Breaking News

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಇನ್ನು ಕಡ್ಡಾಯ!

ಬೆಂಗಳೂರು: ಮಕ್ಕಳಲ್ಲಿ  ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಅವರನ್ನು ಇತ್ತೀಚಿನ ಸುದ್ದಿಗಳ ಬಗ್ಗೆ ತಿಳಿದುಕೊಳ್ಳುವಂತೆ ಮಾಡಲು, ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್  ಓದುವುದನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಇಲಾಖೆಯು ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಪ್ರಾರ್ಥನೆ ಮುಗಿದ ತಕ್ಷಣ, ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ದಿನಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾಗಿದೆ. ಈ ನಿಯಮವು ರಾಜ್ಯದ  ಸರ್ಕಾರಿ, ಅನುದಾನಿತ, ಖಾಸಗಿ ಮತ್ತು ವಸತಿ ಶಾಲೆಗಳು ಸೇರಿದಂತೆ …

Read More »

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿನ ರಾಜಕೀಯ ಬೆಳವಣಿಗೆಗಳು ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ. “ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ …

Read More »

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

ಆನೆಕಲ್‌: ಕೃಷಿ ಹೊಂಡಕ್ಕೆ  ಬಿದ್ದು ತಾಯಿ  ಮಗಳು ಸಾವನ್ನಪ್ಪಿದ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಲಾವಣ್ಯ (28), ಲಕ್ಷತಾ (8) ಎಂದು ಗುರುತಿಸಲಾಗಿದೆ. 2017ರಲ್ಲಿ ಗ್ರಾಮದ ಸಂಪತ್ ಜೊತೆಗೆ ಲಾವಣ್ಯ ವಿವಾಹವಾಗಿದ್ದರು. ಇನ್ನೂ ತಾಯಿ ಮಗಳ ಸಾವಿನ ವಿಚಾರವಾಗಿ ಮಹಿಳೆಯ ಪೋಷಕರು ಪತಿ ವಿರುದ್ಧ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಮಹಿಳೆಯ ಪೋಷಕರು ಸೂರ್ಯನಗರ ಪೊಲೀಸ್ ಠಾಣೆಯಲ್ಲಿ …

Read More »

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏ.30ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.   ಶುಲ್ಕ ಪಾವತಿಗೆ ಮೇ 5 ಕೊನೆ ದಿನವಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇಲೆ ದಿನಾಂಕ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More »

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ …

Read More »

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

ಬೆಂಗಳೂರು: ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ, ಶಾಸಕ ಅಶೋಕ್ ಪಟ್ಟಣ್  ತಿಳಿಸಿದ್ದಾರೆ. ಸಚಿವ ಸಂಪುಟ ಪುನರ್  ರಚನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೇ ಎರಡನೇ ವಾರದಲ್ಲಿ ನಮಗೆ ಸಿಹಿ ಸುದ್ದಿ ಕೊಡುವ ಭರವಸೆಯನ್ನ ಸುರ್ಜೇವಾಲ ನೀಡಿದ್ದಾರೆ. ಅದರ ನಿರೀಕ್ಷೆಯಲ್ಲಿ ನಾವು ಇದ್ದೇವೆ ಎಂದರು. ಮೇ 4ರಂದು ಪಂಚ ರಾಜ್ಯಗಳ ಚುನಾವಣೆ ರಿಸಲ್ಟ್ ಬರಲಿದೆ. ಅದಾದ …

Read More »

ಹುಕ್ಕೇರಿ ಕರವೇ ಕಾರ್ಯಕರ್ತರಿಂದ. ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗೆ ಅರಿವು

ಹುಕ್ಕೇರಿ ಕರವೇ ಕಾರ್ಯಕರ್ತರಿಂದ. ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗೆ ಅರಿವು ಮೂಡಿಸಿದ ರಕ್ಷಿ ಗುಡ್ ಶೇಫೆರ್ಡ ಇಂಗ್ಲಿಷ್ ಮಾಧ್ಯಮ ಶಾಲೆಗೆ. ಕರ್ನಾಟಕ ರಕ್ಷಣಾ ವೇದಿಕೆ ಹುಕ್ಕೇರಿ ಘಟಕದಿಂದ ಇಂದು ಹುಕ್ಕೇರಿ ಪಟ್ಟಣದ ಸಮೀಪದಲ್ಲಿರುವ ಗುಡ್ ಶೇಫೆರ್ಡ ಇಂಗ್ಲಿಷ್ ಮಾಧ್ಯಮ ರಕ್ಷಿ (CBSC) ಶಾಲೆಗೆ ಭೇಟಿ ನೀಡಿ ಪ್ರವೇಶ ದ್ವಾರಕ್ಕೆ ದೊಡ್ಡದಾಗಿ ಇಂಗ್ಲಿಷ್ ನಲ್ಲಿ ಶಾಲೆಯ ಹೆಸರನ್ನು ಹಾಕಿದ್ದನ್ನು ಖಂಡಿಸಿ ತಕರಾರು ಮಾಡಿ ಕನ್ನಡದಲ್ಲಿ 60% ದೊಡ್ಡದಾಗಿ ಕನ್ನಡ ನಾಮಫಲಕವನ್ನು …

Read More »

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

ರಾಯಚೂರು: ಪ್ರಧಾನಿ ನರೇಂದ್ರ ಮೋದಿಗೆ  ಮದುವೆ ಆಹ್ವಾನ ಪತ್ರ ಕಳುಹಿಸಿದ್ದ ರಾಯಚೂರಿನ  ಯುವಕನಿಗೆ ಇದೀಗ ಪ್ರಧಾನಿ ಕಚೇರಿಯಿಂದ ಮದುವೆ ಶುಭಾಶಯ ಪತ್ರ ಬಂದಿದ್ದು, ಯುವಕ ಖುಷಿ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಅವರು ಪ್ರಧಾನಿ ಮೋದಿಗೆ ಮದುವೆ ಆಹ್ವಾನ ಪತ್ರಿಕೆಯನ್ನ ಕಳುಹಿಸಿದ್ದರು. ಈಗ ಪ್ರಧಾನಿ ಕಚೇರಿಯಿಂದ ನವ ದಂಪತಿಗೆ ಶುಭಾಶಯ ಪತ್ರ ಬಂದಿದೆ. ಪ್ರತಿಯಾಗಿ ಶುಭಾಶಯ ಬರಬಹುದು ಎನ್ನುವ ನಿರೀಕ್ಷೆಯಲ್ಲೇ ಲಗ್ನ ಪತ್ರಿಕೆಯನ್ನ …

Read More »

ಅನುಮಾನಸ್ಪದ ಸ್ಥಿತಿಯಲ್ಲಿ ಅಟೊ ಡ್ರೈವರ್ ಶವ ಪತ್ತೆ

ಅನುಮಾನಸ್ಪದ ಸ್ಥಿತಿಯಲ್ಲಿ ಆಟೋ ಡ್ರೈವರ್ ನ ಶವ ಪತ್ತೆಯಾದ ಘಟನೆ ಚಿಕ್ಕೋಡಿ ಪಟ್ಟಣದ ಹಾಲಟ್ಟಿಯಲ್ಲಿ ನಡೆದಿದೆ. ಕಳೆದ ರಾತ್ರಿ ಮನೆಯಿಂದ ಆಟೋ ಸಮೇತ ಹೋಗಿದ್ದ ವ್ಯಕ್ತಿ ಶವ ಪತ್ತೆಯಾಗಿದೆ.ಬಂದೇನವಾಜ( ರಾಜಾ ) ರಂಜಾನ್ 41 ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತನೂ ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನ ನಿವಾಸಿ.ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿದ್ದಾರೆ. ಸೋಕೊ ಪಾರೆನ್ಸಿಕ್ ತಂಡದಿಂದ ಪರಿಶೀಲನೆ‌ ನಡೆಸಲಾಗುತ್ತಿದೆ.

Read More »

ಬಾಡಿಗೆ ಹಣವೇ ಜೀವನಕ್ಕೆ ಆಧಾರ: ಸಂಕಷ್ಟದಲ್ಲಿ ಸ್ಯಾಂಡಲ್‌ವುಡ್ ‘ದೂದ್ ಪೇಡ’ ದಿಗಂತ್!

​ಕನ್ನಡ ಚಿತ್ರರಂಗದ ಚಾಕೊಲೇಟ್ ಬಾಯ್, ನಟ ದಿಗಂತ್ ಅವರೀಗ ಕಠಿಣ ಹಂತದಲ್ಲಿದ್ದಾರೆ. ದಶಕಗಳಿಂದ ಸ್ಟಾರ್ ಆಗಿ ಮಿಂಚಿದ ನಟನಿಗೆ ಈಗ ಆರ್ಥಿಕ ಸವಾಲುಗಳು ಎದುರಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ​ ಜೀವನಕ್ಕೆ ಆಸರೆಯಾದ ಬಾಡಿಗೆ ಹಣ! ​ವರ್ಷಕ್ಕೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುತ್ತಿದ್ದ ದಿಗಂತ್ ಅವರಿಗೆ ಕಳೆದ ಆರು ತಿಂಗಳು ಅನಿರೀಕ್ಷಿತ ತಿರುವು ನೀಡಿದೆ. ಒಪ್ಪಿಕೊಂಡಿದ್ದ ಸಿನಿಮಾಗಳು ಅರ್ಧಕ್ಕೆ ನಿಂತ ಕಾರಣ ಆರ್ಥಿಕ ಮುಗ್ಗಟ್ಟು ಎದುರಾಗಿದೆ. “ನಂದಿ ಬೆಟ್ಟದ ಬಳಿ …

Read More »