ಬೆಂಗಳೂರು:ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಚೆ ಬಿಜೆಪಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭ್ಯರ್ಥಿಗಳು ಹಾಗೂ ಚುನಾವಣೆ ಏಜಂಟರಿಗೆ ಬರೆದ ಪತ್ರದ ಕುರಿತು ಪ್ರಸ್ತಾಪಿಸಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ. …
Read More »ಚಾಯ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ನಗರದ ಮುಖ್ಯ ಮಾರುಕಟ್ಟೆಯ ಪರಿಸರದಲ್ಲಿ ಪ್ರಚಾರ ಕಾರ್ಯ ಕೈಗೊಂಡ ರವಿ ಪಾಟೀಲ್
ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿ ಅಧಿಕೃತ ಅಭ್ಯರ್ಥಿ ಡಾಕ್ಟರ್ ರವಿ ಪಾಟೀಲ್ ಬೆಳಗಾವಿ ನಗರದ ರಾಮದೇವ್ ಗಲ್ಲಿ ಕಾರ್ ಪಾರ್ಕಿಂಗ್ ನಲ್ಲಿ ಚಾಯ್ ಪೆ ಚರ್ಚಾ ಕಾರ್ಯಕ್ರಮದ ಮೂಲಕ ನಗರದ ಮುಖ್ಯ ಮಾರುಕಟ್ಟೆಯ ಪರಿಸರದಲ್ಲಿ ಪ್ರಚಾರ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ಡಾ ರವಿ ಪಾಟೀಲ್ ನಗರದ ವರ್ತಕರೊಂದಿಗೆ ಸುದೀರ್ಘಕಾಲ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಕುಲಂಕಷವಾಗಿ ಆಲಿಸಿದರು. ಮೂಲಭೂತ ಸೌಕರ್ಯಗಳ ಕೊರತೆಯಿಂದ ತಮಗಾಗಿರುವ ತೊಂದರೆಯನ್ನು …
Read More »ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಿದ ಕಾಂಗ್ರೆಸ್
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ಉಸ್ತುವಾರಿಗಳಾಗಿರುವ ರಣದೀಪ್ ಸಿಂಗ್ ಸುರ್ಜೇವಾಲ ರವರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗದ ಕಾಂಗ್ರೆಸ್ ಮುಖಂಡರು ಇಂದು ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ದೂರು ದಾಖಲಿಸಲಿದ್ದಾರೆ. ವರುಣಾ ಹಾಗೂ ಚಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಸಚಿವ ವಿ.ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. …
Read More »ಮೇ 3ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಂಕೋಲಾಗೆ; ಕೇಂದ್ರ ಸಚಿವ ಶ್ರೀಪಾದ ನಾಯ್ಕ
ಜಗದೀಶ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ವಿರೋಧ ಪಕ್ಷದಲ್ಲಿರುವುದರಿಂದ ಅವರನ್ನು ಸೋಲಿಸುವುದು ಅವಶ್ಯಕ ಹಾಗೂ ಅನಿವಾರ್ಯ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಅವರು ಹೇಳಿದರು. ಕೇಂದ್ರ ಸಚಿವ ಶ್ರೀಪಾದ ನಾಯ್ಕಕಾರವಾರ (ಉತ್ತರ ಕನ್ನಡ) : ಪ್ರಧಾನಿ ನರೇಂದ್ರ ಮೋದಿ ಮೇ 3 ರಂದು ಜಿಲ್ಲೆಗೆ ಆಗಮಿಸುವುದು ಬಹುತೇಕ ಖಚಿತವಾಗಿದ್ದು, ಸಮಾವೇಶಕ್ಕೆ 3 ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಶ್ರೀಪಾದ ನಾಯ್ಕ ಹೇಳಿದರು. …
Read More »ಆರ್ಟಿಐಯಡಿ ಕೇಳಿದ ಮಾಹಿತಿ ನಿರಾಕರಣೆ: ಮಹೇಶ್ ಜೋಷಿಗೆ ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ಬೆಂಗಳೂರಿನ ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕ ಹಾಗೂ ಕೇಂದ್ರ ಮಾಹಿತಿ ಅಧಿಕಾರಿಯಾಗಿದ್ದ ಹಾಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವ ಮಹೇಶ್ ಜೋಷಿ ಅವರಿಗೆ ಹೈಕೋರ್ಟ್ 50 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಮಾಹಿತಿಯನ್ನು ಒದಗಿಸುವಂತೆ ಸೂಚಿಸಿದ್ದ ಮೇಲ್ಮನವಿ ಪ್ರಾಧಿಕಾರದ ಸೂಚನೆ ಹಾಗೂ ಮಾಹಿತಿ ನೀಡಲು ವಿಳಂಬ ಮಾಡಿದ್ದರ ಪರಿಣಾಮ ವಿಧಿಸಿದ್ದ ದಂಡವನ್ನು ರದ್ದು ಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಜೋಷಿಗೆ …
Read More »ಕೃಷ್ಣಾ ಮತ್ತು ಹಿರಣ್ಯಕೇಶಿ ನದಿಗೆ ನೀರು ಬಿಡಲು ಸಮ್ಮತಿಸಿದ ಡಿಸಿಎಂ ಫಡ್ನವಿಸ್
ಚಿಕ್ಕೋಡಿ : ಕೃಷ್ಣಾ ಮತ್ತು ಹಿರಣ್ಯಕೇಶಿ ನದಿಗೆ ನೀರು ಬಿಡಲು ಮಹಾರಾಷ್ಟ್ರ ಡಿಸಿಎಂ ದೇವೆಂದ್ರ ಫಡ್ನವಿಸ್ ಸಮ್ಮತಿ ಸೂಚಿಸಿದ್ದಾರೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಅವರು ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರಿನ ಒಳಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚಿನ ನೀರನ್ನು ಬಿಡುವಂತೆ ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದರು. …
Read More »ಮಹದಾಯಿ ಯೋಜನೆಗೆ ಅನುಮತಿಮತ್ತೆ ರೈತರ ಮೂಗಿಗೆ ತುಪ್ಪ ಸವರಿದ ಸಿಎಂ
ಗದಗ(ನರಗುಂದ) : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗಾಗಲೇ ಮಹದಾಯಿ ಯೋಜನೆಗೆ ಅನುಮತಿ ನೀಡಿದ್ದು, ಡಿಪಿಆರ್ ಕೂಡ ಸಿದ್ದ ಆಗಿದೆ. ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಯೋಜನೆ ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ನರಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಸಿ ಪಾಟೀಲ ಪರ ಪ್ರಚಾರ ನಡೆಸಿದ ಬಳಿಕ ಅವರು ಮಾತನಾಡಿದರು. ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಇದೇ ರಸ್ತೆಯಲ್ಲಿ ನಿಂತು ಹೋರಾಟ ಮಾಡಿದ್ದೆವು. ಇದೇ ಸ್ಥಳದಿಂದ …
Read More »ಎರಡು ದಿನಗಳ ಕಾಲ ಬೆಳಗಾವಿ ಪ್ರದೇಶಗಳಲ್ಲಿ ನೀರು ಸರಬರಾಜು ಮಾಡುವ ಷೆಡ್ಯೂಲ್‌ನಲ್ಲಿ ವ್ಯತ್ಯಯ
ಬೆಳಗಾವಿ : ಹಿಡಕಲ್ ಕಚ್ಚಾ ನೀರು ಸರಬರಾಜಿನ 1000 ಎಮ್.ಎಮ್. MS ಮುಖ್ಯ ಕೊಳವೆಯು ಅಂಕಲಗಿ ಹತ್ತಿರ ಗಣನೀಯ ಪ್ರಮಾಣದಲ್ಲಿ ಸೊರಿಕೆ ಉಂಟಾಗಿದ್ದು, ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದು. ಇದರಿಂದ ಪ್ರಸ್ತುತ ಇರುವ ನೀರು ಸರಬರಾಜು ಷೆಡ್ಯೂಲ್ ಮುಂದಿನ ಎರಡು ದಿನಗಳಿಗೆ ಮುಂದುವರಿಯುತ್ತದೆ. ಹಾಗಾಗಿ ಎರಡು ದಿನಗಳ ಕಾಲ ಬೆಳಗಾವಿ ನಗರದ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜು ಮಾಡುವ ಷೆಡ್ಯೂಲ್‌ನಲ್ಲಿ ವ್ಯತ್ಯಯ ಉಂಟಾಗುವುದು. ಸರಬರಾಜು ವ್ಯತ್ಯಯ ಉಂಟಾಗುವ ದಕ್ಷಿಣ -ಪ್ರದೇಶಗಳು: ಬ್ರಹ್ಮ ನಗರ, …
Read More »ಮೋದಿ ಗಾಳಿಯೊಂದನ್ನು ಉಚಿತವಾಗಿ ನೀಡಿ ಎಲ್ಲದರ ಮೇಲೂ ಜಿಎಸ್ಟಿಹಾಕಿ ದ್ದಾರೆ
ಬೆಳಗಾವಿ: ಚುನಾವಣಾ ಪ್ರಚಾರವೆಂದು ರಾಜ್ಯಕ್ಕೆ ಅಮಿತ್ ಷಾ ಬಂದು ಮಾತನಾಡುತ್ತಾ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದಂಗೆಗಳು ಏಳುತ್ತವೆ ಎಂದ ಹೇಳಿದ್ದರು. ಅವರ ಈ ಮಾತುಗಳು ಕರ್ನಾಟಕದ ಜನತೆಗೆ ಮಾಡಿದ ಅಪಮಾನ. ಹಿಂದು-ಮುಸ್ಲಿಂ ಜಗಳ ಉಂಟಾಗುವಂತಹ ಪರಿಸ್ಥಿತಿ ನಿರ್ಮಾಣ ಮಾಡುವವರು ಅವರೇ ಎಂದು ಅಮಿತ್ ಷಾ ಹಾಗೂ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಚಿಕ್ಕೋಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಾ, ಅಮಿತ್ ಷಾ ಆಡಿರುವ ಮಾತಿನ …
Read More »ಲಾಭ ತಗೊಂಡು ಮೋಸ ಮಾಡಿದವರಿಗೆ ಜನತೆ ಬುದ್ಧಿ ಕಲಿಸುತ್ತಾರೆ: ಯತ್ನಾಳ್
ಜಮಖಂಡಿ: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯ ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇನ್ನು ಜಮಖಂಡಿ ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಪರ ಬಿರುಸಿನ ಮತ ಬೇಟೆಯಲ್ಲಿ ತೊಡಗಿರುವ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಇನ್ನು ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯತ್ನಾಳ್ ಕಾಂಗ್ರೆಸ್ನವರು ಯಾರೂ ವೀರಸಾವರ್ಕರ ಚಪ್ಪಲಿ ದೂಳಿಗೂ ಸಮನಲ್ಲ. ಜಮಖಂಡಿ ನಗರದಲ್ಲಿ ವೀರಸಾವರ್ಕರ್ ಹೆಸರು …
Read More »