Breaking News

ಫ್ಲೈಓವರ್ ಮೇಲೆ ಬೈಕ್​ನಲ್ಲಿ ಹೋಗುತ್ತಿದ್ದ ಅತ್ತೆಗೆ ಚಾಕು ಇರಿದು ಕೊಂದು ಪರಾರಿಯಾದ ಅಳಿಯ!

ವಿಜಯವಾಡ (ಆಂಧ್ರಪ್ರದೇಶ): ಅತ್ತೆಯನ್ನೇ ಅಳಿಯನೋರ್ವ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ವಿಜಯವಾಡದ ಚಿಟ್ಟಿನಗರ ಸಮೀಪ ಇರುವ ಹಾಲಿನ ಕಾರ್ಖಾನೆ ಪಕ್ಕದ ಚನುಮೋಳು ವೆಂಕಟರಾವ್ ಮೇಲ್ಸೇತುವೆ ಮೇಲೆ ಶನಿವಾರ ರಾತ್ರಿ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ರಾಜೇಶ್ (37) ಎಂಬಾತ ನಾಗಮಣಿ (48) ಎಂಬವರನ್ನು ಹತ್ಯೆಗೈದಿದ್ದಾನೆ. ಆರೋಪಿಯ ಪತ್ನಿಯು ವಿಚ್ಛೇದನ ಕೋರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡು ಕೃತ್ಯ ಎಸಗಿದ್ದಾನೆ ಎಂದು ವಿಜಯವಾಡ ಪಶ್ಚಿಮ ಎಸಿಪಿ ಹನುಮಂತ ರಾವ್ ತಿಳಿಸಿದರು. …

Read More »

ಹೈದರಾಬಾದ್ ಮೂಲದ ಯುವತಿಯ ಹತ್ಯೆ ಪ್ರಕರಣ: ಆರೋಪಿ ಪ್ರಿಯಕರನ ಪತ್ತೆಗಾಗಿ ಲುಕ್ ಔಟ್ ನೋಟಿಸ್​

ಬೆಂಗಳೂರು: ಪ್ರಿಯತಮೆಯನ್ನು ಕೊಂದು ನಾಪತ್ತೆಯಾಗಿರುವ ಆರೋಪಿಯ ಪತ್ತೆಗಾಗಿ ಬೆಂಗಳೂರು ಎಲ್‌ಓಸಿ (ಲುಕ್ ಔಟ್ ಸರ್ಕ್ಯೂಲರ್) ಹೊರಡಿಸಿದ್ದಾರೆ. ಹೈದರಾಬಾದ್ ಮೂಲದ ಆಕಾಂಕ್ಷಾ(23) ಎಂಬಾಕೆಯನ್ನ ಉಸಿರುಗಟ್ಟಿಸಿ ಕೊಂದು ಪರಾರಿಯಾಗಿರುವ ಆಕೆಯ ಪ್ರಿಯಕರ ದೆಹಲಿ‌ ಮೂಲದ ಅರ್ಪಿತ್ ಕರಿತು ಇನ್ನೂ ಸಹ ಸುಳಿವಿಲ್ಲ. ಆದ್ದರಿಂದ ತನಿಖೆಯ ಗತಿಯನ್ನ ಮತ್ತಷ್ಟು ಚುರುಕುಗೊಳಿಸಿರುವ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಆರೋಪಿ ದೇಶ ಬಿಟ್ಟು ತೆರಳದಂತೆ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿದ್ದಾರೆ ಎಂಬುದು‌ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. …

Read More »

ತುಂಗೆಯಿಂದ ಭದ್ರೆಗೆ 15 ಟಿಎಂಸಿ ನೀರು ತರುವ ಯೋಜನೆ 1 ವರ್ಷದೊಳಗೆ ಪೂರ್ಣ: ಸಚಿವ ಡಿ ಸುಧಾಕರ್

ಶಿವಮೊಗ್ಗ: ತುಂಗೆಯಿಂದ ಭದ್ರೆಗೆ 15 TMC ನೀರನ್ನು ತೆಗೆದುಕೊಂಡು ಹೋಗುವ ಯೋಜನೆ ಮುಂದಿನ ಒಂದು ವರ್ಷದೊಳಗೆ ಪೂರ್ಣವಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಮುತ್ತಿನಕೊಪ್ಪ ಗ್ರಾಮದ ಬಳಿಯ ಕಾಮಗಾರಿ ವೀಕ್ಷಿಸಿ, ಭದ್ರಾವತಿಯ ಬಿ ಆರ್ ಪ್ರಾಜೆಕ್ಟ್ ಯ ಮುಖ್ಯ ಇಂಜಿನಿಯರ್ ಅವರ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಭದ್ರಾ ಮೆಲ್ದಂಡೆ ಯೋಜನೆಯ ಭಾಗವಾಗಿ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು …

Read More »

ಕಾಂಗ್ರೆಸ್ ಸರ್ಕಾರದಲ್ಲಿರುವ ಅಧಿಕಾರಿಗಳೇ ದಲ್ಲಾಳಿಗಳು: ಮುನಿರತ್ನ

ಬೆಂಗಳೂರು: ”ಈ ಸರ್ಕಾರದಲ್ಲಿ ಅಧಿಕಾರಿಗಳೇ ದಲ್ಲಾಳಿಗಳು ಆಗಿದ್ದಾರೆ. ಸರ್ಕಾರ ಸೇವೆಗೆ ಬಂದವರು ದಲ್ಲಾಳಿ ಸೇವೆ ಮಾಡ್ತಿದ್ದಾರೆ” ಎಂದು ಮಾಜಿ ಸಚಿವ ಮುನಿರತ್ನ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ”ಕಾಂಗ್ರೆಸ್ ನವರಿಗೆ ತುಂಬಾ ಪ್ರೀತಿ ಇರೋದು ನನ್ನ ಮೇಲೆ ಹಾಗೂ ಅಶ್ವಥ್ ನಾರಾಯಣ್ ಮೇಲೆ. ಆದರೆ ಬಿಜೆಪಿ ಏನು‌ ನಿದ್ದೆ ಮಾಡ್ತಿಲ್ಲ. ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ನಾವು ಕೂಡ ಹೋರಾಟ ಮಾಡೋಕೆ ಸಿದ್ದರಿದ್ದೇವೆ. …

Read More »

5 ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: B.S.Y.

ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಇಲ್ಲವಾದಲ್ಲಿ ಅವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರದ ಮೂಗು ಹಿಂಡುವ ಕೆಲಸವನ್ನು ನಾವು ಮಾಡೋಣ. ಉಪವಾಸ ಸತ್ಯಾಗ್ರಹ ಮಾಡುವ ಅವಶ್ಯಕತೆ ಇಲ್ಲ. ಅಧಿವೇಶನ ಆರಂಭದ ದಿನದಿಂದ ನಾವು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟನೆ ಮಾಡಬೇಕು …

Read More »

ಅಕ್ಕಿ ಪೂರೈಕೆಗೆ ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಮೂರು ಸಂಸ್ಥೆಗಳಿಗೆ ಮನವಿ- ಸಚಿವ ಮುನಿಯಪ್ಪ

ಬೆಂಗಳೂರು: ಅಕ್ಕಿ ಪೂರೈಸಲು ಟೆಂಡರ್ ಮಾಡಿ ಕ್ರಮ ಕೈಗೊಳ್ಳುವಂತೆ ಎನ್‌ಸಿಸಿಎಫ್ ಸೇರಿದಂತೆ ಮೂರು ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಒಂದು ವಾರದೊಳಗೆ ಗಿರಣಿಗಳ ಮಾಲೀಕರು ಮತ್ತು ವ್ಯಾಪಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಕ್ಕಿ ಪೂರೈಕೆ ಕುರಿತು ಎನ್‌ಸಿಸಿಎಫ್, ನಾಫೆಡ್ ಮತ್ತು ಕೇಂದ್ರೀಯ ಭಂಡಾರ ಕೊಟ್ಟಿರುವ ದರ ಪಟ್ಟಿ ಕುರಿತು ಸಭೆ ನಡೆಯಿತು. …

Read More »

ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ: ಡಾ.ಸಿ.ಎನ್.ಮಂಜುನಾಥ್‌

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯಿಂದ 52 ಲಕ್ಷ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್‌ ತಿಳಿಸಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್​ನಿಂದ 11ನೇ ವರ್ಷದ ಸಮಾಜ ಸೇವಾ ಕಾರ್ಯಕ್ರಮದಲ್ಲಿ 10 ಸಾವಿರ ಮಕ್ಕಳಿಗೆ 1.5 ಲಕ್ಷ ಉಚಿತ ನೋಟ್ ಪುಸ್ತಕಗಳು, ಕಲಿತಾ ಪರಿಕರಗಳ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಯುವಕರು ಸಾವು

ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ ಇಂದು ನಡೆದಿದೆ. ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಮೃತರೆಂದು ಗುರುತಿಸಲಾಗಿದೆ. ಮುಂಜಾನೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಣಿ ಕೋಲಾರ ಜಿಲ್ಲೆಯವರಾಗಿದ್ದು, ಮತ್ತೊಬ್ಬ ಯುವಕ ಜನಾರ್ಧನ್ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ನಿವಾಸಿ. ಬೆಂಗಳೂರಿನ ಖಾಸಗಿ …

Read More »

ಅಕ್ಕಿ, ಮನೆ, ಸಿಲಿಂಡರ್ ಕೊಡಿ ಸಾಕು ಎಂದ ನಾರಿಯರು..

ಗಂಗಾವತಿ (ಕೊಪ್ಪಳ) : `ಬಸ್ಸಿನಲ್ಲಿ ಹೆಣ್ಮಕ್ಕಳು ಫ್ರಿಯಾಗಿ ಓಡಾಡಾಕ ಶುರುವಾದಾಗಿನಿಂದ ಒಂದೂ ಬಸ್ ಖಾಲಿ ಇರವಲ್ವು. ಮನಿ ಬಿಟ್ಟು ಬಂದು ಗುಡಿಗೆ ಹೋಗಣಾಂದ್ರ ಹೈರಾಣ ಆಗಿವಿ. ಈ ಫ್ರೀ ಬಸ್ ಬಿಟ್ಟು ಸರ್ಕಾರದೋರು ಜನರಿಗೆ ಬೇಕಾದ ಅಕ್ಕಿ, ಸಿಲಿಂಡರ್, ಮನೆ ಕೊಡ್ಲಿ’.. ಹೀಗೆಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣಕ್ಕೆ ಅವಕಾಶ ಇರುವ ಶಕ್ತಿ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಆಗಿದ್ದರಿಂದ ಗಂಗಾವತಿ ತಾಲ್ಲೂಕಿನ ಹಲವು …

Read More »

ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’

ಗದಗ : ಡ್ರೋನ್​ ಮೂಲಕ ಜಿಲ್ಲೆಯಲ್ಲಿ ‘ಮರು ಭೂ ಮಾಪನ ಯೋಜನೆ’ (ವೈಮಾನಿಕ ಭೂ ಸಮೀಕ್ಷೆ)ಗೆ ಚಾಲನೆ ನೀಡಲಾಗಿದೆ. ಈ ವೇಳೆ ಜಮೀನುಗಳಲ್ಲಿ ಮಿನಿ ವಿಮಾನ ಆಕಾರ ಹೋಲುವ ಡ್ರೋನ್​ ಹಾರಾಟ ನಡೆಸುತ್ತಿರುವುದನ್ನು ಕಂಡ ರೈತರು ಆತಂಕಗೊಂಡ ಘಟನೆ ನಡೆಯಿತು. ಜಿಲ್ಲೆಯ ಮುಂಡರಗಿ ತಾಲೂಕಿನ ಹಲವು ರೈತರು ಡ್ರೋನ್​ ಹಾರಾಟವನ್ನು ಕಂಡಿದ್ದಾರೆ. ಕೆಲ ದಿನಗಳ ಹಿಂದೆ ದೊಡ್ಡ ವಿಮಾನ ಹಾರಾಟ ನಡೆಸಿ ಆತಂಕ ಸೃಷ್ಟಿಸಿದ್ದವು. ಇದರ ಬೆನ್ನಲ್ಲೇ ಈಗ ಚಿಕ್ಕ ವಿಮಾನ …

Read More »