ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಗುರುವಾರ ಭೇಟಿ ಮಾಡಿದರು. ಯಡಿಯೂರಪ್ಪ ಅವರನ್ನು ಸನ್ಮಾನಿಸಿದ ಡಿ.ಕೆ.ಶಿವಕುಮಾರ, ಇದೊಂದು ಸೌಜನ್ಯದ ಭೇಟಿ ಎಂದಿದ್ದಾರೆ. ಯಡಿಯೂರಪ್ಪ ಅವರಿಗೆ ಶಾಲು, ಹಾರ ಹಾಕಿ ಸನ್ಮಾನಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ಹಾಗೂ ಅಲ್ಲಿದ್ದವರನ್ನೆಲ್ಲ ಹೊರಗೆ ಕಳಿಸಿ ಇಬ್ಬರೇ ಕೆಲಕಾಲ ಮಾತು ಕತೆ ನಡೆಸಿದರು.
Read More »ಮೇಕೆದಾಟು ಅಣೆಕಟ್ಟು ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಮಿಳುನಾಡು ವಿರೋಧ
ಚೆನ್ನೈ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಧಿಕಾರದ ಗದ್ದುಗೆಗೇರಿದ ಕೆಲವೇ ದಿನಗಳಲ್ಲಿ ಕರ್ನಾಟಕ-ತಮಿಳುನಾಡು ನಡುವೆ ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಮೇಕೆದಾಟು ಯೋಜನೆಯೂ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಗಳು ರಾಜಕೀಯ ಸೌಹಾರ್ದತೆ ಹೊಂದಿದ್ದರೂ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಮಾತ್ರ ಎರಡು ರಾಜ್ಯಗಳ ನಿಲುವು ಭಿನ್ನವಾಗಿದೆ. ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು …
Read More »ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಇಳಿಕೆ: ಹೊಸ ದರ ಹೀಗಿದೆ..
ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಶುಭ ಸುದ್ದಿ ನೀಡಿವೆ. ಎಲ್‌ಪಿಜಿ ಸಿಲಿಂಡರ್ ಬೆಲೆ ಪರಿಷ್ಕರಣೆಯಾಗಿದೆ. ಆದರೆ ಇದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಮಾತ್ರ ಅನ್ವಯ. ವರದಿಯ ಪ್ರಕಾರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 83 ರೂಪಾಯಿ ಕಡಿಮೆಯಾಗಿದೆ. ಎಲ್ಲೆಲ್ಲಿ, ಎಷ್ಟು ಬೆಲೆ? ನವದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ಬೆಲೆ 83.5 ರೂಪಾಯಿ ಇಳಿಕೆಯಾಗಿದ್ದು, ಇದೀಗ ಹೊಸ ಬೆಲೆ 1,773 ರೂಪಾಯಿ ಇದೆ. ಕಳೆದ ತಿಂಗಳು ವಾಣಿಜ್ಯ ಅನಿಲ …
Read More »ಆಟೋ ಚಾಲಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿದ ಹಿನ್ನೆಲೆ ; ಪೊಲೀಸ್ ಸಿಬ್ಬಂದಿ ಅಮಾನತು.!
ಮಂಡ್ಯ : ಮಂಡ್ಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆಯೊಬ್ಬರು, ಆಟೋ ಚಾಲಕನಿಗೆ ನಡು ರಸ್ತೆಯಲ್ಲೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿದ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ. ಪೊಲೀಸ್ ಕಾನ್ಸ್ಟೇಬಲ್ ಮಹೇಂದ್ರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಅಮಾನತು ಮಾಡಿದ್ದಾರೆ. ಪೊಲೀಸ್ ಕಾನ್ಸ್‌ಸ್ಟೇಬಲ್ ಸಾರ್ವಜನಿಕವಾಗಿ ಎಲ್ಲರ ಮುಂದೆ ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಕೆಲವರು ಟ್ವೀಟ್ ಮೂಲಕ ಮಂಡ್ಯ ಎಸ್‌ಪಿ ಹಾಗೂ ಪೊಲೀಸ್ …
Read More »ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ: ರಾಜ್ಯಕ್ಕೆ 5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ
ಬೆಳಗಾವಿ: ಬೇಸಿಗೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಿನ ಅಗತ್ಯವಿದೆ. ಹಾಗಾಗಿ 5 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ. ಕಲಬುರ್ಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಲಿರುವುದರಿಂದ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗುವಂತೆ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಒಟ್ಟಾರೆ ಐದು ಟಿಎಂಸಿ ನೀರು ಬಿಡುಗಡೆ ಮಾಡಬೇಕು …
Read More »ಟ್ರಾಫಿಕ್ ಪೊಲೀಸರಂತೆ ಕಾರ್ಯ ನಿರ್ವಹಿಸಿದ ಬೈಕ್ ಸವಾರ
ಬೆಳಗಾವಿ : ರಸ್ತೆ ಸಂಚಾರ ದಟ್ಟಣೆ ಕಂಡು ಬಂದರೆ ವಾಹನ ಸವಾರರು ಪೊಲೀಸರ ವಿರುದ್ಧ ಗೊಣಗುವುದು ಸರ್ವೇ ಸಾಮಾನ್ಯ. ಆದರೆ ಇಲ್ಲೊಬ್ಬ ಬೈಕ್ ಸವಾರ ಸಂಚಾರ ದಟ್ಟಣೆ ವೇಳೆ ತಾವೇ ಸ್ವತಃ ಸಂಚಾರ ನಿರ್ವಹಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು ನಗರದ ಕಪಿಲೇಶ್ವರ ಮೇಲ್ಸೇತುವೆ ಬಳಿಯ ಶನಿಮಂದಿರ ಕ್ರಾಸ್ನಲ್ಲಿ ಇಂದು ಮಧ್ಯಾಹ್ನ 12.30ರ ಸುಮಾರಿಗೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಚಾರಿ ಪೊಲೀಸರಿಂದ ಮೆಚ್ಚುಗೆಇದೇ ರಸ್ತೆಯ ಮೂಲಕ ಬೈಕ್ನಲ್ಲಿ …
Read More »ಲೈಂಗಿಕ ಕಿರುಕುಳ ಆರೋಪ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹ
ಬೆಳಗಾವಿ: ದೇಶದ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ ಸಿಂಗ್ ಅವರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು. ಬೆಳಗಾವಿ, ಶಿವಮೊಗ್ಗ, ಮೈಸೂರು ಸೇರಿದಂತೆ ಹಲವಡೆ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬ್ರಿಜ್ ಭೂಷಣ್ ಶರಣ್ …
Read More »21 ಸಾವಿರ ಸರಕಾರಿ ನೌಕರರಿಂದ ಸರಕಾರಿ ಸೌಲಭ್ಯಗಳ ದುರ್ಬಳಕೆಯ ಕಳ್ಳಾಟ
ಬೆಂಗಳೂರು: ಸರಕಾರಿ ನೌಕರರ ನೆರವಿನಿಂದ ಸರಕಾರಿ ಸೌಲಭ್ಯಗಳ ದುರ್ಬಳಕೆಯ ಕಳ್ಳಾಟಗಳು ಸಾಮಾನ್ಯ. ಆದರೆ ಸರಕಾರದ ಸೌಲಭ್ಯವೊಂದನ್ನು ಸಾವಿರಾರು ಸಂಖ್ಯೆಯ ಸರಕಾರಿ ನೌಕರರೇ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ ಪ್ರಜ್ಞಾವಂತರನ್ನು ಬೆಚ್ಚಿ ಬೀಳಿಸಿದೆ. ರಾಜ್ಯದಲ್ಲಿ ನಕಲಿ ಬಿಪಿಎಲ್ ಕಾರ್ಡ್ ಹೊಂದಿದ 4.6 ಲಕ್ಷ ಜನರಿಂದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ 13.5 ಕೋಟಿ ರೂ. ದಂಡ ಸಂಗ್ರಹಿಸಿದೆ. ಈ ಪೈಕಿ 21,232 ಸಾವಿರ ಜನ ಸರಕಾರಿ ನೌಕರರು ಎಂಬ ವಿಷಯವನ್ನು ಇಲಾಖೆ ದೃಢಪಡಿಸಿದೆ. …
Read More »ಕರ್ನಾಟಕದಲ್ಲಿ ಒಂದೇ ವಾರದಲ್ಲಿಲಘು ವಿಮಾನ ಪತನ;
ಚಾಮರಾಜನಗರ: ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗೊಇಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಈ ಕುರಿತು ತನಿಖೆ ಕೈಗೊಳ್ಳಲಾಗುತ್ತಿದೆ. ಕಳೆದ ಮಂಗಳವಾರವಷ್ಟೇ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಸಾಂಬ್ರಾ ನಿಲ್ದಾಣದಿಂದ ಹೊರಟಿದ್ದ …
Read More »ಜೂನ್ 9 ರಿಂದ 11 ರವರೆಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ
ಬೆಳಗಾವಿ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಜೂನ್ 9 ರಿಂದ 11 ರವರೆಗೆ ನೆಹರು ನಗರದ ಕೆ.ಎಲ್.ಇ ಡಾ. ಹೆಚ್.ಬಿ ರಾಜಶೇಖರ ಸಭಾ ಭವನದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿಲೀಪ್ ಕುರಂದವಾಡೆ ಅವರು ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಪತ್ರಕರ್ತರು, ಸಂಪಾದಕರು ಹಾಗೂ ಸಾಧಕರು …
Read More »