ಬಾಗಲಕೋಟೆ: ಬಸವಣ್ಣ ಸತ್ಯದ ಪರವಾಗಿ ಹೋರಾಡಿದವರು. ಇಂದು ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕೂಡಲಸಂಗಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಬಸವಣ್ಣನವರ ಜಯಂತಿಯಲ್ಲಿ ಭಾಗಿಯಾಗಿರುವುದು ಖುಷಿ ಕೊಟ್ಟಿದೆ. ನನ್ನನ್ನು ಆಹ್ವಾನಿಸಿದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವ, ಶರಣ ತತ್ವವನ್ನು ಬಸವಣ್ಣ ರಕ್ಷಣೆ ಮಾಡಿದರು. ಪ್ರಜಾಪ್ರಭುತ್ವ, ಸಂಸತ್ತು ಎಲ್ಲದಕ್ಕೂ ಬಸವಣ್ಣ ಪ್ರೇರಣೆ. ಸಮಾಜದಲ್ಲಿ ಅಂಧತ್ವವಿದ್ದಾಗ ಬಸವಣ್ಣನವರ ಬೆಳಕಿನ ಹಾದಿ ತೋರಿದರು ಎಂದರು. ಇನ್ನೊಬ್ಬರನ್ನು …
Read More »ಬಿಜೆಪಿಯಿಂದ ನನಗೆ ಆಹ್ವಾನ ಬಂದಿತ್ತು:ರಮ್ಯಾ
ಬೆಂಗಳೂರು: ವಿಧಾನಸಭಾ ಚುನಾವಣೆ ಅಖಾಡ ದಿನ ದಿನವೂ ರಂಗೇರುತ್ತಿದೆ. ಕಾಂಗ್ರೆಸ್ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ನಟಿ ರಮ್ಯಾ, ತಮಗೆ ಬಿಜೆಪಿಯಿಂದ ಆಹ್ವಾನ ಬಂದಿತ್ತು ಎಂದು ಹೇಳಿದ್ದಾರೆ. ಇಂಗ್ಲೀಷ್ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ನಟಿ ರಮ್ಯಾ, ತಮಗೆ ಬಿಜೆಪಿಯ ಉನ್ನತ ನಾಯಕರೊಬ್ಬರು ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದರು. ಅಲ್ಲದೇ ಸಚಿವರನ್ನಾಗಿ ಮಾಡುತ್ತೇವೆ ಎಂದೂ ಆಫರ್ ನೀಡಿದ್ದರು ಎಂದಿದ್ದಾರೆ. ನಾನು ಕೆಲವು ಬಾರಿ ಕಾಂಗ್ರೆಸ್ ವಿರುದ್ಧ ಮಾತನಾಡಿದಾಗ ಬಿಜೆಪಿಯಿಂದ ಆಫರ್ ಬಂದಿತ್ತು. ಆದರೆ ನಾನು …
Read More »ಕೂಡಲಸಂಗಮಕ್ಕೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್ ನಾಯಕನ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು
ಬಾಗಲಕೋಟೆ: ಬಾಗಲಕೊಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಕಾಂಗೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಬಸವ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಆಗಮಿಸಿದ್ದು, ಬಸವಣ್ಣನವರ ಐಕ್ಯ ಸ್ಥಳ, ಸಂಗಮೇಶ್ವರ ದೇವಾಲಯಗಳಿಗೆ ಭೇಟಿ ನೀಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಹುಬ್ಬಳ್ಳಿಯಿಂದ ಹುನಗುಂದ ಹೆಲಿಪ್ಯಾಡ್ ಗೆ ಬಂದಿಳಿಯುತ್ತಿದ್ದಂತೆ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ನ್ನು ತಪಾಸಣೆ ನಡೆಸಿ ಪರಿಶೀಲನೆ ನಡೆಸಿದರು.
Read More »ಮಾಧ್ಯಮ ಕಣ್ಗಾವಲು ಘಟಕಕ್ಕೆ ಚುನಾವಣಾ ವೀಕ್ಷಕರ ಭೇಟಿ ಜಾಹೀರಾತು, ಪೇಡ್ ನ್ಯೂಸ್ ಮೇಲೆ ನಿಗಾ ವಹಿಸಲು ಸೂಚನೆ
ಬೆಳಗಾವಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಗೋಕಾಕ ಹಾಗೂ ಯಮಕನಮರಡಿ ವಿಧಾನಸಭಾ ಮತಕ್ಷೇತ್ರಗಳ ಸಾಮಾನ್ಯ ವೀಕ್ಷಕರಾದ ಹಿರಿಯ ಐ.ಎ.ಎಸ್. ಅಧಿಕಾರಿ ಎಸ್.ಮಾಲಾರವಿಙ್ಞ ಅವರು ಭೇಟಿ ಪರಿಶೀಲಿಸಿದರು. ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮ ಗಳ ಪ್ರಸಾರವಾಗುವ ಸುದ್ದಿಗಳ ಮೇಲೆ ನಿಗಾ ವಹಿಸಬೇಕು. ಪೇಡ್ ನ್ಯೂಸ್ ಅಥವಾ ಜಾಹೀರಾತು ಕಂಡುಬಂದರೆ ಅದಕ್ಕೆ ಸಂಬಂಧಿಸಿದ ವೆಚ್ಚವನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಸೇರಿಸಬೇಕು ಎಂದು ನಿರ್ದೇಶನ ನೀಡಿದರು. ಇದಲ್ಲದೇ ನೀತಿಸಂಹಿತೆ ಉಲ್ಲಂಘನೆಗೆ …
Read More »ಚುನಾವಣೆ ಹೊತ್ತಲ್ಲಿ ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಚುನಾವಣೆ ಹೊತ್ತಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಮತ್ತು ದಾವಣಗೆರೆ ಎಸ್ಪಿ ರಿಷ್ಯಾಂತ್ ವರ್ಗಾವಣೆ ಮಾಡಲಾಗಿದೆ. ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿ. ಅರೂಣ್ ಕೆ ದಾವಣಗೆರೆ ನೂತನ ಡಿಸಿಪಿಯಾಗಿ ನೇಮಕವಾಗಿದ್ದಾರೆ. ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ : ಹುಬ್ಬಳ್ಳಿಯಲ್ಲಿ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ : …
Read More »ಹೊಸ ಸುತ್ತೋಲೆ ಹೊರಡಿಸಿದ KSRTC : ʼರಾಂಗ್ ಸೈಡ್ನಲ್ಲಿ ಬರುವ ಬಸ್ಸಿನಿಂದಲೇ ಅಪಘಾತ ಹೆಚ್ಚಳʼ
ಬೆಂಗಳೂರು : ರಾಜ್ಯಾದ್ಯಂತ ಸಂಚರಿಸೋ ಕೆಎಸ್‌ಆರ್‌ಟಿಸಿ ಬಸ್ಸಿನಿಂದಲೇ ಅಪಘಾತ ಪ್ರಕರಣ ಹೆಚ್ಚಾಗಿದ್ದು, ಈ ಬೆನ್ನಲ್ಲೆ ನಿಯಮಗಳನ್ನು ಬಿಗಿಗೊಳಿಸಲು ಹೊಸ ಸುತ್ತೋಲೆ ಹೊರಡಿಸಿದೆ ಎಂದು ವರದಿಯಾಗಿದೆ. ದೇಶದಲ್ಲೇ ಅತ್ಯುತ್ತಮ ಸಂಪರ್ಕ ಸಾರಿಗೆ ಎಂಬ ಹೆಗ್ಗಲಿಕೆಗೆ ಕೆಎಸ್‌ಆರ್‌ಟಿಸಿ ಬಸ್ ಪಾತ್ರವಾಗಿದ್ದು, ಅಪಘಾತಗಳು ಹೆಚ್ಚಾಗುತ್ತಿರೋದ್ರಿಂದ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು, ಅಪ್ಪಿತಪ್ಪಿ ಉಲ್ಲಂಘಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೊಸ ಸುತ್ತೋಲೆ ಮೂಲಕ ಖಡಕ್ ವಾರ್ನಿಂಗ್ ನನ್ನು ಹೊರಡಿಸಲಾಗಿದೆ. ಅದರಲ್ಲೂ ಇತ್ತೀಚಿಗೆ …
Read More »ಬೊಮ್ಮಾಯಿಗೂ ತಟ್ಟಿದ ನೀತಿ ಸಂಹಿತೆ ಬಿಸಿ : ದೊಡ್ಡಬಳ್ಳಾಪುರದಲ್ಲಿ ಸಿಎಂ ಕಾರು ತಡೆದು ತಪಾಸಣೆ
ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಇದೀಗ ಸಿಎಂ ಬೊಮ್ಮಾಯಿಗೂ ಚುನಾವಣಾ ನೀತಿ ಸಂಹಿತೆ ಬಿಸಿ ತಟ್ಟಿದ್ದು, ದೊಡ್ಡಬಳ್ಳಾಪುರದ ಚೆಕ್ ಪೋಸ್ಟ್ ನಲ್ಲಿ ಸಿಎಂ ಕಾರು ತಪಾಸಣೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸಿಎಂ ಕಾರು ತಡೆದು ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.ಸಿಎಂ ಬೊಮ್ಮಾಯಿ ಬಾಶೆಟ್ಟರಹಳ್ಳಿಗೆ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಪ್ರಚಾರ ನಡೆಸಲಿದ್ದಾರೆ. ರಾಹುಲ್ ಗಾಂಧಿಗೆ …
Read More »ನಾನು ಸಿಎಂ ಆದ್ರೆ ಮುಸ್ಲಿಮರಿಗೆ ಮೀಸಲಾತಿ, ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಕಡಿವಾಣ : ಸಿದ್ದರಾಮಯ್ಯ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ಮುಸ್ಲಿರ ಮೀಸಲಾತಿಯನ್ನು ರದ್ದುಗೊಳಿಸಿ ಅದನ್ನು ಒಕ್ಕಲಿಗರು ಹಾಗೂ ಲಿಂಗಾಯತರಿಗೆ ನೀಡಿದೆ. ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ …
Read More »ಐಪಿಎಲ್ನ ದೆಹಲಿ ಕ್ಯಾಪಿಟಲ್ ತಂಡದ ಕಳುವಾಗಿದ್ದ ಕ್ರಿಕೆಟ್ ಕಿಟ್ ಅಲ್ಲದೇ ಆರೋಪಿಗಳನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದಿದ್ದಾರೆ.
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಯಶಸ್ವಿಯಾಗಿ ನಡೆಯುತ್ತಿದೆ. ಇದೇ ಐಪಿಎಲ್ ಪಂದ್ಯದ ವೇಳೆ ಕೆಲ ಕಿಡಿಗೇಡಿಗಳು ಕ್ರಿಕೆಟ್ ಕಿಟ್ ಅನ್ನು ಕದ್ದಿದ್ದರು. ಇದೀಗ ಬೆಂಗಳೂರು ಪೊಲೀಸರು ಕ್ರಿಕೆಟ್ ಕಿಟ್ ಸಮೇತ ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಹೌದು, ಕಳೆದ 10 ದಿನಗಳ ಹಿಂದೆ ದೆಹಲಿ ಹಾಗೂ ಆರ್ ಸಿಬಿ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳುವಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ದೆಹಲಿ ತಂಡದ ಮ್ಯಾನೇಜ್ಮೆಂಟ್ …
Read More »ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿರುವುದರಿಂದ ಪಕ್ಷಕ್ಕೆ ಯಾವುದೇ ಧಕ್ಕೆ ಇಲ್ಲ:ಶಂಕರಪಾಟೀಲ ಮುನೇನಕೊಪ್ಪ
ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಬರಲಿದೆ. ರಾಜ್ಯದ ಜನರು ಮತ್ತೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಗೆಲ್ಲಿಸಲಿದ್ದಾರೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ಶಂಕರ ಪಾಟೀಲ ಮುನೇನಕೊಪ್ಪಹುಬ್ಬಳ್ಳಿ: ಬಿಜೆಪಿಯಿಂದ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯದ ವರಿಷ್ಠರ ಮೇಲೆ ಒತ್ತಡ ಹೇರುತ್ತೇವೆ. ಹೀಗಾಗಿ ಮತದಾರರು ಲಿಂಗಾಯತ ನಾಯಕರನ್ನು ಹಚ್ಚೆಚ್ಚು ಆಯ್ಕೆ ಮಾಡಬೇಕು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ …
Read More »