ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಕಾರ್ಯ ಜು.19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2 …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಐದು ಭಾಗ್ಯಗಳ ವಿವರ ನೀಡುವ ಬದಲು ಮೋದಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದು ವಿಪರ್ಯಾಸ: ಕೋಟಾ ಶ್ರೀನಿವಾಸ್ ಪೂಜಾರಿ
ಬೆಂಗಳೂರು: ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಐದು ಭಾಗ್ಯಗಳ ಕುರಿತು ವಿವರಣೆ ನೀಡುವ ಬದಲು ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಸಮಯವನ್ನು ಬಳಸಿಕೊಂಡಿದ್ದು ವಿಪರ್ಯಾಸ ಎಂದು ವಿಧಾನ ಪರಿಷತ್ ಬಿಜೆಪಿ ಹಿರಿಯ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಂದರ್ಭ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾರೆ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ ಬಳಿಕ …
Read More »‘ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ”: ಶುಭಕೋರಿದ ಸಿಎಂ
ಬೆಂಗಳೂರು: ”ಚಂದ್ರಯಾನ-3ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲಿಗಲ್ಲನ್ನು ಇಸ್ರೋ ಸಾಧಿಸಿದೆ” ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಹರ್ಷ ವ್ಯಕ್ತಪಡಿಸಿದರು. ಚಂದ್ರಯಾನ-3ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ”ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೇ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ …
Read More »ಭೀಮಾತೀರದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ
ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ರೌಡಿಶೀಟರ್ವೋರ್ವನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಹಾಡಹಗಲೇ ನಡುರಸ್ತೆಯಲ್ಲಿ ಈ ಘಟನೆ ನಡೆದಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಜಿಲ್ಲೆಯ ಆಲಮೇಲ ಸಮೀಪದ ದೇವರನಾವದಗಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಕೊಲೆಯಾದ ರೌಡಿಶೀಟರ್ನನ್ನು ಮಾಳಪ್ಪ ಯಮನಪ್ಪ ಮೇತ್ರಿ (40) ಎಂದು ಗುರುತಿಸಲಾಗಿದೆ. ಈತನನ್ನು ದುರ್ಷ್ಕಮಿಗಳು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಯಾದ ಮಾಳಪ್ಪ ಮೇತ್ರಿ ಮೇಲೆ ಶಸ್ತ್ರಾಸ್ತ್ರ ಕಾಯ್ದೆ, ಕಂಟ್ರಿ …
Read More »ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭ
ವಿಜಯಪುರ: ಖಾಲಿ ಖಾಲಿಯಾಗಿ ಕಾಣುತ್ತಿದ್ದ ಜಿಲ್ಲೆಯ ಜೀವಜಲ ಆಲಮಟ್ಟಿ ಜಲಾಶಯಕ್ಕೆ ಕೊನೆಗೂ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇದೇ ಮೊದಲ ಬಾರಿ ಪ್ರಮಾಣದ ಒಳಹರಿವು ಆರಂಭವಾಗಿದೆ. ಡ್ಯಾಂನಲ್ಲಿ ನೀರಿಲ್ಲದಿರುವುದಕ್ಕೆ ಜನರು ಆತಂಕಗೊಂಡಿದ್ದರು. ಅದರಲ್ಲೂ ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ಮಳೆಯಾಗದ ಹಿನ್ನೆಲೆಯಲ್ಲಿ ನದಿತೀರದ ಜನರು ಬರದ ಭೀತಿಯಲ್ಲಿದ್ದರು. ಆದ್ರೆ ಇದೀಗ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾದ್ದರಿಂದ ಕೃಷ್ಣಾ ನದಿಗೆ ನೀರು ಹರಿದುಬರುತ್ತಿದೆ. ನದಿತೀರದ ಜನರ ಮುಖದಲ್ಲಿಯೂ ಮಂದಹಾಸ …
Read More »ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ:ಮಹಾನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಸಿದ್ದರಾಮಪ್ಪ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಡಿಸಿಪಿಗಳಾದ ಪಿ.ವಿ.ಸ್ನೇಹಾ, ಶೇಖರ ಟಕ್ಕೆಣ್ಣವರ ಸ್ವಾಗತಿಸಿದರು
Read More »ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ: ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ 6 ತಿಂಗಳಿಂದ 6 ವರ್ಷದ ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 300 ದಿನಗಳ ಕಾಲ ಪೂರಕ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಪರಿಷತ್ ಕಲಾಪದಲ್ಲಿ ಡಾ.ವೈ.ಎ.ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪ್ರತಿದಿನ 8 ರೂಪಾಯಿ ಮೌಲ್ಯದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ ಎಂದರು. ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ …
Read More »ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ
ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ ನಡೆಯಿತು. ಈ ವಾಹನಗಳನ್ನು ಮಚ್ಚೆ ನಗರ ಪಂಚಾಯಿತಿಗೆ ನೀಡಲಾಯಿತು 15ನೇ ಹಣಕಾಸು ಆಯೋಗ, ಸ್ವಚ್ಛ ಭಾರತ್ ಮಿಷನ್ ಮತ್ತು ರಾಜ್ಯ ಹಣಕಾಸು ಆಯೋಗದ ನಿಧಿಯಲ್ಲಿ ಶಾಸಕ ಅಭಯ ಪಾಟೀಲ ಅವರ ವಿಶೇಷ ಪ್ರಯತ್ನದಿಂದ ಮಚ್ಚೆ ನಗರ ಪಂಚಾಯಿತಿಗೆ ವಿವಿಧ ವಾಹನಗಳನ್ನು ಖರೀದಿಸಲಾಗಿದೆ. ಈ …
Read More »ಜಿ-20 ಪ್ರತಿನಿಧಿಗಳಿಂದ ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆ
ವಿಜಯನಗರ : ಶೆರ್ಪಾ ಸಭೆಯ ನಂತರ ಶುಕ್ರವಾರ ಸಂಜೆ ಜಿ-20 ಪ್ರತಿನಿಧಿಗಳು ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಪ್ರವಾಸೋದ್ಯಮ ಇಲಾಖೆ, ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಯಿಂದ ಸ್ಮಾರಕ ವೀಕ್ಷಣೆ ವ್ಯವಸ್ಥೆಯನ್ನು ಕಲ್ಪಿಸಲಾಯಿತು. ಹಂಪಿಯ ಮಹಾನವಮಿ ದಿಬ್ಬ, ಹಜಾರರಾಮ, ಕಮಲ ಮಹಲ್ ಹಾಗೂ ಗಜಶಾಲೆ, ರಾಣಿ ಅರಮನೆ ಅಧಿಷ್ಠಾನ ಹಾಗೂ ವಿವಿಧ ಸ್ಮಾರಕಗಳ ಕುರಿತು ಪ್ರವಾಸಿ ಮಾರ್ಗದರ್ಶಿಗಳು ಗೌರವಪೂರಕವಾಗಿ ಸ್ವಾಗತಿಸುತ್ತಾ ಮಾಹಿತಿ ನೀಡಿದರು. ಮಹಾನವಮಿ ದಿಬ್ಬದ ಮೇಲೆ ಹತ್ತಿ ಸುತ್ತಲಿನ …
Read More »
Laxmi News 24×7