ಬೆಳಗಾವಿ: ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಪೊಲೀಸರು ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಹಣ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಸವದತ್ತಿ ಚೆಕ್ ಪೊಸ್ಟ್ ನಲ್ಲಿ 1.95 ಲಕ್ಷ ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಲಗೋಡಲ್ಲಿ 52 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಸಂಕೇಶ್ವರ ಚೆಕ್ ಪೊಸ್ಟ್ ನಲ್ಲಿ 2.31 ಲಕ್ಷ ರೂ. ಮೌಲ್ಯದ 10 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
Read More »ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 2.10 ಕೋಟಿ ರೂಪಾಯಿ ಹಣ ಜಪ್ತಿ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನವನ್ನು ತಪಾಸಣೆ ನಡೆಸಿದಾಗ 2.10 ಕೋಟಿ ನಗದು ಹಣ ಪತ್ತೆಯಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸಹಕಾರಿ ಬ್ಯಾಂಕ್ ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆದರೆ ಹಣದ …
Read More »18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಮೊಕದ್ದಮೆ
ಬೆಳಗಾವಿ: 2023-24ನೇ ಸಾಲೀನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಬಾಲಕಾರ್ಮಿಕ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಅನ್ವಯ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷದವರು 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಕಾಯ್ದೆಯ ಪ್ರಾವಧಾನಗಳಂತೆ ಸಕ್ಷಮ ಪ್ರಾಧಿಕಾರದಲ್ಲಿ ಮೊಕದ್ದಮೆಯನ್ನು ಹೂಡಿ ಶಿಕ್ಷೆಗೆ ಒಳಪಡಿಸಲಾಗುವುದು. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮತ್ತು …
Read More »ಒಂದು ಕಡೆ ಸಫಾರಿ ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯ (ಭರ)ವರಸೆ ಎಂದು ಎಚ್ಡಿಕೆ ಆಕ್ರೋಶ
ಬೆಂಗಳೂರು: ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ರಾಜಕಾರಣವೇ ಅನುಮಾನಾಸ್ಪದವಾಗಿದೆ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು. ಇದು ಬಿಜೆಪಿಯ (ಭರ)ವರಸೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ. ಇದೇ ನೋಡಿ ಅಸಲಿ ವರಸೆ ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ …
Read More »ಕೇಂದ್ರ ಬಿಜೆಪಿ ಸರ್ಕಾರದಿಂದ ಮತ್ತೆ ಕನ್ನಡಿಗರಿಗೆ ಉಂಡೆನಾಮ: ಮಾಜಿ ಸಿಎಂ ಎಚ್ಡಿಕೆ ಕಿಡಿ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಸಂವಿಧಾನಕ್ಕೆ ಎಸಗಿದ ಅಪಚಾರ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ …
Read More »ಕಾಂಗ್ರೆಸ್ನ ಮೂರನೇ ಪಟ್ಟಿ ನಿರ್ಧಾರ ಮಾಡೋದು ಯಾರು? ಇಂದು ಸಂಜೆ ತಯಾರಿ
ಬೆಂಗಳೂರು: ಚುನಾವಣಾ ಕಣ ಇನ್ನಷ್ಟು ರಂಗೇರುತ್ತಿದ್ದು ಆಮ್ ಆದ್ಮಿ ಪಕ್ಷ ಇಂದು ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡಗಡೆ ಮಾಡಿದ್ದಾರೆ. ಅದಲ್ಲದೇ ಇಂದೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಲಿದೆ. ಇಂದು ಸಂಜೆ ದೆಹಲಿಯಲ್ಲಿ ಸಿಇಸಿ ಸಬ್ ಕಮಿಟಿ ಮೀಟಿಂಗ್ ನಡೆಸಲಿದ್ದು ಈ ಸಂದರ್ಭ ಕಾಂಗ್ರೆಸ್ನ ಮೂರನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಲಾಗುವುದು ಎನ್ನಲಾಗಿದೆ. ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಸಿಇಸಿ ಬಿಟ್ಟು ಸಬ್ ಕಮಿಟಿ ಮಾಡಿದೆ. ಸಿಇಸಿಯಲ್ಲಿ ಸದಸ್ಯರು …
Read More »ಕುರಿ ಚರ್ಬಿ ತಿಂದು ತಿಂದು ಸಿದ್ದರಾಮಯ್ಯನವರಿಗೆ ಕೊಬ್ಬು ಜಾಸ್ತಿ: ಪ್ರತಾಪ್ ಸಿಂಹ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದರೂ ಹುಲಿ ಕಾಣಿಸಿಲ್ಲ, ಹಿಡಿದು ಮಾರಿ ಮಿಡ್ತಾರೆ ಎಂಬ ಬಯಕ್ಕೆ ಯಾವ ಗುಹೆ ಸೇರಿಕೊಂಡಿದೆಯೋ ಅಯ್ಯೋ ಪಾಪ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ 5 ವರ್ಷಗಳ ಕಾಲ ಸಿಎಂ ಆಗಿದ್ದವರು. ಘನತೆಯಿಂದ ಮಾತನಾಡುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ. ಕುರಿ ಚರ್ಬಿ ತಿಂದು …
Read More »ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ:ಶರೀಫಾ ನದಾಫ್
ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆ ಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಜೆ ಡಿ ಎಸ್ ಮುಖಂಡೆ ಶರೀಫಾ ನದಾಫ್ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಆಡಳಿತದಿಂದ ಕ್ಷೇತ್ರದ ದಲ್ಲಿ ಯಾವದೇ ಅಭಿವೃದ್ಧಿ ಕಾರ್ಯ ಜರುಗಿಲ್ಕಾ ವಿಷೇಶವಾಗಿ ಮಹಿಳೆಯರ ಸಮಸ್ಯೆ,ಯುವಕರಿಗೆ ಉದ್ಯೋಗ ಮತ್ತು ಅಭಿವೃದ್ಧಿ ಗಳು ವಂಚಿತರಾಗಿದ್ದಾರೆ ಕಾರಣ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು …
Read More »ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ತಾರೆ?ನಾಳೆ ಪಕ್ಷ ನನಗೆ ಯಾವ ರೀತಿಯ ಸೂಚನೆಗಳನ್ನು ಕೊಡುತ್ತೆ ಅದರ ಮೇಲೆ ಇವೆಲ್ಲವೂ ನಿರ್ಧಾರ: ಸವದಿ
ಅಥಣಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ತಾರೆ ಎನ್ನುವ ಗುಮಾನಿ ಕ್ಷೇತ್ರದಲ್ಲಿ ಹರಡುತ್ತಿದೆ ಎನ್ನುವ ಪ್ರಶ್ನೆಗೆ ನಾಳೆ ಪಕ್ಷ ನನಗೆ ಯಾವ ರೀತಿಯ ಸೂಚನೆಗಳನ್ನು ಕೊಡುತ್ತೆ ಅದರ ಮೇಲೆ ಇವೆಲ್ಲವೂ ನಿರ್ಧಾರ ಕುತೂಹಲಕರ ಉತ್ತರ ನೀಡಿದ್ದಾರೆ. ಗುಮಾನಿಗಳು ಎಲ್ಲ ರೀತಿಯಲ್ಲಿ ಬರುತ್ತವೆ. ಆದರೆ ಇವತ್ತಿನವರೆಗೂ ಆ ರೀತಿಯ ಆಲೋಚನೆಗಳನ್ನು ನಾನು ಮಾಡಿಲ್ಲ. ನಾಳೆ ಪಕ್ಷ ನನಗೆ ಯಾವ ರೀತಿಯ ಸೂಚನೆಗಳನ್ನು ಕೊಡುತ್ತೆ ಅದರ ಮೇಲೆ ಇವೆಲ್ಲವೂ ನಿರ್ಧಾರವಾಗಲಿದೆ ಎಂದು …
Read More »BJP ಕೆಲಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಭೀತಿ, ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ? : ಸಿಎಂ
ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ. ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದರೂ ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಂಗಟ್ಟಾಗಿದ್ದು, ಇಂದು ಸಂಜೆ ಮತ್ತೊಂದು ಸುತ್ತಿನ ಸಭೆ ನದೆಸಲು ತೀರ್ಮಾನಿಸಲಾಗಿದೆ. ನವದೆಹಲಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ತ್ರಾಧ್ಯಕ್ಷ ಜೆ.ಪಿ.ನಡ್ಡಾ ನಿವಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದರು. ಇಂದು …
Read More »