ಬೆಳಗಾವಿ: ಕೃಷಿ ಎಂದರೆ ಮೂಗು ಮುರಿಯುವವರ ಮಧ್ಯ ಇಲ್ಲೋಬ್ಬ ವಿದ್ಯಾವಂತ ಯುವತಿಯೋರ್ವರು 30 ಗುಂಟೆ ಜಮೀನಿನಲ್ಲಿ ಕೇವಲ ಆರು ತಿಂಗಳಲ್ಲೇ ಮೆಣಸಿನಕಾಯಿ ಬೆಳೆದು ಬರೊಬ್ಬರಿ 8 ಲಕ್ಷ ರೂ. ಗಳಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಹೌದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದ ನಿಕಿತಾ ವೈಜು ಪಾಟೀಲ (26) ಎಂಬ ಯುವತಿಯೇ ಕೃಷಿಯಲ್ಲಿ ಸಾಧನೆ ಮಾಡುತ್ತಿರುವ ಯುವತಿ. ತಮ್ಮ 30 ಗುಂಟೆ ಜಮೀನಿನಲ್ಲಿ ನವಲ್ ಭಟಕಾ ತಳಿಯ ಮೆಣಸಿನಕಾಯಿ ಬೆಳೆದಿರುವ ನಿಕಿತಾ …
Read More »ನೀರು ಪೂರೈಕೆಗೆ ಹಣ ಬಿಡುಗಡೆ ಮಾಡದ ಜಿಲ್ಲಾಡಳಿತ: ಸಗಣಿ, ಗೋಮೂತ್ರದಲ್ಲಿ ಸ್ನಾನಮಾಡಿ ಗ್ರಾ ಪಂ ಅಧ್ಯಕ್ಷರ ಪ್ರತಿಭಟನೆ
ಶಿವಮೊಗ್ಗ: ಕುಡಿವ ನೀರು ಪೂರೈಕೆಗೆ ಹಣ ಬಿಡುಗಡೆಯಾಗದ ಹಿನ್ನೆಲೆ ನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಮಲಕರ ಶೆಟ್ಟಿ ಎಂಬುವವರು ಸಗಣಿ ಹಾಗೂ ಗೋಮೂತ್ರದಲ್ಲಿ ಸ್ನಾನ ಮಾಡುವ ಮೂಲಕ ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಕಮಲಕರ ಶೆಟ್ಟಿ ಹೊಸನಗರ ತಾಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನ ರೂಪದಲ್ಲಿ ಸಗಣಿ ಹಾಗೂ ಗೋಮೂತ್ರದಲ್ಲಿ ಸ್ನಾನ ಮಾಡಿ ಜಿಲ್ಲಾಡಳಿತದ ವಿರುದ್ದ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. …
Read More »ತಾಕತ್ತಿದ್ದರೆ ಆರ್ಎಸ್ಎಸ್, ಬಜರಂಗದಳ ನಿಷೇಧಿಸಲಿ: ಬೊಮ್ಮಾಯಿ
ಬೆಂಗಳೂರು: ಆರ್ಎಸ್ಎಸ್ ಮತ್ತು ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೂ ಆರ್ಎಸ್ಎಸ್ ಅನ್ನು ನಿಷೇಧ ಮಾಡುವ ಕೆಲಸ ನಡೆದಿತ್ತು. ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಸಂಘ ಪರಿವಾರವನ್ನು ನಿಷೇಧ ಮಾಡುವ ಶಕ್ತಿ ಯಾರಿಗೂ ಇಲ್ಲ. ಅವರಿಗೆ ತಾಕತ್ತಿದ್ದರೆ ಆರ್ಎಸ್ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮಾಜಿ ಸಿಎಂ ಬಸವರಾಜ …
Read More »ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್
ಬೆಂಗಳೂರು: ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್ ನೀಡಿದೆ. ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಚ್ಚರವಹಿಸಿ, ಶಾಲೆಗಳು ಆರಂಭವಾಗುವ ಮೊದಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಶಿಕ್ಷಕರಿಗೆ ಆದೇಶ ನೀಡಿದೆ. ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಕಾಂಪೌಂಡ್, ಶೌಚಾಲಯಗಳನ್ನು ಪರಿಶಿಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತರಬೇಕು. …
Read More »ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ : ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಚಿವರ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಹೇಳಿದ್ದೇನೆ. ಕನಿಷ್ಠ ಹತ್ತು ಜನರಿಗೆ ಅವಕಾಶ ಕೊಡಬೇಕು ಎಂದಿದ್ದೇನೆ. ಅದರಂತೆ ಈಬಾರಿ ಹೊಸಬರಿಗೂ ಅವಕಾಶ ಸಿಗಲಿದೆ ಎಂದರು. ಯಾರೆಲ್ಲ …
Read More »ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು. ಸೋನಿಯಾ ಗಾಂಧಿಯವರು ಶಿಮ್ಲಾ ಪ್ರವಾಸದಿಂದ ನಿನ್ನೆಯಷ್ಟೇ ದೆಹಲಿಗೆ ವಾಪಸ್ ಆಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು …
Read More »ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯ
ರಾಮನಗರ: ವಿಧಾನಸಭಾ ಚುನಾವಣೆ ವೇಳೆ ಮತದಾರರ ಮನವೊಲಿಕೆಗೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕೂನಮುದ್ದನಹಳ್ಳಿಯಲ್ಲಿ ನಡೆದಿದೆ. ಬಾಲಕಿ ಮಹಾಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾಳೆ. ಚುನಾವಣೆಯ ವೇಳೆ ನೀಡಿದ್ದ ಕುಕ್ಕರ್ ನಿಂದ ಮೊದಲ ಬಾರಿಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಕುಕ್ಕರ್ ಸಿಡಿದಿದ್ದು, ಬಾಲಕಿಯ ಮುಖ ಸೇರಿದಂತೆ ಹಲವೆಡೆ ಗಾಯಗಳಾಗಿವೆ. ಗಾಯಾಳು ಬಾಲಕಿಯನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ …
Read More »ವಿಧಾನಸಭೆ ಸೋಲಿನ ಶಾಕ್ನಿಂದ ಇನ್ನೂ ಹೊರಬಾರದ ಬಿಜೆಪಿ: ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕರ ನೇಮಕ ವಿಳಂಬ
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲಿನ ಆಘಾತದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಇನ್ನೂ ಹೊರಬರಲು ಸಾಧ್ಯವಾಗಿಲ್ಲ. ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ವಾರಗಳಾಗುತ್ತಿದೆ. ಹೀಗಿದ್ರೂ ಪಕ್ಷದ ಮುಖಂಡರಲ್ಲಿ ಸೋಲಿನ ಛಾಯೆ ಮರೆಯಾಗಿಲ್ಲ. ಚುನಾವಣೆಯಲ್ಲಿ ಆಡಳಿತ ಪಕ್ಷವಾಗಿದ್ದ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಜನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆದಿದೆ. …
Read More »ತಾಳಗುಪ್ಪ- ಬೆಂಗಳೂರು ರೈಲಿನ ಇಂಜಿನ್-ಬೋಗಿಗಳ ಸಂಪರ್ಕ ಕಡಿತ; ತಡವಾಗಿ ಸಂಚಾರ
ಶಿವಮೊಗ್ಗ: ತಾಳಗುಪ್ಪ- ಬೆಂಗಳೂರು ಸೂಪರ್ ಫಾಸ್ಟ್ ರೈಲಿನ ಇಂಜಿನ್ ಹಾಗೂ ಬೋಗಿಗಳ ನಡುವೆ ಸಂಪರ್ಕ ತಪ್ಪಿದ್ದು ತಡವಾಗಿ ಸಂಚರಿಸಿದೆ. ರೈಲು ಇಂದು ಬೆಳಗ್ಗೆ 7.15 ಕ್ಕೆ ಶಿವಮೊಗ್ಗ ನಿಲ್ದಾಣ ಬಿಟ್ಟಿತ್ತು. ಭದ್ರಾವತಿಗೆ ಬೆಳಗ್ಗೆ 7:40 ರ ಸುಮಾರಿಗೆ ತಲುಪಬೇಕಿತ್ತು. ಭದ್ರಾವತಿ ಪಟ್ಟಣ ಸಮೀಪದ ಬಿಳಕಿ ಕ್ರಾಸ್ ಬಳಿ ನಿಧಾನವಾಗಿ ಚಲಿಸುತ್ತಾ ನಿಂತು ಬಿಟ್ಟಿದೆ. ಪ್ರಯಾಣಿಕರು ಏನಾಯಿತು ಎಂದು ನೋಡುವಷ್ಟರಲ್ಲಿ ಇಂಜಿನ್ ಹಾಗೂ ಬೋಗಿಗಳ ನಡುವಿನ ಸಂಪರ್ಕ ತಪ್ಪಿದ್ದು ಗೋಚರಿಸಿದೆ. ಇದನ್ನರಿತ ಲೋಕೊ …
Read More »ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಗೆ ಯುವಕನೋರ್ವ ಬಲಿಯಾಗಿದ್ದಾನೆ.
ಮಂಡ್ಯ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬೆಟ್ಟಿಂಗ್ ವಿಚಾರದಲ್ಲಿ ಹಣಕ್ಕಾಗಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಚಿಕ್ಕರಸಿನಕೆರೆ ಗ್ರಾಮದ ನಿವಾಸಿ ಪುನೀತ್ (25) ಕೊಲೆಯಾದ ದುರ್ದೈವಿಯಾಗಿದ್ದು, ಈತ ಎಳನೀರು ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಐಪಿಎಲ್ ಬೆಟ್ಟಿಂಗ್ ಹಣ ಪಡೆಯಲೆಂದು ಬುಧವಾರ ಪುನೀತ್ ತನ್ನ ಕೆಲ ಸ್ನೇಹಿತರೊಂದಿಗೆ ಹುಲಿಗೆರೆಪುರ ಗ್ರಾಮಕ್ಕೆ ತೆರಳಿದ್ದ. ಆದರೆ, ಈ ಸಂದರ್ಭದಲ್ಲಿ ಸೌಮ್ಯ ಬಾರ್ …
Read More »