ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು ಮನಸ್ಸಿಗೆ ಖುಷಿ ತರಿಸಿದೆ ಎಂದು ಶಾಸಕ ಮತ್ತು ಬೆಮ್ಯುಲ್ …
Read More »ಸೆನ್ಸೆಕ್ಸ್ 1 ಸಾವಿರ ಅಂಕ ಕುಸಿತ, ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟ!
ಮುಂಬೈ: ಭಾರತೀಯ ಷೇರು ಮಾರುಕಟ್ಟೆ ವಾರದ ಕೊನೆಯ ದಿನವಾದ ಶುಕ್ರವಾರ ಒಂದೇ ದಿನ ಭಾರಿ ಕುಸಿತ ಕಂಡಿದ್ದು, ಸೆನ್ಸೆಕ್ಸ್ 1 ಸಾವಿರಕ್ಕೂ ಅಧಿಕ ಅಂಕಗಳ ನಷ್ಟ ಅನುಭವಸಿದ್ದು ಮಾತ್ರವಲ್ಲದೇ ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟವಾಗಿದೆ. ಇಂದು ದಿನದ ವಹಿವಾಟು ಅಂತ್ಯಕ್ಕೆ ಸೆನ್ಸೆಕ್ಸೆ ಬರೊಬ್ಬರಿ 1, 017 ಅಂಕಗಳ ಕುಸಿತ ಕಂಡಿದ್ದು ಆ ಮೂಲಕ ಬರೊಬ್ಬರಿ ಶೇ.1.24ರಷ್ಟು ಕುಸಿತದೊಂದಿಗೆ 81,183 ಅಂಕಗಳಿಗೆ ಕುಸಿದಿದೆ. ಅಂತೆಯೇ ನಿಫ್ಟಿ ಕೂಡ ಶೇ.1.17ರಷ್ಟು ಅಂದರೆ …
Read More »ಬಿಜೆಪಿ ಸೇರಿದ ಕ್ರಿಕೆಟಿಗ ರವೀಂದ್ರ ಜಡೇಜಾ
ಜಾಮ್‌ನಗರ: ಕ್ರಿಕೆಟಿಗ ರವೀಂದ್ರ ಜಡೇಜಾ ಅವರು ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಅವರ ಪತ್ನಿ ಮತ್ತು ಕೇಸರಿ ಪಕ್ಷದ ಶಾಸಕಿ ರಿವಾಬಾ ಜಡೇಜಾ ಅವರು ಗುರುವಾರ ಹೇಳಿದ್ದಾರೆ. ಇಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಿವಾಬಾ ಜಡೇಜಾ, ರವೀಂದ್ರ ಜಡೇಜಾ ಬಿಜೆಪಿ ಸದಸ್ಯತ್ವ ಪಡೆದ ಕಾರ್ಡ್‌ನ ಫೋಟೋಗಳನ್ನು “ಸದಾಸ್ಯತ ಅಭಿಯಾನ 2024” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ …
Read More »ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು
ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ ಹೆಡ್ ಕಾನ್ಸ್ ಟೇಬಲ್. ಗಜೇಂದ್ರಗಢ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಅವರ ಮನೆಯಲ್ಲಿ ನಾಳೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೂವು-ಹಣ್ಣು, ಪೂಜೆ ಸಾಮಗ್ರಿಗಳೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾಂಕ್ರಿಟ್ …
Read More »ಯಾವುದೇ ಸಮಯದಲ್ಲೂ ಚುನಾವಣೆ ಬರಬಹುದು ಸಿದ್ಧರಾಗಿ : HD ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ!
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು. ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ …
Read More »ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಗಬೇಕಾದ ಹಾಸಿಗೆ, ದಿಂಬಿನಲ್ಲೂ ಸರ್ಕಾರ ಲೂಟಿ ಹೊಡೆದಿದೆ : ಬಿಜೆಪಿ ಗಂಭೀರ ಆರೋಪ
ಬೆಂಗಳೂರು : ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳಾದ ಹಾಸಿಗೆ, ದಿಂಬು ಕುರಿತಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ನಯಾಪೈಸೆ ಕೂಡ ಅನುದಾನ ನೀಡಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ನೀಡುವ ಹಾಸಿಗೆ ದಿಂಬಿನಲ್ಲೂ ಸರ್ಕಾರ ಲೂಟಿ ಮಾಡಿದೆ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಕುರಿದಂತೆ ಟ್ವೀಟ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ, ಶೋಷಿತ ಸಮುದಾಯವನ್ನು ಚುನಾವಣೆ …
Read More »ಪ್ರಧಾನಿ ಮೋದಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್
ಬೆಂಗಳೂರು, ಸೆಪ್ಟೆಂಬರ್ 06:ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ. ಆರೋಗ್ಯ ವಿಮೆ ಮೇಲೂ ಶೇ …
Read More »ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!
ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದೆ. ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ರೇಣುಕಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡ ಕರೆ ಮಾಡಿದ್ದು ಯಾರಿಗೆ, ಹೋಗಿದ್ದು ಎಲ್ಲಿಗೆ? ಚಾರ್ಜ್ಶೀಟ್ನಲ್ಲಿ ಬಯಲಾಯ್ತು ‘ಡಿ ಗ್ಯಾಂಗ್’ನ ಮತ್ತೊಂದು ಕರಾಳ ಮುಖ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸ್ಸೇಜ್ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ನ ಕರಾಳ ಕೃತ್ಯಗಳು ದಿನ ಕಳೆದಂತೆ ಒಂದೊಂದೇ ಬಯಲಾಗುತ್ತಿದೆ. ನಿಜಜೀವನದಲ್ಲಿ ಮಾದರಿಯಾಗಬೇಕಿದ್ದ ಸ್ಟಾರ್ ನಟನ ಈ ಕೃತ್ಯ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ಚಾರ್ಜ್ಶೀಟ್ನಲ್ಲಿ ಪೊಲೀಸರು ಉಲ್ಲೇಖಿಸಿರುವ ಆಘಾತಕಾರಿ ಅಂಶಗಳು ಡಿ ಗ್ಯಾಂಗ್ನ ಕರಾಳ ಮುಖವನ್ನು ಹೊರಜಗತ್ತಿಗೆ ಪರಿಚಯಿಸುತ್ತಿದೆ. ಪ್ರಕರಣದ …
Read More »ರಾಜ್ಯದ ಸಂಸದರು ಗಂಡಸರೋ ಅಥವಾ ಹೆಂಗಸರೋ :ಸಿ.ಎಂ ಇಬ್ರಾಹಿಂ ಆಕ್ರೋಶ
ಹುಬ್ಬಳ್ಳಿ, ಸೆಪ್ಟೆಂಬರ್ 06: ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿಯೇ ಸರ್ಕಾರ, ಪ್ರತಿಪಕ್ಷಗಳು ಕಾಲಹರಣ ಮಾಡುತ್ತಿದೆ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಕಾಂಗ್ರೆಸ್ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ಆರೋಪ ಹಾಗೂ ಪ್ರತ್ಯಾರೋಪದಲ್ಲಿಯೇ ಕಾಲಹರಣ ಹಾಕಲಾಗುತ್ತಿದ್ದು, ಸರಿಯಾಗಿ ನಮ್ಮ ವಿರೋಧ ಪಕ್ಷ ವಿರೋಧ ಪಕ್ಷವಾಗಿ ಕೆಲಸ …
Read More »