ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ‘ಕಿಂಗ್ ಮೇಕರ್’ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಬಯಕೆಗೆ ರಾಜ್ಯದ ಮತದಾರ ಪ್ರಭುಗಳು ತಣ್ಣೀರೆರೆಚಿದ್ದಾರೆ. ಈ ಬಾರಿ ಕೂಡ ಅತಂತ್ರ ಫಲಿತಾಂಶ ಬರುತ್ತದೆ ಎಂದು ಕೆಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಅಂತೆಯೇ, ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಜೆಡಿಎಸ್ ಬೆಂಬಲ ಅನಿವಾರ್ಯವಾಗುತ್ತದೆ ಎಂದೇ ಹೇಳಲಾಗುತ್ತಿತ್ತು. ಆದರೆ, ಕಾಂಗ್ರೆಸ್ಗೆ ಸ್ಪಷ್ಟ ಬಹುಮತವನ್ನು ಜನತೆ ನೀಡಿದ್ದಾರೆ. ಇದೇ ವೇಳೆ ಜೆಡಿಎಸ್ಗೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು …
Read More »ಆಪ್ತ ಶಾಸಕರ ಜೊತೆ ಸಿದ್ದರಾಮಯ್ಯ ರಹಸ್ಯ ಸಭೆ
ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಇಂದು ಸಂಜೆ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ. ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ ಡಿ.ಕೆ.ಶಿವಕುಮಾರ್ ಇಂದು ನೊಣವಿನಕರೆಯ ಅಜ್ಜಯ್ಯನ ದರ್ಶನಕ್ಕೆ ತೆರಳಿದ್ದಾರೆ. ದೇವರ ಮೊರೆ ಹೋಗಿರುವ ಅವರು ನಗರ ಬಿಡುತ್ತಿದ್ದಂತೆ, ಮತ್ತೋರ್ವ ಪ್ರಬಲ ಆಕಾಂಕ್ಷಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಶಾಸಕರೊಂದಿಗೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಬೈರತಿ ಸುರೇಶ್ ಅವರಿಗೆ ಸಂಬಂಧಿಸಿದ ಪ್ಲಾಟ್ನಲ್ಲಿ ಸಭೆ …
Read More »ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂDK.ಶಿವಕುಮಾರ್ ನಡುವೆ ನೇರ ಪೈಪೋಟಿ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಸಿದ್ಧತೆಗಳು ನಡೆದಿವೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಂಜೆ 5:30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಲಿದ್ದಾರೆ. ಸಭೆಯಲ್ಲಿ ಸಿಎಂ ಆಯ್ಕೆಯಾಗಲಿದೆ ಎಂದು ಈಗಾಗಲೇ ಹೈಕಮಾಂಡ್ ತಿಳಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಉತರ ಕರ್ನಾಟಕ ಭಾಗದ ಶಾಸಕರ ವಿಶ್ವಾಸ ಗಳಿಸಲು ಕಸರತ್ತು ನಡೆಸಿದ್ದಾರೆ. ಇನ್ನು ಹಳೇ …
Read More »ಖರ್ಗೆ ಭೇಟಿಯಾದ ನೂತನ ಶಾಸಕರು*
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ನೂತನ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ನೂತನ ಶಾಸಕರ ದಂಡೇ ಆಗಮಿಸಿದೆ. ಶಾಸಕರಾದ ಜಮೀರ್ ಅಹ್ಮದ್, ಹೆಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಶಾಸಕರು ಆಗಮಿಸಿದ್ದಾರೆ. ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಯಾರಾಗಬೇಕು ಎಂಬ ಬಗ್ಗೆ ಆಯ್ಕೆ ನಡೆಯಲಿದೆ.
Read More »ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ
ಗಡಾದ ಅವರನ್ನು 74 ಸಾವಿರಕ್ಕೂ ಅಧಿಕ ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್- ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ …
Read More »ಶಾಂತಿಯುತ ಮತದಾನ; ಜಿಲ್ಲಾಧಿಕಾರಿ ಕೃತಜ್ಞತೆ:
ಬೆಳಗಾವಿ: ರಾಜ್ಯದ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಹದಿನೆಂಟು ಮತಕ್ಷೇತ್ರಗಳಿವೆ. ಬೆಂಗಳೂರು ಹೊರತುಪಡಿಸಿದರೆ ಅತೀ ಹೆಚ್ಚು ಕ್ಷೇತ್ರಗಳಿರುವುದು ಇಲ್ಲಿಯೇ. ಈ ಜಿಲ್ಲೆಯಲ್ಲಿ ಚುನಾವಣಾ ನಡೆಸುವುದು ಹೆಚ್ಚುಕಡಿಮೆ ಒಂದು ಚಿಕ್ಕ ರಾಜ್ಯದ ಚುನಾವಣೆ ನಡೆಸುವುದಕ್ಕೆ ಸಮ! ಈ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳಲ್ಲಿ ಚುನಾವಣೆ ನಡೆಸುವುದು ಅತ್ಯಂತ ಸವಾಲಿನ ಕೆಲಸ. ಈ ಸವಾಲನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಕೀರ್ತಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಸಲ್ಲುತ್ತದೆ. ಮತದಾರರ ಪಟ್ಟಿ ಸಿದ್ಧಪಡಿಸುವುದರಿಂದ …
Read More »ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ
ಬೆಂಗಳೂರು: ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂದಿದ್ದು, ವಿಪಕ್ಷ ಕಾಂಗ್ರೆಸ್ ಗೆ ನಿಚ್ಚಳ ಬಹುಮತ ಸಿಕ್ಕಿದ್ದು, ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಸಿಎಂ ಬಸವರಾಅಜ್ ಬೊಮ್ಮಾಯಿ ಇಂದು ಸಂಜೆ ರಾಜಭವನಕೆ ತೆರಳಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸುಬಂದಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಸಧ್ಯದ ಮಾಹಿತಿ ಪ್ರಕಾರ ಬಿಜೆಪಿ ಕೇವಲ 65 …
Read More »ಯೂನಿಟ್‌ಗೆ 70 ಪೈಸೆ ವಿದ್ಯುತ್ ದರ ಹೆಚ್ಚಳಕ್ಕೆ ಅನುಮತಿಸಿದ ಕೆಇಆರ್‌ಸಿ..
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿದ ನಂತರ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅನುಮತಿ ನೀಡಿದೆ. ಪ್ರತಿ ಯೂನಿಟ್‌ಗೆ 70 ಪೈಸೆ ಬೆಲೆ ಏರಿಕೆ ಮಾಡಲು ಕೆಇಆರ್‌ಸಿ ಅನುಮನೋದನೆ ನೀಡಿದ್ದು, ಹೊಸ ದರಗಳು ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಯಾಗಲಿದೆ. ವಿದ್ಯುತ್ ವಿತರಣಾ ಕಂಪನಿಗಳು ಪ್ರತಿ ಯೂನಿಟ್‌ಗೆ 146 ಪೈಸೆ ಬೆಲೆ ಹೆಚ್ಚಿಸಬೇಕೆಂದು ಕೋರಿದ್ದವು. ಅವುಗಳ ಕೋರಿಕೆಯನ್ನು ಮನ್ನಿಸದೇ ಅರ್ಧಕ್ಕಿಂತ ಕಡಿಮೆ ಮೊತ್ತದ ಹೆಚ್ಚಳಕ್ಕೆ ಕೆಇಆರ್‌ಸಿ …
Read More »ಮಹಾತೀರ್ಪಿಗೆ ಕರುನಾಡು ಸಜ್ಜು: ಕಮಲ ಅರಳುತ್ತಾ, ‘ಕೈ’ ಕಮಾಲ್ ಮಾಡುತ್ತಾ?.. ಜೆಡಿಎಸ್ ಆಗಲಿದೆಯಾ ಕಿಂಗ್ ಮೇಕರ್?
ಬೆಂಗಳೂರು: ನಾಳೆ ಕರ್ನಾಟಕ ವಿಧಾನಸಭೆ ಚುನಾವಣೆಯ ಮಹಾತೀರ್ಪು ಹೊರಬೀಳಲಿದೆ. ಮತಯಂತ್ರಗಳಲ್ಲಿ ಭದ್ರವಾಗಿರುವ ರಾಜಕೀಯ ಪಕ್ಷಗಳ, ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಇತ್ತ ರಾಜ್ಯ, ರಾಷ್ಟ್ರದ ಗಮನ ಸಳೆದಿರುವ ಮತ ಎಣಿಕೆಗಾಗಿ ರಾಜ್ಯಾದ್ಯಂತ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ರಾಜ್ಯಾದ್ಯಂತ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ರಾಜಕೀಯ ಪಕ್ಷಗಳ ಹೃದಯ ಬಡಿತ ಹೆಚ್ಚಾಗಿದೆ. ನಾಳೆ ಹೈ ವೋಲ್ಟೇಜ್ ಸಮರ ಕಣದ ನಿರ್ಣಾಯಕ ದಿನ. ಮತಪ್ರಭುಗಳು ಯಾರ …
Read More »ನಾಳೆ ಕೌಂಟಿಂಗ್ಗೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ: ಆರ್ಪಿಡಿ ಕಾಲೇಜು ಸುತ್ತ ಪೊಲೀಸ್ ಸರ್ಪಗಾವಲು..
ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲೇ ಎರಡನೇ ಅತೀ ಹೆಚ್ಚು ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಮತ ಎಣಿಕೆ ನಡೆಯಲಿರುವ ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಸ್ಟ್ರಾಂಗ್ ರೂಮ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ …
Read More »