ನವದೆಹಲಿ: ಕರ್ನಾಟಕ ಚುನಾವಣೆಯ ಗೆಲುವಿನ ಉತ್ಸಾಹದಲ್ಲಿರುವ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ನವದೆಹಲಿಯಲ್ಲಿ ಮಧ್ಯಪ್ರದೇಶ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದರು. ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಕಮಲ್ ನಾಥ್, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು. ಮಧ್ಯಪ್ರದೇಶದ ರಾಜ್ಯ ನಾಯಕರಿಗೆ ಪಕ್ಷದಲ್ಲಿರುವ ಬೇರೆ ಯಾವುದೇ ನಾಯಕರು ಹೇಳಿಕೆ …
Read More »ಮೇ 31 ರಿಂದ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಶಾಲೆಗಳು ಆರಂಭ
ಬೆಂಗಳೂರು : ಇಂದಿನಿಂದ 2023-24ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷಾರಂಭಗೊಂಡಿದ್ದು, ಮೇ 31 ರಿಂದ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಶಾಲೆಗಳು ಆರಂಭಗೊಳ್ಳಲಿವೆ. ಶಾಲೆಗಳ ಆರಂಭಕ್ಕೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲ ಶಾಲೆಗಳಿಗೆ ಸೂಚನೆ ನೀಡಿದೆ. 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಶಾಲೆಗಳಿಗೆ ನೀಡಲಾಗಿದ್ದ ಬೇಸಿಗೆ ರಜೆ ನಿನ್ನೆಗೆ ( ಭಾನುವಾರ) ಅಂತ್ಯಗೊಂಡಿದ್ದು, ಇಂದಿನಿಂದ ನೂತನ ಶೈಕ್ಷಣಿಕ ವರ್ಷಾರಂಭವಾಗಿದೆ. ಆದರೆ, ಶಾಲೆಗಳ ಆರಂಭಕ್ಕೆ ಇನ್ನು …
Read More »ಜಿಪಂ, ತಾಪಂ ಚುನಾವಣೆಗೆ ಪ್ರಕ್ರಿಯೆ ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ವರ್ಷಗಳಿಂದ ಸ್ಥಗಿತಗೊಂಡಿರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದ ಪ್ರಕಿಯೆ ಪೂರ್ಣ ಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅವಧಿ ಮುಗಿದ ಜಿಪಂ ಮತ್ತು ತಾಪಂಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ರಾಜ್ಯದಲ್ಲಿ ತಾಪಂ, ಜಿಪಂ ಕ್ಷೇತ್ರ ಮರುವಿಂಗಡಣೆ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು …
Read More »IPL ಚಾಂಪಿಯನ್ ಚೆನ್ನೈಗೆ 20 ಕೋಟಿ ರೂ ಬಹುಮಾನ: ವಿವಿಧ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ..
ಅಹಮದಾಬಾದ್ (ಗುಜರಾತ್): ಕಳೆದ ಎರಡು ತಿಂಗಳಿನಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆಯ ರಸದೌತಣವನ್ನೇ ಉಣಬಡಿಸಿದ ‘ಮಿಲಿಯನ್ ಡಾಲರ್ ಟೂರ್ನಿ’ ಖ್ಯಾತಿ ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2023 (ಐಪಿಎಲ್) ತಡರಾತ್ರಿ ಮುಕ್ತಾಯಗೊಂಡಿತು. ಬೃಹತ್ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಫೈನಲ್ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿತು. ಈ ಮೂಲಕ 5 ನೇ ಬಾರಿಗೆ ಗೆಲುವಿನ ಕಿರೀಟವನ್ನು ಮುಡಿಗೇರಿಸಿಕೊಂಡಿತು. ಪಂದ್ಯ ಮುಕ್ತಾಯದ ಬಳಿಕ ಈ ಸೀಸನ್ನಿನ …
Read More »ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ: ತುರ್ತು ಕ್ರಮಕ್ಕೆ ಸಿಎಂ ಸೂಚನೆ
ರಾಯಚೂರು: ಕಲುಷಿತ ನೀರು ಕುಡಿದು 25 ಜನ ಅಸ್ವಸ್ಥಗೊಂಡಿರುವ ಮತ್ತೊಂದು ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ವಾಂತಿ, ಭೇದಿಯಿಂದ ಗೊರೆಬಾಳದಲ್ಲಿ ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಇವರಿಗೆ ಕಿಡ್ನಿ ಸಮಸ್ಯೆಯೂ ಎದುರಾಗಿದೆ ಎಂದು ತಿಳಿದು ಬಂದಿದೆ. ಅಸ್ವಸ್ಥರನ್ನು ಲಿಂಗಸುಗೂರಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಮೆಡಿಕಲ್ ಕ್ಯಾಂಪ್ ಹಾಕಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ. ಕುಡಿಯುವ ನೀರು ಸರಬರಾಜು ಪೈಪ್‌ಗೆ ಚರಂಡಿ ನೀರು …
Read More »ವಿಧಾನಸೌಧ, ವಿಕಾಸಸೌಧದಲ್ಲಿ ನೂತನ ಸಚಿವರಿಗೆ ಕೊಠಡಿಗಳ ಹಂಚಿಕೆ: ಯಾರ‍್ಯಾರಿಗೆ ಯಾವ ಕೊಠಡಿ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು, ಮೇ.27ರಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 24 ಸಚಿವರು ಪದಗ್ರಹಣ ಮಾಡಿದ್ದರು. ಸದ್ಯ ರಾಜ್ಯ ಸರ್ಕಾರದ 12 ಮಂದಿ ನೂತನ ಸಚಿವರುಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಎಚ್.ಕೆ.ಪಾಟೀಲ್ – ವಿಧಾನಸೌಧ ಕೊಠಡಿ ಸಂಖ್ಯೆ 314,314ಎ. ಕೆ.ವೆಂಕಟೇಶ್- ವಿಧಾನಸೌಧ ಕೊಠಡಿ ಸಂಖ್ಯೆ 329,329ಎ. ಡಾ.ಹೆಚ್.ಸಿ.ಮಹದೇವಪ್ಪ- ವಿಧಾನಸೌಧ ಕೊಠಡಿ ಸಂಖ್ಯೆ …
Read More »ಗ್ಯಾರಂಟಿ ಜಾರಿ ಸಂಬಂಧ ಸಿಎಂ ಮಹತ್ವದ ಸಭೆ: ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 12,038 ಕೋಟಿ ಹೊರೆ?
ಬೆಂಗಳೂರು: ಗ್ಯಾರಂಟಿ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ರೇಸ್ ಕೋರ್ಸ್ನ ಶಕ್ತಿ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಐದೂ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಂದ ಖರ್ಚು, ವೆಚ್ಚ, ರೂಪುರೇಷೆ, ಅಂಕಿ ಅಂಶದ ಮಾಹಿತಿ ಪಡೆದರು. ಚುನಾವಣೆಗೆ ಮುನ್ನ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡುವ …
Read More »ಬಾಲಕಿಯನ್ನು 21 ಬಾರಿ ಚಾಕುವಿನಿಂದ ಇರಿದು ಹತ್ಯೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಿನ ದಿನಕ್ಕೂ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ದೇಶದ ಕ್ಯಾಪಿಟಲ್ ಸಿಟಿಯಲ್ಲಿ ಶದ್ಧಾ ವಾಕರ್ ಪ್ರಕರಣ ಮಾಸುವ ಮುನ್ನ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳನ್ನು ಪ್ರಿಯಕರ 21 ಬಾರಿ ಚುಚ್ಚಿದ್ದಲ್ಲದೇ 5 ಬಾರಿ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾನೆ. ಮೃತಳನ್ನು ಸಾಕ್ಷಿ ಎಂದೂ, ಹತ್ಯೆ ಮಾಡಿದವನನ್ನು ಸಾಹಿಲ್ ಎಂದು ಗುರುತಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯ ಆಧರಿಸಿ ದೂರು ದಾಖಲಿಸಿಕೊಂಡ ಪೊಲೀಸರು. ಹಂತಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. …
Read More »ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ- ಡಿಕೆಶಿ
ಬೆಂಗಳೂರು: ”ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಕರಾದ ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ತಾವು ವ್ಯಾಸಂಗ ಮಾಡಿರುವ ಎನ್‌ಪಿಸಿ ಶಾಲೆಗೆ ಸೋಮವಾರ ಭೇಟಿ ನೀಡಿದರು. ತಮ್ಮ ಗುರುಗಳಾದ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. …
Read More »ವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಅಕಾಲಿಕ ಮುಂಗಾರಿನ ಪರಿಣಾಮ ಗುಜರಾತ್ನಲ್ಲಿ ಇನ್ನೆರಡು ದಿನ ಗಾಳಿ ಮಳೆಯಾಗಲಿದೆ.
ಅಹಮದಾಬಾದ್ (ಗುಜರಾತ್): ಶುಭಮನ್ ಗಿಲ್, ರಶೀದ್ ಖಾನ್, ಹಾರ್ದಿಕ್ ಪಾಂಡ್ಯರ ಚುರುಕಿನ ಆಟ, ಕ್ರಿಕೆಟ್ನ ಮಾಸ್ಟರ್ ಮೈಂಡ್ ಎಮ್ಎಸ್ ಧೋನಿ ಅವರ ಚಾಣಾಕ್ಷ ನಡೆಯ ಪಂದ್ಯವನ್ನು ನೋಡಲು ನಿನ್ನೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂಗೆ ಬಂದಿದ್ದ ಅಭಿಮಾನಿಗಳಿಗೆ ವರುಣ ಬೇಸರ ಉಂಟುಮಾಡಿದ್ದ. ಆದರೆ, ಪಂದ್ಯವನ್ನು ಸೋಮವಾರ (ಇಂದು)ದ ಮೀಸಲು ದಿನಕ್ಕೆ ಮುಂದೂಡಲಾಯಿತು. ಹಾಗಾದರೆ ಇಂದಿನ ಹವಾಮಾನ ವರದಿ ಏನಿದೆ..? ಗುಜರಾತ್ನಲ್ಲಿ ಅಕಾಲಿಕ ಮಳೆ ಅನಾಹುತ ಸೃಷ್ಟಿಸುತ್ತಿದೆ. ಚಂಡಮಾರುತದ ಚಲನೆಯಿಂದಾಗಿ, ಕಳೆದ …
Read More »