Breaking News

ಫಾರ್ಮ್ ಹೌಸ್ ನಲ್ಲಿ ಸಂಗ್ರಹಿಸಿಟ್ಟಿದ್ದ 1800 ಕುಕ್ಕರ್ ಗಳನ್ನು ವಶಕ್ಕೆ ಪಡೆದ ಪೊಲೀಸರು

ಬೈಲಹೊಂಗಲ: ಬೈಲಹೊಂಗಲ ತಾಲೂಕಿನಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮತ್ತು ಪೊಲೀಸರು ಫಾರ್ಮ್ ಹೌಸ್ ನಲ್ಲಿ ಸಂಗ್ರಹಿಸಿಟ್ಟಿದ್ದ 1800 ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಲಹೊಂಗಲ ತಾಲೂಕಿನ ತಡಸಲೂರಿನ ಫಾರ್ಮ್ ಹೌಸ್ ನಲ್ಲಿ ಕುಕ್ಕರ್ ಗಳನ್ನು ಸಂಗ್ರಹಿಸಡಲಾಗಿತ್ತು. ಮತದಾರರಿಗೆ ಹಂಚಲು ಈ ಕುಕ್ಕರ್ ಗಳನ್ನು ಸಂಗ್ರಹಿಸಿಟ್ಟಿರಬಹುದು ಎನ್ನುವ ಶಂಕೆಯ ಮೇಲೆ ದಾಳಿ ನಡೆಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

Read More »

ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿಯನ್ನು ಈ ಬಾರಿಯೂ ಸೋಲಿಸಿ’: ಅಮಿತ್‌ ಶಾ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಕಾಂಗ್ರೆಸ್‌ನ ಗ್ಯಾರಂಟಿಗಳ ಮೊತ್ತವು ರಾಜ್ಯ ಬಜೆಟ್‌ಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜನ ಎಲ್ಲ ಲೆಕ್ಕ ಹಾಕಿದ್ದಾರೆ. ಆದರೆ, ಇದು ರಾಹುಲ್‌ ಗಾಂಧಿಗೆ ಅರ್ಥವಾಗಿಲ್ಲ’ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಟೀಕಿಸಿದರು.   ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ಪರ ಚುನಾವಣಾ ಪ್ರಚಾರ ಮಾಡಿ ಮಾತನಾಡಿದ ಅವರು, ‘ಗುಜರಾತ್‌, ಉತ್ತರಪ್ರದೇಶ, ಉತ್ತರಾಖಂಡ, ಅಸ್ಸಾಂ, ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್‌ ರಾಜ್ಯಗಳಲ್ಲಿ ಕೂಡ ಕಾಂಗ್ರೆಸ್‌ ಇವೇ ಐದು ಗ್ಯಾರಂಟಿಗಳನ್ನು …

Read More »

ಕೇಂದ್ರದ ಎಂಜಿನ್‌ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’: ಫಡಣವೀಸ್‌

ಬೆಳಗಾವಿ: ‘ಕೇಂದ್ರದಲ್ಲಿ ಬಿಜೆಪಿಯ ಎಂಜಿನ್ ಇದೆ. ಅದಕ್ಕೆ ಬೇರೆ ಪಕ್ಷದ ಬೋಗಿ ಅಳವಡಿಸಿದರೆ, ಹೈದರಾಬಾದ್‌ನಲ್ಲಿರುವ ಎಂಜಿನ್‌ ಕಡೆ ಹೋಗುತ್ತದೆ. ಹಾಗಾಗಿ ಆ ಎಂಜಿನ್‍ಗೆ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಬೋಗಿಯನ್ನೇ ಜೋಡಿಸಬೇಕು’ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಕೋರಿದರು.   ಇಲ್ಲಿನ ಟಿಳಕ್ ಚೌಕ್‌ನಲ್ಲಿ ಗುರುವಾರ ನಡೆದ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಡಬಲ್‌ ಎಂಜಿನ್ ಸರ್ಕಾರ ಅಧಿಕಾರದಲ್ಲಿದ್ದರೆ ಅಭಿವೃದ್ಧಿ …

Read More »

ಸರ್ವ ಸಮುದಾಯಗಳ ಏಳಿಗೆಗೆ ಬಾಲಚಂದ್ರ ಬದ್ಧ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ

ಮೂಡಲಗಿ: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ‌್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಮೂಡಲಗಿ-ಗುರ್ಲಾಪುರ ಪುರಸಭೆ, ನಾಗನೂರ, ಕಲ್ಲೊಳಿ, ಅರಬಾವಿ …

Read More »

ರಾಜಕೀಯ ಪಕ್ಷಗಳಿಂದ ಉಚಿತ ಗ್ಯಾರಂಟಿಗಳ ಮಹಾಪೂರ:ರಾಜ್ಯದ ಆರ್ಥಿಕತೆಯ ಗತಿ ಏನು..?

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಅಖಾಡದಲ್ಲಿನ ಮಹಾಸಮರ ಅಂತಿಮ ಹಂತಕ್ಕೆ ಬಂದಿದೆ. ಪ್ರಮುಖ ರಾಜಕೀಯ ಪಕ್ಷಗಳು ಮತದಾರರ ಮತ ಸೆಳೆಯಲು ತಮ್ಮ ಪ್ರಣಾಳಿಕೆಯಲ್ಲಿ ಉಚಿತಗಳ ಭರಪೂರ ಭರವಸೆಗಳನ್ನು ನೀಡುತ್ತಿವೆ. ಆದರೆ, ಅಧಿಕಾರಕ್ಕೆ ಬರಲು ಪಕ್ಷಗಳ ವಿವಿಧ ಉಚಿತ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸದ ಮೇಲೆ ಹೊರೆ ಏನಾಗಲಿದೆ ಎಂಬ ವರದಿ ಇಲ್ಲಿದೆ ಓದಿ.‌ ಮತಬೇಟೆಗೆ ಇಳಿದ ಮೂರು ಪಕ್ಷಗಳು: ರಾಜ್ಯ ಚುನಾವಣೆಯ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಇನ್ನೇನು ನಾಲ್ಕು ದಿನಗಳಲ್ಲಿ ಮತದಾನ ನಡೆಯಲಿದೆ. …

Read More »

ಲಕ್ಷ್ಮಣ ಸವದಿಯಿಂದ ಬಿಜೆಪಿಗೆ ದ್ರೋಹ: ಅಮಿತ್ ಶಾ

ಅಥಣಿ: ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರ್ ಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ಹುಟ್ಟಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಅಥಣಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ನಾಯಕರು ಸಾವರ್ಕರ್ ಅವರನ್ನು ಬೆಳಗಾವಿ ಹಿಂಡಲಗಾ ಜೈಗೆ ಹಾಕಿಸಿದರು ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರು …

Read More »

ಅಂತರರಾಜ್ಯ ಚೆಕ್ ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದನೋಡಲ್ ಅಧಿಕಾರಿ ಪರಶುರಾಮ ದುಡಗುಂಟಿ

ಬೆಳಗಾವಿ: ಜಿಲ್ಲಾ ವೆಚ್ಚ ವೀಕ್ಷಣಾ ನೋಡಲ್ ಅಧಿಕಾರಿ ಪರಶುರಾಮ ದುಡಗುಂಟಿ ಇಂದು ಬೆಳಗಾವಿ ಉತ್ತರ ಕ್ಷೇತ್ರ ಹಾಗೂ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ, ಅರಳಿಕಟ್ಟಿ, ಹತ್ತರಗಿ ಹಾಗೂ ಬಾಚಿ ಅಂತರರಾಜ್ಯ ಚೆಕ್ ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತದಾನಕ್ಕೆ ಇನ್ನೇನು ನಾಲ್ಕು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ತೀವ್ರಗೊಳಿಸುವಂತೆ ಚೆಕ್ ಪೋಸ್ಟ ಸಿಬ್ಬಂದಿಗಳಿಗೆ ನಿರ್ದೇಶಿಸಿದರು. ತಪಾಸಣೆ ಪರಿಣಾಮಕಾರಿ ಆಗಲು ಹೆಚ್ಚುವರಿ ತಪಾಸಣಾ ಅಧಿಕಾರಿಗಳು ಮತ್ತು ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ …

Read More »

ಹಾಡಹಗಲೇ ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ

ವಿಜಯಪುರ: ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿಯಿರುವಾಗಲೇ ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ಮಹಿಳಾ ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹೈದರ್ ಅಲಿ ನದಾಫ್ ಗುಂಡಿನ ದಾಳಿಗೆ ಬಲಿಯಾದವರು. ಹೈದರ್ ವಾರ್ಡ್ ನಂಬರ್ 19ರ ಪಕ್ಷೇತರ ಪಾಲಿಕೆ ಸದಸ್ಯೆ ನತಾಶ್ ಅವರ ಪತಿ ಎಂದು ತಿಳಿದುಬಂದಿದೆ. ಹೈದರ್ ಅಲಿ ನದಾಫ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ …

Read More »

ರಾಹುಲ್‌ ಗಾಂಧಿ ನಾಳೆ ಬೆಳಗಾವಿಗೆ:ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಂಡಿರುವ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು. ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ನಡೆಯುವ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ25 ಸಾವಿರ ಜನ ಸೇರುವ ನಿರೀಕ್ಷೆಇದೆ ಎಂದರು. ರಾಜ್ಯದಲ್ಲಿ …

Read More »

ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ ಎಂದಸುಮಲತಾ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಂಸದೆ ಸುಮಲತಾ ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿರುವ ಘಟನೆ ನಡೆದಿದೆ. ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾ ಪರ ಚುನಾವಣ ಅಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದರು. ಅಂಬರೀಶ್ ಅವರು 27 ವರ್ಷಗಳ ಕಾಲ …

Read More »