Breaking News

ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ: ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಎರಡು ಮೂರು ದಿನಗಳಲ್ಲಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಿದ್ದು, ಸಭೆಯಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಇದೊಂದು ಸೋಲಿನಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ. ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಆರ್. ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, …

Read More »

ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಘಟಾನುಘಟಿ ನಾಯಕರಿಗೆ ಆಹ್ವಾನಿಸಿದ ಕಾಂಗ್ರೆಸ್​.

ನವದೆಹಲಿ: ಮೇ 20ರಂದು ನಡೆಯಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಗುರುವಾರ ಆಹ್ವಾನಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.   ಘಟಾನುಘಟಿ ನಾಯಕರು ಯಾರು?: ಇತ್ತೀಚೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ …

Read More »

ಕನಿಷ್ಠ 3 ಸಚಿವ ಸ್ಥಾನ ಜಿಲ್ಲೆಗೆ ನೀಡಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯಿಂದ ಮೂವರು ಸಚಿವರನ್ನು ಮಾಡಬೇಕು ಎಂದು ಕೇಳಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ಕಾಂಗ್ರೆಸ್ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಹಾಗೂ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಹೇಳಿದ್ದೇನು?!ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಮುಗಿದಿದ್ದು, ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಸ್ತಾವವನ್ನು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಅವರೇ ಮಂಡಿಸಿದರು. ಇದಕ್ಕೆ ಶಾಸಕರು ಸರ್ವಾನುಮತದ ಅನುಮೋದನೆ ನೀಡಿದರು. …

Read More »

ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ: ಕುಮಾರಸ್ವಾಮಿ ಹೊಸ ಬಾಂಬ್

ರಾಮನಗರ: ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆಗಳು ಆಗಲಿವೆ, ಕಾದು ನೋಡಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ಎಚ್‌ಡಿಕೆ ಕಾಣಿಸಿಕೊಂಡಿದ್ದಾರೆ. ತಮ್ಮ ಸ್ವಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಭೆ ನಡೆಸಿ ಮಾತನಾಡಿದ ಅವರು, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು …

Read More »

ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

ಯಲ್ಲಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಬಳಗಾರ ಕ್ರಾಸ್ ಬಳಿ ಮದ್ಯ ಪ್ಯಾಕೆಟ್ ಗಳನ್ನು ತುಂಬಿದ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ ಕಂದಕದಲ್ಲಿ ಪಲ್ಟಿಯಾಗಿದೆ. ಕಲಬುರ್ಗಿಯಿಂದ ಉಡುಪಿಗೆ ಸಾರಾಯಿ ಪಾಕೇಟ್ ತುಂಬಿದ್ದ ಲಾರಿ ಆರತಿಬೈಲ್ ಘಟ್ಟದ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಹಳ್ಳದ ಪಕ್ಕದ ಕಂದಕದಲ್ಲಿ ಬಿದ್ದು ಮರಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಲಾರಿ ಚಾಲಕನಿಗೆ ಅಲ್ಪಪ್ರಮಾಣದ ಗಾಯವಾಗಿದೆ. ನಿರ್ವಾಹಕ ಲಾರಿಯಲ್ಲಿ ಸಿಕ್ಕಿ ಒದ್ದಾಡಿದ್ದು,ತಾಸು ಗಟ್ಟಲೆ ಒದ್ದಾಡಿ ಹೊರತೆಗೆಯಲಾಗಿದೆ.ಆತನ ಕೈಕಾಲು ಮುರಿದಿದ್ದು,ಗಂಭೀರ ಗಾಯಗೊಂಡಿದ್ದಾನೆ.ಗಾಯಾಳುಗಳನ್ನು …

Read More »

ದಲಿತರಿಗೆ ಡಿಸಿಎಂ ಹುದ್ದೆ ನೀಡದಿದ್ದರೆ ಪಕ್ಷಕ್ಕೆ ತೊಂದರೆಯಾಗಬಹುದು: ಪರಮೇಶ್ವರ್

ಬೆಂಗಳೂರು: ದಲಿತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡದಿದ್ದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಡಿಸಿಎಂ ಜಿ ಪರಮೇಶ್ವರ ಅವರು ಪಕ್ಷದ ಕೇಂದ್ರ ನಾಯಕತ್ವಕ್ಕೆ ಎಚ್ಚರಿಕೆ ನೀಡಿದ್ದಾರೆ.   ಸಿದ್ದರಾಮಯ್ಯ ಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರ ಏಕೈಕ ಡಿಸಿಎಂ ಎಂದು ಕಾಂಗ್ರೆಸ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಅವರ ಈ ಎಚ್ಚರಿಕೆ ಬಂದಿದೆ. ಡಿಕೆ ಶಿವಕುಮಾರ್ ಅವರೊಬ್ಬರೇ ಡಿಸಿಎಂ ಆಗಬೇಕು ಎಂದು …

Read More »

ಅಂದು ಸ್ಮಶಾನದಲ್ಲಿ ಸತೀಶ್​ ಜಾರಕಿಹೊಳಿ ನುಡಿದಿದ್ದ ಭವಿಷ್ಯ ಈಗ ನಿಜವಾಯ್ತು..!

ಬೆಳಗಾವಿ: ನಮ್ಮ ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020 ರಲ್ಲಿಯೇ ತಾವು ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್‌ ಪ್ಲೇಟ್‌ ಹಾಕಿಸಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿದ್ದ ಸತೀಶ್‌ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದ್ದು, ಈಗ ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸುತ್ತಿದೆ.   ಹೌದು, ಸದಾ ಕಾಲ ಮೌಢ್ಯತೆಗೆ ಸೆಡ್ಡು ಹೊಡೆಯುವ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಿಕೊಂಡು ಬಂದಿರುವ ಸತೀಶ್​ …

Read More »

ಸಿದ್ದರಾಮಯ್ಯಗೆ ಸಿಎಂ ಪಟ್ಟ, ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊರವಜ್ಜ ನುಡಿದ ಕಾರ್ಣಿಕ ನಿಜವಾಯ್ತಾ?

ಹಾವೇರಿ:ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕು ಶ್ರೀಕ್ಷೇತ್ರ ಮೈಲಾರಲಿಂಗೇಶ್ವರನ ಪ್ರಸ್ತುತ ವರ್ಷದ ಕಾರ್ಣಿಕ ನುಡಿ ನಿಜವಾಗಿದೆ. 2023 ರ ಫೆಬ್ರುವರಿಯಲ್ಲಿ ನಡೆದ ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ರಾಮಣ್ಣ ಅಂಬಲಿ ಅಳಿಸಿತು ಕಂಬಳಿ ಬೀಸಿತಲೆ ಪರಾಕ್ ಎಂದು ಕಾರ್ಣಿಕ ನುಡಿದಿದ್ದು ಅದರಂತೆ ಈ ವರ್ಷದ ಮಳೆ ಬೆಳೆ ಮತ್ತು ರಾಜಕೀಯ ವಿಶ್ಲೇಷಣೆ ಮಾಡಲಾಗಿತ್ತು. ಕಾರ್ಣಿಕವನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡಿದ ರಾಜಕೀಯ ಮುಖಂಡರು ಕುರುಬ ಸಂಕೇತವಾದ ಕಂಬಳಿ ಕಾರ್ಣಿಕದಲ್ಲಿ ಬಳಕೆಯಾಗಿದೆ. ಇದರಿಂದ ಈ ಕುರುಬ …

Read More »

91ನೇಹುಟ್ಟುಹಬ್ಬದ ಜನ್ಮದಿನದ ಸಂಭ್ರಮದಲ್ಲಿ ದೇವೇಗೌಡರು

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಹೆಚ್. ಡಿ. ದೇವೇಗೌಡ ಅವರು ಇಂದು ತಮ್ಮ 91 ನೇ ವರ್ಷದ ಹುಟ್ಟುಹಬ್ಬವನ್ನು ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರು ಸೇರಿದಂತೆ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಗೌಡರು ಹುಟ್ಟುಹಬ್ಬ ಆಚರಿಸಿಕೊಂಡರು. ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ …

Read More »

ಬಿಜೆಪಿಯಲ್ಲಿ ಸರ್ಕಾದಲ್ಲಿ ಆದ ಲೂಟಿಯೇ ಈ ಸರ್ಕಾರದಲ್ಲೂ ನಡೆಯಲಿದೆ.:H.D.K.

ರಾಮನಗರ: ಬಿಜೆಪಿಯಲ್ಲಿ ಸರ್ಕಾದಲ್ಲಿ ಆದ ಲೂಟಿಯೇ ಈ ಸರ್ಕಾರದಲ್ಲೂ ನಡೆಯಲಿದೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಮಾಜಿ ಸಿಎಂ ‌ಹೆಚ್​ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯ ಇಲ್ಲ. ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಪ್ರಾಮಾಣಿಕ ಕಾರ್ಯಕರ್ತರ …

Read More »