ಕೃಷಿ ಚಟುವಟಿಕೆಗಾಗಿ ಸಾಲ ಮಾಡಿ ಅದನ್ನು ತೀರಿಸಲಾಗದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಇರುವ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಕಲ್ಲಪ್ಪ ಕುರಗುಂದ (55) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು.ಕೃಷಿ ಚಟುವಟಿಕೆಗಾಗಿ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದ. ಅಲ್ಲದೇ ತನಗಿದ್ದ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್‌ನಲ್ಲಿ ಹಾಕಿಕೊಂಡಿದ್ದ. ಮಳೆಯಾಗದ ಕಾರಣ ಕೃಷಿ ಸಾಲ ತೀರಿಸಲಾಗದೇ …
Read More »14 ದಿನ ಜೈನಮುನಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ
ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಸಿಪಿಐ ಆರ್.ಆರ್.ಪಾಟೀಲ್ ಅವರ ತಂಡ ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದಿದೆ. ಆರೋಪಿಗಳ ಆರೋಗ್ಯವನ್ನು ಚಿಕ್ಕೋಡಿ ತಾಲೂಕಾ ಆಸ್ಪತ್ರೆಯಲ್ಲಿ ಪರೀಕ್ಷಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಲಾಗಿದೆ. ಜುಲೈ 5 ರಂದು ಇಡೀ ರಾಜ್ಯವಷ್ಟೇ ಅಲ್ಲ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಜೈನ ಮುನಿ …
Read More »ಮುದ್ದೆ-ಸಾಂಬಾರ್ ಗೆ ರೂ.92 ಊಟದ ಬಿಲ್ ನೋಡಿ ಶಾಕ್
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿನ ಜನರಲ್ ಆಸ್ಪತ್ರೆಯ ಒಳರೋಗಿಗಳಿಗೆ ಕೊಡುವ ಒಂದು ಮುದ್ದೆ ಸಾಂಬಾರ್ ಊಟಕ್ಕೆ 92 ರೂಪಾಯಿ ದುಬಾರಿ ವೆಚ್ಚ ತಿಳಿದು ಜಿಲ್ಲಾಧಿಕಾರಿ ಡಾ ಕುಮಾರ್ ಅವರು ಶಾಕ್ ಆಗಿದ್ದಾರೆ. ಅಲ್ಲದೇ ದುಬಾರಿ ಬೆಲೆಯ ಬಿಲ್ ಕಂಡು ಅಚ್ಚರಿಯಾದ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಬಿಸಿ ಮುಟ್ಟಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ, ನಾಗಮಂಗಲ ಪಟ್ಟಣದ ಜನರಲ್ ಆಸ್ಪತ್ರೆಗೆ ದಿಢೀರ್ ಜಿಲ್ಲಾಧಿಕಾರಿ ಡಾ ಕುಮಾರ್ ನೀಡಿದ್ದರು. ಆಸ್ಪತ್ರೆಯನ್ನು ಪರಿಶೀಲಿಸಿದ ಅವರು, ಆಸ್ಪತ್ರೆಯ …
Read More »ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ
ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (೨೬) ಎಂಬಾತನೇ ಸಾವನ್ನಪ್ಪಿದ್ದಾನೆ. ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ ಗುಂಪೊಂದು ಬರ್ಬರವಾಗಿ ಚಾಕು ಇರಿತ ಮಾಡಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಖಾದರಸಾಬ ಔದರಿಯನ್ನು …
Read More »ವಿಧಾನಸಭೆ ಕಲಾಪದಲ್ಲಿ ನೀರಾವರಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ
ಬೆಂಗಳೂರು: ತೀರ್ಥಹಳ್ಳಿಯಲ್ಲಿ 70 ಕಾಮಗಾರಿ ಆಗಿದ್ದು, ಹೆಚ್ಚಿನವು ಪ್ರಗತಿಯಲ್ಲಿವೆ. ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜ್ ತಿಳಿಸಿದರು. ಆರಗ ಜ್ಞಾನೇಂದ್ರ ಸಣ್ಣ ನೀರಾವರಿ ಸಚಿವರಿಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸದ್ಯ 26 ಕಾಮಗಾರಿಗಳು ನಡೆಯುತ್ತಿವೆ. ಅದನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಗುತ್ತಿಗೆದಾರರಿಗೆ ಸಮರ್ಪಕವಾಗಿ ಆದ್ಯತೆ ಮೇರೆಗೆ ಹಣ ಸಂದಾಯ ಮಾಡುತ್ತಿದ್ದೇವೆ. ಹಣಕಾಸು ವ್ಯವಸ್ಥೆ ಆಗುತ್ತಿದ್ದಂತೆ ಸಂದಾಯ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಕೆಲಸ ವಿಳಂಬ ಆಗುವುದಿಲ್ಲ. …
Read More »ರಾಜಮಾರ್ಗ ಹಿಡಿದ ಬಿಜೆಪಿ ಸೋತಿತು,
ಬೆಂಗಳೂರು: ಬಿಜೆಪಿ ರಾಜಮಾರ್ಗದ ಮೂಲಕ ಚುನಾವಣೆ ಎದುರಿಸಿದರೂ ಪರಾಜಿತವಾಗಬೇಕಾಯಿತು. ಆದರೆ ರಾಜಮಾರ್ಗ ಬಿಟ್ಟು ವಾಮ ಮಾರ್ಗ ಹಿಡಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಗ್ಯಾರಂಟಿ ವಿಚಾರದಲ್ಲಿ ಸಹಿ ಮಾಡಿ ಜನರಿಗೆ ಕಾರ್ಡ್ ಹಂಚಿದ್ದಿರಿ. ಈಗ ಷರತ್ತಿನ ಕಾರಣ ಹೇಳಿ ವಂಚಿಸುತ್ತಿದ್ದೀರಾ ಎಂದು ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕಾಂಗ್ರೆಸ್ ಸದಸ್ಯ ಯು ಬಿ ವೆಂಕಟೇಶ್ ದಿಗ್ವಿಜಯ ಮಾಡಿ …
Read More »ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕೃಷಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆ ರದ್ದು ಕುರಿತು ಮಾಧ್ಯಮಗೋಷ್ಟಿ
ದಾವಣಗೆರೆ: ಸಿಎಂ ಸಿದ್ದರಾಮಯ್ಯನವರು ಕೂಡು ಕೃಷಿ ಕಾಯ್ದೆ ವಾಪಸ್ ಪಡೆಯಲು ಚರ್ಚೆ ಮಾಡಿದ್ದರು. ಅವರ ಚುನಾವಣ ಪ್ರಣಾಳಿಕೆಯಲ್ಲೂ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಲಾಗಿತ್ತು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆ ಹಾಗು ಭೂಸುಧಾರಣಾ ಕಾಯ್ದೆ ಅತ್ಯಂತ ಅಪಾಯಕಾರಿ. ಅದನ್ನು ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯನವರು ಏಕೆ ಸದನದಲ್ಲಿ ಮುಂದಾಗಲಿಲ್ಲ, ರದ್ದುಪಡಿಸಲು ಈಗಾಗಲೇ ನಾನು ಸಿಎಂ ಸಿದ್ದರಾಮಯ್ಯ ಅವರನ್ನು …
Read More »ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಲಡಾಕ್ ಹಾಗು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ
ನವದೆಹಲಿ : ಉತ್ತರ ಭಾರತದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇದುವರೆಗೂ ಸುಮಾರು 39ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ, ಭೂ ಕುಸಿತದಿಂದ ಅಪಾರ ಹಾನಿ ಉಂಟಾಗಿದೆ. ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶದಲ್ಲಿ ಸೇರಿದಂತೆ ವಿವಿಧೆಡೆ ಭಾರತೀಯ ಸೇನೆ ಮತ್ತು ಎನ್ಡಿಆರ್ಎಫ್ ತಂಡಗಳು ಭರದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ 2 ದಿನಗಳಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಒಟ್ಟು 9 …
Read More »ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು
ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಸದಾಶಿವನಗರದ ಅರಮನೆ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಕೋರ ಯಾಸರ್ (26) ಎಂಬಾತನ ಕಾಲಿಗೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುಲ್ತಾನ್ ಪಾಳ್ಯದ ಭುವನೇಶ್ವರಿ ನಗರದ ನಿವಾಸಿಯಾಗಿರುವ ಈತನ ವಿರುದ್ಧ ಸುಲಿಗೆ, ರಾಬರಿಗಳಂತಹ 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಂದು ಬೆಳಗ್ಗೆ ಕಾರ್ಯಾಚರಣೆಯಲ್ಲಿ ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಷಾದ್ರಿಪುರಂ …
Read More »ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ
ಇಂದು ಜುಲೈ 11. ವಿಶ್ವ ಜನಸಂಖ್ಯಾ ದಿನ. ಹೆಚ್ಚುತ್ತಿರುವ ಜನಸಂಖ್ಯೆಯ ಕುರಿತು ಅರಿವು ಮೂಡಿಸುವುದು ಈ ದಿನದ ಗುರಿ. ಅಭಿವೃದ್ಧಿಯ ಪಥದಲ್ಲಿ ವೇಗವಾಗಿ ಸಾಗುತ್ತಿರುವ ಭಾರತ ಜನಸಂಖ್ಯೆಯಲ್ಲಿ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ. ಪ್ರಸ್ತುತ ದೇಶದಜನಸಂಖ್ಯೆ ವಿಶ್ವಸಂಸ್ಥೆಯ ದತ್ತಾಂಶದ ವರ್ಲ್ಡ್‌ಮೀಟರ್ ಪ್ರಕಾರ 1.4 ಶತಕೋಟಿ. ಕೇವಲ ಒಂದು ರಾಷ್ಟ್ರ ಇಷ್ಟರಮಟ್ಟಿಗೆ ಜನಸಂಖ್ಯೆ ಹೊಂದಿದೆ ಎಂದಾದರೆ ವಿಶ್ವದ ಜನಸಂಖ್ಯೆ ಎಷ್ಟು ಗೊತ್ತೇ? ಪ್ರಪಂಚದಲ್ಲಿ ಒಟ್ಟು 195 ದೇಶಗಳು ವಿಶ್ವಸಂಸ್ಥೆಯ ಮಾನ್ಯತೆ ಪಡೆದಿವೆ. 1985ರಲ್ಲಿ …
Read More »
Laxmi News 24×7