ಧಾರವಾಡ: ತಾಲ್ಲೂಕಿನ ಸಲಕಿನಕೊಪ್ಪ ಗ್ರಾಮದ ಸಮೀಪದಲ್ಲಿ ಕುಡಿತದ ದಾಸರಾಗಿದ್ದ ದಂಪತಿ ಮಲಗಿದ ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ಘಟನೆ ಸೋಮವಾರ ನಡೆದಿದೆ. ಧಾರವಾಡ ಭವಾನಿನಗರದ ನಿವಾಸಿಗಳಾಗಿದ್ದ ರಾಜು ರೇವಾಳ (46) ಹಾಗೂ ಗೀತಾ ರೇವಾಳ (40) ಮೃತಪಟ್ಟವರು. ಕಟ್ಟಡ ಕೂಲಿ ಕಾರ್ಮಿಕರಾಗಿದ್ದ ಈ ದಂಪತಿ, ಸಲಕಿನಕೊಪ್ಪ ಗ್ರಾಮಕ್ಕೆ ಮಾವಿನ ತೋಟ ಕಾಯುವ ಕೆಲಸಕ್ಕೆ ಬಂದಿದ್ದರು. ಕುಟುಂಬಸ್ಥರಿಂದ ದೂರವಿದ್ದ ಇಬ್ಬರು ವಿಪರೀತ ಮದ್ಯವ್ಯಸನಿಗಳಾಗಿದ್ದರು. ಅಲ್ಲದೇ ರಾಜು ಎಂಬಾತ ಗ್ಯಾಂಗ್ರಿನ್ ಕಾಯಿಲೆಯಿಂದ ಬಳಲುತ್ತಿದ್ದರು. …
Read More »ಆರ್‌ಟಿಇ: 235 ಮಕ್ಕಳಿಗಷ್ಟೇ ಪ್ರವೇಶ
ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿ 732 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದ್ದರೂ, 235 ಮಕ್ಕಳು ಮಾತ್ರ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದಾರೆ. 1,456 ವಿದ್ಯಾರ್ಥಿಗಳು, ತಾವು ವಾಸಿಸುತ್ತಿರುವ ಜಾಗದಿಂದ ಒಂದು ಕಿ.ಮೀ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಲು ಆರ್‌ಟಿಇ ಅಡಿ ಅರ್ಜಿ ಸಲ್ಲಿಸಿದ್ದರು. ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ 406 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಪ್ರವೇಶ ದಿನಾಂಕ …
Read More »ಕಾಂಗ್ರೆಸ್ ಗ್ಯಾರಂಟಿ | ಶೀಘ್ರದಲ್ಲೇ ಒಳ್ಳೆಯ ಸುದ್ದಿ: ಸಂತೋಷ್ ಲಾಡ್
ಹುಬ್ಬಳ್ಳಿ: ‘ಜೂನ್ 1ರಂದು ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಶೀಘ್ರದಲ್ಲೇ ರಾಜ್ಯದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಮಂಗಳವಾರ ಭೇಟಿ ನೀಡಿದ ಅವರು, ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕಳೆದ ಬಾರಿ ಕಾರ್ಮಿಕ ಸಚಿವ ಸ್ಥಾನ ನೀಡಿದ್ದಾಗ ನನಗೆ ಕಡಿಮೆ …
Read More »ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ
ಅಥಣಿ: ‘ಅಥಣಿ ಹಾಗೂ ಕಾಗವಾಡ ತಾಲ್ಲೂಕುಗಳಲ್ಲಿ ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ ನಡೆಯುತ್ತಿದೆ’ ಎಂದು ಕಾಗವಾಡ ಶಾಸಕ ಭರಮಗೌಡ ಕಾಗೆ ಆರೋಪಿಸಿದರು. ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಥಣಿ, ಕಾಗವಾಡ ತಾಲ್ಲೂಕುಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ’60 ವರ್ಷ ದಾಟಿದವರಿಗೆ ಹಾಗೂ ಶೇ 75ಕ್ಕಿಂತ ಅಧಿಕ ಅಂಗವೈಕಲ್ಯ ಹೊಂದಿದವರಿಗೆ ಈ ಸೌಲಭ್ಯ …
Read More »ಮಂಗಳವಾರ ಮನೆ ಕುಸಿದಿದ್ದು, ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಕಾಗವಾಡ: ರಭಸದ ಮಳೆ, ಗಾಳಿಯಿಂದಾಗಿ ತಾಲ್ಲೂಕಿನ ಕವಲಗುಡ್ಡದ ಹೊರವಲಯದಲ್ಲಿ ಮಂಗಳವಾರ ಮನೆ ಕುಸಿದಿದ್ದು, ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮಾರುತಿ ಸನದಿ ಅವರಿಗೆ ಸೇರಿದ ಮನೆ ಕುಸಿದಿದ್ದರಿಂದ ಪುತ್ರಿ ಗೀತಾಂಜಲಿ(14) ಕಟ್ಟಡದ ಅವಶೇಷಗಳಡಿ ಸಿಲುಕಿದ್ದಳು. ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಅಸ್ವಸ್ಥಗೊಂಡ ಬಾಲಕಿಯನ್ನು ಚಿಕಿತ್ಸೆಗಾಗಿ ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ತಂದೆ-ತಾಯಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಮೋಳೆ ಹೊರವಲಯದ ಭಡಕೆಯವರ ತೋಟದ ಹತ್ತಿರವಿರುವ ಶುದ್ಧ …
Read More »ಬಿತ್ತನೆಬೀಜ ವಿತರಣೆಗೆ ಸಚಿವ ಸತೀಶ ಜಾರಕಿಹೊಳಿ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಬುಧವಾರ (ಮೇ 31) ರೈತರಿಗೆ ಬಿತ್ತನೆಬೀಜ- ಗೊಬ್ಬರ ವಿತರಿಸಬೇಕು. ಆಯಾ ಶಾಸಕರ ಗಮನಕ್ಕೆ ತಂದು ವಿತರಣೆ ಕಾರ್ಯ ಆರಂಭಿಸಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲೆಯ ಅಭಿವೃದ್ಧಿ ಕುರಿತು ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಬೀಜ ಖರೀದಿಗೆ ರೈತರು ದೂರ ಅಲೆಯುವುದನ್ನು ತಪ್ಪಿಸಲು ಆದಷ್ಟು ಸಮೀಪದಲ್ಲಿ ಬೀಜ ಲಭಿಸುವಂತೆ ಕ್ರಮ …
Read More »2,000 ನೆರವನ್ನು ಹಿರಿಯರಾದ ಅತ್ತೆಗೆ ಪ್ರಾಧಾನ್ಯ:ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ‘ಗೃಹ ಲಕ್ಷ್ಮೀ’ ಯೋಜನೆಯಡಿ ₹ 2,000 ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಮನೆಯಲ್ಲಿ ಹಿರಿಯರಾದ ಅತ್ತೆಗೆ ಪ್ರಾಧಾನ್ಯ ಕೊಡಬೇಕಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಮ್ಮ ಸಂಸ್ಕೃತಿಯಲ್ಲಿ ಅತ್ತೆಯೇ ಮನೆಯ ಯಜಮಾನಿ. ಹಾಗಾಗಿ, ಅತ್ತೆಗೆ ಈ ನೆರವು ಸಿಗಲಿದೆ’ …
Read More »ಬೆಳಗಾವಿ ಜಿಲ್ಲೆಯಾದ್ಯಂತ ಬುಧವಾರದಿಂದ ಪ್ರಸಕ್ತ ಸಾಲಿನ ತರಗತಿ ಆರಂಭ
ಬೆಳಗಾವಿ: ಜಿಲ್ಲೆಯಾದ್ಯಂತ ಬುಧವಾರದಿಂದ ಪ್ರಸಕ್ತ ಸಾಲಿನ ತರಗತಿ ಆರಂಭಗೊಂಡಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಜಿಲ್ಲೆಯ 4,015 ಪ್ರಾಥಮಿಕ, ,1,200 ಪ್ರೌಢ ಸೇರಿದಂತೆ 5,215 ಶಾಲೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಹೂವು ನೀಡಿ ಅದ್ಧೂರಿಯಾಗಿ ಬರಮಾಡಿಕೊಂಡರು. ಬೇಸಿಗೆ ರಜೆಯಿಂದಾಗಿ ವಿದ್ಯಾರ್ಥಿಗಳಿಲ್ಲದೆ ಭಣಗುಡುತ್ತಿದ್ದ ಶಾಲೆಯಂಗಳದಲ್ಲಿ ಮಕ್ಕಳ ಕಲರವ ಕಂಡುಬಂತು. ಕೆಲವೆಡೆ ಸಾಂಕೇತಿಕವಾಗಿ ಪಠ್ಯಪುಸ್ತಕ ವಿತರಿಸಲಾಯಿತು.
Read More »ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರ ಸಾವು
ಚಿಕ್ಕೋಡಿ (ಬೆಳಗಾವಿ): ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ. ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತೋಟದಲ್ಲಿ …
Read More »ಲಕ್ಷ್ಮಣ ಸವದಿ ಮನೆಗೆ ರಾತ್ರಿ ಡಿಸಿಎಂ ಡಿಕೆಶಿ ಭೇಟಿ: ಸತೀಶ್ ಜಾರಕಿಹೊಳಿ, ಹೆಬ್ಬಾಳ್ಕರ್ ಸಾಥ್
ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಬೆಳಗಾವಿಯಲ್ಲಿರುವ ಮನೆಗೆ ಕಳೆದ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಡಿಕೆಶಿ, ಸವದಿ ಅವರನ್ನು ಸಮಾಧಾನಪಡಿಸಿದರು. ಇದೇ ವೇಳೆ, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿಯೂ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಶಾಸಕ …
Read More »