ಬೆಂಗಳೂರು: ರಾಜ್ಯದಲ್ಲಿ ಬರದ ಛಾಯೆ ಗಾಢವಾಗಿದ್ದು, ಒಂದೆಡೆ ಜಲಾಶಯಗಳ ನೀರಿನ ಮಟ್ಟ ಇಳಿಕೆಯಾಗಿದೆ. ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಇನ್ನೊಂದೆಡೆ ರಾಜ್ಯದ ವಿದ್ಯುತ್ ಬಳಕೆ ತಾರಕ್ಕೇರಿರುವುದು ಇಂಧನ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಬರದ ಕರಿ ನೆರಳು ದಟ್ಟವಾಗಿ ವ್ಯಾಪಿಸಿದೆ. ಮುಂಗಾರು ಮಳೆ ಕೈ ಕೊಟ್ಟಿದೆ. ವಾಡಿಕೆಯಂತೆ ಜುಲೈ ಹಾಗೂ ಆಗಸ್ಟ್ನಲ್ಲಿ ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತೆ. ಆದರೆ, ಈ ಬಾರಿ ವಾಡಿಕೆ ಮಳೆಯೂ ಕೈಕೊಟ್ಟಿದೆ. ಹೀಗಾಗಿ ರಾಜ್ಯದ ಸುಮಾರು 130ಕ್ಕೂ …
Read More »ಆಗಸದಲ್ಲಿ ನಿಂತ ಮಗುವಿನ ಉಸಿರು.. ಬೆಂಗಳೂರು – ದೆಹಲಿ ವಿಮಾನ ತುರ್ತು ಭೂಸ್ಪರ್ಶ.. ಕಂದಮ್ಮನ ಪಾಲಿಗೆ ದೇವರಾದ ವೈದ್ಯರು..
ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರು ನವದೆಹಲಿ ವಿಮಾನವನ್ನು ಭಾನುವಾರ ತಡರಾತ್ರಿ ನಾಗಪುರ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾಗಪುರ, ಮಹಾರಾಷ್ಟ್ರ: ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನವನ್ನು ನಾಗಪುರನಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿತ್ತು. ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸಮಸ್ಯೆ ಇದ್ದು, ಆಕೆಯ ಆರೋಗ್ಯ ಹಠಾತ್ ಹದಗೆಟ್ಟ ಕಾರಣ ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುಬೇಕಾಗಿದೆ …
Read More »ಹೆತ್ತ ಅಮ್ಮನನ್ನೇ ಕೊಂದನಾ ಕುಡುಕ ಮಗ?
ಶಿವಮೊಗ್ಗ: ತಾಯಿಯನ್ನು ಕಣ್ಣಿಗೆ ಕಾಣುವ ದೇವರು ಎಂದು ಕರೆಯುತ್ತಾರೆ. ಆದರೆ, ಇಂತಹ ದೇವರನ್ನೇ ಹೆತ್ತ ಮಗನೊಬ್ಬ ಕೊಂದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಭದ್ರಾವತಿ ಪಟ್ಟಣದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾವಿನಕೆರೆ ಕಾಲೋನಿ ನಿವಾಸಿ ಸುಲೋಚನಮ್ಮ ಮೃತರು. ಆಕೆಯ ಮಗ ಸಂತೋಷ್ ಕೊಲೆ ಆರೋಪಿ. ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿ ಸಂತೋಷ್ ತನ್ನ ತಾಯಿಯನ್ನು ಬಡಿಗೆಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ತೋಟದಲ್ಲಿ ಮಲಗಿ …
Read More »ಕಾರವಾರ: ಮೀನುಗಾರರ ಬಲೆಗೆ ಬಿದ್ದ 48 ಸೆ.ಮೀ ಉದ್ದ, 1.2 ಕೆಜಿ ತೂಕದ ಬಂಗುಡೆ!
ಕಾರವಾರ : ಭಾರತದಲ್ಲಿ ಇದುವರೆಗೆ ಪತ್ತೆಯಾದ ಬಂಗುಡೆ ಮೀನುಗಳಲ್ಲಿ ಅತಿ ದೊಡ್ಡದು ಹಾಗೂ ಉದ್ದವಿರುವ ಬಂಗುಡೆ ಮೀನೊಂದು ಕಾರವಾರದ ಅರಬ್ಬಿ ಸಮುದ್ರದಲ್ಲಿ ಮೀನುಗಾರರ ಬಲೆಗೆ ಬಿದ್ದಿದೆ. ನೋಡಲು ಜನರು ಮುಗಿಬಿದ್ದರು. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಆನಂದು ರಾಮಾ ಹರಿಕಂತ್ರ ಅವರಿಗೆ ಸೇರಿದ, ಎಂ.ಐ. ಇಂಜಿನ್ ಹೊಂದಿದ ಪಾತಿ ದೋಣಿಯ ಬೀಡು ಬಲೆಗೆ ಮೀನು ಬಿದ್ದಿದೆ. ಈ ಬಂಗುಡೆ 48 ಸೆಂ.ಮೀ ಉದ್ದವಿದ್ದು, ಸುಮಾರು 12 ಸೆಂ.ಮೀ ಅಗಲವಿದೆ. 1.2 ಕೆ.ಜಿ …
Read More »ಕೋವಿಡ್ ಅಕ್ರಮ ತನಿಖೆಗೆ ಆಯೋಗ ರಚನೆ ಹಿಂದೆ ದುರುದ್ದೇಶವಿದೆ: ಸುಧಾಕರ್ ಕಿಡಿ
ಬೆಂಗಳೂರು: ಕೋವಿಡ್ ವೇಳೆ ಔಷಧ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ತನಿಖಾ ಆಯೋಗ ರಚನೆ ರಾಜಕೀಯ ಪ್ರೇರಿತವಾಗಿದೆ. ಈ ತನಿಖೆಗೆ ಆದೇಶ ನೀಡಿರುವುದರ ಹಿಂದೆ ದುರುದ್ದೇಶ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ಮಾಜಿ ಸಚಿವ ಡಾ. ಕೆ.ಸುಧಾಕರ್ ಆರೋಪಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ನಿರ್ವಹಣೆ ವೇಳೆ ನಡೆದಿರುವ ಔಷಧ, ಪರಿಕರ ಇತ್ಯಾದಿ ಖರೀದಿ, ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವಿನ ಕುರಿತು …
Read More »ರಾಜ್ಯದೆಲ್ಲೆಡೆ ಟೊಮೆಟೊ ದರಗಳಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡು ಬಂದಿದೆ.
ಬೆಂಗಳೂರು : ಸುಮಾರು ಒಂದೂವರೆ, ಎರಡು ತಿಂಗಳ ಕಾಲ ಕೆ.ಜಿಗೆ 100 ರಿಂದ 150 ರೂಪಾಯಿಯಿದ್ದ ಟೊಮೆಟೊ ಬೆಲೆ ಇದೀಗ 20 ರೂ.ಗೆ ಕುಸಿದಿದೆ. ನಗರದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಬರುತ್ತಿದ್ದು, ದರ ಇಳಿಕೆಯಾಗಿದೆ ಎಂದು ವರ್ತಕರು ತಿಳಿಸಿದ್ದಾರೆ. ಆಂಧ್ರಪ್ರದೇಶದ ಮಾರುಕಟ್ಟೆಯಿಂದ ಯಥೇಚ್ಛವಾಗಿ ಟೊಮೆಟೊ ಪೂರೈಕೆಯಾಗುತ್ತಿದೆ. ಬೆಂಗಳೂರು ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದಿಂದ ಬರುವ ಟೊಮೆಟೊ ಪ್ರಮಾಣವೂ ಹೆಚ್ಚಾಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ನಾಟಿ ಟೊಮೆಟೊ ಬಾಕ್ಸ್ …
Read More »ಗಲ್ಲಿಗೆ ಬದಲು ಜೀವಾವಧಿ: ಅಪರಾಧಿಯ ಶಿಕ್ಷೆ ಬದಲಿಸಿದ ಹೈಕೋರ್ಟ್
ಬೆಂಗಳೂರು : ತನ್ನ ಇಬ್ಬರು ಪತ್ನಿಯರು ಹಾಗೂ ಓರ್ವ ಪುತ್ರಿಯನ್ನು ಕೊಲೆಗೈದು ಕಳೆದ 30 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಲಬುರಗಿ ಜಿಲ್ಲೆಯ ಅಫ್ಜಲ್ಪುರದ ಅಪರಾಧಿ ಸಾಯಿಬಣ್ಣ ಎಂಬಾತನಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಮಾರ್ಪಡಿಸಿರುವ ಹೈಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಅಪರಾಧಿಗೆ 70 ವರ್ಷ ವಯಸ್ಸಾಗಿದೆ ಎಂಬ ಕಾರಣದಿಂದ ಕೋರ್ಟ್ ಶಿಕ್ಷೆಯನ್ನು ಮಾರ್ಪಡಿಸಿತು. ಈ ಆದೇಶದಿಂದ ಆರೋಪಿ ಗಲ್ಲು ಶಿಕ್ಷೆಯಿಂದ ಪಾರಾಗಿದ್ದು, ತನ್ನ ಜೀವ ಇರುವವರೆಗೂ ಜೈಲಿನಲ್ಲಿರಬೇಕಾಗಿದೆ. ತನಗೆ ವಿಧಿಸಿದ್ದ ಜೈಲು …
Read More »ಮಹಾರಾಜ ಟ್ರೋಫಿಯ 2ನೇ ಸೆಮಿಫೈನಲ್ನಲ್ಲಿ ಹಾಲಿ ಚಾಂಪಿಯನ್ ಗುಲ್ಬರ್ಗ ತಂಡಕ್ಕೆ ಸೋಲುಣಿಸಿದ ಮೈಸೂರು ವಾರಿಯರ್ಸ್ ಫೈನಲ್ ತಲುಪಿತು.
ಬೆಂಗಳೂರು: ಕರ್ನಾಟಕ ತೊರೆದು ವಿದರ್ಭ ಕ್ರಿಕೆಟ್ ಸೇರಿರುವ ಬ್ಯಾಟರ್ ಕರುಣ್ ನಾಯರ್ ಅಬ್ಬರದ ಶತಕ ಹಾಗೂ ರವಿಕುಮಾರ್ ಸಮರ್ಥ್ ಅವರ ಅರ್ಧಶತಕವು ಹಾಲಿ ಚಾಂಪಿಯನ್ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಕ್ಕೆ ಸೋಲು ತಂದು ಮಹಾರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಫೈನಲ್ ಟಿಕೆಟ್ ಪಡೆಯುವಂತೆ ಮಾಡಿತು. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ತೀವ್ರ ಹಣಾಹಣಿ ಮಧ್ಯೆ ಗುಲ್ಬರ್ಗಾ 36 ರನ್‌ಗಳಿಂದ ಪರಾಜಯ ಕಂಡಿತು. ಇಂದು (ಮಂಗಳವಾರ) ಹುಬ್ಬಳ್ಳಿ ಟೈಗರ್ಸ್ ಮತ್ತು ಮೈಸೂರು ವಾರಿಯರ್ಸ್ ನಡುವೆ …
Read More »ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್ ಸೇರಿದೆ.
ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್ ಸೇರಿದೆ. ‘ಜೈಲರ್’.. ಸೂಪರ್ ಹಿಟ್ ಸೌತ್ ಸಿನಿಮಾ. ಆಗಸ್ಟ್ 10ರಂದು ಬಿಡುಗಡೆಯಾಗಿ, ಮೂರು ವಾರ ಕಳೆದರೂ ನಾನ್ ಸ್ಟಾಪ್ ಇಲ್ಲದೇ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಕಾಲಿವುಡ್ ಸೂಪರ್ಸ್ಟಾರ್ ರಜನಿಕಾಂತ್ ನಟನೆಯನ್ನು ಕಣ್ತುಂಬಿಕೊಳ್ಳಲು ಜನರು ಥಿಯೇಟರ್ಗೆ ಮುಗಿಬೀಳುತ್ತಿದ್ದಾರೆ. ಈ ಕಾರಣಕ್ಕಾಗಿ ಚಿತ್ರವು ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ರಿಲೀಸ್ ಆದ 18ನೇ ದಿನಕ್ಕೆ 600 ಕೋಟಿ ರೂಪಾಯಿ …
Read More »ರಿಲಯನ್ಸ್ ಮಂಡಳಿಗೆ ಅಂಬಾನಿ ಪುತ್ರರ ನೇಮಕ.. ಕಂಪನಿಯ ಅಧಿಕಾರ ಹಸ್ತಾಂತರಕ್ಕೆ ಉದ್ಯಮಿ ಮುಖೇಶ್ ಸಜ್ಜು?
ಮುಂಬೈ: ಜಿಯೋ ಮೂಲಕ ಎಲ್ಲರ ಮನೆಮಾತಾಗಿರುವ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ತಮ್ಮ ಕಂಪನಿಯ ಅಧಿಕಾರವನ್ನು ತಮ್ಮ ಮಕ್ಕಳ ಕೈಗೆ ನೀಡಲು ಅಂತಿಮ ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷವಷ್ಟೇ ಆಕಾಶ್ ಅಂಬಾನಿಯನ್ನು ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಅಧ್ಯಕ್ಷರಾಗಿ ನೇಮಿಸಿದ್ದರು. ಇದೀಗ ಇನ್ನಿಬ್ಬರು ಮಕ್ಕಳಾದ ಇಶಾ ಮತ್ತು ಅನಂತ್ ಅಂಬಾನಿಯನ್ನೂ ಕಂಪನಿಗೆ ನೇಮಕ ಮಾಡಲಾಗಿದೆ. ಅಂಬಾನಿ ಪುತ್ರರಾದ ಇಶಾ, ಆಕಾಶ್ ಮತ್ತು ಅನಂತ್ ಅಂಬಾನಿ ಅವರನ್ನು ಸೋಮವಾರ ಎನರ್ಜಿ ಟು …
Read More »
Laxmi News 24×7