Breaking News

ನಾಳೆಯಿಂದ 3 ದಿನ ಕರ್ನಾಟಕ ವಿಧಾನಸಭೆ ಅಧಿವೇಶನ

ಬೆಂಗಳೂರು: ಮೇ 22 ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಈ ಸಮಯದಲ್ಲಿ ಹೊಸದಾಗಿ ಚುನಾಯಿತ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ನೂತನ ಸಭಾಪತಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರಿಯಾಗಿ ಒಂದು ವಾರದ ನಂತರ ಸಿದ್ದರಾಮಯ್ಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ …

Read More »

ಎನ್‌ಕೌಂಟರ್ ಸ್ಪೆಷಲಿಸ್ಟ್’ ದಯಾ ನಾಯಕ್ ಈಗ ಮುಂಬೈ ಕ್ರೈಂ ಬ್ರ್ಯಾಂಚ್‌ ಇನ್ಸ್‌ಪೆಕ್ಟರ್!

ಮುಂಬೈ: ‘ಎನ್‌ಕೌಂಟರ್ ಸ್ಪೆಷಲಿಸ್ಟ್ ‘ ಎಂದೇ ಪ್ರಖ್ಯಾತರಾದ ಖಡಕ್‌ ಪೊಲೀಸ್ ಅಧಿಕಾರಿ, ಕರ್ನಾಟಕ ಮೂಲದವರಾದ ದಯಾ ನಾಯಕ್ ಅವರು ಶನಿವಾರ ಮುಂಬೈ ಪೊಲೀಸ್‌ ಅಪರಾಧ ವಿಭಾಗದ 9 ನೇ ಘಟಕದ ಇನ್ಸ್​ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮೂರು ವರ್ಷಗಳ ಅವಧಿ ಪೂರ್ಣಗೊಳಿಸಿದ್ದ ನಾಯಕ್ ಅವರನ್ನು ಮಾರ್ಚ್ 28 ರಂದು ಎಟಿಎಸ್​ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿತ್ತು. ಈ ಕುರಿತು ಟ್ವೀಟ್​ …

Read More »

ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಅಲೋಕ್ ಮೋಹನ್ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಶನಿವಾರ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆಯಾಗಿ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸಿ ಆದೇಶ ಹೊರಡಿಸಿದೆ. ಸೇವಾ ಹಿರಿತನದ ಆಧಾರದ ಮೇಲೆ 87ನೇ ಬ್ಯಾಚ್‌ನ ಅಧಿಕಾರಿ ಹಾಗೂ ಪ್ರಸ್ತುತ ರಾಜ್ಯ ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕದಳದ ಮುಖ್ಯಸ್ಥರಾಗಿರುವ ಅಲೋಕ್ ಮೋಹನ್​ ಅವರನ್ನು ಮುಂದಿನ …

Read More »

ಘಟಪ್ರಭಾ ಎಡದಂಡೆ ಬಲದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ರೈತರ ಆಗ್ರಹ

ಬೆಳಗಾವಿ: ಬಿಸಿಲಿನ ಬೇಗೆಯಿಂದ ಜನ, ಜಾನುವಾರುಗಳು ನೀರಿಲ್ಲದೇ ತತ್ತರಿಸಿ ಹೋಗಿದ್ದು ತಕ್ಷಣ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರ ಕಚೇರಿ ಮತ್ತು ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ರೈತರು, ಗೋಕಾಕ್​, ರಾಯಬಾಗ, ಜಮಖಂಡಿ, ಮೂಡಲಗಿ ತಾಲೂಕಿನ ವಿವಿಧ ಗ್ರಾಮಗಳ ರೈತರು ಶೀಘ್ರವೇ …

Read More »

2,000 ರೂ. ಮುಖಬೆಲೆಯ ನೋಟು ಹಿಂಪಡೆದ ಆರ್​ಬಿಐ ನಿರ್ಧಾರದ ಹಿಂದಿನ ಲೆಕ್ಕಾಚಾರಗಳಿವು..

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಅಚ್ಚರಿಯ ನಿರ್ಧಾರವೊಂದನ್ನು ಕೈಗೊಂಡಿದೆ. ಚಲಾವಣೆಯಲ್ಲಿರುವ 2,000 ರೂಪಾಯಿ ನೋಟುಗಳನ್ನು ಹಿಂಪಡೆಯಲು ಆರ್​ಬಿಐ ನಿರ್ಧರಿಸಿದೆ. ನಾಲ್ಕು ತಿಂಗಳ ಅವಧಿಯಲ್ಲಿ ಈ 2,000 ಮುಖಬೆಲೆಯ ನೋಟುಗಳನ್ನು ಠೇವಣಿ ಮಾಡಲು ಸಾರ್ವಜನಿಕರಿಗೆ ಸೂಚಿಸಿದೆ. ಷೇರುಪೇಟೆಗಳ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದನ್ನು ತಪ್ಪಿಸಲು ಆರ್​ಬಿಐ ಶುಕ್ರವಾರ ಸಂಜೆ ಪ್ರಕಟಿಸಿದ ನಿರ್ಧಾರವು ಅನೇಕ ಜನರನ್ನು ಆಶ್ಚರ್ಯಗೊಳಿಸಿತು. ವಿರೋಧ ಪಕ್ಷವಾದ ಕಾಂಗ್ರೆಸ್ ಪಕ್ಷವು 2016ರಲ್ಲಿ ನೋಟು ಅಮಾನ್ಯೀಕರಣ ಅಥವಾ ನೋಟು ನಿಷೇಧದ ನಿರ್ಧಾರಕ್ಕೆ …

Read More »

ರಾಜ್ಯದ ನೂತನಮಂತ್ರಿಯಾಗಿಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನಮಂತ್ರಿಯಾಗಿ ಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.   ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. 

Read More »

ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Read More »

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿರುವ ಪ್ರಮಾನವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

Read More »

ಚುನಾವಣೆ ನಂತರ ಮತ್ತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಪ್ರತಿ ಶನಿವಾರ ಮತ್ತೆ ಅನ್ನ ಸಂತರ್ಪಣೆ ಪ್ರಾರಂಭ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಶ್ರೀ ವಿಠ್ಠಲ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ

ಚಿಕ್ಕೋಡಿ: ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪನ ಇಲಾಖೆಯ ಸೂಪರ್ ವೈಸರ್ ಎಸ್.ಎಂ.ಕಲ್ಯಾಣ ಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದವರು. 6 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಸಿದ್ದಪ್ಪ ಪೂಜಾರಿ ಎನ್ನುವವರಿಂದ ಸರ್ವೆ ಕಾರ್ಯಕ್ಕಾಗಿ ಲಂಚ ಪಡೆಯುತ್ತಿದ್ದರು. ವಿವರ: ಜಮೀನುಗಳ 11ಇ ನಕ್ಷೆ ಅವಧಿ ವಿಸ್ತರಿಸಿ ಕೊಡಲು ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿಯ …

Read More »