ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಮಾನದಂಡಗಳನ್ನು ಪಾಲಿಸದ ಆರೋಪದಿಂದ ಕಳೆದ ಎರಡು ತಿಂಗಳಲ್ಲಿ ದೇಶದಾದ್ಯಂತ ಸುಮಾರು 40 ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು, ಗುಜರಾತ್, ಅಸ್ಸಾಂ, ಪಂಜಾಬ್, ಆಂಧ್ರಪ್ರದೇಶ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದ ನೂರಕ್ಕೂ ಹೆಚ್ಚು ಕಾಲೇಜುಗಳೂ ಇದೇ ಕ್ರಮ ಎದುರಿಸಲಿವೆ ಎಂದು ಆ ಮೂಲಗಳು ಮಾಹಿತಿ ನೀಡಿವೆ. ನಿಯಮಗಳ ಉಲ್ಲಂಘನೆ ಮತ್ತು ಸಿ.ಸಿ. ಟಿ.ವಿ ಕ್ಯಾಮೆರಾ ಅವಳವಡಿಕೆ, ಬಯೊಮೆಟ್ರಿಕ್ ಹಾಜರಾತಿ …
Read More »ವಿರೋಧ ಪಕ್ಷಗಳು ಒಂದಾದರೆ ಬಿಜೆಪಿ ಸೋಲು ಖಚಿತ: ರಾಹುಲ್ ಗಾಂಧಿ
ನವದೆಹಲಿ/ಸಾಂತಕ್ಲಾರ (ಅಮೆರಿಕ): ‘ಭಾರತದಲ್ಲಿನ ಒಂದು ಗುಂಪಿನ ಜನರು ಜಗತ್ತಿನಲ್ಲಿ ಎಲ್ಲವೂ ತಮಗೇ ತಿಳಿದಿದೆ. ದೇವರಿಗಿಂತಲೂ ಹೆಚ್ಚು ತಿಳಿವಳಿಕೆ ಇದೆ ಎಂದುಕೊಂಡಿದ್ದಾರೆ. ಇದೊಂದು ಕಾಯಿಲೆ. ನಮ್ಮ ಪ್ರಧಾನಿಯೂ ಇಂಥ ಪ್ರಭೇದದ ಜನರಲ್ಲಿ ಒಬ್ಬರು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸಾಗರೋತ್ತರ ಭಾರತೀಯ ಕಾಂಗ್ರೆಸ್ ಮಂಗಳವಾರ ಆಯೋಜಿಸಿದ್ದ ‘ಪ್ರೀತಿಯ ಅಂಗಡಿ’ (ಮೊಹಬ್ಬತ್ ಕಿ ದುಕಾನ್) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವಿಧ ಕ್ಷೇತ್ರಗಳು, ಸಂಘಟನೆಯವರು ಇದರಲ್ಲಿ ಭಾಗವಹಿಸಿದ್ದರು. …
Read More »ಕಾಂಗ್ರೆಸ್ ಗ್ಯಾರಂಟಿ ಕುಟುಕಿದ ಪ್ರಧಾನಿ ನರೇಂದ್ರ ಮೋದಿ
ಜೈಪುರ (ಪಿಟಿಐ): ’50 ವರ್ಷಗಳ ಹಿಂದೆಯೇ ಬಡತನ ನಿರ್ಮೂಲನೆ ಮಾಡುವುದಾಗಿ ಕಾಂಗ್ರೆಸ್ ಗ್ಯಾರಂಟಿ ನೀಡಿತ್ತು. ಆ ಗ್ಯಾರಂಟಿ ಇಂದಿಗೂ ಈಡೇರಿಲ್ಲ. ಬಡವರನ್ನು ಹಾದಿ ತಪ್ಪಿಸುವುದೇ ಕಾಂಗ್ರೆಸ್‌ನ ನೀತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಕುಟುಕಿದ್ದಾರೆ. ಕೇಂದ್ರ ಸರ್ಕಾರದ ಒಂಬತ್ತು ವರ್ಷಗಳ ಸಂಭ್ರಮಾಚರಣೆ ಅಂಗವಾಗಿ ರಾಜಸ್ಥಾನದ ಅಜ್ಮೀರ್‌ನಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ ಬಡವರಿಗೆ ದ್ರೋಹ ಬಗೆದಿದೆ. ತನ್ನ ಆಡಳಿತಾವಧಿಯಿಂದಲೂ ಬಡವರನ್ನು ಹಾದಿ ತಪ್ಪಿಸುವ ನೀತಿ ಅಳವಡಿಸಿಕೊಂಡು ಬರುತ್ತಿದೆ. ‘ಕೈ’ …
Read More »ಎಲ್‌ಪಿಜಿ ಸಿಲಿಂಡರ್ ಬೆಲೆ ₹83.50 ಕಡಿತ
ನವದೆಹಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್ ದರ ಗುರುವಾರ ₹83.50 ಕಡಿತಗೊಂಡಿದೆ. ದೆಹಲಿಯಲ್ಲಿ 19ಕೆ.ಜಿಯ ವಾಣಿಜ್ಯ ಸಿಲಿಂಡರ್ ಬೆಲೆ ₹1773 ಆಗಿದೆ. ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಗುರುವಾರ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
Read More »2024 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು : ನಿತಿನ್ ಗಡ್ಕರಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು. ‘ಟೈಮ್ಸ್ ನೆಟ್‌ವರ್ಕ್ ಇಂಡಿಯಾ ಎಕಾನಾಮಿಕ್ಸ್’ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನಿತಿನ್ ಗಡ್ಕರಿ, ‘ಕಳೆದ ಒಂಭತ್ತು ವರ್ಷದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಅಭಿವೃದ್ದಿ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ನಿರ್ವಹಿಸಿದೆ. ಅಭಿವೃದ್ದಿ ಕೆಲಸಗಳನ್ನು ನೋಡಿಯೇ ದೇಶದ ಜನತೆ ಚುನಾವಣೆಯಲ್ಲಿ ನಮ್ಮನ್ನು ಬಹುಮತದಲ್ಲಿ ಗೆಲ್ಲಿಸಲಿದ್ದಾರೆ’ ಎಂದರು. …
Read More »ಬ್ರಿಜ್‌ಭೂಷಣ್ ಬಂಧನಕ್ಕೆ ಉತ್ತರಪ್ರದೇಶದಲ್ಲಿ ನಡೆದ ರೈತರ ಮಹಾಪಂಚಾಯತ್ ಒತ್ತಾಯ
ಲಖನೌ: ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ವೇಳೆ ಖ್ಯಾತ ಕುಸ್ತಿಪಟುಗಳ ಜೊತೆ ಪೊಲೀಸರು ನಡೆದುಕೊಂಡ ರೀತಿಯನ್ನು ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ನಡೆದ ರೈತರ ಮಹಾಪಂಚಾಯತ್ ಟೀಕಿಸಿದೆ. ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿರುವ ಸಭೆ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿದೆ. ‘ನಮ್ಮ ಹೆಣ್ಣುಮಕ್ಕಳ(ಮಹಿಳಾ ಕುಸ್ತಿಪಟುಗಳು) ಜೊತೆ ನಾವು ದೃಢವಾಗಿ …
Read More »ಹತ್ತು ಗಣಕಯಂತ್ರ ನೀಡಿದ ಶಾಸಕ ವಿಶ್ವಾಸ್ ವೈದ್ಯ
ಸವದತ್ತಿ: ಶಿಕ್ಷಣ ಇಲಾಖೆಯ ‘ನಮ್ಮ ಶಾಲೆ ನಮ್ಮ ಕೊಡುಗೆ’ಯಡಿ ವಿದ್ಯಾರ್ಥಿಗಳಿಗೆ ಹತ್ತು ಗಣಕಯಂತ್ರ ನೀಡಿದ್ದೇನೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಹುದ್ದೆ ಹೊಂದವತ್ತ ಮುನ್ನಡೆಯಬೇಕು ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು. ಇಲ್ಲಿನ ಶಾಸಕರ ಮಾದರಿ ಶಾಲೆಯಲ್ಲಿ ಬುಧವಾರ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಉತ್ತಮ ಶಿಕ್ಷಣ ನೀಡಲು ಶಿಕ್ಷಕರ …
Read More »ಮಲಪ್ರಭಾ ನದಿ ತಟದಲ್ಲಿ ಸ್ವಚ್ಚತಾ ಕಾರ್ಯಕೈಗೊಂಡ ಸ್ವಯಂ ಸೇವಕರು
ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ನದಿ ದಡದಲ್ಲಿ ಯೂಥ್ ಫಾರ್ ಸೇವಾ ಸಂಸ್ಥೆಯ ಬೆಳಗಾವಿ ಘಟಕದ ಸ್ವಯಂ ಸೇವಕರಿಂದ ಭಾನುವಾರ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಮಲಪ್ರಭಾ ನದಿ ದಡದಲ್ಲಿ ಹಾಗೂ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಬಳಿ ಸ್ವಯಂ ಸೇವಕರು ಸ್ವಚ್ಚತಾ ಕಾರ್ಯಕೈಗೊಂಡರು. ನದಿ ತೀರದ ಗೋಡೆಯ ಮೇಲೆ ನದಿಯ ನೀರಿನ ಸಮರ್ಪಕ ಬಳಕೆ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳಲು ಪ್ರೇರಣೆ ನೀಡುವ ಬರಹಗಳನ್ನು ಬರೆದು ಜನರಲ್ಲಿ ಜಾಗೃತಿ ಮೂಡಿಸಿದರು. ಸ್ವಯಂ ಸೇವಕರ ಕಾರ್ಯಕ್ಕೆ …
Read More »ಯಾರಿಗೆ ಸಿಗಲಿದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಪಟ್ಟ..?
ಹುಬ್ಬಳ್ಳಿ: ಧಾರವಾಡ ಉಸ್ತುವಾರಿಗೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ತೀವ್ರ ಪೈಪೋಟಿ ನಡೆದಿದೆ ಎನ್ನಲಾಗುತ್ತಿದೆ. ಜಿಲ್ಲೆಯಲ್ಲಿ ಸಂತೋಷ್ ಲಾಡ್ ಸಚಿವರಿದ್ದಾಗಲೂ ಲಕ್ಷ್ಮಿ ಹೆಬ್ಬಾಳ್ಕರ್ ಆಸಕ್ತಿ ವಹಿಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಧಾರವಾಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನ ದೊರೆತಿದೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ …
Read More »ಜುಲೈನಲ್ಲಿ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿಗೆ ಚಾಲನೆ: ರೈಲ್ವೆ ಸಚಿವರ ಭೇಟಿಯಾದ ಜೋಶಿ
ಹುಬ್ಬಳ್ಳಿ: ಬಹುನಿರೀಕ್ಷೆಯ ಧಾರವಾಡ – ಬೆಂಗಳೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ. ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದಾರೆ. “ರೈಲು ಸಂಚಾರ ಆರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ರೈಲ್ವೆ …
Read More »