ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ ಸದಸ್ಯರ ಪದಗ್ರಹಣ ಪ್ರಯುಕ್ತ ಮೂರು ದಿನಗಳ ಅಧಿವೇಶನ ಕರೆದಿರುವ ಸಿಎಂ ಕಡೆಯ ದಿನ ಬೆಳಗ್ಗೆ ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334 ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ …
Read More »ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣ ಜಪ್ತಿ
ಹುಬ್ಬಳ್ಳಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣವನ್ನು ನರಗುಂದ ಪೊಲೀಸರು ಜಪ್ತಿ ಮಾಡಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ಹಣವನ್ನು ನರಗುಂದ ಪಟ್ಟಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಶಿವಬಸವಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.
Read More »ರಾಜ್ಯ ವಿಧಾನಸಭಾ ಅಧಿವೇಶನ: ಸಿಎಂ. ಡಿಸಿಎಂ ಸೇರಿ ನೂತನ ಸಚಿವರು ಹಾಗೂ ಶಾಸಕರ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಸೋಮವಾರದಿಂದ ಬುಧವಾರದವರೆಗೆ (ಮೇ 22ರಿಂದ ಮೇ 24) ವಿಧಾನಸಭೆ ಅಧಿವೇಶನ ನಡೆಯಲಿದ್ದು, ಇಂದು ಬೆಳಗ್ಗೆ 11.15ರ ಹೊತ್ತಿಗೆ ಅಧಿವೇಶನ ಆರಂಭವಾಗಿದೆ. ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ …
Read More »ಗಂಗಾವತಿಯಲ್ಲಿ ಹನಿಟ್ರ್ಯಾಪ್ಗೆ ಒಪ್ಪದ ಮಂಗಳಮುಖಿಯರ ಮೇಲೆ ಹಲ್ಲೆ
ಗಂಗಾವತಿ (ಕೊಪ್ಪಳ): ಆರ್ಥಿಕವಾಗಿರುವ ಸ್ಥಿತಿವಂತರನ್ನು ಹನಿಟ್ರ್ಯಾಪ್ಗೆ ಕೆಡವಲು ಸಂಚು ರೂಪಿಸಿದ ಯುವಕರ ತಂಡವೊಂದು ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆ ಅವರ ಮೇಲೆ ಯುವಕರ ತಂಡ ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಯುವಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವವರನ್ನು ಗಾಂಧಿ ವೃತ್ತದ ನಿವಾಸಿಗಳಾದ ಅನುಶ್ರೀ, ರತ್ನಾ ಅಲಿಯಾಸ್ ರತಿ ಮತ್ತು ಸುಕನ್ಯಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ …
Read More »ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಬಳ್ಳಾರಿಯಲ್ಲಿ ಲಾರಿ ಹಾಗು ಸರ್ಕಾರಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್-ಲಾರಿ ಅಪಘಾತಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.
Read More »16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭ
ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ನೂತನ ಶಾಸಕರ ಪ್ರಮಾಣವಚನ, ಸ್ಪೀಕರ್ ಆಯ್ಕೆ ನಡೆಯಲಿದೆ. ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಣೆಯಲ್ಲಿ ಅಧಿವೇಶನ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವರುಣಾ ಕ್ಷೇತ್ರದ ಶಾಸಕರಾದ ಸಿಎಂ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನಕಪುರದ ಶಾಸಕರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾದರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ದೇವನಹಳ್ಳಿ …
Read More »ರಾತ್ರೋರಾತ್ರಿ ಫೀಲ್ಡ್ಗೆ ಇಳಿದ ಡಿಸಿಎಂ..! ಬಿಬಿಎಂಪಿ ವಿರುದ್ಧ ಕೇಸ್ ಬುಕ್..!
ಬೆಂಗಳೂರು ನಗರದಲ್ಲಿ ನಿನ್ನೆ ಸುರಿದ ಮಹಾಮಳೆಗೆ 22 ವರ್ಷದ ಯುವತಿ ಭಾನುರೇಖಾ ಬಲಿಯಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಇದೇ ರೀತಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿನ್ನೆ ಕೆಲವು ಗಂಟೆಗಳ ಕಾಲ ಸುರಿದ ಮಳೆಯ ಪ್ರಮಾಣ ಅತ್ಯಧಿಕವಾಗಿದೆ. ಬೆಂಗಳೂರು ನಗರದಲ್ಲಿ 30 ಮಿ.ಮೀ ಗಿಂತ ಹೆಚ್ಚಿನ ಮಳೆ ಸುರಿದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 8.6 ಮಿ.ಮೀ. HAL ಏರ್ಪೋರ್ಟ್ನಲ್ಲಿ 25.1 …
Read More »ಮಳೆ ಬಂದರೆ ಜನರು ಸಾಯಲೇಬೇಕೆ? H.D.K.
ಬೆಂಗಳೂರು : ನಗರದಲ್ಲಿ ಇಂದು ಸುರಿದ ಭಾರಿ ಮಳೆಯಿಂದ ಕೆ. ಆರ್. ವೃತ್ತದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು …
Read More »ಹಾವೇರಿಯ ಕಾಂಗ್ರೆಸ್ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಲಾಬಿ
ಹಾವೇರಿ : ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು 8 ಕ್ಯಾಬಿನೆಟ್ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಜಿಲ್ಲೆಯ ಬ್ಯಾಡಗಿ ಕ್ಷೇತ್ರದಿಂದ ಆಯ್ಕೆಯಾದ ಬಸವರಾಜ್ ಶಿವಣ್ಣನವರ್ ಮತ್ತು ಹಾವೇರಿ ಕ್ಷೇತ್ರದಿಂದ ಆಯ್ಕೆಯಾದ ರುದ್ರಪ್ಪ ಲಮಾಣಿ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಬಸವರಾಜ್ ಶಿವಣ್ಣನವರ್ …
Read More »ಸಂಚಾರ ದಟ್ಟಣೆ: ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ಮಹಾನಗರದ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ತಮಗೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ. …
Read More »