ಬೆಂಗಳೂರು,ಮೇ.27- ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.ಕಳೆದ ಮೇ 21ರಂದು ಬೆಂಗಲೂರಿನಲ್ಲಿ ಸುರಿದ ರಭಸ ಮಳೆಗೆ ಕೆಆರ್ ಸರ್ಕಲ್ ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಇನ್ಫೋಸಿಸ್ ಭಾನುರೇಖ (23) ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿ ಜೂನ್ 5ರೊಳಗೆ ಪ್ರತಿಕ್ರಿಯೆ ನೀಡುವಂತೆ ಪೂರ್ವ ವಲಯದ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರು ಸೇರಿದಂತೆ ಎಂಟು ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸï.ಪಾಟೀಲ್ …
Read More »ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ:ವಿಶ್ವಾಸ ವೈದ್ಯ
ಸವದತ್ತಿ ತಾಲೂಕಿನ ಗ್ರಂಥಾಲಯಗಳ ಕಾಯಕಲ್ಪಕ್ಕೆ ನೂತನ ಶಾಸಕರ ಸಂಕಲ್ಪನೂತನ ಶಾಸಕ ವಿಶ್ವಾಸ ವೈದ್ಯರಿಂದ ವಿನೂತನ ಕಾರ್ಯಕ್ಕೆ ಚಾಲನೆಇಂದು ಸವದತ್ತಿ ಸರ್ಕಾರಿ ಗ್ರಂಥಾಲಯಕ್ಕೆ ಅನಿರೀಕ್ಷಿತ ಭೇಟಿ, ಪರಿಶೀಲನೆ ಗ್ರಂಥಾಲಯದ ಕಟ್ಟಡ, ಮೂಲಭೂತ ಸೌಲಭ್ಯಗಳ ಪರಿಶೀಲನೆ ಗ್ರಂಥಾಲಯದಲ್ಲಿ ಅಧ್ಯಯನ ಮಾಡುವ ಯುವಕರಿಂದ ಮಾಹಿತಿ ಪಡೆದ ಶಾಸಕರು ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ ಮುಂದಿನ ಹಂತದಲ್ಲಿ ತಾಲೂಕಿನ ಎಲ್ಲ ಗ್ರಂಥಾಲಯಗಳ ಅಭಿವೃದ್ಧಿ ಭರವಸೆ ಶಾಸಕರ ಕಾರ್ಯಕ್ಕೆ ತೀವ್ರ ಮೆಚ್ಚುಗೆ …
Read More »ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಹರಿದಾಡುತ್ತಿರುವದು ಪಟ್ಟಿ ನಕಲಿ ಎಂದ
ಬೆಂಗಳೂರು: ಕಾಂಗ್ರೆಸ್ ಸರಕಾರದ ಸಚಿವರುಗಳಿಗೆ ಖಾತೆ ಹಂಚಿಕೆ ಇನ್ನೂ ಆಗಿಲ್ಲ. ಈಗ ಹರಿದಾಡುತ್ತಿರುವ ಪಟ್ಟಿ ನಕಲಿ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಈ ಕುರಿತು ಇದೀಗ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಸಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ …
Read More »2022-23 ಆದಾಯ ತೆರಿಗೆ ಪಾವತಿ ವೇಳೆ ಈ ತಪ್ಪು ಬೇಡ!
ಬೆಂಗಳೂರು: ಕಳೆದ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿ ಮಾಡುವ ಸಮಯ ಬಂದಿದೆ. ಆದಾಯ ತೆರಿಗೆ ಇಲಾಖೆ ಈಗಾಗಲೇ ಪಾವತಿ ದಾಖಲಾತಿಗಳನ್ನು ಲಭ್ಯವಾಗುವಂತೆ ಮಾಡಿದೆ. ಈ ಹಿನ್ನಲೆ 2022-2023ರ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ತಪ್ಪುಗಳು ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅವಶ್ಯವಾಗಿದೆ. ಐಟಿ ಇಲಾಖೆಯ ಮಾಹಿತಿ ಅನುಸಾರ, ಜುಲೈ 31ರೊಳಗೆ ಲೆಕ್ಕ ಪರಿಶೋಧನೆಯ ಅಗತ್ಯವಿಲ್ಲದ ವ್ಯಕ್ತಿಗಳು ಜುಲೈ 31ರೊಳಗೆ ರಿಟರ್ನ್ಸ್ ಸಲ್ಲಿಸಬೇಕು. ಫಾರ್ಮ್ 16 ಅನ್ನು ಈಗಾಗಲೇ ಕೆಲವು …
Read More »ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಗ್ರಾಮಗಳಲ್ಲಿ ನೀರಿನ ಕೊರತೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಹೀಗಾಗಿ, ಅಂತರ್ಜಲ ಮಟ್ಟ ತಳ ತಲುಪಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗಿರುವ ಕಾರಣ ಕೆಲವೆಡೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಿ ದಾಹ ತೀರಿಸುವ ಪರಿಸ್ಥಿತಿ ಬಂದೊದಗಿದೆ. ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ಬೀಸಿಲಿನ ತಾಪಕ್ಕೆ ಜನ ನಿತ್ಯವೂ ಬಸವಳಿಯುತ್ತಿದ್ದಾರೆ. ಕಳೆದೆರಡು ದಿನದ ಹಿಂದೆ ಕೆಲ ಗಂಟೆಗಳ ಕಾಲ ಮಳೆ ಸುರಿದಿತ್ತಾದರೂ ಮತ್ತೆ …
Read More »ಸಂಸತ್ ಭವನದ ಉದ್ಘಾಟನೆ ವಿವಾದ: ಸಿಎಂ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು
ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದ ಬಗ್ಗೆ ವಿವಾದ ಹೆಚ್ಚಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಈಗ ವಿವಾದಕ್ಕೆ ಸಿಲುಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಖರ್ಗೆ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ದೆಹಲಿಯ ಕೊನಾಟ್ …
Read More »ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಯಾರಿಗೆ ಯಾವ ಖಾತೆ?*
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಖಾತೆ ಹಂಚಿಕೆ ಕೂಡ ಮಾಡಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿಯಲ್ಲಿಯೇ ಹಣಕಾಸು, ಸಂಪುಟ ವ್ಯವಹಾರ ಹಾಗೂ ಗುಪ್ತಚರ ಇಲಾಖೆ ಉಳಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಗುಪ್ತಚರ ಇಲಾಖೆ ಡಿಸಿಎಂ ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಡಾ.ಜಿ.ಪರಮೇಶ್ವರ್ – ಗೃಹ ಖಾತೆ ಹೆಚ್.ಕೆ.ಪಾಟೀಲ್ – ಕಾನೂನು ಮತ್ತು …
Read More »ಸುಭದ್ರ ಸರ್ಕಾರಕ್ಕೆ ಎದೆಗಾರಿಕೆಯ ಮುನ್ನುಡಿ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗಾಗಿ ಸಂಪೂರ್ಣ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, “ನಾಡಿನ ಜನತೆ ಸುಭದ್ರ ಮತ್ತು ಸ್ವಚ್ಚ ಆಡಳಿತಕ್ಕಾಗಿ ನಮಗೆ ಪೂರ್ಣ ಬಹುಮತ ನೀಡಿದ್ದಾರೆ. ಜನರ ನಿರೀಕ್ಷೆಯಂತೆ ಸರ್ಕಾರ ನಡೆಯಲಿದೆ” ಎಂದು ವಾಗ್ದಾನ ಮಾಡಿದ್ದರು. ಈ ವಾಗ್ದಾನದ ಮೊದಲ ಹೆಜ್ಜೆಯಾಗಿ ಸಂಪೂರ್ಣ ಸಂಪುಟ ಹೆಚ್ಚಿನ ಭಿನ್ನಾಭಿಪ್ರಾಯಗಳು ಇಲ್ಲದ ರೀತಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಏಕ …
Read More »ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜ
ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸಚಿವರಾದ ನಂತರ ಮೊದಲ ಬಾರಿಗೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಒಟ್ಟಾಗಿ ಆಗಮಿಸುತ್ತಿರುವ ಸಚಿವ ದ್ವಯರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದ್ದು, ವಿಮಾನ ನಿಲ್ದಾಣದಿಂದಲೇ ಬೃಹತ್ ರ್ಯಾಲಿ ಮೂಲಕ ನಗರಕ್ಕೆ ಕರೆತರಲು ಕಾರ್ಯಕರ್ತರು, ಅಭಿಮಾನಿಗಳು ನಿರ್ಧರಿಸಿದ್ದಾರೆ. ಮೇ 20ರಂದು ಸತೀಶ್ ಜಾರಕಿಹೊಳಿ ಹಾಗೂ ಮೇ 27ರಂದು ಲಕ್ಷ್ಮೀ ಹೆಬ್ಬಾಳಕರ್ ಸಂಪುಟ ದರ್ಜೆ …
Read More »ರಾಯಚೂರಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ರಾಯಚೂರು: ಸಿಂಧನೂರು ತಾಲೂಕಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ತೀವ್ರ ಅಸ್ವಸ್ಥಳಾಗಿದ್ದ ಸಂತ್ರಸ್ತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇ 23 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮೇ 23 ರಂದು ಈ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಡಪತ್ರಿ ಹೊಲೆದು ಜೀವನ ನಡೆಸುತ್ತಿದ್ದ ಗೃಹಿಣಿಯನ್ನು ಒತ್ತಾಯಪೂರ್ವಕವಾಗಿ ಆರೋಪಿ ಮಲ್ಲಪ್ಪ …
Read More »