ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿರುವ ವಿಚರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಚುನಾವಣಾ ಆಯೋಗ ನೋಟೀಸ್ ನೀಡಿರುವ ವಿಚಾರವಾಗಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ನಮಗೆ ನೀಡಿರುವ ನೋಟೀಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಈಗ ಆಧಾರವೇನು ಎಂದು ಕೇಳಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ಮೇಲೆಯೇ ನಾವು ಪ್ರಚಾರ ಮಾಡಿದ್ದೇವೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣಾ ಆಯೋಗಕ್ಕೆ ಉತ್ತರ ನೀಡಿದ ಬಳಿಕ …
Read More »ಪ್ರಧಾನಿ ಮೋದಿ ಬಗ್ಗೆ ಶರದ್ ಪವಾರ್ ಹೇಳಿದ್ದೇನು?
ಮುಂಬೈ: ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿರುವ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ಆದರೆ ಚುನಾವಣೆಯಲ್ಲಿ ಧರ್ಮ …
Read More »ಮೋದಿ 20 ಬಾರಿ ಬಂದರೂ ಗೆಲ್ಲುವುದಿಲ್ಲ: ಸಿದ್ದರಾಮಯ್ಯ
ಪಿರಿಯಾಪಟ್ಟಣ: ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಕಂಡರೆ ಭಯ. ಹಾಗಾಗಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬರುತ್ತಿದ್ದು, ಇನ್ನೂ ಇಪ್ಪತ್ತು ಬಾರಿ ಬಂದರೂ ಬಿಜೆಪಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರನ್ನು ಖರೀದಿಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದು ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಮಾಡಿ ಭ್ರಷ್ಟಾಚಾರದಲ್ಲಿ ಮುಳುಗಿಸಿಟ್ಟಿದ್ದಾರೆ. ರಾಜ್ಯಕ್ಕೆ ಮೋದಿ ಕೊಡುಗೆ …
Read More »ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನ
ಜೈಪುರ: ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ನಾಗರಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದ ಬಳಿ ನಡೆದಿದೆ. ಯುದ್ಧ ವಿಮಾನ ಪತನಗೊಂಡು ವಿಮಾನದ ಅವಶೇಷಗಳು ಮನೆಯ ಮೇಲೆ ಬಿದ್ದಿದೆ. ಪರಿಣಿಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
Read More »ನಾಲ್ವರು ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇ.83.89ರಷ್ಟು ಫಲಿತಾಂಶ ಬಂದಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಯಿತು. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಭೂಮಿಕಾ ಪೈ – ನ್ಯೂ ಮೆಕಾಲೆ ಶಾಲೆ ಹೊಸೂರು ರಸ್ತೆ ಯಶಸ್ ಗೌಡ – ಬಿಜಿಎಸ್ …
Read More »ಕನಕಪುರದಲ್ಲಿ ಆರ್ ಅಶೋಕ್ ಪರ ಸಿಎಂ ಬೊಮ್ಮಾಯಿ ಪ್ರಚಾರ
ರಾಮನಗರ : ಈ ಬಾರಿ ಕನಕಪುರದಲ್ಲಿ ಬಿಜೆಪಿಯ ಕಮಲ ಅರಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕನಕಪುರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಪರ ಪ್ರಚಾರ ನಡೆಸಿ ಬಳಿಕ ಮಾತನಾಡಿದ ಅವರು, ಇದು ಕನ್ನಡ ನಾಡಿನ ಭವಿಷ್ಯ ನಿರ್ಧರಿಸುವ ಚುನಾವಣೆ. ಬಿಜೆಪಿ ಕಾರ್ಯಕರ್ತರ ಪಕ್ಷ. ಅಶ್ವತ್ಥ್ ನಾರಾಯಣ್ ಅವರು ಈ ಭಾಗದಲ್ಲಿ ಸಾಕಷ್ಟು ಸಂಘಟನೆ ಮಾಡಿದ್ದಾರೆ. ಇಲ್ಲಿ ಶಕ್ತಿ ಬರಬೇಕಾದರೆ ಸಾಮ್ರಾಟ್ ಅಶೋಕ್ ಅವರೇ ಗೆದ್ದು ಬರಬೇಕು ಎಂದು …
Read More »ಜೆ.ಪಿ ನಡ್ದಾ ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ವಿರುದ್ಧ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸೋತರೆ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ …
Read More »ಇಂದು ಬೆಳಗ್ಗೆ 10 ಗಂಟೆಗೆ SSLC ಫಲಿತಾಂಶ ಪ್ರಕಟ
ಬೆಂಗಳೂರು: ಇಂದು(ಸೋಮವಾರ) ಬೆಳಗ್ಗೆ 10 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. 11 ಗಂಟೆಯ ನಂತರ ವಿದ್ಯಾರ್ಥಿಗಳು ವೆಬ್ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆದಿತ್ತು. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಅಧಿಕಾರಿಗಳು ಮಾಧ್ಯಮಗೋಷ್ಟಿ ನಡೆಸಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. 11 ಗಂಟೆಯಿಂದ …
Read More »ಕಾಂಗ್ರೆಸ್ ಪ್ರಚಾರ ವಾಹನ ಚಾಲಕನಿಗೆ ಹಲ್ಲೆ, ಎಸ್‍ಡಿಪಿಐ ಕಾರ್ಯಕರ್ತ ಅರೆಸ್ಟ್
ದಕ್ಷಿಣ ಕನ್ನಡ: ಬೈಕ್ ಮತ್ತು ಆಟೋ ರ‍್ಯಾಲಿ ನಡೆಯುತ್ತಿದ್ದಾಗ ಎಸ್‍ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಉಳ್ಳಾಲದ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆಯವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ಆಟೋ ರಿಕ್ಷಾ ಹಾಗೂ ಬೈಕ್ ರ‍್ಯಾಲಿಯ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ ಸಮೀಪ ಘಟನೆ ನಡೆದಿದೆ. ನಡೆದಿದ್ದೇನು?: ಕಾಂಗ್ರೆಸ್ ಕಾರ್ಯಕರ್ತ ನೌಫಾಲ್ (35) ಹಲ್ಲೆಗೊಳಗಾಗಿದ್ದಾರೆ. ನಾಟೆಕಲ್ ಸಮೀಪ ಅಸೈಗೋಳಿಯಿಂದ ಚೆಂಬುಗುಡ್ಡೆ ಸಾರ್ವಜನಿಕ …
Read More »ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ
ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೊತ್ಸವದ ಆನೆ ಬಲರಾಮ (67) ಅನಾರೋಗ್ಯದಿಂದ ಮೃತಪಟ್ಟಿದೆ. ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಶಿಬಿರದಲ್ಲಿ ಬಲರಾಮ ಮೃತಪಟ್ಟಿರುವುದಾಗಿ ಆನೆ ಶಿಬಿರ ಸಿಬ್ಬಂದಿಗಳು ತಿಳಿಸಿದ್ದಾರೆ. ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇತ್ತೀಚೆಗೆ ಅನಾರೊಗ್ಯದಿಂದ ಬಳಲುತ್ತಿತ್ತು. ಬಾಯಿಯಲ್ಲಿ ಹುಣ್ಣಾಗಿದ್ದರಿಂದ ಆಹಾರ ಸೇವನೆ ನಿಲ್ಲಿಸಿತ್ತು. ಬಲರಾಮನಿಗೆ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
Read More »