Breaking News

ಹಿಂದೆ ಸ್ಪೀಕರ್​ ಆಗಿದ್ದವರಿಗೆಲ್ಲ ಸೋಲು.. ಇಲ್ಲಿದೆ ವಿಧಾನಸಭಾಧ್ಯಕ್ಷರಾಗಿ ಬಳಿಕ ಸೋತವರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿನ್ನೆ ಅಸ್ತಿತ್ವಕ್ಕೆ ಬಂದಿದೆ. ನಾಳೆಯಿಂದ​ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಹಂಗಾಮಿ ಸ್ಪೀಕರ್​ ಆಗಿ ಹಿರಿಯ ಶಾಸಕ ವಿ. ಆರ್​. ದೇಶಪಾಂಡೆ ಅವರನ್ನು ನೇಮಿಸಲಾಗಿದೆ. ಆದರೆ, ಹೊಸ ಮತ್ತು ಕಾಯಂ ಸ್ಪೀಕರ್​ ಸ್ಥಾನದ ಜವಾಬ್ದಾರಿಯನ್ನು ಹಿರಿಯ ಕಾಂಗ್ರೆಸ್ ನಾಯಕರು ತೆಗೆದುಕೊಳ್ಳಲು ಸಿದ್ಧರಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಕಾರಣ ಆ ಹುದ್ದೆಗೆ ಅಂಟಿಗೊಂಡಿರುವ ಭಯ ಎನ್ನಲಾಗುತ್ತಿದೆ. ಹೌದು, 2004ರಿಂದ ಸಾಂವಿಧಾನಿಕ, ಪ್ರತಿಷ್ಠಿತ ಹುದ್ದೆಯಲ್ಲಿ …

Read More »

ಅಧಿಕಾರಕ್ಕಾಗಿ ನನ್ನ ಮನೆ, ಸಿದ್ದರಾಮಯ್ಯರ ಮನೆ ಎಂದು ಸುತ್ತಬೇಡಿ

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಾತ್ಯತೀತ ಜನತಾ ದಳ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್​ ಪಕ್ಷ ಭರ್ಜರಿ ಬಹುಮತ ಪಡೆಯುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿದಿದೆ. ಮೇ 20 ರಂದು ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್​ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ 8 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ಇದರ …

Read More »

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವು ಅವಾಂತರ ಸೃಷ್ಟಿ

ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ‌ಹಿನ್ನೆಲೆಯಲ್ಲಿ ರಾಜಧಾನಿಯ ಹಲವು ಭಾಗಗಗಲ್ಲಿ ಅಲ್ಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಸುಮಾರು 3 ಗಂಟೆಯಿಂದ ಪ್ರಾರಂಭವಾದ ಮಳೆ ಸುಮಾರು ಒಂದು ಗಂಟೆ ಕಾಲ ಧಾರಾಕಾರವಾಗಿ ಸುರಿದಿದೆ. ಕಾರ್ಮೋಡ ಕವಿದು, ಗುಡುಗು- ಸಿಡಿಲು ಸಹಿತ ಭರ್ಜರಿಯಾಗಿ ಮಳೆ ಸುರಿದಿದೆ. ಈ ಮಳೆಯಿಂದಾಗಿ ನಗರಸ ವಿಧಾನಸೌಧ, ಆನಂದ್ ರಾವ್, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆಆರ್ ಸರ್ಕಲ್, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ಜಯನಗರ, …

Read More »

ನಾಳೆಯಿಂದ 3 ದಿನ ಕರ್ನಾಟಕ ವಿಧಾನಸಭೆ ಅಧಿವೇಶನ

ಬೆಂಗಳೂರು: ಮೇ 22 ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಈ ಸಮಯದಲ್ಲಿ ಹೊಸದಾಗಿ ಚುನಾಯಿತ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ನೂತನ ಸಭಾಪತಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರಿಯಾಗಿ ಒಂದು ವಾರದ ನಂತರ ಸಿದ್ದರಾಮಯ್ಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ …

Read More »

ಎನ್‌ಕೌಂಟರ್ ಸ್ಪೆಷಲಿಸ್ಟ್’ ದಯಾ ನಾಯಕ್ ಈಗ ಮುಂಬೈ ಕ್ರೈಂ ಬ್ರ್ಯಾಂಚ್‌ ಇನ್ಸ್‌ಪೆಕ್ಟರ್!

ಮುಂಬೈ: ‘ಎನ್‌ಕೌಂಟರ್ ಸ್ಪೆಷಲಿಸ್ಟ್ ‘ ಎಂದೇ ಪ್ರಖ್ಯಾತರಾದ ಖಡಕ್‌ ಪೊಲೀಸ್ ಅಧಿಕಾರಿ, ಕರ್ನಾಟಕ ಮೂಲದವರಾದ ದಯಾ ನಾಯಕ್ ಅವರು ಶನಿವಾರ ಮುಂಬೈ ಪೊಲೀಸ್‌ ಅಪರಾಧ ವಿಭಾಗದ 9 ನೇ ಘಟಕದ ಇನ್ಸ್​ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮೂರು ವರ್ಷಗಳ ಅವಧಿ ಪೂರ್ಣಗೊಳಿಸಿದ್ದ ನಾಯಕ್ ಅವರನ್ನು ಮಾರ್ಚ್ 28 ರಂದು ಎಟಿಎಸ್​ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿತ್ತು. ಈ ಕುರಿತು ಟ್ವೀಟ್​ …

Read More »

ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಅಲೋಕ್ ಮೋಹನ್ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಶನಿವಾರ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆಯಾಗಿ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸಿ ಆದೇಶ ಹೊರಡಿಸಿದೆ. ಸೇವಾ ಹಿರಿತನದ ಆಧಾರದ ಮೇಲೆ 87ನೇ ಬ್ಯಾಚ್‌ನ ಅಧಿಕಾರಿ ಹಾಗೂ ಪ್ರಸ್ತುತ ರಾಜ್ಯ ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿರುವ ಅಲೋಕ್ ಮೋಹನ್​ ಅವರನ್ನು ಮುಂದಿನ …

Read More »

ಘಟಪ್ರಭಾ ಎಡದಂಡೆ ಬಲದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ರೈತರ ಆಗ್ರಹ

ಬೆಳಗಾವಿ: ಬಿಸಿಲಿನ ಬೇಗೆಯಿಂದ ಜನ, ಜಾನುವಾರುಗಳು ನೀರಿಲ್ಲದೇ ತತ್ತರಿಸಿ ಹೋಗಿದ್ದು ತಕ್ಷಣ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರ ಕಚೇರಿ ಮತ್ತು ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರೈತರು, ಗೋಕಾಕ್​, ರಾಯಬಾಗ, ಜಮಖಂಡಿ, ಮೂಡಲಗಿ ತಾಲೂಕಿನ ವಿವಿಧ ಗ್ರಾಮಗಳ ರೈತರು ಶೀಘ್ರವೇ …

Read More »

2,000 ರೂ. ಮುಖಬೆಲೆಯ ನೋಟು ಹಿಂಪಡೆದ ಆರ್​ಬಿಐ ನಿರ್ಧಾರದ ಹಿಂದಿನ ಲೆಕ್ಕಾಚಾರಗಳಿವು..

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಅಚ್ಚರಿಯ ನಿರ್ಧಾರವೊಂದನ್ನು ಕೈಗೊಂಡಿದೆ. ಚಲಾವಣೆಯಲ್ಲಿರುವ 2,000 ರೂಪಾಯಿ ನೋಟುಗಳನ್ನು ಹಿಂಪಡೆಯಲು ಆರ್​ಬಿಐ ನಿರ್ಧರಿಸಿದೆ. ನಾಲ್ಕು ತಿಂಗಳ ಅವಧಿಯಲ್ಲಿ ಈ 2,000 ಮುಖಬೆಲೆಯ ನೋಟುಗಳನ್ನು ಠೇವಣಿ ಮಾಡಲು ಸಾರ್ವಜನಿಕರಿಗೆ ಸೂಚಿಸಿದೆ. ಷೇರುಪೇಟೆಗಳ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದನ್ನು ತಪ್ಪಿಸಲು ಆರ್​ಬಿಐ ಶುಕ್ರವಾರ ಸಂಜೆ ಪ್ರಕಟಿಸಿದ ನಿರ್ಧಾರವು ಅನೇಕ ಜನರನ್ನು ಆಶ್ಚರ್ಯಗೊಳಿಸಿತು. ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷವು 2016ರಲ್ಲಿ ನೋಟು ಅಮಾನ್ಯೀಕರಣ ಅಥವಾ ನೋಟು ನಿಷೇಧದ ನಿರ್ಧಾರಕ್ಕೆ …

Read More »

ರಾಜ್ಯದ ನೂತನಮಂತ್ರಿಯಾಗಿಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನಮಂತ್ರಿಯಾಗಿ ಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.   ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. 

Read More »

ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Read More »