Breaking News

ಭಾರೀ ಮಳೆಯಿಂದಾಗಿ KRS ಒಳಹರಿವು ಹೆಚ್ಚಳ

ಮಂಡ್ಯ, ಮೇ 26): ಕಳೆದ ಹಲವು ದಿನಗಳಿಂದ ಕರ್ನಾಟಕದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ. ಪರಿಣಾಮ ಜಲಾಶಯಗಳಿಗೆ ಜೀವಕಳೆ ಬಂದಿದೆ. ಅದರಲ್ಲೂ ಕೆಆರ್​ ಎಸ್​ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಈ ಬಾರಿಯ ಬಿರು ಬೇಸಿಗೆ ಬಿಸಿಲಿನ ತಾಪಕ್ಕೆ ಕೃಷ್ಣರಾಜ ಸಾಗರ ಜಲಾಶಯದ (KRS) ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು.ಆದ್ರೆ, ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಸದ್ಯ ಜಲಾಶಯಕ್ಕೆ 8869 ಕ್ಯೂಸೆಕ್ ನೀರು …

Read More »

ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳ ಬಗ್ಗೆ ಕೋರ್ಟ್​ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದ ಕಾರು ಚಾಲಕ

ಬೆಂಗಳೂರು, (ಮೇ 26): ಅಶ್ಲೀಲ ವಿಡಿಯೋ (obscene video) ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್​ ಕೋರ್ಟ್​ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್​ ನಲ್ಲಿ 2000 ಅಶ್ಲೀಲ ಫೋಟೋ, 40 ರಿಂದ 50 ವಿಡಿಯೋಗಳಿದ್ದವು ಎಂದು ಕಾರ್ತಿಕ್​, ಇಂದು (ಮೇ 26) ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಅಲ್ಲದೇ ಮೊಬೈಲ್​ ನಲ್ಲಿದ್ದ ಅಶ್ಲೀಲ …

Read More »

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ, ಮೇ 26: ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ (Rain). ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮೇ.27 ಮತ್ತು 28 ರಂದು ಎರಡು ದಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ ಪೂರ್ವ …

Read More »

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಎನ್.ವಿ. ಅಂಜಾರಿಯಾ

ಬೆಂಗಳೂರು : ಕರ್ನಾಟಕ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ‌ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸುಪ್ರೀಂಕೋರ್ಟ್​ನ ಮುಖ್ಯನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಬಿ.ವಿ. ನಾಗರತ್ನ, ವಿಕ್ರಮ್ ನಾಥ್ ಮತ್ತು ಜೆ.ಕೆ. ಮಹೇಶ್ವರಿ ಅವರನ್ನೊಳಗೊಂಡ ಕೊಲಿಜಿಯಂ ಮೇ 26ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದರು. ಇದೇ ವೇಳೆ ಗೌಹಟಿ ಹೈಕೋರ್ಟ್​ನ ಮುಖ್ಯನ್ಯಾಯಮೂರ್ತಿ ವಿಜಯ್ ಬಿಶ್ಣೋಯಿ ಮತ್ತು ಬಾಂಬೆ ಹೈಕೋರ್ಟ್​ನ …

Read More »

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು. ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Read More »

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಈ ಕೆಳಗಿನ ಸೂಚನೆಗಳನ್ನು ನೀಡಿದರು… *ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. *ಸದ್ಯಕ್ಕೆ ಆತಂಕ ಪಡುವ …

Read More »

ಡಿಜಿ-ಐಜಿಪಿ ಎಂ ಎ ಸಲೀಂ ಆಯ್ಕೆ ಪ್ರಶ್ನಿಸಿ ಪತ್ರ: ಕೋರ್ಟ್​ಗೆ ಹೋಗುವ ಎಚ್ಚರಿಕೆ ನೀಡಿದ ವಕೀಲೆ

ಬೆಂಗಳೂರು, ಮೇ 26: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ (MA Salim) ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್​ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ (Karnataka Government) ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ …

Read More »

ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ: ಕೋವಿಡ್ ಬಗ್ಗೆ ಸಭೆಯಲ್ಲಿ ಏನೆಲ್ಲಾ ಆಯ್ತು? ಇಲ್ಲಿದೆ ವಿವರ

ಬೆಂಗಳೂರು, (ಮೇ 26): ಕರ್ನಾಟಕದಲ್ಲಿ ಕೊವಿಡ್ (Covid) ನಿಯಂತ್ರಣ ಸಂಬಂಧ ಇಂದು (ಮೇ 26) ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ನೇತೃತ್ವದಲ್ಲಿ ನಡೆ ಸಭೆ ಅಂತ್ಯವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ. ಕಳೆದ ಬಾರಿ ಆದಂತೆ ಸಮಸ್ಯೆ ಆಗಬಾರದು. ಕೊವಿಡ್​ ಸಹಾಯವಾಣಿ​​ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ಶಾಲೆಗಳು ರಜೆ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ …

Read More »

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಗಿಂತ ಕೆಟ್ಟದಾಗಿ ವರ್ತಿಸುತ್ತಿದೆ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಕಾಂಗ್ರೆಸ್ ಜನರ ಧ್ವನಿಯನ್ನು ಅಡಗಿಸುತ್ತಿದೆ. ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜ್ಯ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಂತರ ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿ ಈ ಪ್ರತಿಕ್ರಿಯೆ ನೀಡಿದ್ದಾರೆ. “ರಾಜ್ಯ ಸರ್ಕಾರದ ಎರಡು ವರ್ಷಗಳ ವೈಫಲ್ಯದ ಬಗ್ಗೆ ಚಾರ್ಜ್‌ಶೀಟ್” ಎಂಬ ಶೀರ್ಷಿಕೆಯಡಿಯಲ್ಲಿ ದೃಶ್ಯ ಮಾಧ್ಯಮ …

Read More »

ಮಳೆ ರಭಸಕ್ಕೆ ಬೆಳಗಾವಿ – ಗೋವಾ ಹೆದ್ದಾರಿ ಬಂದ್…

ಮಳೆ ರಭಸಕ್ಕೆ ಕೊಚ್ಚಿ ಹೋದ ರಸ್ತೆ…ಮುಳುಗಡೆಯ ಹಂತದಲ್ಲಿ ನಿರ್ಮಾಣಾಧೀನ ಸೇತುವೆ…. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಲಪ್ರಭಾ ನದಿಯಲ್ಲಿ ಒಳ‌ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದ್ದು, ಬೆಳಗಾವಿ, ಖಾನಾಪೂರ ಮತ್ತು ರಾಮನಗರದ ಜನರು ಪೇಚಿಗೆ ಸಿಲುಕಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಇದು ಮಲಪ್ರಭಾ ನದಿ ಉಗಮ ಸ್ಥಾನ. ಇದೇ ಮಾರ್ಗದಲ್ಲಿರುವ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. …

Read More »