Breaking News

ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಬಿಡುಗಡೆ: ಇಲ್ಲಿದೆ ʼಕೈ‌ʼ ಗ್ಯಾರೆಂಟಿ ಲಿಸ್ಟ್

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ‘ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಮಂಗಳವಾರ ಬಿಡುಗಡೆ ಮಾಡಿದರು. ಪ್ರಣಾಳಿಕೆ ಭರವಸೆಗಳನ್ನು ಈಡೇರಿಸುವ ಪ್ರಮಾಣ ಸಂಕೇತವಾಗಿ ಪ್ರಣಾಳಿಕೆ ಹೊತ್ತಿಗೆಗೆ ಅರಿಶಿನ-ಕುಂಕುಮ ಹಚ್ಚಿ, ವೀಳ್ಯದೆಲೆ ಅಡಿಕೆ ಇಟ್ಟು ಸಾಂಪ್ರದಾಯಿಕವಾಗಿ ಬಿಡುಗಡೆ ಮಾಡಿದರು. ಪ್ರಣಾಳಿಕೆಯ ಮುಖ್ಯಾಂಶಗಳು: ಬಿಪಿಎಲ್‌ ಕುಟುಂಬಕ್ಕೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ …

Read More »

ನನ್ನ ಸೋಲಿಸಲು ಕಾರ್ಯಕರ್ತರ ಮೇಲೆ ಭಾಜಪ ಒತ್ತಡ: ಶೆಟ್ಟರ

ಹುಬ್ಬಳ್ಳಿ: ರಾಜಕಾರಣದಲ್ಲಿ ಒಳ ಮತ್ತು ಹೊರ ಹೊಡೆತಗಳಿವೆ. ಇದೀಗ ಬಿಜೆಪಿಯವರು ನನ್ನನ್ನು ಸೋಲಿಸಲು ಕಾರ್ಯಕರ್ತರ ಮೇಲೆ ಒತ್ತಡ ತರುತ್ತಿದ್ದಾರೆ. ಇದರಿಂದ ತಾಳ್ಮೆಯ ಕಟ್ಟೆ ಒಡೆದು ಹೋಗುತ್ತಿದ್ದು, ಇದರ ಪರಿಣಾಮ ಮುಂದಿನ ಲೋಕಸಭಾ ಚುನಾವಣೆ ಮೇಲೆ ಬೀರುತ್ತದೆ ಕಾದುನೋಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ವರ್ಚಸ್ಸು ಕಡಿಮೆಯಾಗಿಲ್ಲ. …

Read More »

ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನವಿ

ಗೋಕಾಕ: ‘ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಗೆಲ್ಲಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು. ಇಲ್ಲಿನ ವಾರ್ಡ್‌ ಸಂಖ್ಯೆ 12, 13, 15 ಮತ್ತು 16ರಲ್ಲಿ ಭಾನುವಾರ ಮತಯಾಚಿಸಿ ಅವರು ಮಾತನಾಡಿದರು.   ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಶಶಿಧರ ದೇಮಶೆಟ್ಟಿ ಮಾತನಾಡಿ, ‘ಈ ಕ್ಷೇತ್ರವನ್ನು ರಮೇಶ ಜಾರಕಿಹೊಳಿ ಅಭಿವೃದ್ಧಿಪಡಿಸುವ ಜತೆಗೆ, ಕೊರೊನಾ ಸಂಕಷ್ಟ ಸಮಯದಲ್ಲಿ ಜನರಿಗೆ …

Read More »

ಮುದ್ದೇಬಿಹಾಳದಲ್ಲಿ ಚುನಾವಣಾ ಸಿಬ್ಬಂದಿಯಿದ್ದ ಬಸ್​ ಪಲ್ಟಿ: 15 ಜನರಿಗೆ ಗಾಯ

ವಿಜಯಪುರ: ಚುನಾವಣಾ ಕರ್ತವ್ಯಕ್ಕಾಗಿ ಹೊರಟಿದ್ದ ಬಸ್ ಪಲ್ಟಿಯಾಗಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್‌ ಬಳಿ ಇಂದು ಬೆಳಗ್ಗೆ 7.30 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಿಂಧಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರದ ತರಬೇತಿಗಾಗಿ ಸಿಬ್ಬಂದಿಯನ್ನು ಸಿಂಧಗಿಗೆ ಕರೆದೊಯ್ಯಲಾಗುತ್ತಿತ್ತು. ಬಸ್​ನ ಎಕ್ಸಲ್ ಕಟ್ ಆಗಿದ್ದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಬಸ್‌ನಲ್ಲಿ ಒಟ್ಟು 40ಕ್ಕೂ ಅಧಿಕ ಜನ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಅಟಲ್​ ಆಹಾರ ಕೇಂದ್ರ ಘೋಷಿಸಿದ ಬಿಜೆಪಿ… ಇಂದಿರಾ ಕ್ಯಾಂಟಿನ ಭವಿಷ್ಯ ಏನಾಗುತ್ತೆ?

ಬೆಂಗಳೂರು: ಕರ್ನಾಟಕದ ಪ್ರತಿ ಮುನ್ಸಿಪಲ್ ಕಾರ್ಪೊರೇಷನ್‌ನ ಪ್ರತಿ ವಾರ್ಡ್‌ಗಳಲ್ಲಿ ‘ಅಟಲ್ ಆಹಾರ ಕೇಂದ್ರ’ ಸ್ಥಾಪಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, 2017ರ ಆಗಸ್ಟ್‌ನಲ್ಲಿ ಅಂದಿನ ಸಿದ್ದರಾಮಯ್ಯ ಸರ್ಕಾರ ಪ್ರಾರಂಭಿಸಿದ್ದ ‘ಇಂದಿರಾ ಕ್ಯಾಂಟೀನ್’ಗಳ ಭವಿಷ್ಯವನ್ನು ಪ್ರಶ್ನಿಸಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೋಮವಾರ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದರು. ಡೆಲಿವರಿ ಬಾಯ್‌ಗಳು, ಕ್ಯಾಬ್‌ಗಳು, ಆಟೋ ಚಾಲಕರು ಮತ್ತು ಅಸಂಘಟಿತ ಕಾರ್ಮಿಕರಿಗೆ …

Read More »

ರಾಜ್ಯದಲ್ಲಿಂದು ಪ್ರಧಾನಿ ಮೋದಿ 2ನೇ ಹಂತದ ಮತಬೇಟೆ:

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಹಂತದ ಮತ ಪ್ರಚಾರಕ್ಕೆ ಸಜ್ಜಾಗಿದೆ. ಇಂದು ಮತ್ತು ನಾಳೆ ಮೋದಿ ರಾಜ್ಯದ ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಪ್ರಧಾನಿಯವರು 2ನೇ ಹಂತದ ಪ್ರಚಾರದಲ್ಲಿ ಇಂದು (ಮಂಗಳವಾರ) ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರಗಿಯಲ್ಲಿ ರೋಡ್​ ಶೋ ಮತ್ತು ಸಮಾವೇಶ ನಡೆಸಿದರೆ, ಬುಧವಾರದಂದು ಮೂಡಬಿದಿರೆ, ಅಂಕೋಲ ಹಾಗೂ ಬೈಲಹೊಂಗಲದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ …

Read More »

ಮರಾಠಿ ಜನರನ್ನು ಸೋಲಿಸುವ ಉದ್ದೇಶವಿಟ್ಟುಕೊಂಡು ಬಿಜೆಪಿಯವರು ಈಗಾಗಲೇ ಬೆಳಗಾವಿಗೆ ಹೋಗಿದ್ದಾರೆ.: ರಾವುತ್‌

ಮುಂಬೈ: ‘ಮೇ 10ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಅಂಗವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಬೇಲಗಾವಿ ಮೂಲದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್‌) ಪರವಾಗಿ ಪ್ರಚಾರ ಮಾಡಬೇಕು’ ಎಂದು ಶಿವಸೇನಾ (ಉದ್ಧವ್‌ ಠಾಕ್ರೆ ಬಣ) ನಾಯಕ ಸಂಜಯ್‌ ರಾವುತ್‌ ಅವರು ಭಾನುವಾರ ತಿಳಿಸಿದರು.   ಕರ್ನಾಟಕದಿಂದ ಕಾರಾವಾರದ ಸುತ್ತಮುತ್ತ ಇರುವ 865 ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಎಂಇಎಸ್‌ ಪಕ್ಷ ಹಲವು …

Read More »

ಶಾ ಹೇಳಿಕೆ ಖಂಡಿಸಿ ಲೇಖನ, ಸಂಸದನಿಗೆ ನೋಟಿಸ್‌!

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಖಂಡಿಸಿ, ಟೀಕಿಸಿ ಪತ್ರಿಕೆಯಲ್ಲಿ ಲೇಖನ ಬರೆದಿದ್ದ ಸಿಪಿಎಂನ ರಾಜ್ಯಸಭಾ ಸದಸ್ಯ ಜಾನ್‌ ಬ್ರಿಟ್ಟಾ ಅವರಿಗೆ ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್‌ಕರ್‌ ನೋಟಿಸ್ ನೀಡಿದ್ದು ವಿವರಣೆ ನೀಡಲು ತಮ್ಮ ಎದುರು ಹಾಜರಾಗುವಂತೆ ಸೂಚಿಸಿದ್ದಾರೆ.   ಸಭಾಪತಿಯ ಈ ಕ್ರಮವನ್ನು ಬ್ರಿಟ್ಟಾ ಖಂಡಿಸಿದ್ದಾರೆ. ಈ ಮಧ್ಯೆ ಬ್ರಿಟ್ಟಾ ಅವರ ಪರ ಹಲವು ಸಂಸದರು ಧ್ವನಿ ಎತ್ತಿದ್ದಾರೆ. ‘ಇದು, ವಿರೋಧದ ಧ್ವನಿಯನ್ನು ಹತ್ತಿಕ್ಕುವ ಯತ್ನ’ ಎಂದು …

Read More »

12 ಗಂಟೆವರೆಗೂ ಕೆಲಸದ ಅವಧಿ ಕಾಯ್ದೆ ಹಿಂಪಡೆದ ತಮಿಳುನಾಡು

ಚೆನ್ನೈ: ನಿತ್ಯದ ಕೆಲಸದ ಅವಧಿಯನ್ನು 12 ಗಂಟೆವರೆಗೆ ವಿಸ್ತರಿಸಲು ಅವಕಾಶವಿದ್ದ ‘ಕಾರ್ಖಾನೆಗಳ (ತಿದ್ದುಪಡಿ) ಕಾಯ್ದೆ 2023’ ಅನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ. ‘ಕಾರ್ಮಿಕರ ಹಿತಾಸಕ್ತಿಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದ್ದಾರೆ.   ‘ಸುಧಾರಣೆ ತರುವುದಕ್ಕಷ್ಟೇ ಅಲ್ಲ. ವಿಷಯ ಕುರಿತ ಜನಾಭಿಪ್ರಾಯದ ನಿಲುವು ಒಪ್ಪಿಕೊಳ್ಳಲೂ ಧೈರ್ಯ ಇರಬೇಕು’ ಎಂದು ಹೇಳಿದರು. ಈ ಕಾಯ್ದೆಗೆ ಹಲವು ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಸೋಮವಾರ ನಡೆದ ಕಾರ್ಮಿಕ ದಿನಾಚರಣೆ …

Read More »

ಹಿರಿಯ ನಾಗರಿಕರಿಗೆ ರಿಯಾಯಿತಿ ರದ್ದು: ರೈಲ್ವೆಗೆ ₹ 2,242 ಕೋಟಿ ಅಧಿಕ ಆದಾಯ

ನವದೆಹಲಿ: ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ನೀಡಿದ್ದ ರಿಯಾಯಿತಿಯನ್ನು ಕೋವಿಡ್‌ ಕಾರಣದಿಂದಾಗಿ ರದ್ದುಪಡಿಸಿದ ಪರಿಣಾಮ ರೈಲ್ವೆ ಇಲಾಖೆಯು 2022-23ನೇ ಹಣಕಾಸು ವರ್ಷದಲ್ಲಿ ಹೆಚ್ಚುವರಿಯಾಗಿ ₹ 2,242 ಕೋಟಿ ಆದಾಯಗಳಿಸಿದೆ. ಕೋವಿಡ್‌ನಿಂದಾಗಿ ರಿಯಾಯಿತಿ ರದ್ದುಪಡಿಸಿದ ಬಳಿಕ ಮಾರ್ಚ್‌ 20, 2020 ಮತ್ತು ಮಾರ್ಚ್ 31, 2022 ನಡುವಿನ ಅವಧಿಯಲ್ಲಿ ಹೆಚ್ಚುವರಿಯಾಗಿ ₹ 1,500 ಕೋಟಿ ಆದಾಯವನ್ನು ಇಲಾಖೆ ಗಳಿಸಿದೆ.   ಮಧ್ಯಪ್ರದೇಶದ ಚಂದ್ರಶೇಖರ್ ಗೌರ್ ಅವರು ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ರೈಲ್ವೆ …

Read More »