ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಚುನಾವಣಾ ಅಕ್ರಮ ಹಾಗೂ ಹಣ ಬಲದ ಪ್ರಭಾವವನ್ನು ಸವಾಲಾಗಿ ತೆಗೆದುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಹದ್ದಿನ ಕಣ್ಣಿಡಲು ವಿಶೇಷ ತಂಡಗಳನ್ನು ರವಾನಿಸಲಿದೆ. ಅದರಂತೆ, ಉತ್ತರ ಭಾರತದ ರಾಜ್ಯಗಳಾದ ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಂದ “ಭಾರತೀಯ ಕಂದಾಯ ಸೇವೆ’ (ಐಆರ್‌ಎಸ್) ಅಧಿಕಾರಿಗಳ …
Read More »ಬಿಜೆಪಿಯ 4ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ, ಮತ್ತೆ ಟಿಕೆಟ್ ನೀಡಿದ್ದಲ್ಲಿ ಬಂಡಾಯ/ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದಾಗಿ ಎಚ್ಚರಿಕೆ
ಹುಬ್ಬಳ್ಳಿ: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವ ನಡುವೆಯೇ ಬಿಜೆಪಿಯ ನಾಲ್ವರು ಶಾಸಕರ ಬಗ್ಗೆ ಪಕ್ಷದೊಳಗೆ ಭಿನ್ನಮತ ಭುಗಿಲೆದ್ದಿದೆ. ಶಿವಮೊಗ್ಗ ನಗರ ಶಾಸಕ ಕೆ.ಎಸ್. ಈಶ್ವರಪ್ಪ, ಕಲಬುರಗಿ ಜಿಲ್ಲೆಯ ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ್ ದೇಸಾಯಿ ಹಾಗೂ ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ವಿರುದ್ಧ ತೊಡೆತಟ್ಟಿರುವ ಈ ಕ್ಷೇತ್ರದ ಇತರ ಟಿಕೆಟ್ ಆಕಾಂಕ್ಷಿಗಳು, ಹಾಲಿ ಶಾಸಕರಿಗೇ ಮತ್ತೆ ಟಿಕೆಟ್ …
Read More »ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಫೂಲ್ ಮಾಡಿದೆ: ಡಿಕೆಶಿ
ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಮೂರ್ಖರನ್ನಾಗಿಸುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಸಮಾನವಾಗಿ ಸಿಗಬೇಕು. ಅದು ಬಿಟ್ಟು ಒಬ್ಬರದು ಕಿತ್ತು ಮತ್ತೊಬ್ಬರಿಗೆ ಕೊಡುವುದಲ್ಲ ಎಂದು ಟೀಕಿಸಿದರು. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುತ್ತೇವೆಂದು ಆಸೆ ತೋರಿಸಿದ್ದರು. ಏನಾಯಿತು? ಬಂಜಾರ ಸಮುದಾಯದ ಆಕ್ರೋಶ ನೋಡಿದ್ದೇವಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಬಿಜೆಪಿಯವರು ಮಾಡಿರುವ ಎಲ್ಲ ತಪ್ಪು ಸರಿ ಮಾಡುತ್ತದೆ. ಎಲ್ಲರಿಗೂ ನ್ಯಾಯ …
Read More »ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ದ್ರೋಹ: ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ಮೋದಿ ಸರಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಬೊಮ್ಮಾಯಿ ನೇತೃತ್ವದ ರಾಜ್ಯ ಮತ್ತು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರಗಳು ಕಳೆದ 6 ತಿಂಗಳಲ್ಲಿ ನೂರಾರು ಕೋಟಿ ರೂ. ಜಾಹೀರಾತು ಬಿಡುಗಡೆ ಮಾಡಿವೆ. ಡಬಲ್ ಎಂಜಿನ್ ಸರ್ಕಾರ ಬಂದರೆ ಕರ್ನಾಟಕ ಸ್ವರ್ಗ ಆಗುತ್ತದೆ ಎಂದು ನಂಬಿಸಲು ಭಾಷಣಗಳು ಮತ್ತು …
Read More »ಬಿಜೆಪಿ & ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ:: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ. ಅವರಲ್ಲಿರುವುದು ಚುನಾವಣೆಗಾಗಿ ಕೇವಲ ತೋರಿಕೆಯ ಪ್ರೀತಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಬೆಳಗಾದರೆ ರಾಮನ ಬಗ್ಗೆ ಮಾತನಾಡುವ ಬಿಜೆಪಿ ಶಾಸಕರಲ್ಲಿ ಎಷ್ಟು ಜನ ರಾಮಾಯಣ ಓದಿದ್ದಾರೆ? ಎಷ್ಟು ಜನ ವಿಷ್ಣುಪುರಾಣ ಪಠಿಸಿದ್ದಾರೆ ತೋರಿಸಲಿ. ಅಂತಹವರು ಯಾರೂ ಸಿಗುವುದಿಲ್ಲ. ಅವರಿಗೆ ರಾಮನ ಬಗ್ಗೆ ಪ್ರೀತಿ, …
Read More »ರಾಹುಕಾಲದಲ್ಲೇ ನಾಮಪತ್ರ,ಪ್ರಚಾರಕ್ಕೂ ಸ್ಮಶಾನ ದಲ್ಲೇ ಚಾಲನೆ: ಸತೀಶ ಜಾರಕಿಹೊಳಿ
ಬೆಳಗಾವಿ: ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಪ್ರಚಾರದ ವಾಹನಕ್ಕೆ ಶ್ಮಶಾನದಿಂದಲೇ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎ.13ರಿಂದ 20ರ ಮಧ್ಯೆ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ. ಇದು ಕೆಟ್ಟದ್ದು ಅಂತ ಯಾರು ಹೇಳುತ್ತಾರೆ. ಇದು ನಮ್ಮ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಬಸವಣ್ಣನವರು, ಡಾ|ಬಾಬಾಸಾಹೇಬ ಅಂಬೇಡ್ಕರ್, ಬುದ್ಧ ತೋರಿಸಿದ ದಾರಿಯಲ್ಲಿ ನಡೆಯುತ್ತಿದ್ದೇವೆ. ಮೊದಲಿನಿಂದಲೂ ಈ ಸತ್ಯದ …
Read More »ನ್ಯಾಯಯುತ ಚುನಾವಣೆ ನಡೆಯುವುದು ಅನುಮಾನ ಎಂದ ಸಿದ್ದರಾಮಯ್ಯ
ಬೆಂಗಳೂರು: ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ ಚುನಾವಣೆ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಆಗ್ರಹಿಸಿದ್ದಾರೆ. ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ …
Read More »ಐದು ಬಾರಿಯ ಚಾಂಪಿಯನ್ ವಿರುದ್ಧ ಆರ್ಸಿಬಿ ಭರ್ಜರಿ ಜಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್-16ರ ಆರಂಭದಲ್ಲೇ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮೂರು ವರ್ಷಗಳ ಬಳಿಕ ಆರ್ಸಿಬಿ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವಾಡಿದ್ದು, ಈ ಸ್ಟೇಡಿಯಮ್ಗೂ ಗೆಲುವು ಮರುಕಳಿಸಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ (82*ರನ್, 49 ಎಸೆತ, 6 ಬೌಂಡರಿ, 5 ಸಿಕ್ಸರ್) ಮತ್ತು ನಾಯಕ ಫಾಫ್ ಡು ಪ್ಲೆಸಿಸ್ (73 ರನ್, 43 …
Read More »ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ
ಧಾರವಾಡ : ಧಾರವಾಡ ಗ್ರಾಮೀಣ- 71 ವಿಧಾನಸಭಾ ಮತಕ್ಷೇತ್ರ ಬಿಟ್ಟು ಹೋಗದೇ, ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಿ ಇಲ್ಲಿಯ ಬಾರಾಕೋಟ್ರಿಯಲ್ಲಿ ಇರುವ ಮಾಜಿ ಸಚಿವ ವಿನಯ ಕುಲಕರ್ಣಿ ಸ್ವಗೃಹದ ಎದುರು ಬ್ಲಾಕ್ ಕಾಂಗ್ರೆಸ್- 71ರ ನೇತೃತ್ವದಲ್ಲಿ ಅವರ ಅಭಿಮಾನಿಗಳು ರವಿವಾರ ಧರಣಿ ಸತ್ಯಾಗ್ರಹ ನಡೆಸಿದರು. ಸಿಎಂ ಎದುರು ಸ್ಪರ್ಧೆಗಾಗಿ ಶಿಗ್ಗಾಂವಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವ ಕುರಿತಂತೆ ಚರ್ಚೆ ಆಗುತ್ತಿದ್ದು, ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಯಾವುದೇ ಕಾರಣಕ್ಕೂ ಧಾರವಾಡ …
Read More »ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ
ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸೇರಿದ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪಟ್ಟಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ ಒಡೆತನದ ಸೊಸೈಟಿ ಲಾಕರ್ ಗಳಲ್ಲಿ ಯಾರೆಲ್ಲ ಚಿನ್ನ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ 2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್. ಸಾಧುನವರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
Read More »