Breaking News

ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಕಾಯುತ್ತಿದ್ದಾರೆ: H.D.K.

ಹುಬ್ಬಳ್ಳಿ : ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಇರ್ತಾರೆ‌. ಯಾರ ತಲೆ ಕೆಡಿಸ್ತಾರೆ ಅನ್ನೋ ಮಾಹಿತಿ ಇಲ್ವಾ ಎಂದು ಮಾಜಿ ಸಿಎಂ ಕುಮಾರಸ್ಚಾಮಿ ಹೇಳಿದರು. ನಗರದಲ್ಲಿ ವಿವಿಧ ದೇವಳಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ನಾನು‌ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ನನಗೂ ಶಕುನಿಗಳು ಯಾರ ಅನ್ನೋ ಮಾಹಿತಿ ಬರುತ್ತದೆ. ರಾಜಕಾರಣದಲ್ಲಿ ಅವತ್ತಿನ ಕುರುಕ್ಷೇತ್ರ ನಡೀತಿದೆ. ದೇವೆಗೌಡರ ಕುಟುಂಬಕ್ಕೆ ಹಿತೈಷಿಗಳು ಎಂದು ನಾಟಕ ಮಾಡಿದವರಿಗೆ ಹಾಲೆರೆದರೆ ಏನು ಮಾಡಲಿ ಎಂದರು. ಭವಾನಿ …

Read More »

ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ಸಾಲು ಸಾಲು ಬಿಜೆಪಿ ಮುಖಂಡರು ಚುನಾವಣೆಯಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. ಎಸ್.ಎ.ರವೀಂದ್ರನಾಥ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಕೇಸರಿ ಮನೆಯಲ್ಲಿ ಕಂಪನ ಆರಂಭವಾಗಿದೆ. …

Read More »

ಸಾಹುಕಾರ ಹಿಡಿದಿದನ್ನ ಮಾಡದೆ ಬಿಡಲ್ಲ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಅಥಣಿಯಲ್ಲಿ ಸವದಿಗೆ ಟಿಕೆಟ್ ಇಲ್ಲ ಎಂದ ಸಿಎಂ….!

ನವದೆಹಲಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ಟಿಕೆಟ್ ಇಲ್ಲ ಎನ್ನುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಸುದ್ದಿ ಹರಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಲಕ್ಷ್ಮಣ ಸವದಿ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅಥಣಿ ಟಿಕೆಟ್ ಬೇಕೆಂದು ಅವರು ಕೇಳುತ್ತಿದ್ದಾರೆ. ಆದರೆ ಮಹೇಶ ಕುಮಟಳ್ಳಿ ಅವರು ನಮ್ಮ ಸರಕಾರ ಅಸ್ಥಿತ್ವಕ್ಕೆ ಬರಲು ಕಾರಣರಾದವರು. ಹಾಗಾಗಿ ಲಕ್ಷ್ಮಣ ಸವದಿಯವರಿಗೆ ಮನದಟ್ಟು ಮಾಡಿದ್ದೇನೆ. …

Read More »

ಮಹಾರಾಷ್ಟ್ರ ನಡೆಸುತ್ತಿರುವ ಹುನ್ನಾರವನ್ನು ಸಮಗ್ರವಾಗಿ ವಿವರಿಸಿದ ಅಶೋಕ ಚಂದರಗಿ

ಕರ್ನಾಟಕದ ಐದು ಜಿಲ್ಲೆಗಳ 865 ಹಳ್ಳಿ ಪಟ್ಟಣಗಳಲ್ಲಿ ಮಹಾತ್ಮಾ ಫುಲೆ ಜನಾರೋಗ್ಯ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕದ ಆಡಳಿತದಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುತ್ತಿರುವ ಮತ್ತು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡಲು ಹೊರಟಿರುವ ಮಹಾರಾಷ್ಟ್ರ ಸರಕಾರಕ್ಕೆ ಕಡಿವಾಣ ಹಾಕಲು ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವದಾಗಿ ರಾಜ್ಯ ಗಡಿ ಸಂರಕ್ಷಣಾ ಮತ್ತು ಜಲ ಆಯೋಗದ ಅಧ್ಯಕ್ಷ ಶಿವರಾಜ ಪಾಟೀಲ ಮತ್ತು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಭರವಸೆ …

Read More »

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಗೂ ಮುನ್ನವೇ ಹೊಸ ಬೆಳವಣಿಗೆಗಳು ಆರಂಭ

ವಿಜಯನಗರ: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿಯಿವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಗೂ ಮುನ್ನವೇ ಹೊಸ ಬೆಳವಣಿಗೆಗಳು ಆರಂಭವಾಗಿದ್ದು, ಬಿಜೆಪಿಯ ಹಿರಿಯ ಸಚಿವರು ತಮ್ಮ ಮಕ್ಕಳಿಗಾಗಿ ಕ್ಷೇತ್ರ ತ್ಯಾಗಕ್ಕೆ ಸಜ್ಜಾಗುತ್ತಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಪುತ್ರನಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿರುವ ವಸತಿ ಸಚಿವ ವಿ.ಸೋಮಣ್ಣ ಅವರಿಗೂ ಪರೋಕ್ಷವಾಗಿ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್, …

Read More »

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪುಣೆ: ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಕೊಲೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿ ರಾಜೇಶ್ ಅಗವಾನೆ (42) ಬಂಧಿತ. ಈತ ವಡಗಾಂವ ನಿಂಬಾಳ್ಕರ್ ನಿವಾಸಿಯಾಗಿದ್ದು, ಸದ್ಯ ಮುಂಬಯಿಯ ಧಾರಾವಿ ಪ್ರದೇಶದಲ್ಲಿ ವಾಸವಾಗಿದ್ದಾನೆ. ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿರುವ ಈತನ ಪತ್ನಿ ಪುಣೆಯಲ್ಲಿ ನೆಲೆಸಿದ್ದು ಆಗಾಗ ಅಲ್ಲಿಗೆ ಹೋಗುತ್ತಿದ್ದ. ಸೋಮವಾರ ಸಂಜೆ ಕುಡಿದ ಮತ್ತಿನಲ್ಲಿ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ, ತನಗೆ ಎದೆನೋವು ಶುರುವಾಗಿದ್ದು …

Read More »

ದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ: ಸದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಮಾಡಲಾಗಿದ್ದು, ದಿನದ 24 ಗಂಟೆಯೂ ಅಲ್ಲಿ ಪೊಲೀಸರು ಮತ್ತು ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂ. ಪತ್ತೆಯಾಗಿದ್ದು, ವಶಪಡಿಸಿಕೊಂಡು ತನಿಖೆ ನಡೆಸಲಾಗಿದೆ.

Read More »

ಲಿಂಗಾಯತ ಸಮಾಜದ ಭೂಮಿ ದುರ್ಬಳಕೆಯಾಗಿರುವ ಶಂಕೆ

ಬೆಳಗಾವಿ : ಲಿಂಗಾಯತ ಸಮಾಜದ ಭೂಮಿಯ ಅಭಿವೃದ್ಧಿ ಮಾಡುವ ಕುರಿತು ಅನುದಾನ ದುರ್ಬಳಕೆಯಾಗಿರುವ ಶಂಕೆ ವ್ಯಕ್ತವಾಗಿದ್ದು ವಿವಿಧ ಲಿಂಗಾಯತ ಸಮುದಾಯದ ಸಂಘಟನೆಗಳು ಸೋಮವಾರ ಬೆಳಗಾವಿ ಮಹಾಪಾಲಿಕೆಯ ಆಯುಕ್ತರ ಜೊತೆಗೆ ಚರ್ಚೆ ನಡೆಸಿದರು. ಲಿಂಗಾಯತ ಮುಖಂಡ ರಾಜಕುಮಾರ ಟೋಪಣ್ಣವರ ಮಾತನಾಡಿ, ಲಿಂಗಾಯತ ರುದ್ರಭೂಮಿಗೆ ಬಿಡುಗಡೆಯಾದ ಅನುದಾನವನ್ನು ಲಿಂಗಾಯತ ಸಮಾಜದ ರುದ್ರಭೂಮಿಗೆ ಅಭಿವೃದ್ಧಿ ಪಡಿಸಿ ಬೇರೆ ಕಡೆ ಅನುದಾನವನ್ನು ಬಳಕೆ ಮಾಡಬೇಡಿ ಮಾಡಬೇಡಿ ಎಂದರು. 2022 ರಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಿರುವುದಾಗಿ …

Read More »

ನೀರಿನ‌ ಸಮಸ್ಯೆ ಉದ್ಬವಿಸದಂತೆ ಮುನ್ನೆಚ್ಚರಿಕೆ ವಹಿಸಿ

ಬೆಳಗಾವಿ (ಚನ್ನಮ್ಮ ಕಿತ್ತೂರು) :  ಈ ಬಾರಿ ಬೇಸಿಗೆಯ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲಿಯೂ ನೀರಿನ ಸಮಸ್ಯೆ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಎಲ್ಲರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು. ಲೋಪದೋಷಗಳು ಕಂಡುಬಂದರೆ  ಸಂಬಂಧಪಟ್ಟು ಪಂಚಾಯಿತಿಯ ಅಧಿಕಾರಿಗಳನ್ನು ಹೊಣೆಯನ್ನಾಗಿಸಿ ಕ್ರಮ‌ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಸೂಚನೆ ನೀಡಿದರು. ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ  ಸೋಮವಾರ ‘ಶುದ್ಧ ಕುಡಿಯುವ ನೀರು ಪೂರೈಕೆಯ ಟಾಸ್ಕ್ …

Read More »

ಯಳ್ಳೂರ ಗ್ರಾಮದಲ್ಲಿ ಕುಸ್ತಿಪಂದ್ಯಾವಳಿ

ಬೆಳಗಾವಿ: ಶ್ರೀ ಕಲ್ಮೇಶ್ವರ ದೇವರು, ಶ್ರೀಚಾಂಗಳೇಶ್ವರಿ ದೇವಿ ಹಾಗೂ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ಕುಸ್ತಿ ಮೈದಾನದಲ್ಲಿ ಏ.13ರಂದು ಮಧ್ಯಾಹ್ನ 2 ಗಂಟೆಗೆ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದವರಿಗೆ ಕುಸ್ತಿಪಟುಗಳಿಗೆ ‘ಲೋಕಮಾನ್ಯ ಕೇಸರಿ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಕುಸ್ತಿಯ ಪಂದ್ಯಾವಳಿಯ ವಿಶೇಷತೆ ಎಂದರೇ, ಅಂತಾರಾಷ್ಟ್ರೀಯ ಕುಸ್ತಿಪಟು ಪೈಲವಾನ್ ಹುಸೇನ್ ಇರಾನ್ ಜತೆ ಭಾರತ ಕೇಸರಿ ಪೈಲವಾನ ಸುಮೀತ್ ಮಲೀಕ್ …

Read More »