Breaking News

ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಜೆಡಿಎಸ್ ಹಿರಿಯ ಶಾಸಕ ಶಿವಲಿಂಗೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅರಸಿಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ 400ಕ್ಕೂ ಹೆಚ್ಚು ಕಾರ್ಯಕರ್ತರ ಜೊತೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಲಿಂಗೇಗೌಡ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಅರಸಿಕೆರೆಯಿಂದ ಕೈ …

Read More »

ಬೆಳಗಾವಿಯಲ್ಲಿ 10ರಿಂದ 12 ಸೀಟು ಗೆಲುವು ನಿಶ್ಚಿತ; ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನ 1ನೇ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, 2ನೇ ಪಟ್ಟಿಯನ್ನು ಏ. 10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. 10ರಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಮೂರು ಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಶೀಘ್ರ ಇತ್ಯರ್ಥ ಪಡಿಸಲಾಗುವುದು. ಮೊದಲನೇ ಹಂತದಲ್ಲಿ ಹಾಲಿ, ಮಾಜಿ ಶಾಸಕರೂ ಇದ್ದಾರೆ. ರಾಯಬಾಗ, …

Read More »

ಅತ್ತ ಮಾಡಾಳ್​ಗೆ 14 ದಿನಗಳ ನ್ಯಾಯಾಂಗ ಬಂಧನ; ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆ, ಭಾರಿ ಚರ್ಚೆ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅತ್ತ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಇತ್ತ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ರೆಸಾರ್ಟೊಂದರಲ್ಲಿ ಇಂದು ಜಿಲ್ಲಾವಾರು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಘಟಾನುಘಟಿ ನಾಯಕರ ಸಮ್ಮುಖದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 16 ಜಿಲ್ಲೆಗಳ ಜಿಲ್ಲಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ. ಸಿಎಂ …

Read More »

ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ JDS ಶಾಸಕ ಕೆ.ಎಂ. ಶಿವಲಿಂಗೆ ಗೌಡ

ಶಿರಸಿ: ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್‌ನ ಶಾಸಕ ಕೆ. ಎಂ. ಶಿವಲಿಂಗೆ ಗೌಡ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇದ್ದ ಅರಸೀಕರೆಯ …

Read More »

ಬಸ್ ನಿಲ್ದಾಣಕ್ಕೆ ಅವರೇ ಹೋಗಿ ಸರ್ಕಾರಿ ಕಾರು ಕೊಟ್ಟು ಬಂದ್ರು; ಡಾ. ಕೇಲಗಾರ ಕಾರ್ಯಕ್ಕೆ ಸಿಬ್ಬಂದಿ ಶ್ಲಾಘನೆ

ರಾಣೆಬೆನ್ನೂರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ತಮಗೆ ನೀಡಿದ ಸರ್ಕಾರದ ಕಾರನ್ನು ತಾವೇ ಸ್ವತಃ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಿ ಸರಿಯಾಗಿ ಬೆಳಗ್ಗೆ 11.30ಕ್ಕೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.   ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಡಾ. ಬಸವರಾಜ ಕೇಲಗಾರ ಅವರನ್ನು ಆರಂಭದಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಕಳೆದ ಎರಡ್ಮೂರು ತಿಂಗಳ ಹಿಂದೆ ಅಧ್ಯಕ್ಷರನ್ನಾಗಿ …

Read More »

ನಮ್ಮದು ಡೆಮಾಕ್ರಟಿಕ್ ಪಕ್ಷ, ಕಾಂಗ್ರೆಸನದ್ದು ಕುಟುಂಬ ಪಾರ್ಟಿ

ಬೆಳಗಾವಿ: ನಮ್ಮದು ಡೆಮಾಕ್ರಟಿಕ್‌ ಪಾರ್ಟಿ, ಅದರ ಅಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಆಗುತ್ತೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಅಂತಿಮ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಧರ್ಮನಾಥ ಭವನದಲ್ಲಿ ಶುಕ್ರವಾರ ಅಭ್ಯರ್ಥಿಗಳ ಆಯ್ಕೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ರೀತಿ ನಮ್ಮದು ಪರಿವಾರದ ಪಾರ್ಟಿ ಅಲ್ಲ.ಕಾಂಗ್ರೆಸ್ ಪಾರ್ಟಿ ಸುಳ್ಳು ಆಶ್ವಾಸನೆ ಕೊಡುವುದರಲ್ಲಿ ಪರಿಣಿತರ ಪಕ್ಷ ಅದು ಎಂದರು. ಗ್ಯಾಸ್ ಸಿಡಿಲಿಂಡರ್ ಗೆ ಹಣ ಕೊಡ್ತೇವಿ, …

Read More »

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಯಾವ ತಾರತಮ್ಯವೂ …

Read More »

ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ:ರಮೇಶ ಕತ್ತಿ

ಹುಕ್ಕೇರಿ: ‘ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ. ನಾನು ಬೇರೆ ಪಕ್ಷ ಸೇರುತ್ತೇನೆ ಎಂಬುದು ಗಾಳಿ ಸುದ್ದಿ. ಜನ ಇದನ್ನು ಗಮನಕ್ಕೆ ತೆಗೆದುಕೊಳ್ಳಬಾರದು’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಸ್ಪಷ್ಟ‍ಪಡಿಸಿದರು.   ಪಟ್ಟಣದ ವಿಶ್ವರಾಜ್ ಭವನದಲ್ಲಿ ಹುಕ್ಕೇರಿ ಮಂಡಲ ವತಿಯಿಂದ ಗುರುವಾರ ಆಯೋಜಿಸಿದ್ದ ಬಿಜೆಪಿ ಚುನಾವಣಾ ತಯಾರಿ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು.’ತಮ್ಮ ಕುಟುಂಬದಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ, …

Read More »

SSLC ಪರೀಕ್ಷೆಗೆ910 ವಿದ್ಯಾರ್ಥಿಗಳು ಗೈರು

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. 271 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 910 ವಿದ್ಯಾರ್ಥಿಗಳು ಗೈರು ಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 32,346 ವಿದ್ಯಾರ್ಥಿಗಳ ಪೈಕಿ 31,810 ವಿದ್ಯಾರ್ಥಿಗಳು ಹಾಜರಾದರು. 536 ಮಂದಿ ಗೈರು ಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 43,525 ವಿದ್ಯಾರ್ಥಿಗಳ ಪೈಕಿ 43,151 ವಿದ್ಯಾರ್ಥಿಗಳು ಹಾಜರಾದರು. 374 ವಿದ್ಯಾರ್ಥಿಗಳು ಗೈರು ಹಾಜರಾದರು. …

Read More »

ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಜೀವ ಬೆದರಿಕೆ

ಉದ್ದವ್ ಠಾಕ್ರೆ ಬಣದ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆ ಬಂದಿದೆ. ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಎಸ್‌ಎಂಎಸ್ ಮೂಲಕ ಈ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಪೊಲೀಸ್ ತನಿಖೆ ವೇಳೆ ಪುಣೆಯಿಂದ ಈ ಸಂದೇಶ ಕಳುಹಿಸಿರುವುದು ಗೊತ್ತಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Read More »