ಬೆಳಗಾವಿ: ‘ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡುವಾಗ, ಎರಡೂ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ಕೊಟ್ಟರು. ಇಲ್ಲಿನ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಸೋಮವಾರ ನಡೆದ ಲಿಂಗಾಯತ ಸಂಘಟನೆಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. …
Read More »ಬೆಳಗಾವಿ: ಶಾಸಕರ ಪುತ್ರನ ವಾಹನ ತಪಾಸಣೆ ಮಾಡದ ಸಿಬ್ಬಂದಿ ತರಾಟೆಗೆ
ಬೆಳಗಾವಿ: ಚೆಕ್‌ಪೋಸ್ಟ್‌ನಲ್ಲಿ ಶಾಸಕ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಸಂಚರಿಸುತ್ತಿದ್ದ ವಾಹನವನ್ನು ತಪಾಸಣೆ ಮಾಡದೆ ಬಿಟ್ಟ ಅಧಿಕಾರಿಗಳನ್ನು ತಹಶೀಲ್ದಾರ್ ಎಂ.ಎನ್.ಬಳಿಗಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಗವಾಡ-ಮೀರಜ್ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ಪ್ರತಿ ವಾಹನ ತಪಾಸಣೆ ಮಾಡಲಾಗುತ್ತಿತ್ತು. ಆದರೆ, ಸಾಂಗ್ಲಿಯಿಂದ ಕಾಗವಾಡಕ್ಕೆ ಬರುತ್ತಿದ್ದ ಶಾಸಕರ ಪುತ್ರನ ವಾಹನವನ್ನು ತಪಾಸಣೆ ಮಾಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಬಳಿಗಾರ ಸ್ಥಳಕ್ಕೆ ಧಾವಿಸಿ, ಚೆಕ್‌ಪೋಸ್ಟ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ವಾಹನ …
Read More »ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ರಾಜ್ಯದಲ್ಲಿ ಒಳ ಒಪ್ಪಂದ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಮೈತ್ರಿ ವಿಚಾರ ಚರ್ಚೆಗೆ ಬರುವುದು ಸಹಜ. ಆದರೆ ಬದ್ಧ ವೈರಿಗಳಾಗಿರುವ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ರಾಜ್ಯದಲ್ಲಿ ಒಳ ಒಪ್ಪಂದ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೊಸ ಬಾಂಬ್ ಸಿಡಿಸಿದ್ದಾರೆ. ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಹಳ ವರ್ಷಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಇದೆ. ಆಪರೇಷನ್ ಕಮಲ ಆದಾಗಿನಿಂದಲೂ ಇದೆಲ್ಲವೂ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಳೆದ ಲೊಕಸಭಾ …
Read More »280 ಸೀರೆ, 09 ಗಡಿಯಾರ, 20 100 pipers 750 ml liquor. ವಶಪಡಿಸಿಕೊಂಡ ಚುನಾವಣಾಧಿಕಾರಿಗಳು
ಖಾನಾಪುರ: ಖಾನಾಪುರ ಪಟ್ಟಣದ ಮುಖ್ಯರಸ್ತೆಯ ಲೋಕಮಾನ್ಯ ಭವನದ ಮುಂದುಗಡೆ ನಿಂತಿದ್ದ ಗೂಡ್ಸ್ ವಾಹನದಲ್ಲಿ ಅಪಾರ ಪ್ರಮಾಣದ ವಸ್ತುಗಳನ್ನು ಪತ್ತೆ ಹಚ್ಚಲಾಗಿದ್ದು, ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. 280 ಸೀರೆಗಳು , 280 × 550 =1,54,000 ರೂ. 09 ಗೋಡೆ ಗಡಿಯಾರ , 9 × 150 = 1,350 ರೂ. 20 100 pipers 750 ml liquor..15 ltr . .20 × 2418 = 48,360ರೂ. ಒಟ್ಟೂ ₹ …
Read More »ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಟಿಕೆಟ್ ಕಗ್ಗಂಟು; ಇಲ್ಲಿದೆ ನೋಡಿ ಕೈ ಎರಡನೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು,ಏಪ್ರಿಲ್3: ವಿಧಾನಸಭೆ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಇನ್ನೂ ಎರಡನೇ ಪಟ್ಟಿ ತಯಾರಿಕೆಯಲ್ಲಿ 40 ಕ್ಷೇತ್ರಗಳ ಅಭ್ಯರ್ಥಿಯೇ ದೊಡ್ಡ ಸವಾಲವಾಗಿದೆ. 124 ಕ್ಷೇತ್ರದಲ್ಲಿ ಸ್ಪರ್ಧಾಳುಗಳನ್ನು ಘೋಷಿಸಿದ್ದ ಸ್ಕ್ರೀನಿಂಗ್ ಕಮಿಟಿ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಇದರಲ್ಲಿ 40 ಕ್ಷೇತ್ರಗಳಿಗೆ ಎರಡರಿಂದ ಮೂರು ಅಭ್ಯರ್ಥಿಗಳನ್ನ ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ …
Read More »ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ?
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಚುನಾವಣೆಯ ಚುಕ್ಕಾಣಿ ಹಿಡಿಯಲು ಬಿಗ್ ಪ್ಲಾನ್ ಮಾಡಿದೆ. ಹೌದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಸಿದ್ಧತೆ ನಡೆಸಿದೆ. ಪ್ರಮುಖವಾಗಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯುಗತಾಯ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ನಟಿ …
Read More »ಬಿಜೆಪಿ ಟಿಕೆಟ್‌ಗಾಗಿ CPI ಹುದ್ದೆಗೆ ರಾಜೀನಾಮೆ; ನಾಗಠಾಣ ಮೀಸಲು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧ
ವಿಜಯಪುರ: ಪೊಲೀಸ್ ಇಲಾಖೆಯಲ್ಲಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಪೊಲೀಸ್ ಅಧಿಕಾರಿಯೋರ್ವ ಇದೀಗ ಬಿಜೆಪಿ ಟಿಕೆಟ್‌ಗಾಗಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದಾರೆ. ನಾಗಠಾಣ ಎಸ್‌ಸಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿರುವ ಮಹೀಂದ್ರಕುಮಾರ ನಾಯಿಕ ಟಿಕೆಟ್ ಸಿಗುವ ವಿಶ್ವಾಸದೊಂದಿಗೆ ಕರ್ತವ್ಯಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಡಿಜಿಪಿ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಪಿಐ ನಾಯಕ ರಾಜಕೀಯ ಸೇರಬೇಕೆಂಬ ಉದ್ದೇಶದೊಂದಿಗೆ ಅದರಲ್ಲೂ ಬಿಜೆಪಿಯ ತತ್ವ ಸಿದ್ದಾಂತವನ್ನು ಮೆಚ್ಚಿ ಕರ್ತವ್ಯಕ್ಕೆ …
Read More »ಬಸವಜಯ ಮೃತ್ಯುಂಜಯ ಸ್ವಾಮೀಜಿಯವರಿಗೆ ಬೆದರಿಕೆ;:
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸಿದ್ದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ದುತ್ತಿದ್ದಾರೆ ಎಂದು ಎಂದು ಶಾಸಕ ಅರವಿಂದ್ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ರಾಜಕೀಯ ನಾಯಕರೇ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ರೀತಿ ಧಮ್ಕಿ ಹಾಕಿದ್ದು ಯಾರು ಎಂಬುದು ನಮ್ಮ …
Read More »ಔತಣಕೂಟದಲ್ಲಿ ಟಿಶ್ಯೂ ಬದಲು 500 ರೂ. ನೋಟುಗಳನ್ನಿಟ್ಟಿದ್ರಾ ಮುಖೇಶ್ ಅಂಬಾನಿ ? ಇಲ್ಲಿದೆ ವೈರಲ್ ಫೋಟೋ ಹಿಂದಿನ ಅಸಲಿ ಸತ್ಯ
ಉದ್ಯಮಿ ಮುಖೇಶ್ ಅಂಬಾನಿ ಆಯೋಜಿಸಿದ್ದ ಔತಣ ಕೂಟದಲ್ಲಿ 500 ರೂಪಾಯಿಯ ನೋಟುಗಳೊಂದಿಗೆ ಆಹಾರ ಪದಾರ್ಥವನ್ನು ಬಡಿಸಿದಂತೆ ತೋರಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೋಟೋವನ್ನು ಶೇರ್ ಮಾಡಿದ ಟ್ವಿಟರ್ ಬಳಕೆದಾರರು ಅಂಬಾನಿಯ ಶ್ರೀಮಂತಿಕೆಯ ಬಗ್ಗೆ ಮಾಹಿತಿ ನೀಡಿ ಅಂಬಾನಿ ಪಾರ್ಟಿಯಲ್ಲಿ ಟಿಶ್ಯೂ ಪೇಪರ್‌ಗಳ ಜಾಗದಲ್ಲಿ 500 ರೂಪಾಯಿ ನೋಟು ಇರಿಸಲಾಗಿತ್ತು ಎಂದು ಹೇಳಿದ್ದಾರೆ. ರುಚಿಕರವಾದ ಪಾಕಪದ್ಧತಿಯೊಂದಿಗೆ ನಿಜವಾಗಿಯೂ ಸ್ವಲ್ಪ ಹಣವನ್ನು ನೀಡಲಾಗುತ್ತಿದೆಯೇ ? ಎಂಬ ಸಂದೇಹವನ್ನು ನಿವಾರಿಸಲು …
Read More »ಮಲಗಿದ್ದ ವ್ಯಕ್ತಿಯ ಮೇಲೆ ಆರ್.ಪಿ.ಎಫ್ ಪೊಲೀಸರ ದರ್ಪ
ಇಬ್ಬರು ಪೊಲೀಸರು ರೈಲ್ವೆ ಆವರಣದಲ್ಲಿ ಮಲಗಿದ್ದ ಕೂಲಿಯೊಬ್ಬನ ಮೇಲೆ ದರ್ಪ ತೋರಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಕರ್ತವ್ಯದಲ್ಲಿದ್ದ ಪೊಲೀಸರು ಮಲಗಿದ್ದ ವ್ಯಕ್ತಿಯ ಮೇಲೆ ದರ್ಪ ತೋರಿರುವ ಘಟನೆ ಮಥುರಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿದ್ರಿಸುತ್ತಿದ್ದ ವ್ಯಕ್ತಿಯ ಮುಖದ ಮೇಲೆ ಒಬ್ಬ ಪೊಲೀಸ್ ಟಾರ್ಚ್‌ಲೈಟ್ ಬಿಟ್ಟರೆ ಮತ್ತೊಬ್ಬ ಪೊಲೀಸ್ ದುರಹಂಕಾರದಿಂದ ಆ ವ್ಯಕ್ತಿಯ ಕಾಲಿಗೆ ತನ್ನ ಶೂ ಉಜ್ಜಿದ್ದನ್ನು ವಿಡಿಯೋದಲ್ಲಿ ನೋಡಬಹುದು. …
Read More »