ನವದೆಹಲಿ: ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತದಾನ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಇಂದು ಪರಿಷ್ಕರಿಸಿದೆ. ನವೆಂಬರ್ 23ರ ಬದಲಿಗೆ 25ರಂದು ಮತದಾನ ನಡೆಯಲಿದೆ ಎಂದು ಘೋಷಿಸಿದೆ. ನವೆಂಬರ್ 25 ಶನಿವಾರ ಆಗಿದ್ದು, ಹೆಚ್ಚಿನ ಜನರು ಮತದಾನದಲ್ಲಿ ಭಾಗವಹಿಸಲಿ ಎಂಬ ಕಾರಣಕ್ಕೆ ದಿನಾಂಕ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 9ರಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ಮಿಜೋರಾಂ ಹಾಗೂ ತೆಲಂಗಾಣ ಸೇರಿ ಐದು …
Read More »ಕಾಮಗಾರಿಯ ಬಿಲ್ ವಿಳಂಬ ಆರೋಪ: ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ
ಬೆಳಗಾವಿ: ಕಾಮಗಾರಿಯ ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
Read More »ಆಯಂಗ್ರಿ ಯಂಗ್ ಮ್ಯಾನ್ಗೆ ಇಂದು 81ರ ಸಂಭ್ರಮ… ನಡುರಾತ್ರಿಯಲ್ಲೇ ಅಭಿಮಾನಿಗಳ ಶುಭ ಹಾರೈಕೆ!
ಅಮಿತಾಬ್ ಬಚ್ಚನ್ ತಮ್ಮ 81 ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಮುಂಬೈನಲ್ಲಿರುವ ಅವರ ನಿವಾಸ ‘ಜಲ್ಸಾ’ದ ಹೊರಗೆ ಜಮಾಯಿಸಿದ ಅಭಿಮಾನಿಗಳು ನೆಚ್ಚಿನ ನಟನಿಗೆ ಶುಭಾಶಯ ಕೋರಿದರು. ಈ ವೇಳೆ ಅಭಿಮಾನಿಗಳತ್ತ ಕೈ ಬೀಸಿದ ಬಿಗ್ ಬಿ, ಅವರಿಗೆಲ್ಲ ಕೃತಜ್ಞತೆ ಸಲ್ಲಿಸಿದರು. ಇಂದು ಭಾರತೀಯ ಚಿತ್ರರಂಗದ ಎವರ್ಗ್ರೀನ್ ಹೀರೋ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ 81ನೇ ಹುಟ್ಟುಹಬ್ಬ.. ಈ ನಿಮಿತ್ತ ಅವರ ಸೊಸೆ, ಮೊಮ್ಮಗಳು, ಮಗಳು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. …
Read More »ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ
ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕುರುವಾಯಿ ಭತ್ತದ ಕೃಷಿ ಉಳಿಸಲು ಮತ್ತು ಸಾಂಬಾ ಕೃಷಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ …
Read More »ಗೂಗಲ್ ಸೈನ್ಇನ್ಗೆ ಕಡ್ಡಾಯವಾಗಲಿದೆ ಪಾಸ್ ಕೀ.. ಏನಿದು ಹೊಸ ವಿಧಾನ?
ನವದೆಹಲಿ : ಬರುವ ದಿನಗಳಲ್ಲಿ ಗೂಗಲ್ ಸೇವೆಗಳಿಗೆ ಸೈನ್ ಇನ್ ಮಾಡಲು ಪಾಸ್ವರ್ಡ್ ಬದಲಾಗಿ ಪಾಸ್ಕೀ ಬಳಕೆ ಕಡ್ಡಾಯವಾಗಲಿದೆ. ಪಾಸ್ಕೀ (ಪಾಸ್ ವರ್ಡ್ ಗಳಿಗೆ ಪರ್ಯಾಯ) ಮೂಲಕವೇ ಸೈನ್ ಇನ್ ಮಾಡುವುದು ಡೀಫಾಲ್ಟ್ ಸೈನ್ – ಇನ್ ಪ್ರಕ್ರಿಯೆ ಆಗಲಿದೆ ಎಂದು ಗೂಗಲ್ ಹೇಳಿದೆ. ಪಾಸ್ ಕೀ ಬಳಸಿ ಬಳಕೆದಾರರು ಬಯೋಮೆಟ್ರಿಕ್ ಸೆನ್ಸರ್ (ಫಿಂಗರ್ ಪ್ರಿಂಟ್ ಅಥವಾ ಮುಖ ಗುರುತಿಸುವಿಕೆಯಂತಹ), ಪಿನ್ ಅಥವಾ ಪ್ಯಾಟರ್ನ್ಗಳ ಮೂಲಕ ಅಪ್ಲಿಕೇಶನ್ ಗಳು ಮತ್ತು ವೆಬ್ …
Read More »2ಎ ಮೀಸಲಾತಿ ಹೋರಾಟ: ಅ.13 ರಂದು ಗಬ್ಬೂರು ಬೈಪಾಸ್ನಲ್ಲಿ ಇಷ್ಟಲಿಂಗ ಮಹಾಪೂಜೆ: ಬಸವಜಯ ಮೃತ್ಯಂಜಯ ಶ್ರೀ
ಹುಬ್ಬಳ್ಳಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಧಾರವಾಡ ಜಿಲ್ಲಾ ಘಟಕದ ಆಶ್ರಯದಲ್ಲಿ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗಾಗಿ ಒತ್ತಾಯಿಸಿ 6 ನೇ ಹಂತದ ಚಳವಳಿಯನ್ನು ಅಕ್ಟೋಬರ್ 13 ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ ತಿಳಿಸಿದರು. ಹೋರಾಟ ಯಾತ್ರೆ: ನಗರದಲ್ಲಿ ಇಂದು (ಬುಧವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಈಗಾಗಲೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ …
Read More »‘ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ಬಿಗ್ ಬಾಸ್ಗೆ ಹೋಗಿದ್ದೆ’: ಶಾಸಕ ಪ್ರದೀಪ್ ಈಶ್ವರ್
ಕನ್ನಡ ಬಿಗ್ ಬಾಸ್ ಸೀಸನ್ 10ಕ್ಕೆ ಎಂಟ್ರಿ ಕೊಟ್ಟು ಬಂದಿರುವ ಶಾಸಕ ಪ್ರದೀಪ್ ಈಶ್ವರ್, ದೊಡ್ಮನೆಗೆ ಹೋದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುನಿರೀಕ್ಷಿತ ಕನ್ನಡ ಬಿಗ್ ಬಾಸ್ ಸೀಸನ್ 10 ಪಾರಂಭಗೊಂಡಿದೆ. ಜನಪ್ರಿಯ ರಿಯಾಲಿಟಿ ಶೋ ಆರಂಭದಲ್ಲೇ ಸದ್ದು ಮಾಡುತ್ತಿದೆ. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದಾರೆ. ಅಷ್ಟಕ್ಕೂ ಒಂದು ದಿನದ ಮಟ್ಟಿಗೆ ಬಿಗ್ ಬಾಸ್ ಮನೆಗೆ ಹೋಗಿದ್ದ ಕಾರಣವೇನು? ಎಂಬುದರ ಬಗ್ಗೆ ಸ್ವತಃ …
Read More »ಸಿಎಂಗೆ ದಸರಾ ಆಹ್ವಾನ ಪತ್ರಿಕೆ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ
ಬೆಂಗಳೂರು: ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದ ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ನೆನಪುಗಳನ್ನು ಸ್ಮರಿಸಿದರು. ದಸರಾದಲ್ಲಿ ಭಾಗವಹಿಸಲು ನೀಡಿದ ಆಹ್ವಾನ ಪತ್ರಿಕೆಯನ್ನು ಅವರು ಸಂತೋಷದಿಂದ ಸ್ವೀಕರಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಇಂದು ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿತು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗದಲ್ಲಿ ಮೇಯರ್ ಶಿವಕುಮಾರ್, ಶಾಸಕ ರವಿಶಂಕರ್, …
Read More »ಅಕ್ರಮ ಜಾಹೀರಾತು ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ:
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತುಗಳ ಅಳವಡಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಹಾಗೂ ಜಾಹೀರಾತು ಅಕ್ರಮ ಅಳವಡಿಕೆ ತಡೆಗೆ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಂದು ಹೈಕೋರ್ಟ್‌ಗೆ ತಿಳಿಸಿದೆ. ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತ ಹೋರ್ಡಿಂಗ್ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ …
Read More »ಮೈಸೂರು ದಸರಾ: 10 ಕಡೆ ಸಾಂಸ್ಕೃತಿಕ ಕಾರ್ಯಕ್ರಮಗಳು- ಸಂಪೂರ್ಣ ವಿವರ..
ಮೈಸೂರು : ಈ ಬಾರಿಯ ಸಾಂಪ್ರದಾಯಿಕ ದಸರಾದಲ್ಲಿ 10 ಕಡೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಮುಖ್ಯವಾಗಿ, ಅಂಬಾವಿಲಾಸ ಅರಮನೆಯ ಮುಂಭಾಗದ ಸಾಂಸ್ಕೃತಿಕ ವೇದಿಕೆ ಸೇರಿದಂತೆ ನಗರದ ಇತರ 9 ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳು ಏರ್ಪಾಡಾಗಿವೆ. ಸುಗಮ ಹಾಗೂ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಇತರೆ ಪ್ರಕಾರಗಳ ನೃತ್ಯ, ನಾಟಕ, ಜಾನಪದ, ನಿರೂಪಣೆ, ಜಾದು, ಹರಿಕಥೆ, ಭಕ್ತಿ ಗೀತೆಗಳು, ತತ್ವಪದಗಳು, ವಾದ್ಯ, ಸೂತ್ರ ಸಲಾಕೆ ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. …
Read More »
Laxmi News 24×7