Breaking News

ಬಿಜೆಪಿ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ಅಬ್ಬರದ ಪ್ರಚಾರ ಆರಂಭವಾಗಿದ್ದು, ಬಿಜೆಪಿ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿದೆ. ಕಾಂಗ್ರೆಸ್ ನ 40 ನಾಯಕರ ಹೆಸರನ್ನು ತಾರಾ ಪ್ರಚಾರಕರನ್ನಾಗಿ ಘೋಷಿಸಲಾಗಿದೆ. ಕೆಲ ವರ್ಷಗಳಿಂದ ರಾಜಕೀಯದಿಂದಲೇ ದೂರ ಉಳಿದಿದ್ದ ನಟಿ ರಮ್ಯಾ ಅವರಿಗೂ ಸ್ಟಾರ್ ಪ್ರಚಾರಕರ ಸ್ಥಾನ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ …

Read More »

ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ B.J.P.

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಗುರುವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನ. ಹಾಗಾಗಿ ಬುಧವಾರ ರಾತ್ರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗಕ್ಕೆ ಚನ್ನಬಸಪ್ಪ ಮತ್ತು ಮಾನ್ವಿಗೆ ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರ. ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.

Read More »

ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಡೆಲ್​ಗಳು ಸಿಕ್ಕಿ ಬಿದ್ದಿದ್ದಾರೆ.

 ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಕಿರುತೆರೆ ನಟಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರತಿ ಹರೀಶ್​ಚಂದ್ರ ಮಿತ್ತಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರತಿ ಹರೀಶ್​ಚಂದ್ರ ಮಿತ್ತಲ್ ಮಾಡೆಲ್​​ಗಳನ್ನು ಬಳಕೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದು, ಈ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಪ್ನಾಪನ್’ ಸೇರಿ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದ ಆರತಿ ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪವಿತ್ತು. ಹೀಗಾಗಿ ಮಾರುವೇಷದಲ್ಲಿ ಹೋದ ಪೊಲೀಸರು ತಾವು ಗ್ರಾಹಕರು ಎಂದು …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

ಸವದತ್ತಿ ಜೆಡಿಎಸ್ ಅಭ್ಯರ್ಥಿ ಹೆಸರಿನಲ್ಲಿರುವ 42.92 ಲಕ್ಷ ರೂ. ಮೊತ್ತದ ಪರಿಕರಗಳು ವಶಕ್ಕೆ

ಸವದತ್ತಿ: ಗೋದಾಮೊಂದರ ಮೇಲೆ ದಾಳಿ ನಡೆಸಿರುವ ಎಫ್‌ಎಸ್‌ಟಿ ಪೊಲೀಸ್ ಮತ್ತು ಜಿಎಸ್‌ಟಿ ಅಧಿಕಾರಿ ತಂಡ ಸವದತ್ತಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೌರಭ ಆನಂದ ಚೋಪ್ರಾ ಅವರ ಹೆಸರಿನಲ್ಲಿ ಮತದಾರರಿಗೆ ಹಂಚಲು ದಾಸ್ತಾನು ಮಾಡಿದ್ದ ಅಪಾರ ಪ್ರಮಾಣದ ಹೊಲಿಗೆ ಯಂತ್ರಗಳು, ಕಬ್ಬಿಣದ ಸ್ಟ್ಯಾಂಡ್ ಹಾಗೂ ಟಿಫಿನ್ ಬಾಕ್ಸ್ ಗಳನ್ನು ವಶಪಡಿಸಿಕೊಂಡಿದೆ.                     ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ …

Read More »

ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು

ಗೋಕಾಕ: ಗೋಕಾಕ ನಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಾಮ ನಿರ್ದೇಶನ ಮಾಡಿದ್ದಾರೆ. ವಿಧಾನಸಭಾ ಚುನಾವಣೆ 2023ರ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ಬಾಲಚಂದ್ರ ಜಾರಕಿಹೊಳಿ ಅವರು ಇಂದು ನಾಮ ಪತ್ರ ಸಲ್ಲಿಸಿ ಚುನಾವಣೆ ಅಖಾಡಕ್ಕೆ ತಯಾರಾಗಿದ್ದಾರೆ [ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು

Read More »

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಆಯನೂರು ಮಂಜುನಾಥ್ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಪರಿಷ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ವಿಧಾನಸಭೆಗೆ ಹೋಗಬೇಕು ಎಂದಿದ್ದೇನೆ. ಆದರೆ ಯಾವಪಕ್ಷದಿಂದ ಸ್ಪರ್ಧೆ ಎಂಬುದನ್ನು ನಾಳೆ ಹೆಳುತ್ತೆನೆ ಎಂದರು. ಇದೇ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನದೆಸಿದ ಆಯನೂರು ಮಂಜುನಾಥ್, ಮನಸ್ಸಿಗೆ ಬಂದಂತೆ ಮಾತನಾಡುವ ಬಾಯಿಗೆ ಹೊಲಿಗೆ ಬೀಳಲಿ. ಈಗಾಗಲೇ …

Read More »

ನಾಳೆ ಈ ವರ್ಷದ ಮೊದಲ `ಸೂರ್ಯ ಗ್ರಹಣ’ : ಎಲ್ಲೆಲ್ಲಿ ಗೋಚರವಾಗಲಿದೆ?ಇಲ್ಲಿದೆ ಮಾಹಿತಿ|

ನವದೆಹಲಿ : ಏ.20 ರ ನಾಳೆ 2023 ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಭಾರತೀಯ ಕಾಲಮಾನದ ಸೂರ್ಯಗ್ರಹಣವು ಬೆಳಗ್ಗೆ 7:04 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 12:29 ಕ್ಕೆ ಕೊನೆಗೊಳ್ಳುತ್ತದೆ. ಒಟ್ಟು ಸಮಯವು ಐದು ಗಂಟೆಗಳಿಗಿಂತ ಹೆಚ್ಚು ಇರುತ್ತದೆ.   ಸೂರ್ಯಗ್ರಹಣ ಎಲ್ಲೆಲ್ಲಿ ಗೋಚರಿಸುತ್ತದೆ? ಗ್ರಹಣವು ಆಸ್ಟ್ರೇಲಿಯಾ, ಪೂರ್ವ ಮತ್ತು ದಕ್ಷಿಣ ಏಷ್ಯಾ, ಪೆಸಿಫಿಕ್ ಮಹಾಸಾಗರ, ಅಂಟಾರ್ಟಿಕಾ ಮತ್ತು ಹಿಂದೂ ಮಹಾಸಾಗರದಿಂದ ಗೋಚರಿಸುತ್ತದೆ. ಆದರೆ ಭಾರತದಲ್ಲಿ ಗೋಚರಿಸುವುದಿಲ್ಲ. ‘ವಾರ್ಷಿಕ ರಿಂಗ್ ಆಫ್ …

Read More »

ಕಾಲೇಜು ಉಪನ್ಯಾಸಕಿಯ ಅನುಮಾನಾಸ್ಪದ ಸಾವು. ಅಂಕೋಲಾದಲ್ಲಿ ಪ್ರಕರಣ ದಾಖಲು

ಅಂಕೋಲಾ: ಯಾದಗಿರಿ ಜಿಲ್ಲೆಯ ಹುಣಸಗಿಯ ಎಸ್. ಕೆ.ಕಾಲೇಜಿನಲ್ಲಿ ಜೀವಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅಂಗಡಿಬೈಲ್ ನ ಯುವತಿ ಮೃತ ಪಟ್ಟಿದ್ದು ಸಾವಿನ ಕುರಿತಂತೆ ಸಂಶಯ ವ್ಯಕ್ತಪಡಿಸಿದ ಯುವತಿಯ ಮನೆಯವರು ಅಂಕೋಲಾ ಪೊಲೀಸ್ ಠಾಣೆಗೆ ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.   ಅಂಗಡಿಬೈಲ್ ನಾಕಮನೆ ನಿವಾಸಿ ನಿವೇದಿತಾ ನರಸಿಂಹ ಭಟ್ಟ (24) ಮೃತ ದುರ್ದೈವಿಯಾಗಿದ್ದು ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎಸ್. ಸಿ ಪದವಿ ಬಂಗಾರದ ಪದಕ ವಿಜೇತೆಯಾಗಿದ್ದ ಈಕೆ ಕಳೆದ …

Read More »

ಬೆಳಗಾವಿ: ತೋಟಗಳು ಹೆಚ್ಚಿದರೂ ತಗ್ಗಿದ ಮಾವು ಇಳುವರಿ

ಬೆಳಗಾವಿ: ಜಿಲ್ಲೆಯಲ್ಲಿ ಮಾವಿನ ತೋಟಗಳ ವ್ಯಾಪ್ತಿ ಹೆಚ್ಚಾಗುತ್ತಿದ್ದರೂ ಈ ಬಾರಿ ಮಾವು ಇಳುವರಿಯಲ್ಲಿ ಇಳಿಕೆ ಆಗುವ ಸಾಧ್ಯತೆ ಇದ್ದು, ಬೆಳೆಗಾರರು ಚಿಂತೆಗೀಡಾಗಿದ್ದಾರೆ. ಬದಲಾದ ಹವಾಮಾನ ಹಾಗೂ ಇನ್ನೊಂದೆಡೆ ಗಾಳಿ-ಮಳೆಯ ರಭಸಕ್ಕೆ ಮಾವು ಇಳುವರಿ ಇಳಿಮುಖವಾಗಲಿದೆ. ಅತಿ ಹೆಚ್ಚು ಮಾವು ಬೆಳೆಯುವ ಜಿಲ್ಲೆ ಎಂಬ ಖ್ಯಾತಿ ಗಳಿಸಿರುವ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ಉತ್ಪಾದನೆ ಕಡಿಮೆ ಆಗಲಿದೆ. ಕಳೆದ ಸಲಕ್ಕಿಂತಲೂ ಈ ಬಾರಿ ಶೇ. 30ರಿಂದ 40ರಷ್ಟು ಉತ್ಪಾದನೆ ಕಡಿಮೆ ಆಗಲಿದ್ದು, ಬಂಡವಾಳ …

Read More »