದು ಸರ್ಕಾರದ …
Read More »ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ನಿರಂತರ ಹಿಮಪಾತವಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಹಿಮಪಾತ ಹೆಚ್ಚಾಗಿದ್ದು, ಶ್ರೀನಗರದ ವಿಮಾನ ನಿಲ್ದಾಣದಲ್ಲಿ ಹಿಮ ತೆರವು ಕಾರ್ಯ ನಡೆಯುತ್ತಿದೆ. ಏಪ್ರನ್ ಮತ್ತು ಟ್ಯಾಕ್ಸಿ ವೇ ಗಳಲ್ಲಿನ ಹಿಮ ತೆರವು ಮಾಡಿ ವಿಮಾನಗಳ ಹಾರಾಟಕ್ಕೆ ಪರೀಕ್ಷೆಗಳು ನಡೆಯುತ್ತಿವೆ. ಶೀಘ್ರದಲ್ಲೇ ವಾಣಿಜ್ಯ ಬಳಕೆಗೆ ವಿಮಾನ ನಿಲ್ದಾಣ ಮುಕ್ತವಾಗುವ ನಿರೀಕ್ಷೆಯಿದೆ. ಇನ್ನು ಹಿಮಾಚಲ ಪ್ರದೇಶದಲ್ಲೂ ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು, 600 ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಮನಾಲಿಯಲ್ಲಿ, …
Read More »77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭ ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. 77ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಬಿಎ ಕಮಿಷನರ್ ಮಹೇಶ್ವರ್ ರಾವ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೇಡ್‌ನಲ್ಲಿ 516 ಜನ ಭಾಗಿಯಾಗಲಿದ್ದಾರೆ. ಭದ್ರತೆ ಸೇರಿ 2 ಸಾವಿರ ಪೊಲೀಸರು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಕೊಳವಿ ಗ್ರಾಮದ ಶ್ರೀ ಗೂಳಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕರೆಪ್ಪಾ ಬಡಿಗವಾಡ. ಬಾಳಯ್ಯ …
Read More »48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ
ವಿಜಯಪುರ: ಇಲ್ಲಿನ ಗ್ರಾಮೀಣ ಉಪವಿಭಾಗ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 48 ಪ್ರಕರಣದ 14 ಆರೋಪಿಗಳು ಬಂಧಿಸಿ, 1.17 ಕೋಟಿ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ಗ್ರಾಮೀಣ ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ. ಈ ವೇಳೆ ಕಳ್ಳತನ, ದರೋಡೆ ಸೇರಿ ಒಟ್ಟು 48 ಪ್ರಕರಣದ 14 ಅಂತರ್ ರಾಜ್ಯ, ಅಂತರ್ ಜಿಲ್ಲಾ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 65 …
Read More »ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್
ರಾಯಚೂರು: ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆ ಮಾಡಿ, ಯುವಕನನ್ನು ಹತ್ಯೆಗೈದಿರುವ ಘಟನೆ ರಾಯಚೂರಿನ ಜಹೀರಾಬಾದ್‌ನ ಮಾವಿನ ಕೆರೆ ಬಳಿ ನಡೆದಿದೆ. 22 ವರ್ಷದ ವಿಶಾಲ್ ಕೊಲೆಯಾದ ಯುವಕನಾಗಿದ್ದು, ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿಗಳನ್ನು ರಾಜು ಹಾಗೂ ಬಸವರಾಜ್ ಎಂದು ಗುರುತಿಸಲಾಗಿದೆ. ಶುಕ್ರವಾರ (ಜ.23) ತಡರಾತ್ರಿ 1 ಗಂಟೆ ಸುಮಾರಿಗೆ ಮೃತ ಯುವಕ ಸ್ನೇಹಿತನನ್ನ ಬೈದಿದ್ದಕ್ಕೆ ಆರೋಪಿಗಳ ಬಳಿ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಮೂವರ ಮಧ್ಯೆ ಮಾತಿನ ಚಕಮಕಿ …
Read More »
Laxmi News 24×7