Breaking News

ಹೈಕಮಾಂಡ್ ಡಿ.ಕೆ. ಶಿವಕುಮಾರ್ `ಮುಖ್ಯಮಂತ್ರಿ’ ಆಗಲು ಒಪ್ಪಲ್ಲ : ಸಿದ್ದರಾಮಯ್ಯ ಹೊಸ ಬಾಂಬ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ.   ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು.ಇದು ನನ್ನ ಸಾರ್ವಜನಿಕ …

Read More »

ಈ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂದ್ರು ‘ಕುಂದಾಪುರದ ವಾಜಪೇಯಿ’; ಸತತ 5 ಸಲ ದಾಖಲೆ ಅಂತರದಿಂದ ಗೆದ್ದಿದ್ದರೂ ಈ ನಿರ್ಧಾರ!

ಉಡುಪಿ: ಕುಂದಾಪುರದ ವಾಜಪೇಯಿ ಎಂದೇ ಹೆಸರಾಗಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಈ ಕುರಿತು ಅವರು ಅಧಿಕೃತ ಪ್ರಕಟಣೆಯನ್ನು ಕೂಡ ಹೊರಡಿಸಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತವಾಗಿ ಒಟ್ಟು 5 ಅವಧಿಗೆ ನನ್ನನ್ನು ಬಹುನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ನನ್ನ ಕ್ಷೇತ್ರದ ಎಲ್ಲಾ ಜಾತಿ-ಧರ್ಮದ ಮತದಾರ ಬಾಂಧವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಛೆಯಿಂದ ಸ್ಪರ್ಧಿಸದಿರಲು …

Read More »

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಹತ್ತಿರ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಯ ಮೇಲೆ ಚುನಾವಣಾ ಅಧಿಕಾರಿಗಳು ಇಂದು ರಾತ್ರಿ ಎರಡನೇ ಬಾರಿ ದಾಳಿ ನಡೆಸಿದ್ದು ದಾಳಿಯ ವೇಳೆ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ, ದೇವರ ಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎಸ್.ಆರ್.ಪಾಟೀಲ ಅವರಿಗೆ ಸೇರಿದ ಗೋಡೆ ಗಡಿಯಾರ, ಟೀಶರ್ಟ್ ಸೇರಿ ಅಂದಾಜು 40-50 ಲಕ್ಷ ರೂ ಮೌಲ್ಯದ ಸಾಮಗ್ರಿಗಳನ್ನು ಸೀಜ್ ಮಾಡಲಾಗಿದೆ.   ಮಾ.27 ಮತ್ತು …

Read More »

ಕಿಸ್‌ ಪ್ರಕರಣ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಖುಲಾಸೆ

ಮುಂಬಯಿ : ಚುಂಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶವನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿಹಿಡಿದಿದೆ. ರಾಜಸ್ಥಾನದಲ್ಲಿ 2007ರಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗಿಯರ್‌ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ಚುಂಬಿಸಿದ್ದಕ್ಕೆ ಕೇಸು ದಾಖಲಾಗಿತ್ತು. ಇಂಥ ವರ್ತನೆ ದೇಶದ ಸಂಸ್ಕೃತಿಗೆ ಅವಮಾನಿಸುವ ಕೃತ್ಯವೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. 2022ರಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌, ಶಿಲ್ಪಾ ನಿರ್ದೋಷಿ. ಅವರು ಕೃತ್ಯದ …

Read More »

ಬಣ ರಾಜಕೀಯ ಮಾಡಿದರೆ ಶಾಸ್ತಿ; ಬೆಳಗಾವಿ ಮುಖಂಡರಿಗೆ ಜೋಶಿ ಎಚ್ಚರಿಕೆ

ಬೆಳಗಾವಿ: ಯಾವುದೇ ಕಾರಣಕ್ಕೂ ಗುಂಪುಗಾರಿಕೆ ರಾಜ ಕಾರಣ, ಬಣ ರಾಜಕೀಯಕ್ಕೆ ಅವಕಾಶ ಇಲ್ಲ. ಇನ್ನೊಬ್ಬರ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸಿ ಜಿಲ್ಲೆಯಿಂದ ಕನಿಷ್ಠ 15 ಸ್ಥಾನಗಳನ್ನು ಗೆಲ್ಲಬೇಕು. ಏನೇ ಅಸಮಾಧಾನ ಇದ್ದರೂ ನಮ್ಮ ಜತೆ ನೇರವಾಗಿ ಮಾತನಾಡಬೇಕು. – ಇದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡ ರಿಗೆ ನೀಡಿದ ಖಡಕ್‌ ಸೂಚನೆ.ಚುನಾವಣೆ ಸಂದರ್ಭದಲ್ಲಿ ಬಣ ರಾಜಕೀಯಕ್ಕೆ ಅಂತ್ಯ ಹಾಡ …

Read More »

ಡಿ.ಕೆ.ಶಿ. ವಿರುದ್ಧ FIR ದಾಖಲು

ಮಂಡ್ಯ: ಮಂಡ್ಯದಲ್ಲಿ ರೋಡ್ ಶೋ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಕಲಾವಿದರತ್ತ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿತ್ತು. ಕೋರ್ಟ್ ಆದೇಶದಂತೆ …

Read More »

ರಾಮನವಮಿಯಂದು ರಾಮನ ಅವತಾರ ಫಸ್ಟ್ ಪೋಸ್ಟರ್ ಬಿಡುಗಡೆ

ಬೆಂಗಳೂರು: ಕವಲುದಾರಿ ಖ್ಯಾತಿಯ ರಿಷಿ ರಾಮನ ಅವತಾರ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ರಾಮನವಮಿಯ ಸಂದರ್ಭದಲ್ಲಿ ತಯಾರಕರು ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಸುನಿ ನಿರ್ದೇಶನದ ‘ಚಮಕ್’ ಚಿತ್ರದಲ್ಲಿ ಸಹಾಯಕ ನಿರ್ದೇಶಕ ಮತ್ತು ಬರಹಗಾರನಾಗಿದ್ದ ವಿಕಾಸ್ ಪಂಪಾಪತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.   ರೊಮ್ಯಾಂಟಿಕ್ ಕಾಮಿಡಿ ಡ್ರಾಮಾ ಆಗಿರುವ ಈ ಚಿತ್ರದಲ್ಲಿ ಶುಭ್ರ ಅಯ್ಯಪ್ಪ, ಪ್ರಣೀತಾ ಸುಭಾಷ್ ಮತ್ತು ಅರುಣ್ ಸಾಗರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ …

Read More »

ಉಡುಪಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯಕ್ಕೆ ಸ್ವಯಂ ನಿವೃತ್ತಿ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕುಂದಾಪುರ ವಾಜಪೇಯಿ ಎಂದು ಖ್ಯಾತಿ ಪಡೆದಿದ್ದ ಜನಮೆಚ್ಚುಗೆಯ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆ ರಂಗಕ್ಕೆ ಗುಡ್ ಬೈ ಹೇಳಿದ್ದಾರೆ.   ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕುಂದಾಪುರ ವಿಧಾನಸಭೆ ಕ್ಷೇತ್ರವನ್ನು ಕಮಲದ ಪಾಳಾಯಕ್ಕೆ ವಶ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಪಕ್ಷದ ಜನಪ್ರಿಯ ಶಾಸಕರಾದ ಸೋಲಿಲ್ಲದ ಸರದಾರರಾಗಿ ಮೇರೆದ ಹಾಲಾಡಿ ಶ್ರೀನಿವಾಸ ಶೆಟ್ಟಿ …

Read More »

ಹಾರೂಗೇರಿ ಪಟ್ಟಣಕ್ಕೆ ಜನಾರ್ಧನ್ ರೆಡ್ಡಿ ಆಗಮಣ : ಶ್ರೀಶೈಲ್ ಭಜಂತ್ರಿ

ಏಪ್ರಿಲ್  ರಂದು ಹಾರೂಗೇರಿ ಪಟ್ಟಣಕ್ಕೆ ಜನಾರ್ಧನ್ ರೆಡ್ಡಿ ಆಗಮಣ : ಶ್ರೀಶೈಲ್ ಭಜಂತ್ರಿ ಹಾರೂಗೇರಿಯ ತಮ್ಮ ಕಾರ್ಯಾಲದಲ್ಲಿ ಮಾಜಿ ಸೈನಿಕ ಶ್ರೀಶೈಲ್ ಭಜಂತ್ರಿ ಸುದ್ದಿಗೋಷ್ಠಿ ಕುಡಚಿ ಮತಕ್ಷೇತ್ರದ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಸೈನಿಕರಾದ ಶ್ರೀಶೈಲ್ ಭಜಂತ್ರಿ ಅವರು ತಮ್ಮ ಕಾರ್ಯಾಲದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕುಡಚಿ ವಿಧಾನ ಸಭಾ ಕ್ಷೇತ್ರದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವೆ. …

Read More »

SSLC ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ?

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು. ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು …

Read More »