ಸರಿಗಮಪ ಲಿಟಲ್ ಚಾಂಪ್ ಸೀಸನ್ 19 ಗ್ರ್ಯಾಂಡ್ ಫಿನಾಲೆ ಮುಗಿದಿದೆ. ಹಳ್ಳಿಯ ಪ್ರತಿಭೆ, ಹಾಡುಗಾರರ ಕುಟುಂಬದ ಪ್ರಗತಿ ವಿನ್ನರ್ ಆಗಿದ್ದಾರೆ. ಕೊಪ್ಪಳದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ, ಬೃಹತ್ ವೇದಿಕೆ ಮೇಲೆ ಪ್ರಗತಿ ಬಡಿಗೇರ್ ಟ್ರೋಫಿ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಗರಿ ಬಡಿಗೇರ್ ಕುಟುಂಬ ಕೂಡ ಆಸನರಾಗಿದ್ದರು. ಮಗಳು ವಿನ್ ಆದ ಕೂಡಲೇ ತಂದೆಯ ಕಣ್ಣಲ್ಲಿ ಆನಂದ ಬಾಷ್ಪ, ಹೆಮ್ಮೆ ಕಾಣಿಸುತ್ತಾ ಇತ್ತು. ಕಾರ್ಯಕ್ರಮದ ವೇದಿಕೆಗೆ ಬಂದ ಮಹಾಗುರುಗಳಾದ ಹಂಸಲೇಖ …
Read More »ಜಗದೀಶ ಶೆಟ್ಟರ್ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಸೇರಲಿದ್ದಾರೆ.
ಭಾನುವಾರ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಸೇರಲಿದ್ದಾರೆ. ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ರಣದೀಪ್ ಸುರ್ಜೆವಾಲಾ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಭಾನುವಾರ ತಡರಾತ್ರಿ ಭೇಟಿಯಾದರು. ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಪ್ರಮುಖರ ಉಪಸ್ಥಿತಿಯಲ್ಲಿ ಶೆಟ್ಟರ್ ಅಧಿಕೃತವಾಗಿ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ. ಇದೇ …
Read More »ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಅಭ್ಯರ್ಥಿ
ತುಮಕೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ನಡುವೆ ಜೆಡಿಎಸ್ ಅಭ್ಯರ್ಥಿಯೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಚುನಾವಣಾ ಪ್ರಚಾರದ ನೆಪದಲ್ಲಿ ಮಂಚಕ್ಕೆ ಕರೆದಿದ್ದಾರೆ ಎನ್ನಲಾಗಿದೆ. ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಪ್ರಚಾರದ ನೆಪವೊಡ್ಡಿ ಗೋವಿಂದರಾಜು ಮಹಿಳೆಯರನ್ನು ಮಂಚಕ್ಕೆ ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಗೋವಿಂದರಾಜುವನ್ನು ಪಕ್ಷದಿಂದ ವಜಾಗೊಳಿಸುವಂತೆ ಆಗ್ರಹಿಸಿ ಮಹಿಳೆಯರು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ …
Read More »ಸಾಮನ್ಯ ಕಾರ್ಯಕರ್ತನೊಬ್ಬ ನನ್ನ ನಾವು ಗುರುತಿಸಿ ಟಿಕೆಟ್ ನೀಡಿದ್ದೇವೆ ಗೆಲ್ಲಿಸುವ ಜವಾಬ್ದಾರಿ ನಿಮ್ಮದು &ನಮ್ಮದು
ರಾಯಬಾಗ: ಇಂದು ಸತೀಶ್ ಜಾರಕಿಹೊಳಿ ಅವರು ರಾಯಬಾಗ ಕ್ಷೇತ್ರದಲ್ಲಿ ತಮ್ಮ ಪ್ರಯಾಣ ವನ್ನಾ ಬೆಳೆಸಿದ್ದರು ರಾಯಬಾಗ ನಲ್ಲಿ ಕೂಡ ಕಾಂಗ್ರೆಸ್ ಟಿಕೆಟ್ ಗೆ ಬಂಡಾಯ ಇತ್ತು ಆದ್ರೆ ಇಂದು ಮಹಾವೀರ್ ಮೋಹಿತೆ ಅವರಿಗೆ ಪಕ್ಷ ಟಿಕೆಟ್ ನೀಡಿದೆ ಇವರು ಸುಮಾರು ವರ್ಷದಿಂದ ನಮ್ಮ ಪಕ್ಷಕ್ಕೆ ಕೆಲಸ ಮಾಡಿದ್ದಾರೆ ಅದಕ್ಕೆ ಅವರ್ ಕಾರ್ಯ ವೈಖರಿ ಗುರುತಿಸಿ ಟಿಕೆಟ್ ನೀಡಿದ್ದೇವೆ. ಇನ್ನು ಶಂಭು ಕಲ್ಲೋಲಿಕರ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ನೀವು ಸಪೋರ್ಟ್ …
Read More »ವಿಶೇಷ ವಿಮಾನದಲ್ಲಿ ಕಾಂಗ್ರೆಸ್ ಸೇರಲು ಪ್ರಯಾಣ ಬೆಳೆಸಿದ ಶೆಟ್ಟರ್
ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 6 ಸೀಟರ್ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಶೆಟ್ಟರ್ ಅವರಿಗೆ ಹುಬ್ಬಳ್ಳಿ – ಧಾರವಾಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಮತ್ತು ಇನ್ನಿತರ ಕೆಲವು ಕಾಂಗ್ರೆಸ್ …
Read More »ಬೆಳಗಾವಿ ಗ್ರಾಮೀಣ ,ಅಥಣಿ ಕಾಗವಾಡ ಎಲ್ಲಾಕಡೆ ಬಿಜೆಪಿ ಪಕ್ಷದ ಬಾವುಟ ಹಾರಿಸುತ್ತವೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಎಲ್ಲ ಬಿಜೆಪಿ ಕಾರ್ಯ ಕರ್ತರ ಸಮ್ಮಿಲನ ವಾಗಿ ಒಂದು ಕಾರ್ಯಕ್ರಮ ನಡೆಯಿತು. ಅಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ಬಿಜೆಪಿಯ ಪ್ರಮುಖರಾದ ಎಲ್ಲರೂ ಭಾಗ ವಹಿಸಿದ್ದರು. ಹಾಗೂ ಟಿಕೆಟ್ ವಂಚಿತರಾದ ಧನಂಜಯ ಜಾಧವ ಹಾಗೂ ಸಂಜಯ್ ಪಾಟೀಲ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲ್ಲಿಸುದುವು ನಮ್ಮ ಗುರಿ ಯಾಗಿರಲಿ ಗ್ರಾಮೀಣ ಭಾಗದಲ್ಲಿ ಪ್ರಮುಖ ರಾದ ಧನಂಜಯ್ …
Read More »ಸಿಎಂ ಹುದ್ದೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೂ ಪರೋಕ್ಷ ವಾರ್ನಿಂಗ್ ಕೊಟ್ಟ ಖರ್ಗೆ
ಕೋಲಾರ: ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಅದು ನನಗೆ ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಹುದ್ದೆ ರೇಸ್ ನಲ್ಲಿ ನಾನಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಕೆಲ ದಿನಗಳಿಂದ ಸಿಎಂ ಹುದ್ದೆಗೆ ಯಾರೆಲ್ಲ ಸಮರ್ಥರಿದ್ದಾರೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಕೋಲಾರದಲ್ಲಿ ನಡೆಯುತ್ತಿರುವ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಪರೋಕ್ಷ ವಾರ್ನಿಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕು ಎಂಬ …
Read More »ರಾಮದುರ್ಗ ರಾಜ್ಯಭಾರಕ್ಕಾಗಿ ಹಣಾಹಣಿ
ಬೆಳಗಾವಿ: ರಾಮದುರ್ಗ ಕ್ಷೇತ್ರ ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದು. ಸದ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದೆ. ಕ್ಷೇತ್ರದಲ್ಲಿ ಮತ್ತೆ ಪಾರುಪತ್ಯ ಮುಂದುವರಿಸಲು ಅಶೋಕ ಪಟ್ಟಣ ಕಸರತ್ತು ನಡೆಸಿದ್ದರೆ, ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಚಿಕ್ಕರೇವಣ್ಣ ಸ್ಪರ್ಧೆಗೆ ಅಣಿಯಾಗಿದ್ದಾರೆ. ಇನ್ನು ಬಿಜೆಪಿ ಟಿಕೆಟ್ ವಂಚಿತ ಮಹಾದೇವಪ್ಪ ಯಾದವಾಡ ನಡೆ ನಿಗೂಢವಾಗಿದೆ. ಸದ್ಯ ಕ್ಷೇತ್ರದಲ್ಲಿ ಅಶೋಕ ಪಟ್ಟಣ ವರ್ಸಸ್ ಚಿಕ್ಕರೇವಣ್ಣ ಎಂಬ ಸ್ಥಿತಿಯಿದ್ದು, ಹೇಗಾದರೂ ಮಾಡಿ ಕ್ಷೇತ್ರವನ್ನು ಮತ್ತೆ ಕಮಲದ ತೆಕ್ಕೆಗೆ ತೆಗೆದುಕೊಳ್ಳಲು ಕೇಸರಿ ಕಲಿಗಳು …
Read More »ಬಿಜೆಪಿ ಶಾಸಕ ಅವಿನಾಶ್ ಜಾಧವ್, ಬೆಂಬಲಿಗರ ಕಾರಿನ ಮೇಲೆ ಕಲ್ಲು ತೂರಾಟ
ಕಲಬುರಗಿ: ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಶಾಸಕ ಅವಿನಾಶ್ ಜಾಧವ್ ಹಾಗೂ ಅವರ ಬೆಂಬಲಿಗರ ಕಾರುಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಐದು ವಾಹನಗಳು ಜಖಂಗೊಂಡಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಶನಿವಾರ ಸಂಜೆ ಸಂಸದ ಉಮೇಶ ಜಾಧವ್ ಅವರ ಪುತ್ರ ಚಿಂಚೋಳಿ ಮೀಸಲು ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಹಾಗೂ ಅವರ ಸಂಗಡಿಗರು ಚಂದನಕೇರಾ ಗ್ರಾಮದ ದಲಿತರ ಓಣಿಯಲ್ಲಿ ಪ್ರಚಾರಕ್ಕೆ ತೆರಳಿದ್ದರು. ಪ್ರಚಾರ …
Read More »ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಹತ್ಯೆಯ ಭಯಾನಕ ವಿಡಿಯೋ
ಗ್ಯಾಂಗ್‌ಸ್ಟರ್, ರಾಜಕಾರಣಿಯಾಗಿದ್ದ ಅತೀಕ್ ಅಹ್ಮದ್ನನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವಾಗ ನಡೆದ ಹತ್ಯೆ ಘಟನೆಯ ವಿಡಿಯೋ ವೈರಲ್ ಆಗಿದೆ.’ ಇದನ್ನು ರಾಷ್ಟ್ರೀಯ ಸುದ್ದಿವಾಹಿನಿಯೊಂದು ಸೆರೆಹಿಡಿದಿದೆ. ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಹತ್ಯೆಯ ಭಯಾನಕ ವಿಡಿಯೋಪ್ರಯಾಗ್‌ರಾಜ್ (ಉತ್ತರಪ್ರದೇಶ): ಗ್ಯಾಂಗ್‌ಸ್ಟರ್, ರಾಜಕಾರಣಿಯಾಗಿದ್ದ ಅತೀಕ್ ಅಹ್ಮದ್ ಮತ್ತು ಅವರ ಸಹೋದರನ ಕೊಲೆ ಉತ್ತರಪ್ರದೇಶದಲ್ಲಿ ಸಂಚಲನ ಉಂಟು ಮಾಡಿದೆ. ಮಾಧ್ಯಮಗಳ ಕ್ಯಾಮರಾ ಎದುರೇ ಇಬ್ಬರ ಹತ್ಯೆಯಾಗಿದೆ. ವೈದ್ಯಕೀಯ ತಪಾಸಣೆಗಾಗಿ ಇಬ್ಬರನ್ನೂ ಆಸ್ಪತ್ರೆಗೆ ಕರೆತರುವಾಗಿನ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಹತ್ಯೆ …
Read More »