ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ. ಬೆಂಗಳೂರು: ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ …
Read More »ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ:B.S.Y.
ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈ ಚುನಾವಣೆಯಲ್ಲಿ ಬಿಜೆಪಿ 135-140 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು. ನಾಳೆ ಅಥವಾ ನಾಡಿದ್ದು ನಮ್ಮ ಪ್ರಚಾರ ಕಾರ್ಯ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಚುನಾವಣ ಅಪ್ರಚಾರ ನಡೆಸಲಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದವರಿಗೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.
Read More »ಅಕ್ರಮವಾಗಿ ಸಾಗಾಟವಾಗುತ್ತಿದ್ದ6.93 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ಪೂಜಾ ಪರಿಕರಗಳು ವಶ
ಹಾವೇರಿ: ನಗರ ಹೊರವಲಯದ ಅಜ್ಜಯ್ಯನ ಪ್ರದೇಶದ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳು, ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ದಾವಣಗೆರೆಯತ್ತ ಸಾಗುತ್ತಿದ್ದ ವಾಹನ ತಡೆದು ಪರಿಶೀಲಿಸಿದಾಗ 11 ಕೆಜಿ ಚಿನ್ನ, 74 ಕೆಜಿ ಬೆಳ್ಳಿ ಹಾಗೂ ತಟ್ಟೆ, ಲೋಟ, ಪೂಜಾ ಪರಿಕರಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಇವುಗಳ ಮೊತ್ತ 6.93 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಸಾಗಾಟ ಮಾಡುತ್ತಿದ್ದವರು ಯಾವುದೇ ಪರವಾನಗಿ …
Read More »ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ.
ಹೊಸದಿಲ್ಲಿ: ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗೆ ಆಗಮಿಸಿದ್ದ ಮಹಿಳೆ ಮೇಲೆ ವಕಿಲರ ದಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಅಪಾರ ಸಂಖ್ಯೆಯಲ್ಲಿದ್ದ ವಕಿಲರು, ಕಕ್ಷಿದಾರರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಹೊಟ್ಟೆಗೆ ಗುಂಡು ತಗುಲಿ ನರಳುತ್ತಿದ್ದ ಮಹಿಳೆಯನ್ನು ಕೋರ್ಟ್ ಆವರಣದಲ್ಲಿದ್ದ ಜನರು ಹಾಗೂ ಪೊಲೀಸರು ಸೇರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸಾಗಿಸಿದರು. ಕೌಟುಂಬಿಕ …
Read More »ಕೆಎಲ್ಎಸ್ ಜಿಐಟಿಯ 17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ.
ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ (ಕೆಎಸ್ ಸಿಎಸ್ ಟಿ) 46 ನೆಯ ಸರಣಿಯ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರೋಗ್ರಾಮ್ 2022-23 ಅಡಿಯಲ್ಲಿ, ಕೆಎಲ್ಎಸ್ ಜಿಐಟಿಯ 17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ. ಸಿವಿಲ್ ವಿಭಾಗದ ಡಾ. ನಿತೇಂದ್ರ ಪಾಲನಕರ್ ಮಾರ್ಗದರ್ಶನದಲ್ಲಿ ನೆಲದ ಹಾಸು ತಯಾರಿಕೆಯಲ್ಲಿ ಮಿಶ್ರಣ ಕಾಂಕ್ರೀಟ್ ಬಳಕೆ , ಪ್ರೊ. ಶಶಾಂಕ್ ಸಿ. ಬಂಗಿ ಮತ್ತು ಡಾ. …
Read More »ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಜೆಪಿ …
Read More »ವಾಹನ ಖರೀದಿಯಲ್ಲಿ ಅವ್ಯವಹಾರ: ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆಪ್ ಆಗ್ರಹ
ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ. ಬೆಂಗಳೂರು: ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ …
Read More »ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದಲ್ಲಿ ಕೌಶಿಕ್ ಸಾಧನೆ
ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ಬೆಂಗಳೂರು: ಕರ್ನಾಟಕ 2ನೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಅನನ್ಯಾ, ಕಲಾ ವಿಭಾಗದಲ್ಲಿ ತಬಸ್ಸುಮ್, ವಿಜ್ಞಾನ ವಿಭಾಗದದಲ್ಲಿ ಕೌಶಿಕ್ ಉತ್ತಮ ಸಾಧನೆ ಮೂಲಕ ಟಾಪರ್ಸ್ ಗಳಾಗಿ ಮಿಂಚಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 …
Read More »ಧಾರವಾಡ ಪ್ರವೇಶ ನಿರ್ಬಂಧ: ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡುವಂತೆ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಬೆಂಗಳೂರು: ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆ 50 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡುವಂತೆ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಬಿಐಗೆ ನೋಟಿಸ್ …
Read More »ಹೊಲಕ್ಕೆ ಹೊರಟಿದ್ದ ರೈತರ ಮೇಲೆ ಅಪರಿಚಿತ ವಾಹನ ಹರಿದು ಇಬ್ಬರು ರೈತರ ದುರ್ಮರಣ: ಇಬ್ಬರಿಗೆ ಗಾಯ
ಖಾನಾಪುರ: ತಾಲೂಕಿನ ಗೋಧೋಳಿ ಗ್ರಾಮದ ಹೊರವಲಯದ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯ ಮೇಲೆ ತಮ್ಮ ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ. ಗೊಧೋಳಿಯ ನಾಲ್ವರು ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದುಕೊಂಡು ಹೊಲದ ಕಡೆ ಹೊರಟಿದ್ದ ವೇಳೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಇವರಿಗೆ ಡಿಕ್ಕಿ …
Read More »